ಈ ಪ್ರದೇಶದಲ್ಲಿ ಪೆಟ್ರೋಲ್, ಡೀಸೆಲ್ ವಾಹನಗಳ ಸಂಚಾರಕ್ಕಿಲ್ಲ ಅವಕಾಶ

ಇನ್ನು ಮುಂದೆ ಗುಜರಾತ್'ನಲ್ಲಿರುವ ಏಕತೆ ಪ್ರತಿಮೆ ಬಳಿ ಎಲೆಕ್ಟ್ರಿಕ್ ವಾಹನಗಳ ಸಂಚಾರಕ್ಕೆ ಮಾತ್ರ ಅವಕಾಶ ನೀಡಲಾಗುವುದು. ಇದರಿಂದಾಗಿ ಈ ಪ್ರದೇಶವು ಎಲೆಕ್ಟ್ರಿಕ್ ವಾಹನಗಳು ಮಾತ್ರ ಸಂಚರಿಸುವ ಭಾರತದ ಮೊದಲ ಪ್ರದೇಶ ಎಂಬ ಹೆಗ್ಗಳಿಕೆಗೆ ಪಾತ್ರವಾಗಲಿದೆ.

ಈ ಪ್ರದೇಶದಲ್ಲಿ ಪೆಟ್ರೋಲ್, ಡೀಸೆಲ್ ವಾಹನಗಳ ಸಂಚಾರಕ್ಕಿಲ್ಲ ಅವಕಾಶ

ಪ್ರಧಾನಿ ನರೇಂದ್ರ ಮೋದಿ ಅವರು ಈ ಘೋಷಣೆ ಮಾಡಿದ್ದಾರೆ. ಸ್ಟ್ಯಾಚು ಆಫ್ ಯುನಿಟಿ ಏರಿಯಾ ಡೆವಲಪ್‌ಮೆಂಟ್ ಅಂಡ್ ಟೂರಿಸಂ ಗವರ್ನೆನ್ಸ್ ಅಥಾರಿಟಿ ಈ ಪ್ರದೇಶವನ್ನು ವಾಹನ ಮುಕ್ತ ಪ್ರದೇಶವಾಗಿ ನವೀಕರಿಸುವುದಾಗಿ ಹೇಳಿದೆ. ಏಕತೆ ಪ್ರತಿಮೆಯ ಸುತ್ತಲಿನ ಪ್ರದೇಶದಲ್ಲಿ ಎಲೆಕ್ಟ್ರಿಕ್ ವಾಹನಗಳಿಗೆ ಮಾತ್ರ ಅನುಮತಿ ನೀಡುವ ನಿರ್ಧಾರವನ್ನು ಕ್ರಮೇಣ ಜಾರಿಗೆ ತರಲಾಗುವುದು ಎಂದು ವರದಿಯಾಗಿದೆ.

ಈ ಪ್ರದೇಶದಲ್ಲಿ ಪೆಟ್ರೋಲ್, ಡೀಸೆಲ್ ವಾಹನಗಳ ಸಂಚಾರಕ್ಕಿಲ್ಲ ಅವಕಾಶ

ಸ್ಟ್ಯಾಚು ಆಫ್ ಯುನಿಟಿ ಏರಿಯಾ ಡೆವಲಪ್‌ಮೆಂಟ್ ಅಂಡ್ ಟೂರಿಸಂ ಗವರ್ನೆನ್ಸ್ ಅಥಾರಿಟಿ ಹೊರಡಿಸಿರುವ ಪತ್ರಿಕಾ ಪ್ರಕಟಣೆಯ ಪ್ರಕಾರ, ತನ್ನ ನಿಯಂತ್ರಣದಲ್ಲಿರುವ ಪ್ರದೇಶದಲ್ಲಿ ಎಲೆಕ್ಟ್ರಿಕ್ ವಾಹನಗಳ ಸಂಚಾರಕ್ಕೆ ಅನುಮತಿ ನೀಡಲಾಗುವುದು. ಪ್ರವಾಸಿಗರ ಬಸ್ಸುಗಳು ಡೀಸೆಲ್ ಬದಲಿಗೆ ಬ್ಯಾಟರಿಗಳಲ್ಲಿ ಚಲಿಸಲಿವೆ.

