Good News: ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ, ಕರ್ನಾಟಕದ ನಗರಗಳಲ್ಲಿ ಎಷ್ಟಿದೆ?

ಲೋಕಸಭೆ ಚುನಾವಣೆಯ ಸಮೀಪದಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi) ನೇತೃತ್ವದ ಕೇಂದ್ರ ಸರ್ಕಾರ ದೇಶದ ವಾಹನ ಸವಾರರಿಗೆ ಭರ್ಜರಿ ಸಿಹಿಸುದ್ದಿ ನೀಡಿದೆ. ಎಲ್‌ಪಿಜಿ ಸಿಲಿಂಡರ್ ಬೆಲೆಯನ್ನು ರೂ.100 ಇಳಿಸಿದ ಕೆಲವೇ ದಿನಗಳಲ್ಲಿ ಪೆಟ್ರೋಲ್ (Petrol) ಹಾಗೂ ಡೀಸೆಲ್ (Diesel) ದರವನ್ನು ಕಡಿತಗೊಳಿಸಿದೆ.

ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಒಂದು ಲೀಟರ್‌ಗೆ ರೂ.2 ಕಡಿಮೆ ಮಾಡಲಾಗಿದೆ ಎಂದು ಕೇಂದ್ರ ಪೆಟ್ರೋಲಿಯಂ ಸಚಿವ ಹರ್ದೀಪ್ ಸಿಂಗ್ ಪುರಿ (Hardeep Singh Puri) ಗುರುವಾರ ಪ್ರಕಟಿಸಿದ್ದಾರೆ. ಈ ಬಗ್ಗೆ ತಮ್ಮ 'ಎಕ್ಸ್' ಖಾತೆಯಲ್ಲಿಯೂ ಪೋಸ್ಟ್ ಮಾಡ್ದಿದಾರೆ. ಪರಿಷ್ಕೃತ ದರಗಳು ಶುಕ್ರವಾರ ಬೆಳಗ್ಗೆ 6 ಗಂಟೆಯಿಂದ ಜಾರಿಗೆ ಬಂದಿವೆ.

Petrol - Diesel Price Cut Rs 2 Effective On Today Karnataka Cities New Prices Details

ಪೆಟ್ರೋಲ್ - ಡೀಸೆಲ್ ಬೆಲೆ ಇಳಿಕೆಯಿಂದ ದೇಶಾದ್ಯಂತ 58 ಲಕ್ಷ ಭಾರೀ ಸರಕು ಸಾಗಾಣಿಕೆ ವಾಹನಗಳು, 6 ಕೋಟಿ ಕಾರುಗಳು ಹಾಗೂ 27 ಕೋಟಿ ದ್ವಿಚಕ್ರ ವಾಹನಗಳ ಮಾಲೀಕರಿಗೆ ಅನುಕೂಲವಾಗುತ್ತದೆ. ಈ ಹಿಂದೆ ಮೇ 21, 2022ರಲ್ಲಿ ಕೇಂದ್ರ ಸರ್ಕಾರ ಅಬಕಾರಿ ಸುಂಕವನ್ನು ಕಡಿತಗೊಳಿಸುವ ಮೂಲಕ ಪೆಟ್ರೋಲ್ ಹಾಗೂ ಡೀಸೆಲ್ ದರವನ್ನು 1 ಲೀಟರ್‌ಗೆ ಕ್ರಮವಾಗಿ ರೂ.8 ಮತ್ತು ರೂ.6 ಇಳಿಸಿತ್ತು.

