ಸತತ ಐದನೇ ದಿನವೂ ಏರಿಕೆಯಾದ ಪೆಟ್ರೋಲ್, ಡೀಸೆಲ್ ಬೆಲೆ

ಪೆಟ್ರೋಲ್, ಡೀಸೆಲ್ ಬೆಲೆ ಸೋಮವಾರ ಗರಿಷ್ಠ ಮಟ್ಟಕ್ಕೆ ಏರಿಕೆಯಾಗಿದೆ. ಪೆಟ್ರೋಲ್, ಡೀಸೆಲ್ ಬೆಲೆ ಒಂದು ವಾರದಲ್ಲಿ ಸತತ ಐದನೇ ಬಾರಿ ಹೆಚ್ಚಳವಾಗಿದೆ. ಇದರಿಂದಾಗಿ ರಾಜಸ್ಥಾನ, ಮಧ್ಯಪ್ರದೇಶ ಹಾಗೂ ಮಹಾರಾಷ್ಟ್ರ ರಾಜ್ಯಗಳಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ ರೂ.100ರ ಗಡಿ ದಾಟಿದೆ.

ಸತತ ಐದನೇ ದಿನವೂ ಏರಿಕೆಯಾದ ಪೆಟ್ರೋಲ್, ಡೀಸೆಲ್ ಬೆಲೆ

ಸಾರ್ವಜನಿಕ ವಲಯದ ತೈಲ ಕಂಪನಿಗಳು ನೀಡಿರುವ ಬೆಲೆ ಅಧಿಸೂಚನೆಯ ಪ್ರಕಾರ, ಪೆಟ್ರೋಲ್ ಬೆಲೆ ಪ್ರತಿ ಲೀಟರ್‌ಗೆ 26 ಪೈಸೆ ಹಾಗೂ ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 33 ಪೈಸೆಯಷ್ಟು ಹೆಚ್ಚಾಗಿದೆ. ಐದು ರಾಜ್ಯಗಳಲ್ಲಿ ನಡೆದ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಸಾರ್ವಜನಿಕ ವಲಯದ ತೈಲ ಕಂಪನಿಗಳು 18 ದಿನಗಳ ಕಾಲ ಪೆಟ್ರೋಲ್, ಡೀಸೆಲ್ ಬೆಲೆಗಳನ್ನು ಪರಿಷ್ಕರಿಸಿರಲಿಲ್ಲ.

ಸತತ ಐದನೇ ದಿನವೂ ಏರಿಕೆಯಾದ ಪೆಟ್ರೋಲ್, ಡೀಸೆಲ್ ಬೆಲೆ

ವಿಧಾನಸಭಾ ಚುನಾವಣೆಗಳು ಮುಗಿದು ಫಲಿತಾಂಶ ಹೊರ ಬಂದ ನಂತರ ಪೆಟ್ರೋಲ್, ಡೀಸೆಲ್ ಬೆಲೆಗಳನ್ನು ಪರಿಷ್ಕರಿಸಲಾಯಿತು. ಇದಾದ ನಂತರ ಐದನೇ ಬಾರಿ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಮಾಡಲಾಗಿದೆ.

MOST READ:ವಾಹನ ಖರೀದಿಸುವವರಿಗೆ, ಮಾರಾಟ ಮಾಡುವವರಿಗೆ ನೆರವಾಗುವ ಆರ್‌ಟಿಒ ಫಾರಂಗಳಿವು!

ಸತತ ಐದನೇ ದಿನವೂ ಏರಿಕೆಯಾದ ಪೆಟ್ರೋಲ್, ಡೀಸೆಲ್ ಬೆಲೆ

ಮಹಾರಾಷ್ಟ್ರದ ಪರಭಾನಿಯಲ್ಲಿ ಸೋಮವಾರ ಪ್ರತಿ ಲೀಟರ್ ಪೆಟ್ರೋಲ್ ಬೆಲೆ ರೂ.100.20ಗಳಾಗಿತ್ತು. ಈ ಹಿಂದೆ ಮಧ್ಯಪ್ರದೇಶ ಹಾಗೂ ರಾಜಸ್ಥಾನ ರಾಜ್ಯಗಳಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ ರೂ.100ರ ಗಡಿ ದಾಟಿತ್ತು.

ಸತತ ಐದನೇ ದಿನವೂ ಏರಿಕೆಯಾದ ಪೆಟ್ರೋಲ್, ಡೀಸೆಲ್ ಬೆಲೆ

ವ್ಯಾಟ್, ಸರಕು ಸಾಗಣೆಯಂತಹ ಸ್ಥಳೀಯ ತೆರಿಗೆಗಳನ್ನು ಅವಲಂಬಿಸಿ ಪೆಟ್ರೋಲ್, ಡೀಸೆಲ್ ಬೆಲೆಗಳು ರಾಜ್ಯದಿಂದ ರಾಜ್ಯಕ್ಕೆ ಬದಲಾಗುತ್ತವೆ. ಕಳೆದ ಒಂದು ವಾರದಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್‌ಗೆ ರೂ.1.14ಗಳಷ್ಟು ಹಾಗೂ ಡೀಸೆಲ್ ಪ್ರತಿ ಲೀಟರ್‌ಗೆ ರೂ.1.33ಗಳಷ್ಟು ಹೆಚ್ಚಾಗಿದೆ.

