ಮೊದಲ ಮಹೀಂದ್ರಾ ಸ್ಕಾರ್ಪಿಯೊ ಎನ್ ಪಡೆದುಕೊಂಡ ಕುಸ್ತಿಪಟು ಗೀತಾ ಫೋಗಟ್: ಆನಂದ್ ಮಹೀಂದ್ರಾ ಫುಲ್ ಖುಷ್

ಒಲಿಂಪಿಯನ್ ಗೀತಾ ಫೋಗಟ್ ಅವರ ಜೀವನದಿಂದ ಪ್ರೇರಿತವಾದ ದಂಗಲ್ ಚಿತ್ರದ ನಂತರ ಅವರು ಬಹಳ ಜನಪ್ರಿಯರಾದರು. ಈ ಖ್ಯಾತ ಮಹಿಳಾ ಕುಸ್ತಿಪಟು ತಮ್ಮ ಮೆಚ್ಚಿನ ಹೊಸ ಮಹೀಂದ್ರಾ ಸ್ಕಾರ್ಪಿಯೊ ಎನ್ ಎಸ್‌ಯುವಿಯನ್ನು ಖರೀದಿಸಿದ್ದಾರೆ.

ಸ್ಟಾರ್ ಕುಸ್ತಿಪಟು ಗೀತಾ ಫೋಗಟ್ ಮನೆ ಸೇರಿದ ಹೊಸ ಮಹೀಂದ್ರಾ ಸ್ಕಾರ್ಪಿಯೊ ಎನ್ ಎಸ್‌ಯುವಿ

ಗೀತಾ ಫೋಗಟ್ ಅವರು ಹೊಸ ಹೊಸ ಮಹೀಂದ್ರಾ ಸ್ಕಾರ್ಪಿಯೊ ಎನ್ ಎಸ್‌ಯುವಿಯನ್ನು ವಿತರಣೆಯನ್ನು ಪಡೆಯುವ ಚಿತ್ರಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಾಡಿದ್ದಾರೆ. ಪೋಸ್ಟ್ ಕೆಳಗಡೆ, "ಇಂತಹ ಸುಂದರ ದಿನದಂದು ಎಂತಹ ಸುಂದರವಾದ ಮುಂಜಾನೆ.. ನವರಾತ್ರಿಯ 1 ನೇ ದಿನದಂದು ನಮ್ಮ ಹೊಸ ಸದಸ್ಯರನ್ನು ಸ್ವಾಗತಿಸುತ್ತಿದ್ದೇನೆ (ಮಹೀಂದ್ರ ಸ್ಕಾರ್ಪಿಯೋ-ಎನ್ ) ಇಂತಹ ಅದ್ಭುತ ಕಾರನ್ನು ಬಿಡುಗಡೆ ಮಾಡಿದ್ದಕ್ಕಾಗಿ ತುಂಬಾ ಧನ್ಯವಾದಗಳು anandmahindra ಸರ್. P.P ಆಟೋಮೋಟಿವ್ ಪ್ರೈ ಅತ್ಯುತ್ತಮ ಸೇವೆಗಾಗಿ ಧನ್ಯವಾದಗಳು ಎಂದು ಬರೆದುಕೊಂಡಿದ್ದಾರೆ.

ಸ್ಟಾರ್ ಕುಸ್ತಿಪಟು ಗೀತಾ ಫೋಗಟ್ ಮನೆ ಸೇರಿದ ಹೊಸ ಮಹೀಂದ್ರಾ ಸ್ಕಾರ್ಪಿಯೊ ಎನ್ ಎಸ್‌ಯುವಿ

ಆನಂದ್ ಮಹೀಂದ್ರಾ ಅವರ ಟ್ವೀಟ್‌ಗೆ ಪ್ರತಿಕ್ರಿಯಿಸಿದ್ದು, ಈ ಕ್ಷಣವನ್ನು "ಬೋನಸ್" ಮತ್ತು "ಸವಲತ್ತು" ಎಂದು ಕರೆದ ಅವರು, ಕುಸ್ತಿಪಟು ಹೊಸ ವಾಹನದ ಮೊದಲ ಗ್ರಾಹಕರ ಎಂದು ಬಹಿರಂಗಪಡಿಸಿದರು. ನಾವು ನಿಮ್ಮ ಚಿನ್ನದ ಪದಕದ ವೈಭವವನ್ನು ನೋಡಿದ್ದೇವೆ.. ನಮ್ಮ ಕಾರು ಸಹ ನಿಮ್ಮಂತೆಯೇ ಬಲಿಷ್ಟವಾಗಿರುತ್ತದೆ ಎಂದು ನಾವು ಭಾವಿಸುತ್ತೇವೆ ಎಂದಿದ್ದಾರೆ.

