ಮುಂಬೈನಲ್ಲಿ ಅಮೋಘ ಶತಕ ಬಾರಿಸಿದ ಪೆಟ್ರೋಲ್ ಬೆಲೆ

ಭಾರತದಲ್ಲಿ ಕರೋನಾ ವೈರಸ್ ಹರಡುವಿಕೆಯ ಕಾರಣಕ್ಕೆ ಕಳೆದ ಒಂದು ವರ್ಷದಿಂದ ಜನ ಜೀವನ ಅಸ್ತವ್ಯಸ್ತವಾಗಿದೆ. ಲಾಕ್‌ಡೌನ್ ಕಾರಣಕ್ಕೆ ಕಾರ್ಖಾನೆ ಹಾಗೂ ಇತರ ವ್ಯವಹಾರಗಳನ್ನು ಆಗಾಗ್ಗೆ ಸ್ಥಗಿತಗೊಳಿಸಲಾಗುತ್ತಿದೆ.

ಮುಂಬೈನಲ್ಲಿ ಅಮೋಘ ಶತಕ ಬಾರಿಸಿದ ಪೆಟ್ರೋಲ್ ಬೆಲೆ

ಇದರಿಂದ ದೇಶದ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ ಉಂಟಾಗಿದೆ. ಆದಾಯವನ್ನು ಸರಿದೂಗಿಸಲು ಕೇಂದ್ರ ಸರ್ಕಾರವು ಪೆಟ್ರೋಲ್, ಡೀಸೆಲ್ಬೆಲೆಯನ್ನು ನಿರಂತರವಾಗಿ ಹೆಚ್ಚಿಸುತ್ತಿದೆ. ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಿಂದಾಗಿ ಸರಕುಗಳ ಬೆಲೆಯು ಸಹ ಹೆಚ್ಚಾಗಿದೆ.

ಮುಂಬೈನಲ್ಲಿ ಅಮೋಘ ಶತಕ ಬಾರಿಸಿದ ಪೆಟ್ರೋಲ್ ಬೆಲೆ

ಆಟೋಮೊಬೈಲ್ ಕಂಪನಿಗಳು ಸಹ ಈಗಾಗಲೇ ತಮ್ಮ ಕಾರು ಹಾಗೂ ಬೈಕುಗಳ ಬೆಲೆಯನ್ನು ಹೆಚ್ಚಿಸಿವೆ. ಕೆಲವು ಕಂಪನಿಗಳು ಈಗಾಗಲೇ ಎರಡು, ಮೂರು ಬಾರಿ ತಮ್ಮ ವಾಹನಗಳ ಬೆಲೆಯನ್ನು ಹೆಚ್ಚಿಸಿವೆ.

MOST READ: ವಾಹನ ಖರೀದಿಸುವವರಿಗೆ, ಮಾರಾಟ ಮಾಡುವವರಿಗೆ ನೆರವಾಗುವ ಆರ್‌ಟಿಒ ಫಾರಂಗಳಿವು!

ಮುಂಬೈನಲ್ಲಿ ಅಮೋಘ ಶತಕ ಬಾರಿಸಿದ ಪೆಟ್ರೋಲ್ ಬೆಲೆ

ಪೆಟ್ರೋಲ್, ಡೀಸೆಲ್ ಬೆಲೆ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಏರಿಕೆಯಾಗುತ್ತಿದೆ. ಇಂದು ಸಹ ತೈಲ ಕಂಪನಿಗಳು ಪೆಟ್ರೋಲ್, ಡೀಸೆಲ್ ಬೆಲೆ ಹೆಚ್ಚಿಸಿವೆ. ಇಂದು ಪ್ರತಿ ಲೀಟರ್ ಪೆಟ್ರೋಲ್ ಬೆಲೆ 25 ಪೈಸೆಗಳಷ್ಟು ಏರಿಕೆಯಾಗಿದೆ.

ಮುಂಬೈನಲ್ಲಿ ಅಮೋಘ ಶತಕ ಬಾರಿಸಿದ ಪೆಟ್ರೋಲ್ ಬೆಲೆ

ಡೀಸೆಲ್ ಬೆಲೆಯನ್ನು 30 ಪೈಸೆಯಷ್ಟು ಹೆಚ್ಚಿಸಲಾಗಿದೆ. ಈ ಬೆಲೆ ಏರಿಕೆಯ ನಂತರ ಮುಂಬೈ ನಗರದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ ನೂರು ರೂಪಾಯಿ ಗಡಿ ದಾಟಿದೆ. ಮುಂಬೈನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ ರೂ.100.19ಗಳಾಗಿದೆ.

MOST READ: ಎಲೆಕ್ಟ್ರಿಕ್ ದ್ವಿಚಕ್ರ ವಾಹನ ಖರೀದಿಗೂ ಮುನ್ನ ಪರಿಶೀಲಿಸಬೇಕಾದ ಸಂಗತಿಗಳಿವು

ಮುಂಬೈನಲ್ಲಿ ಅಮೋಘ ಶತಕ ಬಾರಿಸಿದ ಪೆಟ್ರೋಲ್ ಬೆಲೆ

ಈ ಮೂಲಕ ಪ್ರತಿ ಲೀಟರ್ ಪೆಟ್ರೋಲ್‌ ಬೆಲೆ ರೂ.100ರ ಗಡಿ ದಾಟಿದ ಭಾರತದ ಮೊದಲ ಮೆಟ್ರೋ ನಗರ ಎಂಬ ಕುಖ್ಯಾತಿಗೆ ಮುಂಬೈ ನಗರ ಪಾತ್ರವಾಗಿದೆ. ಮಧ್ಯಪ್ರದೇಶದ ರಾಜಧಾನಿ ಭೋಪಾಲ್'ನಲ್ಲಿ ಈಗಾಗಲೇ ಪ್ರತಿ ಲೀಟರ್ ಪೆಟ್ರೋಲ್ ಬೆಲೆ ರೂ.100ರ ಗಡಿ ದಾಟಿದೆ.

ಮುಂಬೈನಲ್ಲಿ ಅಮೋಘ ಶತಕ ಬಾರಿಸಿದ ಪೆಟ್ರೋಲ್ ಬೆಲೆ

ಭೋಪಾಲ್‌ನಲ್ಲಿ ