ದೀಪಾವಳಿಗೆ ಸಿಹಿ ಸುದ್ದಿ: ಪೆಟ್ರೋಲ್‌, ಡೀಸೆಲ್‌ ದರದಲ್ಲಿ ಭಾರೀ ಇಳಿಕೆ?

ಇಂದು ಇಲೆಕ್ಟ್ರಿಕ್ ವಾಹನಗಳ ಬೇಡಿಕೆ ಹೆಚ್ಚಾಗಿದ್ದು, ಸಿಟಿಗಳಲ್ಲಿ ರಸ್ತೆಗಳಲ್ಲಿ ಸಾಮಾನ್ಯ ಕಾರುಗಳ ಜೊತೆ ಎಲೆಕ್ಟ್ರಿಕ್ ಕಾರುಗಳು ಕೂಡ ಕಂಡು ಬರುತ್ತಿದೆ. ಆದರೆ ಸಿಟಿಗಳಿಂದ ಹೊರಗೆ ಗ್ರಾಮೀಣ ಭಾಗದಲ್ಲಿ ಅಷ್ಟು ಎಲೆಕ್ಟ್ರಿಕ್ ಕಾರುಗಳು ಕಂಡು ಬರುವುದಿಲ್ಲ. ಏಕೆಂದರೆ ಪೆಟ್ರೋಲ್ ಬಂಕ್ ಗಳಿಗೆ ಹೋಲಿಸಿದರೆ ಚಾರ್ಜಿಂಗ್ ಸ್ಟೇಷನ್‌ಗಳ ಸಂಖ್ಯೆ ತುಂಬಾ ವಿರಳವಾಗಿದೆ.

ಪೆಟ್ರೋಲ್ ಮತ್ತು ಡೀಸೆಲ್ ಬಳಸಿಕೊಂಡು ಓಡಾಡುವ ವಾಹನಗಳೇ ಅತಿ ಹೆಚ್ಚಾಗಿ ಜಗತ್ತಿನಾದ್ಯಂತ ಎಲ್ಲೆಡೆ ಕಂಡುಬರುತ್ತವೆ. ಅಲ್ಲದೇ ಅಲ್ಲದೆ ಕೆಲ ಕೈಗಾರಿಕೆಗಳು ಸಹ ತಮ್ಮ ದಿನನಿತ್ಯದ ಕಾರ್ಯಾಚರಣೆಗೆ ಇಂಧನ ಶಕ್ತಿಯನ್ನೇ ಅವಲಂಬಿಸಿವೆ. ಹಾಗಾಗಿ ಇಂದು ಸಹ ಪೆಟ್ರೋಲ್ (Petrol) ಮತ್ತು ಡೀಸೆಲ್ (Diesel) ಇಂಧನಗಳಿಗೆ ಅಪಾರವಾದ ಬೇಡಿಕೆಯಿದೆ. ಇಂಧನಗಳಿಲ್ಲದೆ ಇಂದಿನ ಜೀವನಶೈಲಿ ಊಹಿಸಿಕೊಳ್ಳುವುದು ಕಷ್ಟ ಎನ್ನುವಂತಾಗಿದ್ದು ಅಷ್ಟರ ಮಟ್ಟಿಗೆ ನಾವು ಇಂಧನಗಳ ಮೇಲೆ ಅವಲಂಬಿತರಾಗಿದ್ದೇವೆ.