MOST READ: ವಾಹನ ಖರೀದಿಸುವವರಿಗೆ, ಮಾರಾಟ ಮಾಡುವವರಿಗೆ ನೆರವಾಗುವ ಆರ್‌ಟಿಒ ಫಾರಂಗಳಿವು!

ಈ ಪ್ರದೇಶದಲ್ಲಿ ಪೆಟ್ರೋಲ್, ಡೀಸೆಲ್ ವಾಹನಗಳ ಸಂಚಾರಕ್ಕಿಲ್ಲ ಅವಕಾಶ

ಏಕತೆ ಪ್ರತಿಮೆ ಪ್ರದೇಶದಲ್ಲಿ ಎಲೆಕ್ಟ್ರಿಕ್ ವಾಹನಗಳಿಗೆ ಮಾತ್ರ ಅನುಮತಿ ನೀಡಲಾಗುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಕಳೆದ ಶನಿವಾರ ಹೇಳಿದ್ದಾರೆ. ಈ ಪ್ರದೇಶದಲ್ಲಿ ಎಲೆಕ್ಟ್ರಿಕ್ ವಾಹನಗಳಿಗೆ ಆದ್ಯತೆ ನೀಡಬೇಕು ಎಂದು 2019ರಲ್ಲಿ ಪ್ರಧಾನಿ ನರೇಂದ್ರ ಮೋದಿ ಹೇಳಿದ್ದರು ಎಂಬುದು ಗಮನಾರ್ಹ.

ಈ ಪ್ರದೇಶದಲ್ಲಿ ಪೆಟ್ರೋಲ್, ಡೀಸೆಲ್ ವಾಹನಗಳ ಸಂಚಾರಕ್ಕಿಲ್ಲ ಅವಕಾಶ

ಈ ಯೋಜನೆಯಡಿ ಸರ್ದಾರ್ ವಲ್ಲಭಭಾಯ್ ಪಟೇಲ್ ಪ್ರತಿಮೆಯ ಸ್ಥಳದ ಸುತ್ತಲಿನ ಜನರಿಗೆ ಎಲೆಕ್ಟ್ರಿಕ್ ತ್ರಿಚಕ್ರ ವಾಹನಗಳನ್ನು ಖರೀದಿಸಲು ಸಹಾಯ ಮಾಡಲಾಗುವುದು. ಇತರ ಎಲೆಕ್ಟ್ರಿಕ್ ವಾಹನಗಳ ಖರೀದಿಗೆ ಸಬ್ಸಿಡಿ ಸಹ ನೀಡಲಾಗುವುದು. ಮೊದಲ ಹಂತದಲ್ಲಿ ಪ್ರತಿಮೆಯಿರುವ ಪ್ರದೇಶದಲ್ಲಿ 50 ಎಲೆಕ್ಟ್ರಿಕ್ ರಿಕ್ಷಾಗಳಿಗೆ ಅನುಮತಿ ನೀಡಲಾಗುವುದು.

MOST READ: ಎಲೆಕ್ಟ್ರಿಕ್ ದ್ವಿಚಕ್ರ ವಾಹನ ಖರೀದಿಗೂ ಮುನ್ನ ಪರಿಶೀಲಿಸಬೇಕಾದ ಸಂಗತಿಗಳಿವು

ಈ ಪ್ರದೇಶದಲ್ಲಿ ಪೆಟ್ರೋಲ್, ಡೀಸೆಲ್ ವಾಹನಗಳ ಸಂಚಾರಕ್ಕಿಲ್ಲ ಅವಕಾಶ

ಈ ಎಲೆಕ್ಟ್ರಿಕ್ ರಿಕ್ಷಾಗಳಿಗೆ ಚಾಲಕರಾಗಿ ಕೆಲಸ ಮಾಡಲು ಮಹಿಳೆಯರಿಗೆ ಆದ್ಯತೆ ನೀಡಲಾಗುವುದು. ಇದಕ್ಕಾಗಿ ಮಹಿಳೆಯರಿಗೆ ಉಚಿತ ತರಬೇತಿ ನೀಡಲಾಗುವುದು. ಈ ಪ್ರದೇಶದಲ್ಲಿ ವರ್ಕ್ ಶಾಪ್ ಹಾಗೂ ಚಾರ್ಜಿಂಗ್ ಕೇಂದ್ರಗಳನ್ನು ಸಹ ಸ್ಥಾಪಿಸಲಾಗುವುದು.

