ಪೆಟ್ರೋಲ್, ಡೀಸೆಲ್ ಬೆಲೆಯನ್ನು ಮತ್ತಷ್ಟು ಹೆಚ್ಚಿಸಬಹುದು ಕೇಂದ್ರ ಸರ್ಕಾರದ ಈ ನಿರ್ಧಾರ

ಕರೋನಾ ವೈರಸ್ ಪ್ರಭಾವದಿಂದ ಜಾಗತಿಕ ಆರ್ಥಿಕತೆಯು ತತ್ತರಿಸಿದೆ. ಕರೋನಾ ವೈರಸ್ ಹರಡುವುದನ್ನು ನಿಯಂತ್ರಿಸಲು ಜಾರಿಗೊಳಿಸಿದ ಲಾಕ್‌ಡೌನ್ ನಿಂದಾಗಿ ವಿಶ್ವದ ವಿವಿಧ ಭಾಗಗಳಲ್ಲಿನ ದೊಡ್ಡ ದೊಡ್ಡ ಕಾರ್ಖಾನೆಗಳು ಮುಚ್ಚಿವೆ.

ಪೆಟ್ರೋಲ್, ಡೀಸೆಲ್ ಬೆಲೆಯನ್ನು ಮತ್ತಷ್ಟು ಹೆಚ್ಚಿಸಬಹುದು ಕೇಂದ್ರ ಸರ್ಕಾರದ ಈ ನಿರ್ಧಾರ

ಇನ್ನು ಹಲವು ಕಂಪನಿಗಳು ಭಾರಿ ನಷ್ಟವನ್ನು ಕಂಡಿವೆ. ವಿಶ್ವದಾದ್ಯಂತ ಲಕ್ಷಾಂತರ ಕಾರ್ಮಿಕರು ಉದ್ಯೋಗ ಕಳೆದುಕೊಂಡರು. ಖಾಸಗಿ ಕಂಪನಿಗಳು ಮಾತ್ರವಲ್ಲದೇ ಸರ್ಕಾರಗಳೂ ತೀವ್ರ ಆರ್ಥಿಕ ಬಿಕ್ಕಟ್ಟಿನಿಂದ ಬಳಲುತ್ತಿವೆ. ಭಾರತದಲ್ಲಿಯೂ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರಗಳು ಆರ್ಥಿಕ ಬಿಕ್ಕಟ್ಟನ್ನು ಎದುರಿಸುತ್ತಿವೆ. ಕರೋನಾ ವೈರಸ್ ನಿಂದ ಉಂಟಾಗಿರುವ ಪರಿಸ್ಥಿತಿಯನ್ನು ಎದುರಿಸಲು ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರಗಳು ದೊಡ್ಡ ಮೊತ್ತವನ್ನು ಖರ್ಚು ಮಾಡಬೇಕಾಗಿದೆ.

ಪೆಟ್ರೋಲ್, ಡೀಸೆಲ್ ಬೆಲೆಯನ್ನು ಮತ್ತಷ್ಟು ಹೆಚ್ಚಿಸಬಹುದು ಕೇಂದ್ರ ಸರ್ಕಾರದ ಈ ನಿರ್ಧಾರ

ಪರಿಹಾರ ಕಾರ್ಯಗಳಿಗಾಗಿ ಹಾಗೂ ರಿಯಾಯಿತಿಗಳನ್ನು ನೀಡಲು ಹೆಚ್ಚಿನ ಹಣದ ಅಗತ್ಯವಿರುವುದರಿಂದ ಹಾಗೂ ಸರ್ಕಾರದ ಆದಾಯದ ಮೇಲೆ ಪರಿಣಾಮ ಬೀರುವುದರಿಂದ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಆದಾಯ ಕ್ರೋಡಿಕರಣಕ್ಕೆ ಹೆಚ್ಚಿನ ಒತ್ತು ನೀಡಿವೆ.

MOSTREAD: ಟ್ರ್ಯಾಕ್ಟರ್‌ಗಳ ಹಿಂಭಾಗದಲ್ಲಿ ದೊಡ್ಡ ಗಾತ್ರದ ಟಯರ್‌ಗಳಿರಲು ಕಾರಣಗಳಿವು

ಪೆಟ್ರೋಲ್, ಡೀಸೆಲ್ ಬೆಲೆಯನ್ನು ಮತ್ತಷ್ಟು ಹೆಚ್ಚಿಸಬಹುದು ಕೇಂದ್ರ ಸರ್ಕಾರದ ಈ ನಿರ್ಧಾರ

ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರವು ಪೆಟ್ರೋಲ್ ಹಾಗೂ ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಹೆಚ್ಚಿಸಲು ಯೋಜಿಸುತ್ತಿರುವ ಬಗ್ಗೆ ವರದಿಯಾಗಿದೆ. ಪೆಟ್ರೋಲ್ ಹಾಗೂ ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಕೇಂದ್ರ ಸರ್ಕಾರವು ಪ್ರತಿ ಲೀಟರ್‌ಗೆ ರೂ.3ರಿಂದ ರೂ.6ಗಳಿಗೆ ಏರಿಸುವ ಸಾಧ್ಯತೆಗಳಿವೆ.

