Petrol-Diesel Price: ಗುಡ್ ನ್ಯೂಸ್.. ಕೆಲವೇ ದಿನಗಳಲ್ಲಿ ಪೆಟ್ರೋಲ್-ಡೀಸೆಲ್ ದರ ಭಾರೀ ಇಳಿಕೆ, ಎಷ್ಟು?

ದೇಶದ ಜನರಿಗೆ ಪ್ರಧಾನಿ ನರೇಂದ್ರ ಮೋದಿ (PM Narendra Modi) ನೇತೃತ್ವದ ಕೇಂದ್ರ ಸರ್ಕಾರದಿಂದ ಶೀಘ್ರದಲ್ಲಿ ದೊಡ್ಡ ಸಿಹಿಸುದ್ದಿ ಸಿಗುವ ಸಾಧ್ಯತೆಯಿದೆ. ಪೆಟ್ರೋಲ್ (Petrol), ಡೀಸೆಲ್ (Diesel) ದರದಲ್ಲಿ ಭಾರೀ ಇಳಿಕೆಯಾಗಲಿದ್ದು, ಬಹುತೇಕ ಮುಂದಿನ ತಿಂಗಳಿನಿಂದ ಬೆಲೆಗಳು ಕಡಿಮೆಯಾಗಬಹುದು ಎನ್ನಲಾಗಿದೆ.

ತೈಲ ಮಾರಾಟ ಕಂಪನಿಗಳು (oil marketing companies - OMC) ತಮ್ಮ 3ನೇ ತ್ರೈಮಾಸಿಕ ವರದಿಯನ್ನು ಪ್ರಕಟಿಸಿದ ಬಳಿಕ, ಮುಂದಿನ ತಿಂಗಳು (ಫೆಬ್ರವರಿ) ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಕಡಿತಗೊಳಿಸಬಹುದು ಎಂದು ಹೇಳಲಾಗಿದೆ. ನಿವ್ವಳ ಲಾಭವು ದಾಖಲೆಯ ರೂ.75,000 ಕೋಟಿ ಮೀರುವ ಸಾಧ್ಯತೆಯಿದೆ. ಈಗಾಗಲೇ ಕಂಪನಿಗಳು ತಮ್ಮ ನಷ್ಟವನ್ನು ಸರಿದೂಗಿಸಿಕೊಂಡಿವೆ ಎಂದು ವರದಿಯಾಗಿದೆ.

Petrol-Diesel Price

ಮಾರುಕಟ್ಟೆಯ ಪರಿಸ್ಥಿತಿಗೆ ಅನುಗುಣವಾಗಿ ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ತೈಲ ಮಾರಾಟ ಕಂಪನಿಗಳು ನಿರ್ಧರಿಸಲಿದ್ದು, ಪ್ರತಿ ದಿನವು ಬೆಲೆಯನ್ನು ಪರಿಷ್ಕರಿಸಬಹುದು. ಆದರೆ, ಮೇ.22, 2022ರ ಬಳಿಕ ಇಂಧನ ದರವನ್ನು ಹೆಚ್ಚಿಸುವುದು ಅಥವಾ ಇಳಿಸುವುದು ಮಾಡಿಲ್ಲ. ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಕಡಿಮೆಗೊಳಿಸುವುದು 2024ರ ಸಾರ್ವತ್ರಿಕ ಲೋಕಸಭಾ ಚುನಾವಣೆಗೂ ಮುನ್ನ ಆಡಳಿತಾರೂಢ ಕೇಂದ್ರ ಸರ್ಕಾರಕ್ಕೆ ಮಹತ್ವದ್ದಾಗಿದೆ.

ಸರ್ಕಾರಿ ಸ್ವಾಮ್ಯದ ತೈಲ ಮಾರುಕಟ್ಟೆ ಕಂಪನಿಗಳಾದ ಇಂಡಿಯನ್ ಆಯಿಲ್ ಕಾರ್ಪೊರೇಷನ್, ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್, ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ 2023-24ರ ಆರ್ಥಿಕ ವರ್ಷದ ಮೊದಲ ತ್ರೈಮಾಸಿಕ (Q1) ಹಾಗೂ ಎರಡನೇ ತ್ರೈಮಾಸಿಕ (Q2)ದಲ್ಲಿ ದೊಡ್ಡ ಲಾಭವನ್ನು ಮಾಡಿವೆ. ಈ ತಿಂಗಳ ಅಂತ್ಯದೊಳಗೆ 3ನೇ ತ್ರೈಮಾಸಿಕ ವರದಿ ಬಿಡುಗಡೆಯಾಗಲಿದೆ.

