ವಾಹನ ಸವಾರರೇ ಎಚ್ಚರ- ಪೆಟ್ರೋಲ್ ಬಂಕ್‌ಗಳಲ್ಲಿ ಹೇಗೆ ನಡೆಯುತ್ತೆ ನೋಡಿ ಹಗಲು ದರೋಡೆ..!
ವಾಹನ ಸವಾರರೇ ನೀವು ಪೆಟ್ರೋಲ್ ಬಂಕ್‌ಗೆ ಹೋಗುವ ಮುನ್ನ ಸ್ಟೋರಿಯನ್ನು ಒಮ್ಮೆ ಪೂರ್ತಿಯಾಗಿ ಓದಲೇಬೇಕು. ಯಾಕೇಂದ್ರೆ ಪೆಟ್ರೋಲ್ ಬಂಕ್‌ನಲ್ಲಿ ಗ್ರಾಹಕರಿಗೆ ಹೇಗೆಲ್ಲಾ ಯಾಮಾರಿಸುತ್ತಾರೆ ಅದನ್ನು ನಾವು ನಿಮಗೆ ಈ ಲೇಖನದಲ್ಲಿ ತಿಳಿಸಿಕೊಡಲಿದ್ದೇವೆ.

ಮೊದಲೇ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳ ಹೆಚ್ಚಳದಿಂದಾಗಿ ವಾಹನ ಸವಾರರು ಸುಸ್ತಾಗಿ ಹೋಗಿದ್ದಾರೆ. ಹೀಗಿರುವಾಗ ಕೆಲವು ಪೆಟ್ರೋಲ್ ಬಂಕ್ ಮಾಲೀಕರು ಹಣದಾಸೆ ಬಿದ್ದು ಗ್ರಾಹಕರನ್ನು ಮೋಸಗೊಳಿಸುತ್ತಿರುವ ಪ್ರಕರಣಗಳು ವಾಹನ ಸವಾರರನ್ನು ಮತ್ತಷ್ಟು ಹೈರಾಣಾಗಿಸಿವೆ ಅಂದ್ರೆ ತಪ್ಪಾಗುವುದಿಲ್ಲ.

ಪೆಟ್ರೋಲ್ ಬಂಕ್‌ಗಳಲ್ಲಿ ನಾವು ಎಷ್ಟೇ ಎಚ್ಚರ ವಹಿಸಿದ್ರು ಒಂದಲ್ಲಾ ಒಂದು ರೀತಿಯ ತಂತ್ರಜ್ಞಾನವನ್ನು ಉಪಯೋಗಿ ಪೆಟ್ರೋಲ್ ಪ್ರಮಾಣದಲ್ಲಿ ಗ್ರಾಹಕರಿಗೆ ಯಾಮಾರಿಸುವ ಬಂಕ್ ಮಾಲೀಕರು ರೆಡ್‌ಹ್ಯಾಂಡ್ ಆಗಿ ಸಿಕ್ಕಿಬಿದ್ದಾಗ ಹೇಗಿರುತ್ತೆ ಹೇಳಿ.

ಇಲ್ಲೂ ಕೂಡಾ ಅಂತದ್ದೆ ಒಂದು ಪ್ರಕರಣ ನಡೆಸಿದೆ. ಇದು ಬೆಂಗಳೂರಿನ ಪ್ರತಿಷ್ಠಿತ ಏರಿಯಾ ಒಂದರ ಇಂಡಿಯನ್ ಆಯಿಲ್ ಪೆಟ್ರೋಲ್ ಬಂಕ್‌ನಲ್ಲಿ ನಡೆದಿದ್ದು, ಪೆಟ್ರೋಲ್ ಪ್ರಮಾಣದಲ್ಲಿ ಗ್ರಾಹಕರಿಗೆ ಮೋಸಗೊಳಿಸುತ್ತಿರುವಾಗ ಸಾಕ್ಷಿ ಸಮೇತ ಸಿಕ್ಕಿಬಿದ್ದಿದ್ದಾರೆ.

ಪೆಟ್ರೋಲ್ ಬಂಕ್ ಮಾಲೀಕರು ನಾನಾ ತಂತ್ರಗಳನ್ನು ಉಪಯೋಗಿಸಿ ನಿಮ್ಮನ್ನು ಮೋಸಗೊಳಿಸುವುದು ಇತ್ತೀಚಿಗೆ ಸಾಮಾನ್ಯವಾಗಿಬಿಟ್ಟಿದೆ. ಮೋಸಗೊಳಗಾದ ಯುವಕನೊಬ್ಬ ಪೆಟ್ರೋಲ್ ಬಂಕ್‌ಗಳಲ್ಲಿ ನಡೆಯುತ್ತಿರುವ ಹಗಲು ದರೋಡೆಯ ಬಗ್ಗೆ ಫೇಸ್‌ಬುಕ್ ನಲ್ಲಿ ಲೈವ್ ಮಾಡಿದ್ದು, ಸದ್ಯ ಪೋಸ್ಟ್ ವೈರಲ್ ಆಗಿದೆ.