ಸ್ಟಾರ್ ಕುಸ್ತಿಪಟು ಗೀತಾ ಫೋಗಟ್ ಮನೆ ಸೇರಿದ ಹೊಸ ಮಹೀಂದ್ರಾ ಸ್ಕಾರ್ಪಿಯೊ ಎನ್ ಎಸ್‌ಯುವಿ

ಗೀತಾ ಫೋಗಟ್ ಅವರು ತಮ್ಮ ಕುಟುಂಬ ಸದಸ್ಯರೊಂದಿಗೆ ಡೀಲರ್‌ಶಿಪ್‌ನಲ್ಲಿ ಹೊಸ ಸ್ಕಾರ್ಪಿಯೋ ಎನ್‌ ಎಸ್‍ಯುವಿಯನ್ನು ವಿತರಣೆಯನ್ನು ಪಡೆದುಕೊಂಡಿದ್ದಾರೆ. ಇವರು ಖರೀದಿಸಿದ ಎಸ್‍ಯುವಿಯು ಒಲಿಂಪಿಯನ್ ನಾಪೋಲಿ ಬ್ಲ್ಯಾಕ್ ಬಣ್ಣವನ್ನು ಹೊಂದಿದೆ.

ಸ್ಟಾರ್ ಕುಸ್ತಿಪಟು ಗೀತಾ ಫೋಗಟ್ ಮನೆ ಸೇರಿದ ಹೊಸ ಮಹೀಂದ್ರಾ ಸ್ಕಾರ್ಪಿಯೊ ಎನ್ ಎಸ್‌ಯುವಿ

ಮಹೀಂದ್ರಾ ಜುಲೈ 30 ರಿಂದ ಸ್ಕಾರ್ಪಿಯೋ ಎನ್ ಬುಕ್ಕಿಂಗ್ ಅನ್ನು ಸ್ವೀಕರಿಸಲು ಪ್ರಾರಂಭಿಸಿದ್ದರು. ಕೇವಲ 30 ನಿಮಿಷಗಳಲ್ಲಿ ಲಕ್ಷಕ್ಕೂ ಹೆಚ್ಚು ಬುಕ್ಕಿಂಗ್‌ಗಳನ್ನು ಸ್ವೀಕರಿಸಿದ ಕಾರಣ ಗ್ರಾಹಕರಿಂದ ಅಗಾಧ ಪ್ರತಿಕ್ರಿಯೆಯನ್ನು ಪಡೆಯಿತು. ಸ್ಕಾರ್ಪಿಯೊ ಎನ್ ಎಸ್‌ಯುವಿಯ ವಿತರಣೆಗಳು ಸೆಪ್ಟೆಂಬರ್ 26 ರಂದು ಪ್ರಾರಂಭವಾಯ್ತು.

ಸ್ಟಾರ್ ಕುಸ್ತಿಪಟು ಗೀತಾ ಫೋಗಟ್ ಮನೆ ಸೇರಿದ ಹೊಸ ಮಹೀಂದ್ರಾ ಸ್ಕಾರ್ಪಿಯೊ ಎನ್ ಎಸ್‌ಯುವಿ

ಮಹೀಂದ್ರಾ ಕಂಪನಿಯು ಈ ಎಸ್‍ಯುವಿಯನ್ನು ಗ್ರಾಹಕರ ಬೇಡಿಕೆಯೆಂತೆ 6 ಸೀಟರ್ ಮತ್ತು 7 ಸೀಟರ್ ಸೌಲಭ್ಯದೊಂದಿಗೆ 2.2 ಲೀಟರ್ ಡೀಸೆಲ್ ಮತ್ತು 2.0 ಲೀಟರ್ ಪೆಟ್ರೋಲ್ ಎಂಜಿನ್ ಆಯ್ಕೆ ನೀಡಿದ್ದು, ಹೊಸ ಕಾರಿನ ವಿವಿಧ ಮಾದರಿಗಳಿಗೆ ಅನುಗುಣವಾಗಿ ಹಲವಾರು ಡ್ರೈವ್ ಮೋಡ್ ಪಡೆದುಕೊಳ್ಳಬಹುದು.

ಸ್ಟಾರ್ ಕುಸ್ತಿಪಟು ಗೀತಾ ಫೋಗಟ್ ಮನೆ ಸೇರಿದ ಹೊಸ ಮಹೀಂದ್ರಾ ಸ್ಕಾರ್ಪಿಯೊ ಎನ್ ಎಸ್‌ಯುವಿ

ಸ್ಕಾರ್ಪಿಯೋ-ಎನ್ ಮಾದರಿಯು ಆನ್ ರೋಡ್‌ನಲ್ಲಿ ಮಾತ್ರವಲ್ಲ ಆಫ್ ರೋಡ್‌ನಲ್ಲೂ ಗಮನಸೆಳೆಯಲಿದ್ದು, 2.0-ಲೀಟರ್ ಪೆಟ್ರೋಲ್ ಮಾದರಿಯು 6-ಸ್ಪೀಡ್ ಮ್ಯಾನುವಲ್ ಮತ್ತು 6-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆಯನ್ನು ಮತ್ತು 2.2 ಲೀಟರ್ ಡೀಸೆಲ್ ಮಾದರಿಯು 6-ಸ್ಪೀಡ್ ಮ್ಯಾನುವಲ್ ಮತ್ತು 6-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆಯೊಂದಿಗೆ ಎರಡು ರೀತಿಯ ಪರ್ಫಾಮೆನ್ಸ್ ಆಯ್ಕೆಗಳನ್ನು ನೀಡಿದೆ.

ಸ್ಟಾರ್ ಕುಸ್ತಿಪಟು ಗೀತಾ ಫೋಗಟ್ ಮನೆ ಸೇರಿದ ಹೊಸ ಮಹೀಂದ್ರಾ ಸ್ಕಾರ್ಪಿಯೊ ಎನ್ ಎಸ್‌ಯುವಿ

ಪೆಟ್ರೋಲ್ ಮ್ಯಾನುವಲ್ ಮಾದರಿಯು 203 ಬಿಹೆಚ್‍ಪಿ ಪವರ್ ಮತ್ತು 370 ಎನ್ಎಂ ಟಾರ್ಕ್ ಉತ್ಪಾದನೆ ಮಾಡಿದಲ್ಲಿ ಆಟೋಮ್ಯಾಟಿಕ್ ಮಾದರಿಯು 203 ಬಿಹೆಚ್‍ಪಿ ಪವರ್ ಮತ್ತು 380 ಎನ್ಎಂ ಟಾರ್ಕ್ ಉತ್ಪಾದನೆ ಮಾಡುತ್ತದೆ. ಹಾಗೆಯೇ ಡೀಸೆಲ್ ಆರಂಭಿಕ ಮಾದರಿಯು ಮ್ಯಾನುವಲ್ ಆಯ್ಕೆಯೊಂದಿಗೆ 132 ಬಿಹೆಚ್‍ಪಿ ಪವರ್ ಮತ್ತು 300 ಎನ್ಎಂ ಟಾರ್ಕ್ ಉತ್ಪಾದನೆ ಮಾಡಿದ್ದಲ್ಲಿ ಹೈ ಎಂಡ್ ಮಾದರಿಯು ಮ್ಯಾನುವಲ್ ಮತ್ತು ಆಟೋಮ್ಯಾಟಿಕ್ ಮಾದರಿಯೊಂದಿಗೆ 175 ಬಿಹೆಚ್‍ಪಿ ಪವರ್ ಮತ್ತು 370 ಎನ್ಎಂ ಟಾರ್ಕ್ ಉತ್ಪಾದನಾ ಗುಣಹೊಂದಿವೆ.

