ಚುನಾವಣೆ ಮುಗಿದ ಬೆನ್ನಲ್ಲೇ ಮತ್ತೆ ಏರಿಕೆಯಾದ ಪೆಟ್ರೋಲ್, ಡೀಸೆಲ್ ಬೆಲೆ

ಭಾರತದಲ್ಲಿ ಕಳೆದ ಕೆಲವು ತಿಂಗಳುಗಳಿಂದ ಪ್ರತಿ ದಿನ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಾಗುತ್ತಿತ್ತು. ಆದರೆ ಸುಮಾರು ಒಂಬತ್ತು ವಾರಗಳಿಂದ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಾಗಿರಲಿಲ್ಲ.

ಚುನಾವಣೆ ಮುಗಿದ ಬೆನ್ನಲ್ಲೇ ಮತ್ತೆ ಏರಿಕೆಯಾದ ಪೆಟ್ರೋಲ್, ಡೀಸೆಲ್ ಬೆಲೆ

ಈಗ ತಮಿಳುನಾಡು, ಕೇರಳ, ಪಾಂಡಿಚೆರಿ, ಅಸ್ಸಾಂ ಹಾಗೂ ಪಶ್ಚಿಮ ಬಂಗಾಳ ರಾಜ್ಯಗಳ ವಿಧಾನಸಭಾ ಚುನಾವಣಾ ಫಲಿತಾಂಶ ಬಂದ ನಂತರ ತೈಲ ಕಂಪನಿಗಳು ಮತ್ತೆ ಪೆಟ್ರೋಲ್, ಡೀಸೆಲ್ ಬೆಲೆಯನ್ನು ಹೆಚ್ಚಿಸುತ್ತಿವೆ. ಭಾರತದಲ್ಲಿ ಫೆಬ್ರವರಿ 23ರಂದು ಕೊನೆಯ ಬಾರಿಗೆ ಇಂಧನ ಬೆಲೆಗಳನ್ನು ಹೆಚ್ಚಿಸಲಾಗಿತ್ತು.

ಚುನಾವಣೆ ಮುಗಿದ ಬೆನ್ನಲ್ಲೇ ಮತ್ತೆ ಏರಿಕೆಯಾದ ಪೆಟ್ರೋಲ್, ಡೀಸೆಲ್ ಬೆಲೆ

ಅದಾದ ನಂತರ ತೈಲ ಕಂಪನಿಗಳು ಐದು ರಾಜ್ಯಗಳಲ್ಲಿನ ವಿಧಾನಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಮಾಡುವುದನ್ನು ನಿಲ್ಲಿಸಿದ್ದವು. ಚುನಾವಣಾ ಫಲಿತಾಂಶಗಳು ಹೊರಬಂದ ನಂತರ ನಿನ್ನೆ ಮೊದಲ ಬಾರಿಗೆ ಪೆಟ್ರೋಲ್, ಡೀಸೆಲ್ ಬೆಲೆಯನ್ನು ಹೆಚ್ಚಿಸಲಾಗಿದೆ.

MOST READ:ವಿಮಾನಗಳು ಹಾರಾಟ ನಡೆಸುವಾಗ, ಲ್ಯಾಂಡಿಂಗ್ ಆಗುವಾಗ ಉಂಟಾಗುವ ಶಬ್ದಗಳಿವು

ಚುನಾವಣೆ ಮುಗಿದ ಬೆನ್ನಲ್ಲೇ ಮತ್ತೆ ಏರಿಕೆಯಾದ ಪೆಟ್ರೋಲ್, ಡೀಸೆಲ್ ಬೆಲೆ

ಇಂದು ಸಹ ಪೆಟ್ರೋಲ್, ಡೀಸೆಲ್ ಬೆಲೆಯನ್ನು ಹೆಚ್ಚಿಸಲಾಗಿದೆ. ಕರೋನಾ ವೈರಸ್ ಆರ್ಭಟದಿಂದ ತತ್ತರಿಸಿರುವ ಜನ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಿಂದಾಗಿ ಮತ್ತಷ್ಟು ಹೈರಣಾಗಿದ್ದಾರೆ.

ಚುನಾವಣೆ ಮುಗಿದ ಬೆನ್ನಲ್ಲೇ ಮತ್ತೆ ಏರಿಕೆಯಾದ ಪೆಟ್ರೋಲ್, ಡೀಸೆಲ್ ಬೆಲೆ

ಇಂದು ಪ್ರತಿ ಲೀಟರ್ ಪೆಟ್ರೋಲ್ ಬೆಲೆಯನ್ನು 19 ಪೈಸೆ ಹಾಗೂ ಪ್ರತಿ ಲೀಟರ್ ಡೀಸೆಲ್ ಬೆಲೆಯನ್ನು 21 ಪೈಸೆಗಳಷ್ಟು ಹೆಚ್ಚಿಸಲಾಗಿದೆ. ನಿನ್ನೆ ಪೆಟ್ರೋಲ್ ಬೆಲೆಯನ್ನು ಪ್ರತಿ ಲೀಟರಿಗೆ 15 ಪೈಸೆ ಹಾಗೂ ಡೀಸೆಲ್ ಬೆಲೆಯನ್ನು ಪ್ರತಿ ಲೀಟರಿಗೆ 18 ಪೈಸೆಗಳಷ್ಟು ಹೆಚ್ಚಿಸಲಾಗಿತ್ತು.

