Just In
Don't Miss!
- News
ರಾಜ್ಯ ಬಜೆಟ್ ಬಗ್ಗೆ ಸಿಎಂ ಯಡಿಯೂರಪ್ಪ ಹೇಳಿದ್ದೇನು?
- Education
MCL Recruitment 2021: 8 ಸಾಮಾನ್ಯ ವೈದ್ಯಕೀಯ ಸಲಹೆಗಾರ ಹುದ್ದೆಗಳಿಗೆ ಅರ್ಜಿ ಆಹ್ವಾನ
- Sports
ಐಪಿಎಲ್ 2021: ರಾಜಸ್ಥಾನ್ ರಾಯಲ್ಸ್ ಜೊತೆ ಇಶ್ ಸೋಧಿ ಒಪ್ಪಂದ
- Lifestyle
ಅರಿಶಿನದ ಈ ಆರೋಗ್ಯ ಪ್ರಯೋಜನಗಳನ್ನು ಕೇಳಿದರೆ, ನೀವೂ ಶಾಕ್ ಆಗ್ತೀರಾ!
- Finance
30,000 ಉದ್ಯೋಗಿಗಳನ್ನು ನೇಮಕ ಮಾಡಿಕೊಳ್ಳಲಿದೆ ಕ್ಯಾಪ್ಜೆಮಿನಿ
- Movies
ರಾಬರ್ಟ್ ಸಂಭ್ರಮ: ವಿನಯದಿಂದ ತೆಲುಗು ಅಭಿಮಾನಿಗಳ ಮನಸು ಕದ್ದ ದರ್ಶನ್
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಐಷಾರಾಮಿ ಕಾರು ಚಾಲಕನ ನಿರ್ಲಕ್ಷ್ಯಕ್ಕೆ ಪ್ರಾಣ ತೆತ್ತ ಪೊಲೀಸ್ ಕಾನ್ಸ್ಟೆಬಲ್ಗಳು
ಸಶಸ್ತ್ರ ಮೀಸಲು ಪೊಲೀಸ್ ಪಡೆಯ ಇಬ್ಬರು ಕಾನ್ಸ್ಟೆಬಲ್ಗಳು ಬಿಎಂಡಬ್ಲ್ಯು ಐಷಾರಾಮಿ ಕಾರು ಡಿಕ್ಕಿ ಹೊಡೆದು ಸಾವನ್ನಪ್ಪಿರುವ ಘಟನೆ ನಡೆದಿದೆ. ಈ ಇಬ್ಬರು ಪೊಲೀಸರು ದ್ವಿಚಕ್ರ ವಾಹನದಲ್ಲಿ ಪ್ರಯಾಣಿಸುತ್ತಿದ್ದಾಗ ಈ ದುರಂತ ಸಂಭವಿಸಿದೆ.

ಐಷಾರಾಮಿ ಕಾರು ಅತಿ ವೇಗದಲ್ಲಿ ಚಲಿಸಿದ್ದೇ ಈ ಅಪಘಾತಕ್ಕೆ ಕಾರಣವೆಂದು ಹೇಳಲಾಗಿದೆ. ಈ ಅಪಘಾತ ಸಂಭವಿಸಿದಾಗ ಮೃತಪಟ್ಟಿರುವ ಪೊಲೀಸರಿಬ್ಬರೂ ಹೆಲ್ಮೆಟ್ ಧರಿಸಿದ್ದರು ಎಂದು ತಿಳಿದು ಬಂದಿದೆ. ಆದರೆ ಅತಿ ವೇಗದಲ್ಲಿ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರೂ ಮೃತಪಟ್ಟಿದ್ದಾರೆ. ಮೃತಪಟ್ಟವರನ್ನು ಕಾರ್ತಿಕ್ (34) ಹಾಗೂ ರವೀಂದ್ರನ್ (32) ಎಂದು ಗುರುತಿಸಲಾಗಿದೆ.

ರವೀಂದ್ರನ್ ದ್ವಿಚಕ್ರ ವಾಹನ ಚಾಲನೆ ಮಾಡುತ್ತಿದ್ದರು. ಅವರು ಸ್ಥಳದಲ್ಲೇ ಮೃತಪಟ್ಟರೆ, ಗಂಭೀರ ಗಾಯಗಳೊಂದಿಗೆ ನರಳುತ್ತಿದ್ದ ಕಾರ್ತಿಕ್ ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದಾಗ ಸಾವನ್ನಪ್ಪಿದ್ದಾರೆ.
MOSTREAD: ಟ್ರ್ಯಾಕ್ಟರ್ಗಳ ಹಿಂಭಾಗದಲ್ಲಿ ದೊಡ್ಡ ಗಾತ್ರದ ಟಯರ್ಗಳಿರಲು ಕಾರಣಗಳಿವು

ಈ ಘಟನೆ ತಮಿಳುನಾಡಿನ ಕೊಯಮತ್ತೂರು ಬಳಿಯ ಮುಕಾಪ್ಪರ್ನ ಪೂರ್ವ ಭಾಗದಲ್ಲಿ ನಡೆದಿದೆ. ಈ ಇಬ್ಬರು ಪೊಲೀಸರು ಕೆಲಸಕ್ಕೆ ತೆರಳುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಐಷಾರಾಮಿ ಕಾರಿನ ಚಾಲಕನನ್ನು ಎಸ್. ಅಮೃತ್ (25) ಎಂದು ಗುರುತಿಸಲಾಗಿದೆ.