ಸದ್ಯ, ಕರ್ನಾಟಕದ ಪ್ರಮುಖ ನಗರಗಳಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಹಾಗೂ ಡೀಸೆಲ್ ದರ ಎಷ್ಟಿದೆ ಎಂಬುದನ್ನು ತಿಳಿಯೋಣ. ಗುಡ್ ರಿಟರ್ನ್ಸ್ ಪ್ರಕಾರ, ರಾಜಧಾನಿ ಬೆಂಗಳೂರಿನಲ್ಲಿ 1 ಲೀಟರ್ ಪೆಟ್ರೋಲ್ ದರ ರೂ.99.84 ಮತ್ತು ಡೀಸೆಲ್ ಬೆಲೆ ರೂ.85.93 ದಾಖಲಾಗಿದೆ. ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ದರ ರೂ.99.40 ಹಾಗೂ ಡೀಸೆಲ್ ಬೆಲೆ ರೂ.85.54 ಆಗಿದೆ.

Petrol - Diesel Price Cut Rs 2 Effective On Today Karnataka Cities New Prices Details

ದಕ್ಷಿಣ ಕನ್ನಡ (ಮಂಗಳೂರು)ದಲ್ಲಿ 1 ಲೀಟರ್ ಪೆಟ್ರೋಲ್ ದರ ರೂ.99.03 ಮತ್ತು ಡೀಸೆಲ್ ಬೆಲೆ ರೂ.85.17 ಇದ್ದು, ದಾವಣಗೆರೆಯಲ್ಲಿ ಪ್ರತಿ ಲೀಟರ್ ಪೆಟ್ರೋಲ್ ದರ ರೂ.101.64 ಹಾಗೂ ಡೀಸೆಲ್ ಬೆಲೆ ರೂ.87.38 ದಾಖಲಾಗಿದೆ. ಸಕ್ಕರೆ ನಾಡು ಮಂಡ್ಯದಲ್ಲಿ 1 ಲೀಟರ್ ಪೆಟ್ರೋಲ್ ದರ ರೂ.99.64 ಮತ್ತು ಡೀಸೆಲ್ ಬೆಲೆ ರೂ.85.76 ಆಗಿದೆ.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ದರ ರೂ.101.83 ಹಾಗೂ ಡೀಸೆಲ್ ಬೆಲೆ ರೂ.87.59 ದಾಖಲಾಗಿದೆ. ಕಲ್ಪತರು ನಾಡು ತುಮಕೂರಿನಲ್ಲಿ 1 ಲೀಟರ್ ಪೆಟ್ರೋಲ್ ದರ ರೂ.100.35 ಮತ್ತು ಡೀಸೆಲ್ ಬೆಲೆ ರೂ.86.40 ಆಗಿದೆ. ಉಡುಪಿಯಲ್ಲಿ ಪ್ರತಿ ಲೀಟರ್ ಪೆಟ್ರೋಲ್ ದರ ರೂ.99.27 ಹಾಗೂ ಡೀಸೆಲ್ ಬೆಲೆ ರೂ.85.39 ಇದೆ.

ಹಾಸನದಲ್ಲಿ 1 ಲೀಟರ್ ಪೆಟ್ರೋಲ್ ದರ ರೂ.100.35 ಮತ್ತು ಡೀಸೆಲ್ ಬೆಲೆ ರೂ.86.21 ಇದ್ದು, ರಾಯಚೂರಿನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ದರ ರೂ.100.73 ಹಾಗೂ ಡೀಸೆಲ್ ಬೆಲೆ ರೂ.86.77 ಆಗಿದೆ. ವಿಜಯಪುರದಲ್ಲಿ 1 ಲೀಟರ್ ಪೆಟ್ರೋಲ್ ದರ ರೂ.99.62 ಮತ್ತು ಡೀಸೆಲ್ ಬೆಲೆ ರೂ.85.76 ದಾಖಲಾಗಿದೆ. ಬೆಳಗಾವಿಯಲ್ಲಿ ಪ್ರತಿ ಲೀಟರ್ ಪೆಟ್ರೋಲ್ ದರ ರೂ.99.97 ಹಾಗೂ ಡೀಸೆಲ್ ಬೆಲೆ ರೂ.86.08 ಇದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Friday, March 15, 2024, 9:49 [IST]
English summary
Petrol diesel price cut rs 2 effective on today karnataka cities new prices details
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+