ಸ್ಟಾರ್ ಕುಸ್ತಿಪಟು ಗೀತಾ ಫೋಗಟ್ ಮನೆ ಸೇರಿದ ಹೊಸ ಮಹೀಂದ್ರಾ ಸ್ಕಾರ್ಪಿಯೊ ಎನ್ ಎಸ್‌ಯುವಿ

ಈ ಮೂಲಕ ಹೊಸ ಕಾರು ಉತ್ತಮ ಇಂಧನ ದಕ್ಷತೆ ಹೊಂದಿದ್ದು, ಹೊಸ ಕಾರಿನ 2.2 ಲೀಟರ್ ಡೀಸೆಲ್ ಮಾದರಿಯು ಪ್ರತಿ ಲೀಟರ್‌ಗೆ ನಗರ ಪ್ರದೇಶದಲ್ಲಿ 12.16 ಕಿ.ಮೀ ನಿಂದ 12.80 ಕಿ.ಮೀ ಮೈಲೇಜ್ ನೀಡಿದರೆ ಹೆದ್ದಾರಿಗಳಲ್ಲಿ ಇದೇ ಮಾದರಿಯು ಪ್ರತಿ ಲೀಟರ್‌ಗೆ 14.64 ಕಿ.ಮೀ ನಿಂದ 15.50 ಕಿ.ಮೀ ಮೈಲೇಜ್ ನೀಡುತ್ತದೆ.

ಸ್ಟಾರ್ ಕುಸ್ತಿಪಟು ಗೀತಾ ಫೋಗಟ್ ಮನೆ ಸೇರಿದ ಹೊಸ ಮಹೀಂದ್ರಾ ಸ್ಕಾರ್ಪಿಯೊ ಎನ್ ಎಸ್‌ಯುವಿ

ಇನ್ನು 2.0 ಲೀಟರ್ ಪೆಟ್ರೋಲ್ ಮಾದರಿಯು ಪ್ರತಿ ಲೀಟರ್‌ಗೆ ನಗರದಲ್ಲಿ 7.9 ಕಿ.ಮೀ ನಿಂದ 8.50 ಕಿ.ಮೀ ತನಕ ಮೈಲೇಜ್ ನೀಡಿದಲ್ಲಿ ಹೆದ್ದಾರಿಗಳಲ್ಲಿ ಇದರ ಮೈಲೇಜ್ ಪ್ರಮಾಣವು ಪ್ರತಿ ಲೀಟರ್‌ಗೆ 8.50 ಕಿ.ಮೀ ನಿಂದ 9.40 ಕಿಮೀ ಮೈಲೇಜ್ ನೀಡುತ್ತದೆ ಎನ್ನಲಾಗಿದೆ, ಹಾಗೆಯೇ ಹೊಸ ಸ್ಕಾರ್ಪಿಯೊ-ಎನ್ ಮಾದರಿಯನ್ನು ಅದರ ಹಿಂದಿನ ಸ್ಕಾರ್ಪಿಯೊಗಿಂತಲೂ ಹೆಚ್ಚಿನ ವೈಶಿಷ್ಟ್ಯಗಳೊಂದಿಗೆ ಬಿಡುಗಡೆ ಮಾಡಲಾಗಿದ್ದು, ಜುಲೈ 30ರಿಂದ ಹೊಸ ಕಾರಿನ ಬುಕಿಂಗ್ ಪ್ರಕ್ರಿಯೆ ಆರಂಭವಾಗಲಿದೆ.

ಸ್ಟಾರ್ ಕುಸ್ತಿಪಟು ಗೀತಾ ಫೋಗಟ್ ಮನೆ ಸೇರಿದ ಹೊಸ ಮಹೀಂದ್ರಾ ಸ್ಕಾರ್ಪಿಯೊ ಎನ್ ಎಸ್‌ಯುವಿ

ಇದರೊಂದಿಗೆ ಮಹೀಂದ್ರಾ ಕಂಪನಿಯು ಹೊಸ ಕಾರು ಮಾದರಿಯನ್ನು ಈ ಹಿಂದಿಗಿಂತಲೂ ಹೆಚ್ಚಿನ ಮಟ್ಟದ ತಾಂತ್ರಿಕ ಅಂಶಗಳೊಂದಿಗೆ ಅಭಿವೃದ್ದಿಗೊಳಿಸಿದ್ದು,ಈ ಎಸ್‍ಯುವಿ ಮುಂಭಾಗದಲ್ಲಿ ಮಹೀಂದ್ರಾ ಸಾಂಪ್ರದಾಯಿಕ ಸಿಕ್ಸ್ ಸ್ಲಾಟ್ ಫ್ರಂಟ್ ಗ್ರಿಲ್ ಜೊತೆಗೆ ಎಲ್ಇಡಿ ಪ್ರೊಜೆಕ್ಟರ್ ಹೆಡ್‌ಲ್ಯಾಂಪ್, ಸ್ಕಾರ್ಪಿಯನ್ ಟೈಲ್ ಶೇಪ್ ಹೊಂದಿರುವ ಡಿಆರ್‌ಎಲ್ಎಸ್ ಮತ್ತು ಫಾಗ್ ಲ್ಯಾಂಪ್ ಹೊಂದಿದೆ.