ಈ ಪ್ರದೇಶದಲ್ಲಿ ಪೆಟ್ರೋಲ್, ಡೀಸೆಲ್ ವಾಹನಗಳ ಸಂಚಾರಕ್ಕಿಲ್ಲ ಅವಕಾಶ

ಭಾರತದಲ್ಲಿ ಎಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಹೆಚ್ಚಿಸಲು ಕೇಂದ್ರ ಸರ್ಕಾರವು ಹಲವಾರು ಕ್ರಮಗಳನ್ನು ಕೈಗೊಳ್ಳುತ್ತಿದೆ. ಕೇಂದ್ರ ಸರ್ಕಾರ ಮಾತ್ರವಲ್ಲದೇ ರಾಜ್ಯ ಸರ್ಕಾರಗಳೂ ಸಹ ಎಲೆಕ್ಟ್ರಿಕ್ ವಾಹನಗಳ ಬಳಕೆಗೆ ಉತ್ತೇಜನ ನೀಡುತ್ತಿವೆ.

MOST READ: 10 ಲಕ್ಷ ಬೆಲೆಯ ಕಾರಿಗೆ 20 ಲಕ್ಷದ ಬಿಲ್ ನೀಡಿದ ಸರ್ವೀಸ್ ಸೆಂಟರ್

ಈ ಪ್ರದೇಶದಲ್ಲಿ ಪೆಟ್ರೋಲ್, ಡೀಸೆಲ್ ವಾಹನಗಳ ಸಂಚಾರಕ್ಕಿಲ್ಲ ಅವಕಾಶ

ಈ ಮೂಲಕ ಕಚ್ಚಾ ತೈಲ ಆಮದು ಪ್ರಮಾಣವನ್ನು ಕಡಿಮೆ ಮಾಡಲು ನಿರ್ಧರಿಸಲಾಗಿದೆ. ಹೆಚ್ಚುತ್ತಿರುವ ವಾಯುಮಾಲಿನ್ಯಕ್ಕೆ ಪರಿಹಾರ ನೀಡಲು ಎಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಉತ್ತೇಜಿಸಲಾಗುತ್ತಿದೆ.

ಈ ಪ್ರದೇಶದಲ್ಲಿ ಪೆಟ್ರೋಲ್, ಡೀಸೆಲ್ ವಾಹನಗಳ ಸಂಚಾರಕ್ಕಿಲ್ಲ ಅವಕಾಶ

ಪೆಟ್ರೋಲ್, ಡೀಸೆಲ್ ವಾಹನಗಳಿಗೆ ಹೋಲಿಸಿದರೆ ಎಲೆಕ್ಟ್ರಿಕ್ ವಾಹನಗಳ ಚಾಲನಾ ವೆಚ್ಚ ಕಡಿಮೆ ಇರುವುದರಿಂದ ಜನರು ಈಗ ಎಲೆಕ್ಟ್ರಿಕ್ ವಾಹನಗಳನ್ನು ಖರೀದಿಸಲು ಮುಂದಾಗುತ್ತಿದ್ದಾರೆ. ಇದರಿಂದ ಭಾರತದಲ್ಲಿ ಮುಂಬರುವ ದಿನಗಳಲ್ಲಿ ಎಲೆಕ್ಟ್ರಿಕ್ ವಾಹನಗಳ ಬಳಕೆಯು ಹೆಚ್ಚಾಗುವ ನಿರೀಕ್ಷೆಗಳಿವೆ.

Most Read Articles

Kannada
English summary
Only electric vehicles are allowed near statue of unity. Read in Kannada.
Story first published: Tuesday, June 8, 2021, 14:32 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X