Petrol and Diesel Prices

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ದರ ಮತ್ತೆ ಪ್ರತಿ ಬ್ಯಾರೆಲ್‌ಗೆ 90 ಡಾಲರ್‌ ಮಟ್ಟಕ್ಕೆ ಹೋಗಿದೆ. ಈ ಏರಿಕೆ ಕಳೆದ 10 ತಿಂಗಳಲ್ಲೇ ಗರಿಷ್ಠ ಪ್ರಮಾಣದ್ದಾಗಿದೆ. ಈ ನಡುವೆ ಎಲ್‌ಪಿಜಿ ದರ ಕಡಿತ ಬೆನ್ನಲ್ಲೇ ಪೆಟ್ರೋಲ್‌, ಡೀಸೆಲ್‌ ದರಗಳೂ ಇಳಿಕೆಯಾಗುವ ಸಾಧ್ಯತೆ ಇದೆ ವರದಿಯಾಗಿದೆ. ಈ ಹಿಂದೆ ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಕೇಂದ್ರ ಸರಕಾರ ಪೆಟ್ರೋಲ್‌ ಮತ್ತು ಡೀಸೆಲ್‌ ದರ ಇಳಿಕೆಗೆ ಮುಂದಾಗಿತ್ತು.

ಈ ನಡುವೆಯೇ ಕಚ್ಚಾ ತೈಲ ದರ ಏರಿಕೆಯಾಗಿರುವುದು ಸರಕಾರ ಮತ್ತು ಜನಸಾಮಾನ್ಯರಿಗೆ ನಿರಾಸೆ ಮೂಡಿಸಿದೆ. ಇದೀಗ ಬೆಲೆ ಇಳಿಕೆ ಬದಲು ಏರಿಕೆಯನ್ನು ತಡೆಗಟ್ಟಲು ಮೋದಿ ಸರಕಾರ ಹಲವು ಮಾರ್ಗಗಳನ್ನು ಅನುಸರಿಸುವ ಸಾಧ್ಯತೆ ಹೆಚ್ಚಿದೆ. ಈ ಹಿಂದೆ ಪ್ರತಿಪಕ್ಷಗಳು ಚುನಾವಣಾ ಸಂದರ್ಭಗಳಲ್ಲಿ ಇಂಧನ ದರ ಏರಿಕೆಯನ್ನು ಪ್ರಮುಖ ಅಸ್ತ್ರವನ್ನಾಗಿಸಿಕೊಂಡಿತ್ತು.

Petrol and Diesel Prices

ಈ ಬಾರಿ ಲೋಕಸಭಾ ಚುನಾವಣೆಯತ್ತ ತನ್ನ ಸಂಪೂರ್ಣ ಗಮನವನ್ನು ಕೇಂದ್ರೀಕರಿಸಿರುವ ಬಿಜೆಪಿ ಸರಕಾರ ಮತ್ತೆ ಪೆಟ್ರೋಲ್‌ ಮತ್ತು ಡೀಸೆಲ್‌ ದರ ಇಳಿಕೆ ಮಾಡುವ ಸಾಧ್ಯಾತೆ ಇದೆ. ಪ್ರತಿಪಕ್ಷಗಳ ಇಂಡಿಯಾ ಒಕ್ಕೂಟ ಪ್ರಬಲವಾಗುವುದಕ್ಕೆ ಬಿಜೆಪಿ ಈ ಬಾರಿ ದೊಡ್ಡ ಸಾವಲು ಎದುರಾಗಿದೆ. ಇದಲ್ಲದೇ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಏರಿಕೆಯಾದರೆ ಜನರ ಪ್ರತಿರೋಧ ಎದುರಿಸುವ ಸಾಧ್ಯತೆ ಇದೆ.

ಕೇಂದ್ರ ಸರಕಾರ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲ ದರ ಏರಿಕೆಯಾಗಿದ್ದರೂ ಅದರ ಮೇಲಿನ ತೆರಿಗೆ ಕಡಿತ ಮಾಡುವ ಮೂಲಕವಾದರೂ ಅದರ ಬಿಸಿ ಜನಸಾಮಾನ್ಯರಿಗೆ ತಾಕದ ರೀತಿಯಲ್ಲಿ ಕ್ರಮ ಕೈಗೊಳ್ಳುಬಹುದು ಎಂದು ಹೇಳಲಾಗುತ್ತಿದೆ. ತೈಲ ದರ ಹೊರೆಯಿಂದ ಪಾರಾಗಲು ಕೇಂದ್ರ ಸರಕಾರದ ಮುಂದಿರುವ ಮತ್ತೊಂದು ಆಯ್ಕೆಯಂದರೆ ತೈಲ ಸಂಸ್ಥೆಗಳ ಬಳಿ ಮಾತುಕತೆ ನಡೆಸಿ ಕಡಿಮೆ ಬೆಲೆಗೆ ತೈಲ ಮಾರಾಟ ಮಾಡುವಂತೆ ಮನವೊಲಿಸುವುದಾಗಿದೆ.