ಸ್ಟಾರ್ ಕುಸ್ತಿಪಟು ಗೀತಾ ಫೋಗಟ್ ಮನೆ ಸೇರಿದ ಹೊಸ ಮಹೀಂದ್ರಾ ಸ್ಕಾರ್ಪಿಯೊ ಎನ್ ಎಸ್‌ಯುವಿ

ಈ ಹೊಸ ಸ್ಕಾರ್ಪಿಯೋ-ಎನ್ ಎಸ್‍ಯುವಿಯಲ್ಲಿ ಸಿ ಮತ್ತು ಡಿ-ಪಿಲ್ಲರ್ ಪ್ರದೇಶಗಳಲ್ಲಿ ವಿಂಡೋ ಕ್ರೋಮ್ ಫ್ರೇಮ್‌ನಲ್ಲಿ ಸ್ಕಾರ್ಪಿಯನ್ ಸ್ಟಿಂಗ್ ಅಂಶವನ್ನು ಸಹ ಹೊಂದಿದೆ. ಜೊತೆಗೆ ಹೊಸ ಸ್ಕಾರ್ಪಿಯೋ-ಎನ್‌ನಲ್ಲಿ ಹೊಸ ಡ್ಯುಯಲ್-ಟೋನ್ ಮಿಶ್ರಲೋಹದ 18 ಇಂಚಿನ ಚಕ್ರಗಳನ್ನು ನೀಡಲಾಗಿದ್ದು, ಲಂಬವಾಗಿ ಜೋಡಿಸಲಾದ ಎಲ್ಇಡಿ ಟೈಲ್‌ಲೈಟ್‌ಗಳು ಮತ್ತು ಸ್ಪಾಯ್ಲರ್ ಅನ್ನು ಹೊಂದಿದೆ.

ಸ್ಟಾರ್ ಕುಸ್ತಿಪಟು ಗೀತಾ ಫೋಗಟ್ ಮನೆ ಸೇರಿದ ಹೊಸ ಮಹೀಂದ್ರಾ ಸ್ಕಾರ್ಪಿಯೊ ಎನ್ ಎಸ್‌ಯುವಿ

ಸ್ಕಾರ್ಪಿಯೋ-ಎನ್ ಮಿಡ್ ವೆರಿಯೆಂಟ್‌ ನಂತರದಲ್ಲಿ ಲಭ್ಯವಾಗುವಂತೆ ಸನ್‌ರೂಫ್, ಎಲೆಕ್ಟ್ರಿಕಲ್ ಫೋಲ್ಡಿಂಗ್ ರಿಯರ್ ವ್ಯೂ ಮಿರರ್‌ಗಳು ಮತ್ತು ಶಾರ್ಕ್-ಫಿನ್ ಆಂಟೆನಾವನ್ನು ಸಹ ಒಳಗೊಂಡಿದ್ದು, ಹೊಸ ಕಾರಿನಲ್ಲಿ ಹೊರಭಾಗದಂತೆ ಒಳಭಾಗದಲ್ಲೂ ಸಾಕಷ್ಟು ಬದಲಾವಣೆ ತರಲಾಗಿದೆ.