ಪೆಟ್ರೋಲ್, ಡೀಸೆಲ್ ಬೆಲೆಯನ್ನು ಮತ್ತಷ್ಟು ಹೆಚ್ಚಿಸಬಹುದು ಕೇಂದ್ರ ಸರ್ಕಾರದ ಈ ನಿರ್ಧಾರ

ಕೇಂದ್ರ ಸರ್ಕಾರದ ಮೂಲಗಳ ಪ್ರಕಾರ ಈ ಬಗ್ಗೆ ಶೀಘ್ರದಲ್ಲೇ ಅಂತಿಮ ತೀರ್ಮಾನವನ್ನು ತೆಗೆದುಕೊಳ್ಳುವ ಸಾಧ್ಯತೆಗಳಿವೆ ಎಂದು ಹೇಳಲಾಗಿದೆ. ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಕಡಿಮೆಯಾಗಿದ್ದರೂ ಇದರ ಲಾಭ ಭಾರತೀಯರಿಗೆ ಸಿಗುತ್ತಿಲ್ಲ.

MOSTREAD: ಚಿಕ್ಕ ಜಾಗದಲ್ಲಿ ದೊಡ್ಡ ಕಾರನ್ನು ಪಾರ್ಕ್ ಮಾಡಿದ ಅಪ್ರತಿಮ ಚಾಲಕನನ್ನು ಸನ್ಮಾನಿಸಿದ ಟೊಯೊಟಾ ಡೀಲರ್

ಪೆಟ್ರೋಲ್, ಡೀಸೆಲ್ ಬೆಲೆಯನ್ನು ಮತ್ತಷ್ಟು ಹೆಚ್ಚಿಸಬಹುದು ಕೇಂದ್ರ ಸರ್ಕಾರದ ಈ ನಿರ್ಧಾರ

ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಬ್ಯಾರೆಲ್ ಕಚ್ಚಾ ತೈಲದ ಬೆಲೆ ಕಳೆದ ತಿಂಗಳು ಸುಮಾರು 45 ಡಾಲರ್ ಗಳಾಗಿತ್ತು. ಈಗ 40 ಡಾಲರ್ ಗಳಿಗೆ ಕುಸಿದಿದೆ. ಕೇಂದ್ರ ಸರ್ಕಾರವು ವಿಧಿಸಿರುವ ಹೆಚ್ಚಿನ ತೆರಿಗೆಯ ಕಾರಣದಿಂದಾಗಿ ಜನರಿಗೆ ಇದರ ಪ್ರಯೋಜನವನ್ನು ಪಡೆಯಲು ಸಾಧ್ಯವಾಗುತ್ತಿಲ್ಲ.

ಪೆಟ್ರೋಲ್, ಡೀಸೆಲ್ ಬೆಲೆಯನ್ನು ಮತ್ತಷ್ಟು ಹೆಚ್ಚಿಸಬಹುದು ಕೇಂದ್ರ ಸರ್ಕಾರದ ಈ ನಿರ್ಧಾರ

ಭಾರತವು ಪೆಟ್ರೋಲ್ ಹಾಗೂ ಡೀಸೆಲ್ ಮೇಲೆ ಅತಿ ಹೆಚ್ಚು ತೆರಿಗೆ ವಿಧಿಸುವ ದೇಶಗಳಲ್ಲಿ ಒಂದಾಗಿದೆ. ಭಾರತದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ಮೇಲೆ 70%ನಷ್ಟು ತೆರಿಗೆ ವಿಧಿಸಲಾಗುತ್ತಿದೆ. ಈಗ ಅಬಕಾರಿ ಸುಂಕವನ್ನು ಹೆಚ್ಚಿಸಿದರೆ ಅದರ ಪ್ರಮಾಣವು 75%ನಿಂದ 80%ಗಳಾಗಲಿದೆ.