ತೈಲ ಮಾರಾಟ ಸಂಸ್ಥೆಗಳ ಬಳಿ ತೈಲ ದರ ಕಡಿಮೆ ಮಾಡುವಂತೆ ಸರಕಾರ ತೈಲ ಸಂಸ್ಥೆಗಳನ್ನು ಕೇಳಿಕೊಳ್ಳಬಹುದು. ಕಳೆದ ವಾರ ಕೇಂದ್ರ ಸರಕಾರ ಗೃಹೋಪಯೋಗಿ ಅಡುಗೆ ಸಿಲಿಂಡರ್‌ ಬೆಲೆಯನ್ನು 200 ರೂ.ಗಳಷ್ಟು ಕಡಿತಗೊಳಿಸಿತ್ತು. ಬೆಲೆ ಏರಿಕೆಯಿಂದ ಕಂಗೆಟ್ಟಿದಾಗ ಅಡುಗೆ ಸಿಲಿಂಡರ್‌ ಬೆಲೆಯನ್ನು ಕಡಿತಗೊಳಿಸಿ ಸಾಮಾನ್ಯ ಜನರಿಗೆ ಸಿಹಿ ಸುದ್ದಿಯನ್ನು ನೀಡಿತು.

ಈ ನಡುವೆ ಕಾಂಗ್ರೆಸ್ ಸರ್ಕಾರ ಚುನಾವಣೆ ಪೂರ್ವದಲ್ಲಿ ನೀಡಿದ್ದ ಭರವಸೆಯಂತೆ ಶಕ್ತಿ ಯೋಜನೆಯನ್ನು ಜಾರಿಗೆ ತಂದಿದ್ದು, ರಾಜ್ಯಾದ್ಯಂತ ಸಾರಿಗೆ ಬಸ್‌ಗಳಲ್ಲಿ ಮಹಿಳೆಯರು ಉಚಿತವಾಗಿ ಪ್ರಯಾಣಿಸಲು ಅನುವು ಮಾಡಿಕೊಟ್ಟಿದೆ. ಇದರಿಂದ ನಷ್ಟಕ್ಕೆ ಸಿಲುಕಿರುವ ರಾಜ್ಯ ಖಾಸಗಿ ಸಾರಿಗೆ ಒಕ್ಕೂಟ ಸೆಪ್ಟೆಂಬರ್ 11ರಂದು ಬೆಂಗಳೂರು ಬಂದ್‍ಗೆ ಕರೆ ನೀಡಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತ ಆಟೋಮೊಬೈಲ್ ಸುದ್ದಿಗಳನ್ನು ಒದಗಿಸುತ್ತದೆ, ಎಲ್ಲಾ ಸಾಮಾಜಿಕ ಮಾಧ್ಯಮಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಹಂಚಿಕೊಳ್ಳುತ್ತದೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್ ಮತ್ತು ಯೂಟ್ಯೂಬ್ ಪೇಜ್‌ಗಳೊಂದಿಗೆ ಸಂಪರ್ಕದಲ್ಲಿರಿ. ನಿಮಗೆ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ. ಜೊತೆಗೆ ನಿಮ್ಮ ಸ್ನೇಹಿತರಿಗೂ ತಪ್ಪದೆ ಶೇರ್ ಮಾಡಿ.

Article Published On: Thursday, September 7, 2023, 19:06 [IST]
English summary
Petrol and diesel price likely to reduce around diwali details
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+