ಇಂಡಿಯನ್ ಆಯಿಲ್ ಪೆಟ್ರೋಲ್ ಬಂಕ್ ಮಾಲೀಕರ ಕಳ್ಳಾಟಕ್ಕೆ ಈ ಮೊದಲೇ ಬೇಸತ್ತಿದ್ದ ಬೈಕ್ ಸವಾರನು ಪಕ್ಕಾ ಪ್ಲ್ಯಾನ್ ಮಾಡಿಯೇ ಬಂಕ್‌ನಲ್ಲಿ ನಡೆಯುತ್ತಿರುವ ಮೋಸವನ್ನು ಬಯಲು ಮಾಡಿದ್ದು, ಪೆಟ್ರೋಲ್ ತುಂಬಿಸುವಾಗ ನಡೆದ ಕಳ್ಳಾಟವನ್ನು ಪ್ರಶ್ನಿಸಿದ್ದೆ ತಡ ಅಲ್ಲಿದ್ದ ಸಿಬ್ಬಂದಿಯಲ್ಲಿ ಈ ಬಗ್ಗೆ ಉತ್ತರವೇ ಇರಲಿಲ್ಲ.

ಬಂಕ್ ಕಳ್ಳಾಟವನ್ನು ಬಯಲು ಮಾಡಲು ಮುಂದಾಗಿದ್ದ ವಾಹನ ಸವಾರನು ಬೈಕಿನ ಫ್ಯೂಲ್ ಟ್ಯಾಂಕ್‌ಗೆ ಬದಲಾಗಿ 2 ಲೀಟರ್ ಸಾಮರ್ಥ್ಯದ ಖಾಲಿ ಬಾಟಲ್ ಒಂದರಲ್ಲಿ ಪೆಟ್ರೋಲ್ ತುಂಬಿಸಲು ಹೇಳಿದ್ದ. ಆಗಲೇ ನೋಡಿ ಪೆಟ್ರೋಲ್ ಬಂಕ್ ಮಾಲೀಕರು ವಾಹನ ಸವಾರರಿಗೆ ಮಾಡುತ್ತಿರುವ ಮೋಸ ಬಯಲಾಗಿದ್ದು.

ಖಾಲಿ ಬಾಟಲ್‌ಗೆ ರೂ.130 ಪೆಟ್ರೋಲ್ ತುಂಬಲು ಹೇಳಿದ್ದ ಗ್ರಾಹಕರಿಗೆ ಪೆಟ್ರೋಲ್ ಬಂಕ್ ಸಿಬ್ಬಂದಿಯು ಸರಿಯಾಗಿ ರೂ.100 ಪೆಟ್ರೋಲ್ ಸಹ ತುಂಬದೇ ಮೋಸ ಮಾಡಿದ್ದನ್ನು ನೋಡಿ ಸಿಟ್ಟಿಗೆದ್ದ ವಾಹನ ಸವಾರರು ಸಿಬ್ಬಂದಿಯ ಮೇಲೆ ರೇಗಾಡಿದ ಘಟನೆ ನಡೆದಿದೆ.

ಆದ್ರೆ ಇದು ನಿಜಕ್ಕೂ ಬಂಕ್ ಸಿಬ್ಬಂದಿಯಿಂದ ಆಗುವ ಮೋಸ ಅಲ್ಲವೇ ಅಲ್ಲ ಎನ್ನುವುದನ್ನು ಬಿಡಿಸಿ ಹೇಳಬೇಕಿಲ್ಲ. ಪೆಟ್ರೋಲ್ ಬಂಕ್ ಮಾಲೀಕರು ಕೋಟಿ ಕೋಟಿ ಆದಾಯ ಗಳಿಸುವ ಉದ್ದೇಶಿದಿಂದ ಮಾಡುವ ಕಳ್ಳ ದಂಧೆಗೆ ಸಿಬ್ಬಂದಿಯನ್ನು ಹೊಣೆ ಮಾಡುವುದು ಇಲ್ಲಿ ತಪ್ಪಾಗುತ್ತೆ.

