Ola: ಓಲಾದಿಂದ ಕಡಿಮೆ ಬೆಲೆಯ 'ಎಸ್1 ಎಕ್ಸ್' ಎಲೆಕ್ಟ್ರಿಕ್ ಸ್ಕೂಟರ್ ಬಗ್ಗೆ ದೊಡ್ಡ ಘೋಷಣೆ.. ಏನದು?

ಬೆಂಗಳೂರು ಮೂಲದ ಓಲಾ (Ola) ಜನಪ್ರಿಯ ಎಲೆಕ್ಟ್ರಿಕ್ ದ್ವಿಚಕ್ರ ವಾಹನ ತಯಾರಕ ಕಂಪನಿಯಾಗಿ ಗುರುತಿಸಿಕೊಂಡಿದ್ದು, ಕೈಗೆಟುಕುವ ಬೆಲೆಯಲ್ಲಿ ಇ-ಸ್ಕೂಟರ್‌ಗಳನ್ನು ಮಾರಾಟಗೊಳಿಸುತ್ತಿದೆ. ಇದೀಗ, ತನ್ನ ಆರಂಭಿಕ ಮಾದರಿ (ಎಂಟ್ರಿ ಲೆವೆಲ್ ಮಾಡೆಲ್) 'ಎಸ್1 ಎಕ್ಸ್' ವಿತರಣೆಯ ಬಗ್ಗೆ ಮಹತ್ವದ ಘೋಷಣೆಯನ್ನು ಮಾಡಿದೆ.

ನೂತನ 'ಎಸ್1 ಎಕ್ಸ್' ಇ-ಸ್ಕೂಟರ್‌ಗಳ ಡೆಲಿವರಿಯು ಈ ತಿಂಗಳ ಕೊನೆಯಲ್ಲಿ ಆರಂಭವಾಗಲಿದೆ ಎಂದು ಓಲಾದ ಅಧಿಕಾರಿಗಳು ಖಚಿತಪಡಿಸಿದ್ದಾರೆ. ಈ ಎಲೆಕ್ಟ್ರಿಕ್ ಸ್ಕೂಟರ್, 2 ಕೆಡಬ್ಲ್ಯೂಹೆಚ್, 3 ಕೆಡಬ್ಲ್ಯೂಹೆಚ್ ಮತ್ತು 4 ಕೆಡಬ್ಲ್ಯೂಹೆಚ್ ಬ್ಯಾಟರಿ ಪ್ಯಾಕ್ ಆಯ್ಕೆಯಲ್ಲಿ ಲಭ್ಯವಿದ್ದು, ಕ್ರಮವಾಗಿ ರೂ.69,999, ರೂ.84,999 ಹಾಗೂ 99,999 ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ.

Ola S1 X Electric Scooters Deliveries Begin April End Rs 69 999 Starting Price

2 ಕೆಡಬ್ಲ್ಯೂಹೆಚ್ ಬ್ಯಾಟರಿ ಪ್ಯಾಕ್ ಪಡೆದಿರುವ ಓಲಾ ಎಸ್1 ಎಕ್ಸ್ ಎಲೆಕ್ಟ್ರಿಕ್ ಸ್ಕೂಟರ್, ಸಂಪೂರ್ಣ ಚಾರ್ಜ್ ನಲ್ಲಿ 91 ಕಿಲೋಮೀಟರ್ ರೇಂಜ್ (ಮೈಲೇಜ್) ನೀಡುತ್ತದೆ. ಕೇವಲ 4.1 ಸೆಕೆಂಡುಗಳಲ್ಲಿ 0-40 ಕೆಎಂಪಿಹೆಚ್ ವೇಗವನ್ನು ಪಡೆಯಲಿದ್ದು, 85 ಕೆಎಂಪಿಹೆಚ್ ಟಾಪ್ ಸ್ಪೀಡ್ (ಗರಿಷ್ಠ ವೇಗ) ಅನ್ನು ಹೊಂದಿದೆ. ಇದರಲ್ಲಿ ಬಳಕೆ ಮಾಡಿರುವ ಎಲೆಕ್ಟ್ರಿಕ್ ಮೋಟಾರ್, 6 ಕೆಡಬ್ಲ್ಯೂ ಪೀಕ್ ಪವರ್ (ಶಕ್ತಿ) ಉತ್ಪಾದಿಸುವ ಸಾಮರ್ಥ್ಯವನ್ನು ಒಳಗೊಂಡಿದೆ.

ಈ ಎಸ್1 ಎಕ್ಸ್ ಇ-ಸ್ಕೂಟರ್‌ನ ಬ್ಯಾಟರಿ ಪ್ಯಾಕ್ 7.4 ಗಂಟೆಗಳಲ್ಲಿ ಭರ್ತಿ ಚಾರ್ಜ್ ಆಗಲಿದ್ದು, ಇಕೋ, ನಾರ್ಮಲ್ & ಸ್ಪೋರ್ಟ್ಸ್ ಎಂಬ ರೈಡಿಂಗ್ ಮೋಡ್ ಆಯ್ಕೆಗಳನ್ನು ಪಡೆದಿದೆ. 3 ಕೆಡಬ್ಲ್ಯೂಹೆಚ್ ಬ್ಯಾಟರಿ ಪ್ಯಾಕ್ ಹೊಂದಿರುವ ಮಾದರಿ, ಭರ್ತಿ ಚಾರ್ಜ್ ನಲ್ಲಿ 151 ಕಿ.ಮೀ ಓಡಲಿದ್ದು, 90 ಕೆಎಂಪಿಹೆಚ್ ಟಾಪ್ ಸ್ಪೀಡ್ ಹೊಂದಿದೆ. 4 ಕೆಡಬ್ಲ್ಯೂಹೆಚ್ ಪಡೆದಿರುವ ಸ್ಕೂಟರ್, ಪೂರ್ತಿ ಚಾರ್ಜ್ ನಲ್ಲಿ 190 ಕಿ.ಮೀ ಕ್ರಮಿಸುತ್ತದೆ.

Ola S1 X Electric Scooters Deliveries Begin April End Rs 69 999 Starting Price

ರೆಡ್ ವೆಲಾಸಿಟಿ, ವೈಟ್, ಮಿಡ್‌ನೈಟ್, ಲಿಕ್ವಿಡ್ ಸಿಲ್ವರ್ ಸೇರಿದಂತೆ 7 ಬಣ್ಣಗಳೊಂದಿಗೂ ಹೊಸ ಓಲಾ ಎಸ್1 ಎಕ್ಸ್ ಎಲೆಕ್ಟ್ರಿಕ್ ಸ್ಕೂಟರ್ ಸಿಗುತ್ತದೆ. 3.5-ಇಂಚಿನ ಎಲ್‌ಸಿಡಿ ಸ್ಕ್ರೀನ್, ಒಟಿಎ ಅಪ್ಡೇಟ್, ರಿಮೋಟ್ ಬೂಟ್ ಅನ್‌ಲಾಕ್, ಬ್ಲೂಟೂತ್ ಕನೆಕ್ಟಿವಿಟಿ, ನ್ಯಾವಿಗೇಷನ್ & ಕ್ರೂಸ್ ಕಂಟ್ರೋಲ್ ಒಳಗೊಂಡಂತೆ ಬೆಲೆಗೆ ತಕ್ಕಂತೆ ಸಾಕಷ್ಟು ಆಕರ್ಷಕ ವೈಶಿಷ್ಟ್ಯಗಳನ್ನು ಕೂಡ ಪಡೆದಿದೆ.

ಓಲಾ ಕಂಪನಿಯು ಎಸ್1 ಎಕ್ಸ್ ಮಾತ್ರವಲ್ಲದೆ ಎಸ್1 ಏರ್ ಹಾಗೂ ಎಸ್1 ಪ್ರೊ ಎಲೆಕ್ಟ್ರಿಕ್ ಸ್ಕೂಟರ್‌ನ್ನು ಮಾರಾಟ ಮಾಡುತ್ತದೆ. ಓಲಾ ಎಸ್1 ಏರ್ (Ola S1 Air) ರೂ.1.05 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. 3 ಕೆಡಬ್ಲ್ಯೂಹೆಚ್ ಸಾಮರ್ಥ್ಯದ ಬ್ಯಾಟರಿ ಪ್ಯಾಕ್ ಆಯ್ಕೆಯನ್ನು ಪಡೆದಿದ್ದು, ಸಂಪೂರ್ಣ ಚಾರ್ಜ್ ನಲ್ಲಿ 151 ಕಿ.ಮೀ ರೇಂಜ್ ನೀಡುತ್ತದೆ.

Ola S1 X Electric Scooters Deliveries Begin April End Rs 69 999 Starting Price

ಓಲಾ ಎಸ್1 ಪ್ರೊ (Ola S1 Pro) ಎಲೆಕ್ಟ್ರಿಕ್ ಸ್ಕೂಟರ್ ರೂ.1.30 ಲಕ್ಷ ಎಕ್ಸ್ ಶೋರೂಂ ದರವನ್ನು ಹೊಂದಿದೆ. 4 ಕೆಡಬ್ಲ್ಯೂಹೆಚ್ ಸಾಮರ್ಥ್ಯದ ಬ್ಯಾಟರಿ ಪ್ಯಾಕ್ ಆಯ್ಕೆಯನ್ನು ಪಡೆದಿದ್ದು, ಭರ್ತಿ ಚಾರ್ಜ್ ನಲ್ಲಿ 180 ಕಿಲೋಮೀಟರ್ ಓಡಬಲ್ಲದು. ಗಂಟೆಗೆ 120 ಕಿ.ಮೀ ಗರಿಷ್ಠ ವೇಗವನ್ನು ಪಡೆಯಲಿದ್ದು, ಟಿಎಫ್‌ಟಿ ಡಿಸ್ಪ್ಲೇ, ವೈಫೈ/ 4ಜಿ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ತನ್ನದಾಗಿಸಿಕೊಂಡಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ತಂಡ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ಒದಗಿಸುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ ಗಳನ್ನು ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

More from DriveSpark

Article Published On: Tuesday, April 23, 2024, 13:11 [IST]
English summary
Ola s1 x electric scooters deliveries begin april end rs 69999 starting price
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+