MOSTREAD: ಲಾಕ್‌ಡೌನ್ ನಿಂದ ಕೆಲಸ ಕಳೆದುಕೊಂಡವ ಇಂದು ವಿಶ್ವ ವಿಖ್ಯಾತ ವ್ಯಕ್ತಿ

ಪೆಟ್ರೋಲ್, ಡೀಸೆಲ್ ಬೆಲೆಯನ್ನು ಮತ್ತಷ್ಟು ಹೆಚ್ಚಿಸಬಹುದು ಕೇಂದ್ರ ಸರ್ಕಾರದ ಈ ನಿರ್ಧಾರ

ಕೇಂದ್ರ ಸರ್ಕಾರವು ಅಬಕಾರಿ ತೆರಿಗೆಯನ್ನು ಹೆಚ್ಚಿಸಿದ ನಂತರ ಪೆಟ್ರೋಲ್, ಡೀಸೆಲ್ ಬೇರೆ ಹೆಚ್ಚಾಗಲಿದೆಯೇ ಎಂಬುದನ್ನು ಕಾದು ನೋಡಬೇಕಿದೆ. ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಕಡಿಮೆಯಿರುವುದರಿಂದ ಪೆಟ್ರೋಲ್ ಡೀಸೆಲ್ ಬೆಲೆ ಬದಲಾಗದೆ ಉಳಿಯಬಹುದು ಅಥವಾ ಸ್ವಲ್ಪ ಪ್ರಮಾಣದಲ್ಲಿ ಏರಿಕೆಯಾಗಲೂ ಬಹುದು.

ಪೆಟ್ರೋಲ್, ಡೀಸೆಲ್ ಬೆಲೆಯನ್ನು ಮತ್ತಷ್ಟು ಹೆಚ್ಚಿಸಬಹುದು ಕೇಂದ್ರ ಸರ್ಕಾರದ ಈ ನಿರ್ಧಾರ

ಕೇಂದ್ರ ಸರ್ಕಾರವು ಜನರ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ತೆರಿಗೆಗಳನ್ನು ಹೆಚ್ಚಿಸದಿದ್ದರೆ ತೈಲ ಬೆಲೆ ಕುಸಿತದ ಪ್ರಯೋಜನಗಳು ಜನರಿಗೆ ಸಂಪೂರ್ಣವಾಗಿ ಲಭಿಸಲಿವೆ. ಅಂದರೆ ಭಾರತದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಕುಸಿಯಲಿದೆ.

MOSTREAD: 13 ವರ್ಷಗಳಲ್ಲಿ 10 ಲಕ್ಷ ಕಿ.ಮೀ ಸಂಚರಿಸಿದ ಟೊಯೊಟಾ ಇನೋವಾ ಕಾರು

ಪೆಟ್ರೋಲ್, ಡೀಸೆಲ್ ಬೆಲೆಯನ್ನು ಮತ್ತಷ್ಟು ಹೆಚ್ಚಿಸಬಹುದು ಕೇಂದ್ರ ಸರ್ಕಾರದ ಈ ನಿರ್ಧಾರ

ಕೇಂದ್ರ ಸರ್ಕಾರವು ತೆರಿಗೆಯನ್ನು ಹೆಚ್ಚಿಸಿರುವ ಕಾರಣಕ್ಕೆ ಜನರು ಪೆಟ್ರೋಲ್, ಡೀಸೆಲ್ ಗಾಗಿ ಹೆಚ್ಚು ಬೆಲೆಯನ್ನು ತೆರುವಂತಾಗಿದೆ. ಕೇಂದ್ರ ಸರ್ಕಾರವು ಆದಾಯ ಸಂಗ್ರಹಕ್ಕಾಗಿ ಅಬಕಾರಿ ಸುಂಕವನ್ನು ಹೆಚ್ಚಿಸುತ್ತಿದೆ.

ಪೆಟ್ರೋಲ್, ಡೀಸೆಲ್ ಬೆಲೆಯನ್ನು ಮತ್ತಷ್ಟು ಹೆಚ್ಚಿಸಬಹುದು ಕೇಂದ್ರ ಸರ್ಕಾರದ ಈ ನಿರ್ಧಾರ

ಆದರೆ ಇದರಿಂದ ವಾಹನ ಸವಾರರು ತೊಂದರೆ ಅನುಭವಿಸಲಿದ್ದಾರೆ. ಕೇಂದ್ರ ಸರ್ಕಾರವು ಪೆಟ್ರೋಲ್, ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಮತ್ತಷ್ಟು ಹೆಚ್ಚಿಸಲು ಮುಂದಾಗಿರುವುದರಿಂದ ವಾಹನ ಸವಾರರು ಚಿಂತೆಗೀಡಾಗಿರುವುದು ಸುಳ್ಳಲ್ಲ. ಈ ಬಗ್ಗೆ ಇಟಿ ಆಟೋ ವರದಿ ಮಾಡಿದೆ.

Most Read Articles

Kannada
English summary
Petrol diesel price may further go high. Read in Kannada.
Story first published: Monday, October 26, 2020, 19:25 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X