ಸ್ಟಾರ್ ಕುಸ್ತಿಪಟು ಗೀತಾ ಫೋಗಟ್ ಮನೆ ಸೇರಿದ ಹೊಸ ಮಹೀಂದ್ರಾ ಸ್ಕಾರ್ಪಿಯೊ ಎನ್ ಎಸ್‌ಯುವಿ

ಹೊಸ ಎಸ್‍ಯುವಿಯ ಒಳಪ್ರವೇಶಸುತ್ತಿದ್ದಂತೆ ಡ್ಯುಯಲ್-ಟೋನ್ ಡ್ಯಾಶ್‌ಬೋರ್ಡ್ ಮತ್ತು ಮೆಟಲ್-ಫಿನಿಶ್ಡ್ ಡ್ಯುಯಲ್ ರೈಲ್‌ಗಳೊಂದಿಗೆ ಆಕರ್ಷಕವಾದ ಸೆಂಟರ್ ಕನ್ಸೋಲ್‌ ಗಮನಸೆಳೆಯಲಿದ್ದು, ರಿಚ್ ಕಾಫಿ ಬ್ಲ್ಯಾಕ್ ಲೆದರ್ ಆಸನಗಳು, 6 ಹಂತಗಳಲ್ಲಿ ಹೊಂದಾಣಿಕೆ ಮಾಡಬಹುದಾದ ಡ್ರೈವರ್ ಸೀಟ್ ಎರಡನೇ ಸಾಲಿನಲ್ಲಿ ಕ್ಯಾಪ್ಟನ್ ಆಸನಗಳನ್ನು ಸಹ ಒಳಗೊಂಡಿವೆ. ಇದರೊಂದಿಗೆ 8-ಇಂಚಿನ ಟಚ್‌ಸ್ಕ್ರೀನ್ ಇನ್ಪೋಟೈನ್‌ಮೆಂಟ್ ಸಿಸ್ಟಂ, 70ಕ್ಕೂ ಹೆಚ್ಚು ಕಾರ್ ಕನೆಕ್ಟ್ ಫೀಚರ್ಸ್, ಅಂಡ್ರಾಯಿಡ್ ಆಟೋ ಮತ್ತು ಆಟೋ ಕಾರ್‌ಪ್ಲೇ, ಅಮೆಜಾನ್ ಅಲೆಕ್ಸಾ ವಾಯ್ಸ್ ಸರ್ಪೊಟ್, 3ಡಿ ಸೊನಿ ಸರೌಂಡ್ ಸೌಂಡ್ ಸಿಸ್ಟಂ ಮತ್ತು ವಾಯ್ಸ್ ಕಮಾಂಡ್ ಫೀಚರ್ಸ್ ಹೊಂದಿದೆ.

ಸ್ಟಾರ್ ಕುಸ್ತಿಪಟು ಗೀತಾ ಫೋಗಟ್ ಮನೆ ಸೇರಿದ ಹೊಸ ಮಹೀಂದ್ರಾ ಸ್ಕಾರ್ಪಿಯೊ ಎನ್ ಎಸ್‌ಯುವಿ

ಜೊತೆಗೆ ಡ್ಯುಯಲ್-ಜೋನ್ ಆಟೋಮ್ಯಾಟಿಕ್ ಕ್ಲೈಮೆಂಟ್ ಕಂಟ್ರೋಲ್, ಮುಂಭಾಗ ಮತ್ತು ಹಿಂಭಾಗದಲ್ಲಿ ಕ್ಯಾಮೆರಾಗಳು ಮತ್ತು ಸ್ಮಾರ್ಟ್‌ಫೋನ್‌ಗಾಗಿ ವೈರ್‌ಲೆಸ್ ಚಾರ್ಜರ್‌ನಂತಹ ವೈಶಿಷ್ಟ್ಯಗಳನ್ನು ಹೊಂದಿರಲಿದ್ದು, ಸುರಕ್ಷತೆಗಾಗಿ 6 ಏರ್‌ಬ್ಯಾಗ್‌ಗಳು, ಇಬಿಡಿ ಜೊತೆಗೆ ಎಬಿಎಸ್, ಇಎಸ್ಇ, ಟ್ರಾಕ್ಷನ್ ಕಂಟ್ರೋಲ್, ಹಿಲ್ ಹೋಲ್ಡ್ ಕಂಟ್ರೋಲ್, ಹಿಲ್ ಡಿಸೆಂಟ್ ಕಂಟ್ರೋಲ್, ಐಸೋಫಿಕ್ಸ್ ಆಂಕರ್ ಪಾಯಿಂಟ್‌ಗಳು ಮತ್ತು ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್ ಸೇರಿದಂತೆ ಹಲವಾರು ಫೀಚರ್ಸ್‌ಗಳನ್ನು ಹೊಂದಿವೆ.

More from DriveSpark

Article Published On: Wednesday, September 28, 2022, 13:47 [IST]
English summary
Olympian geeta phogat took delivery of new mahindra scorpio n suv details
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+