MOST READ:ಎಲೆಕ್ಟ್ರಿಕ್ ದ್ವಿಚಕ್ರ ವಾಹನ ಖರೀದಿಗೂ ಮುನ್ನ ಪರಿಶೀಲಿಸಬೇಕಾದ ಸಂಗತಿಗಳಿವು

ಸತತ ಐದನೇ ದಿನವೂ ಏರಿಕೆಯಾದ ಪೆಟ್ರೋಲ್, ಡೀಸೆಲ್ ಬೆಲೆ

ಮೇ 10ರಂದು ಭಾರತದ 4 ಮೆಟ್ರೊ ನಗರಗಳಲ್ಲಿದ್ದ ಪೆಟ್ರೋಲ್, ಡೀಸೆಲ್ ಬೆಲೆ

ದೆಹಲಿಯಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ ರೂ.91.53, ಪ್ರತಿ ಲೀಟರ್ ಡೀಸೆಲ್ ಬೆಲೆ ರೂ.82.06

ಮುಂಬೈನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ ರೂ.97.86, ಪ್ರತಿ ಲೀಟರ್ ಡೀಸೆಲ್ ಬೆಲೆ ರೂ.89.17

ಸತತ ಐದನೇ ದಿನವೂ ಏರಿಕೆಯಾದ ಪೆಟ್ರೋಲ್, ಡೀಸೆಲ್ ಬೆಲೆ

ಚೆನ್ನೈನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ ರೂ.93.38, ಪ್ರತಿ ಲೀಟರ್ ಡೀಸೆಲ್ ಬೆಲೆ ರೂ.86.96

ಕೋಲ್ಕತ್ತಾದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ ರೂ.91.66, ಪ್ರತಿ ಲೀಟರ್ ಡೀಸೆಲ್ ಬೆಲೆ ರೂ.84.90

MOST READ:10 ಲಕ್ಷ ಬೆಲೆಯ ಕಾರಿಗೆ 20 ಲಕ್ಷದ ಬಿಲ್ ನೀಡಿದ ಸರ್ವೀಸ್ ಸೆಂಟರ್

ಸತತ ಐದನೇ ದಿನವೂ ಏರಿಕೆಯಾದ ಪೆಟ್ರೋಲ್, ಡೀಸೆಲ್ ಬೆಲೆ

ಪೆಟ್ರೋಲ್, ಡೀಸೆಲ್ ಬೆಲೆಗಳು ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಬದಲಾಗುತ್ತವೆ. ಹೊಸ ದರಗಳು ಬೆಳಿಗ್ಗೆ 6 ಗಂಟೆಯಿಂದ ಅನ್ವಯವಾಗುತ್ತವೆ. ಅಬಕಾರಿ ಸುಂಕ ಹಾಗೂ ಇನ್ನಿತರ ತೆರಿಗೆಗಳನ್ನು ಸೇರಿಸಿದ ನಂತರ ಪೆಟ್ರೋಲ್, ಡೀಸೆಲ್ ಬೆಲೆಯನ್ನು ಹೆಚ್ಚಿಸಲಾಗುತ್ತದೆ.

ಸತತ ಐದನೇ ದಿನವೂ ಏರಿಕೆಯಾದ ಪೆಟ್ರೋಲ್, ಡೀಸೆಲ್ ಬೆಲೆ

ಹಲವು ತೆರಿಗೆಗಳ ಕಾರಣಕ್ಕೆ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಾಗುತ್ತದೆ. ವಿದೇಶಿ ವಿನಿಮಯ ದರಗಳ ಜೊತೆಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿನ ಕಚ್ಚಾ ತೈಲ ಬೆಲೆಗಳ ಆಧಾರದ ಮೇಲೆ ಪೆಟ್ರೋಲ್, ಡೀಸೆಲ್ ಬೆಲೆಗಳು ಪ್ರತಿದಿನ ಬದಲಾಗುತ್ತವೆ.

MOST READ:ವರ್ಷಗಳ ಕಾಲ ಉಪ್ಪು ನೀರಿನಲ್ಲಿದ್ದರೂ ಹಡಗುಗಳ ಆಂಕರ್‌ಗಳಿಗೆ ತುಕ್ಕು ಹಿಡಿಯದಿರಲು ಕಾರಣಗಳಿವು

ಸತತ ಐದನೇ ದಿನವೂ ಏರಿಕೆಯಾದ ಪೆಟ್ರೋಲ್, ಡೀಸೆಲ್ ಬೆಲೆ

ಪೆಟ್ರೋಲ್, ಡೀಸೆಲ್ ಬೆಲೆ ಪರಿಶೀಲನೆ

ಎಸ್‌ಎಂಎಸ್ ಮೂಲಕ ಪೆಟ್ರೋಲ್, ಡೀಸೆಲ್ ಬೆಲೆಯನ್ನು ತಿಳಿಯಬಹುದು. ಇಂಡಿಯನ್ ಆಯಿಲ್ ವೆಬ್‌ಸೈಟ್ ಪ್ರಕಾರ, ಪೆಟ್ರೋಲ್, ಡೀಸೆಲ್ ಬೆಲೆ ತಿಳಿಯಲು, ಮೊಬೈಲ್'ನಲ್ಲಿ ಆರ್‌ಎಸ್‌ಪಿ ಎಂದು ಟೈಪ್ ಮಾಡಿ, ನಗರದ ಪಿನ್ ಕೋಡ್ ನಮೂದಿಸಿ, 9224992249 ನಂಬರಿಗೆ ಎಸ್‌ಎಂಎಸ್ ಕಳುಹಿಸಬೇಕು.

Most Read Articles

Kannada
English summary
Petrol Diesel price increases for the fifth consecutive day. Read in Kannada.
Story first published: Tuesday, May 11, 2021, 9:44 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X