ಇದು ಹೊಸ ಸಮಸ್ಯೆ ಏನು ಅಲ್ಲಾ. ಆದ್ರೆ ಈ ಸಮಸ್ಯೆ ಬಗ್ಗೆ ಸಂಬಂಧಪಟ್ಟವರಿಗೆ ಗೊತ್ತಿದ್ರು ಸಹ ಕಣ್ಮುಚ್ಚಿ ಕುಳಿತಿರುವುದು ಮಾತ್ರ ದುರಷ್ಟಕರ. ಯಾಕೆಂದ್ರೆ ಪೆಟ್ರೋಲ್ ಬಂಕ್‌ಗಳಲ್ಲಿ ವಾಹನ ಸವಾರರಿಗೆ ಆಗುತ್ತಿರುವ ಮೋಸ ಮಾತ್ರ ಅಷ್ಟಿಷ್ಟಲ್ಲ.
MOST READ: ಇನ್ಮುಂದೆ ಬೇರೆಯವರ ಕೈಗೆ ನಿಮ್ಮ ವಾಹನಗಳನ್ನು ನೀಡುವುದಕ್ಕೂ ಮುನ್ನ ಹತ್ತು ಬಾರಿ ಯೋಚಿಸಿ..!

ಕಳೆದ ಕೆಲ ದಿನಗಳ ಹಿಂದೆಯೂ ಪೆಟ್ರೋಲ್ ಬಂಕ್‌ಗಳಲ್ಲಿ ವಾಹನ ಸವಾರರಿಗೆ ಆಗುತ್ತಿರುವ ಅನ್ಯಾಯದ ಬಗ್ಗೆ ಹತ್ತಾರು ಪ್ರಕರಣಗಳು ದಾಖಲಾಗಿ ಭಾರೀ ಚರ್ಚೆಗೆ ಕಾರಣವಾಗಿದ್ದವು. ಆದ್ರೆ ಇದೀಗ ಅದೇ ಸಮಸ್ಯೆ ಮತ್ತೆ ಉಲ್ಬಣಗೊಂಡಿದೆ.

ರಿಮೋಟ್ ಕಂಟ್ರೋಲ್ ಮೂಲಕ ನಡೆಯುತ್ತೆ ಕಳ್ಳ ದಂಧೆ
ಹೌದು.. ಇದು ನಿಮಗೆ ನಂಬಲು ಸಾಧ್ಯವಾಗದಿದ್ದರು ನಿಜ. ಕಳೆದ ತಿಂಗಳ ಹಿಂದಷ್ಟೇ ಉತ್ತರ ಪ್ರದೇಶದಲ್ಲಿ ನಡೆದ ಎಸ್‌ಐಟಿ ಅಧಿಕಾರಿಗಳು ಗ್ರಾಹಕರ ದೂರಿನ ಮೇಲೆ ನಡೆಸಿದ ದಾಳಿ ವೇಳೆ ಪೆಟ್ರೋಲ್ ಬಂಕ್‌ಗಳಲ್ಲಿ ನೂರಾರು ರಿಮೋಟ್‌ಗಳು ಪತ್ತೆಯಾಗಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ.

ರಿಮೋಟ್ ಮೂಲಕ ಪೆಟ್ರೋಲ್ ಬಂಕ್‌ನ ಫ್ಯೂಲ್ ಯೂನಿಟ್‌ಗಳನ್ನು ನಿಯಂತ್ರಿಸುವ ಮಾಲೀಕರು ಬೈಕ್ ಸವಾರರಗಿಂತ 1 ಸಾವಿರ, 2 ಸಾವಿರ ರೂಪಾಯಿ ಲೆಕ್ಕದಲ್ಲಿ ಡೀಸೆಲ್, ಪೆಟ್ರೋಲ್ ತುಂಬಿಸುವ ಕಾರು ಮಾಲೀಕರಿಗೆ ಹೆಚ್ಚಿನ ಪ್ರಮಾಣದಲ್ಲಿ ಮೋಸ ಮಾಡುತ್ತಾರೆ.

ಬೈಕ್‌ಗಳಿಗೆ ಪೆಟ್ರೋಲ್ ತುಂಬಿಸುವಾಗ ಮೋಸ ಮಾಡಿದ್ದಲ್ಲಿ ಮಾಲೀಕರಿಗೆ ಇದು ಗೊತ್ತಾಗಬಹುದಾದ ಎನ್ನುವ ಉದ್ದೇಶದಿಂದ ಹೆಚ್ಚಿನ ಪ್ರಮಾಣದಲ್ಲಿ ಇಂಧನ ತುಂಬಿಸುವಾಗ ಮಾತ್ರ ರಿಮೋಟ್ ಕಂಟ್ರೋಲ್ ಬಳಕೆ ಮಾಡಿ ಇಂಧನ ಪ್ರಮಾಣದಲ್ಲಿ ಕಡಿತ ಮಾಡುತ್ತಾರೆ.
MOST READ: ಹೆದ್ದಾರಿ ದರೋಡೆಕೋರರ ಹೆಡೆಮುರಿ ಕಟ್ಟಲು ಡಿಸಿಪಿ ಅಣ್ಣಾಮಲೈ ಮಾಡಿದ ಪ್ಲ್ಯಾನ್ ಹೇಗಿತ್ತು ಗೊತ್ತಾ?