ಅವನು ತನ್ನ ಸ್ನೇಹಿತನ ಹುಟ್ಟುಹಬ್ಬದ ಪಾರ್ಟಿಗೆ ತೆರಳಿ ಮನೆಗೆ ವಾಪಸಾಗುವಾಗ ಈ ಘಟನೆ ನಡೆದಿದೆ. ಬೆಳಗಿನ ಜಾವವಾದ ಕಾರಣ ಅಮೃತ್ ವೇಗವಾಗಿ ಕಾರು ಚಾಲನೆ ಮಾಡಿದ್ದಾನೆ. ನಂತರ ಎದುರಿಗೆ ಬಂದ ದ್ವಿಚಕ್ರ ವಾಹನಕ್ಕೆ ಮುಖಾಮುಖಿ ಡಿಕ್ಕಿ ಹೊಡೆದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
MOSTREAD: ಚಿಕ್ಕ ಜಾಗದಲ್ಲಿ ದೊಡ್ಡ ಕಾರನ್ನು ಪಾರ್ಕ್ ಮಾಡಿದ ಅಪ್ರತಿಮ ಚಾಲಕನನ್ನು ಸನ್ಮಾನಿಸಿದ ಟೊಯೊಟಾ ಡೀಲರ್

ಪೊಲೀಸರು ಐಪಿಸಿ ಸೆಕ್ಷನ್ 304 (ii) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದು, ಕಾರು ಚಾಲಕ ಹಾಗೂ ಕಾರಿನಲ್ಲಿದ್ದ ಇತರರನ್ನು ಬಂಧಿಸಿ ಜೈಲಿಗಟ್ಟಿದ್ದಾರೆ. ಘಟನೆ ಸಂಭವಿಸಿದಾಗ ಅಮೃತ್ ಮದ್ಯ ಸೇವಿಸಿರಲಿಲ್ಲವೆಂದು ಪೊಲೀಸರು ತಿಳಿಸಿದ್ದಾರೆ.

ಆದರೆ ನಿಗದಿ ಪಡಿಸಿರುವುದಕ್ಕಿಂತ ಹೆಚ್ಚಿನ ವೇಗದಲ್ಲಿ ಕಾರನ್ನು ಚಾಲನೆ ಮಾಡಿರುವುದು ಘಟನೆಗೆ ಮುಖ್ಯ ಕಾರಣವೆಂಬುದು ಪ್ರಾಥಮಿಕ ತನಿಖೆಯಿಂದ ಕಂಡು ಬಂದಿದೆ. ಇದರಿಂದಾಗಿಯೇ ಪೊಲೀಸರು ಹೆಲ್ಮೆಟ್ ಧರಿಸಿದ್ದರೂ ಸಹ ಗಂಭೀರವಾಗಿ ಗಾಯಗೊಂಡು ಸಾವನ್ನಪ್ಪಿದ್ದಾರೆ.
MOSTREAD: ಲಾಕ್ಡೌನ್ ನಿಂದ ಕೆಲಸ ಕಳೆದುಕೊಂಡವ ಇಂದು ವಿಶ್ವ ವಿಖ್ಯಾತ ವ್ಯಕ್ತಿ

ನಿಗದಿ ಪಡಿಸಿರುವುದಕ್ಕಿಂತ ವೇಗವಾಗಿ ವಾಹನಗಳನ್ನು ಚಾಲನೆ ಮಾಡುವಂತಿಲ್ಲವೆಂದು ಸಂಚಾರಿ ನಿಯಮಗಳು ಹೇಳುತ್ತವೆ. ಆದರೆ ಬಹುತೇಕ ವಾಹನ ಚಾಲಕರು ಈ ನಿಯಮವನ್ನು ಪಾಲಿಸುವುದೇ ಇಲ್ಲ.
ಈ ತಿಂಗಳು ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸವನ್ನು ಆಚರಿಸಲಾಗುತ್ತಿದೆ. ಈ ತಿಂಗಳೇ ಇಂತಹ ಭೀಕರ ಅಪಘಾತ ನಡೆದು ಪೊಲೀಸರು ಸಾವನ್ನಪ್ಪಿರುವುದು ನಿಜಕ್ಕೂ ವಿಪರ್ಯಾಸ.
MOSTREAD: 13 ವರ್ಷಗಳಲ್ಲಿ 10 ಲಕ್ಷ ಕಿ.ಮೀ ಸಂಚರಿಸಿದ ಟೊಯೊಟಾ ಇನೋವಾ ಕಾರು

ವಾಹನ ಸವಾರರಲ್ಲಿ ರಸ್ತೆ ಸುರಕ್ಷತೆ ಬಗ್ಗೆ ಜಾಗೃತಿ ಮೂಡಿಸಲು ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಸಚಿವ ನಿತಿನ್ ಗಡ್ಕರಿರವರು ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸವನ್ನು ಆರಂಭಿಸಿದ್ದಾರೆ. ಈ ಅಭಿಯಾನದ ಮೂಲಕ ವಾಹನ ಸವಾರರಿಗೆ ವಿವಿಧ ಸುರಕ್ಷತಾ ಮಾರ್ಗಸೂಚಿಗಳ ಬಗ್ಗೆ ಜಾಗೃತಿ ಮೂಡಿಸಲಾಗುತ್ತದೆ.