MOST READ:ಪ್ರವಾಸದ ಹುಚ್ಚಿಗಾಗಿ ವಾಹನ ಕದಿಯುತ್ತಿದ್ದ ಎಂಜಿನಿಯರಿಂಗ್ ಪದವೀಧರ ಕೊನೆಗೂ ಲಾಕ್

ಚುನಾವಣೆ ಮುಗಿದ ಬೆನ್ನಲ್ಲೇ ಮತ್ತೆ ಏರಿಕೆಯಾದ ಪೆಟ್ರೋಲ್, ಡೀಸೆಲ್ ಬೆಲೆ

ಚುನಾವಣೆಗಳು ಮುಗಿದಿರುವ ಹಿನ್ನೆಲೆಯಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಮುಂಬರುವ ದಿನಗಳಲ್ಲಿ ಮತ್ತಷ್ಟು ಏರಿಕೆಯಾಗುವ ನಿರೀಕ್ಷೆಗಳಿವೆ. ಸುಮಾರು 9 ವಾರಗಳಿಂದ ಪೆಟ್ರೋಲ್, ಡೀಸೆಲ್ ಬೆಲೆ ಹೆಚ್ಚಳ ಮಾಡದ ಕಂಪನಿಗಳು ಈ ಮೂಲಕ ನಷ್ಟವನ್ನು ಸರಿದೂಗಿಸಿ ಕೊಳ್ಳಲಿವೆ.

ಚುನಾವಣೆ ಮುಗಿದ ಬೆನ್ನಲ್ಲೇ ಮತ್ತೆ ಏರಿಕೆಯಾದ ಪೆಟ್ರೋಲ್, ಡೀಸೆಲ್ ಬೆಲೆ

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಿಂದಾಗಿ ದಿನ ನಿತ್ಯ ವಾಹನ ಬಳಸುವ ವಾಹನ ಸವಾರರು ಸಂಕಷ್ಟಕ್ಕೆ ಸಿಲುಕಲಿದ್ದಾರೆ. ತೈಲ ಕಂಪನಿಗಳು ಚುನಾವಣೆ ಸಮಯದಲ್ಲಿ ಬೆಲೆಗಳನ್ನು ಹೆಚ್ಚಿಸದೆ, ಚುನಾವಣೆ ಮುಗಿದ ತಕ್ಷಣವೇ ಬೆಲೆಗಳನ್ನು ಹೆಚ್ಚಿಸುತ್ತಿರುವುದು ಇದೇ ಮೊದಲ ಬಾರಿಯಲ್ಲ.

MOST READ:ಭಾರತದಲ್ಲಿ ಹೆಚ್ಚು ಕಾರು ಮಾರಾಟವಾಗುವ ಹತ್ತು ಪ್ರಮುಖ ನಗರಗಳಿವು

ಚುನಾವಣೆ ಮುಗಿದ ಬೆನ್ನಲ್ಲೇ ಮತ್ತೆ ಏರಿಕೆಯಾದ ಪೆಟ್ರೋಲ್, ಡೀಸೆಲ್ ಬೆಲೆ

ತೈಲ ಕಂಪನಿಗಳು ಹಿಂದಿನಿಂದಲೂ ವಿವಿಧ ಚುನಾವಣೆಗಳ ವೇಳೆ ಇದೇ ಮಾದರಿಯನ್ನು ಅನುಸರಿಸುತ್ತಿವೆ. ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಚುನಾವಣೆಯಲ್ಲಿ ವ್ಯತಿರಿಕ್ತ ಪರಿಣಾಮ ಬೀರಬಹುದು ಎಂಬ ಕಾರಣಕ್ಕೆ ತೈಲ ಕಂಪನಿಗಳು ಈ ಪ್ರವೃತ್ತಿಯನ್ನು ಅನುಸರಿಸುತ್ತವೆ.

ಚುನಾವಣೆ ಮುಗಿದ ಬೆನ್ನಲ್ಲೇ ಮತ್ತೆ ಏರಿಕೆಯಾದ ಪೆಟ್ರೋಲ್, ಡೀಸೆಲ್ ಬೆಲೆ

ಪೆಟ್ರೋಲ್, ಡೀಸೆಲ್ ಬೆಲೆ ಹೆಚ್ಚಳವು ವಾಹನ ಸವಾರರನ್ನು ಮಾತ್ರವಲ್ಲದೆ ಮಧ್ಯಮ ವರ್ಗದ ಜನರನ್ನೂ ಕಾಡುತ್ತದೆ. ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಾದರೆ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗುವುದೇ ಇದಕ್ಕೆ ಕಾರಣ.

MOST READ:ಕರೋನಾ ಸೋಂಕಿತರ ಪಾಲಿಗೆ ದೇವರಾದ ಕರೋನಾ ಸೋಂಕಿನಿಂದ ಗುಣಮುಖರಾದ ವ್ಯಕ್ತಿ

ಚುನಾವಣೆ ಮುಗಿದ ಬೆನ್ನಲ್ಲೇ ಮತ್ತೆ ಏರಿಕೆಯಾದ ಪೆಟ್ರೋಲ್, ಡೀಸೆಲ್ ಬೆಲೆ

ಈ ಕಾರಣಕ್ಕೆ ಪೆಟ್ರೋಲ್, ಡೀಸೆಲ್ ಬೆಲೆಯನ್ನು ಜಿಎಸ್‌ಟಿ ವ್ಯಾಪ್ತಿಗೆ ತರುವಂತೆ ಜನರು ಹಲವಾರು ದಿನಗಳಿಂದ ಒತ್ತಾಯಿಸುತ್ತಿದ್ದಾರೆ. ಆದರೆ ಕೇಂದ್ರ ಸರ್ಕಾರವು ಜನರ ಒತ್ತಾಯಕ್ಕೆ ಇದುವರೆಗೂ ಮನ್ನಣೆ ನೀಡಿಲ್ಲ.

Most Read Articles

Kannada
English summary
Oil companies increases petrol diesel price for the second consecutive day. Read in Kannada.
Story first published: Wednesday, May 5, 2021, 17:29 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X