Petrol-Diesel Price

ಇಲ್ಲಿಯೂ ಉತ್ತಮವಾಗಿ ಆದಾಯ ಗಳಿಸಿರುವ ಸಾಧ್ಯತೆಯಿರುವುದರಿಂದ ಪೆಟ್ರೋಲ್ ಹಾಗೂ ಡೀಸೆಲ್ ದರಗಳು ಪ್ರತಿ ಲೀ.ಗೆ ರೂ.5 ರಿಂದ ರೂ.10 ಕಡಿಮೆಯಾಗಬಹುದು ಎಂದು ಮೂಲಗಳು ಹೇಳಿವೆ. 2023-24ರ ಮೊದಲಾರ್ಧದಲ್ಲಿ ಈ 3 ಸರ್ಕಾರಿ ಸ್ವಾಮ್ಯದ ತೈಲ ಮಾರುಕಟ್ಟೆ ಕಂಪನಿಗಳ ನಿವ್ವಳ ಲಾಭವು ರೂ.57,091.87 ಕೋಟಿಯಿದ್ದು, 2022-23ರ ಹಣಕಾಸು ವರ್ಷಕ್ಕೆ ರೂ.1,137.89 (ನಿವ್ವಳ ಲಾಭ) ಶೇಕಡ 4,917% ಅಧಿಕಗೊಂಡಿದೆ.

ರಷ್ಯಾ - ಉಕ್ರೇನ್ ಯುದ್ಧ ಸೇರಿದಂತೆ ನಾನಾ ಕಾರಣಗಳಿಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆ ಏರಿಕೆಯಾದ ಪರಿಣಾಮ, ದೇಶೀಯ ತೈಲ ಮಾರಾಟ ಕಂಪನಿಗಳು, 2022ರಲ್ಲಿ ಪ್ರತಿ ಲೀಟರ್ ಪೆಟ್ರೋಲ್‌ಗೆ ರೂ.17 ಮತ್ತು ಡೀಸೆಲ್‌ಗೆ ರೂ.35 ಗರಿಷ್ಠ ನಷ್ಟ ಅನುಭವಿದ್ದವು. ಇತ್ತಿಚೆಗೆ 1 ಲೀಟರ್ ಪೆಟ್ರೋಲ್‌ಗೆ ರೂ.8 - ರೂ.10 ಹಾಗೂ ಡೀಸೆಲ್‌ಗೆ ರೂ.3 - ರೂ.4 ಲಾಭವನ್ನು ಮಾಡುತ್ತಿವೆ ಎಂದು ತಿಳಿದುಬಂದಿದೆ.

Petrol-Diesel Price

ಸದ್ಯ, ಕರ್ನಾಟಕದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ದರಗಳು ಎಷ್ಟಿದೆ ಎಂದು ನೋಡುವುದದರೆ, ಬೆಂಗಳೂರಿನಲ್ಲಿ 1 ಲೀಟರ್ ಪೆಟ್ರೋಲ್ ದರ ರೂ.101.94 ಇದ್ದು, ಪ್ರತಿ ಲೀಟರ್ ಡೀಸೆಲ್ ಬೆಲೆ ರೂ.87.89 ಇದೆ. ಮೈಸೂರಿನಲ್ಲಿ 1 ಲೀ. ಪೆಟ್ರೋಲ್ ದರ ರೂ.101.50, ಪ್ರತಿ ಲೀಟರ್ ಡೀಸೆಲ್ ಬೆಲೆ ರೂ.87.49 ಇದೆ. ದಾವಣಗೆರೆಯಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ ರೂ.104.10 ಮತ್ತು 1 ಲೀ. ಡೀಸೆಲ್ ದರ ರೂ.89.66 ಇದೆ.

ಇನ್ನು, ದೇಶದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಗಳನ್ನು ಇಳಿಕೆ ಮಾಡುವುದರಿಂದ ಮಧ್ಯಮ ವರ್ಗದ ಜನರಿಗೆ ಹೆಚ್ಚಿನ ಅನುಕೂಲವಾಗಲಿದ್ದು, ಒಂದಷ್ಟು ಹೊರೆ ಕಡಿಮೆಯಾಗುತ್ತದೆ. ಈ ದರಗಳು ಎಷ್ಟು ತಗ್ಗಲಿದೆ ಎಂಬುದು ಕೆಲವೇ ದಿನಗಳಲ್ಲಿ ಗೊತ್ತಾಗಲಿದೆ. 2024ರ ಸಾರ್ವತ್ರಿಕ ಲೋಕಸಭಾ ಚುನಾವಣೆಯಿರುವುದರಿಂದ ಭಾರೀ ಇಳಿಕೆಯಾದರೂ ಅಚ್ಚರಿ ಇಲ್ಲ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Wednesday, January 17, 2024, 14:40 [IST]
English summary
Petrol diesel price likely big cut next month in india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+