ಅದು ಹೇಗೆ ಅಂದ್ರೆ, ನೀವು ಒಂದು ಲೀಟರ್ ಪೆಟ್ರೋಲ್ ಅಥವಾ ಡೀಸೆಲ್ ಹಾಕಿಸಿದ್ದರೆ ನಿಮ್ಮ ವಾಹನದಲ್ಲಿ ಕೇವಲ 900ಮಿ. ಲೀಟರ್ ಮಾತ್ರ ತುಂಬಿಕೊಳ್ಳುತ್ತದೆ. ಆದ್ರೆ ಮೀಟರ್‌ನಲ್ಲಿ ಮಾತ್ರ 1 ಲೀಟರ್ ಹಾಕಿದ್ದಾಗಿ ಲೆಕ್ಕ ತೋರಿಸುತ್ತದೆ.

ಒಂದು ಮಾಹಿತಿ ಪ್ರಕಾರ, ದೇಶಾದ್ಯಂತ ಸುಮಾರು 25 ಸಾವಿರಕ್ಕೂ ಹೆಚ್ಚು ಪೆಟ್ರೋಲ್ ಬಂಕ್ ಈ ರೀತಿಯಾಗಿ ಮೋಸ ನಡೆಯುತ್ತಿದ್ದು, ಮೋಸದ ವ್ಯವಹಾರ ಪತ್ತೆ ಹಚ್ಚಲು ಸಾಧ್ಯವಾಗದೇ ವಾಹನನ ಸವಾರರು ಪರದಾಡುತ್ತಿದ್ದಾರೆ.

ಕರ್ನಾಟಕದಲ್ಲೂ ಸುಮಾರು 2 ಸಾವಿರಕ್ಕೂ ಹೆಚ್ಚು ಪೆಟ್ರೋಲ್ ಬಂಕ್‌ಗಳಲ್ಲಿ ಈ ರೀತಿಯಾಗಿ ಮೋಸ ನಡೆಯುತ್ತಿದ್ದು, ಮೋಸದ ವ್ಯವಹಾರದ ಹಿಂದೆ ಕೆಲವು ರಾಜಕೀಯ ಮುಖಂಡರೇ ಬೆನ್ನೆಲುಬಾಗಿ ನಿಂತಿರುವುದು ದುರಾದೃಷ್ಠಕರ ಸಂಗತಿ.
MOST READ: ವಾಹನ ಸವಾರರಿಗೆ ಸಿಹಿಸುದ್ದಿ- ಟೋಲ್ ದರ ಕಡಿತಕ್ಕೆ ಕೇಂದ್ರದಿಂದ ಹೊಸ ಯೋಜನೆ..!

ಅನುಮಾನ ಬಂದ್ರೆ ಬಿಡಲೇಬೇಡಿ..!
ವಾಹನ ಸವಾರರೇ ಯಾವುದೇ ಕಾರಣಕ್ಕೂ ಅನ್ಯಾಯವನ್ನು ಸಹಿಸಿಕೊಳ್ಳಬೇಡಿ. ನಿಮಗೆ ಅನುಮಾನ ಬಂದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಪ್ರಮಾಣದ ಬಗ್ಗೆ ಮಾಲೀಕರ ಬಳಿ ಅನುಮಾನ ಬಗೆಹರಿಸಿಕೊಳ್ಳಿ. ಒಂದು ವೇಳೆ ನಿಮ್ಮ ಅನುಮಾನ ನಿಜವಾಗಿದ್ದಲ್ಲಿ ಮೋಸ ಮಾಡುತ್ತಿರುವ ಬಂಕ್ ವಿರುದ್ಧ ದೂರು ದಾಖಲಿಸಲು ಹಿಂಜರಿಯಬೇಡಿ. ದೂರು ದಾಖಲಿಸಿ ಮೋಸದ ವ್ಯವಹಾರಕ್ಕೆ ಬ್ರೇಕ್ ಹಾಕಿ.


Click it and Unblock the Notifications








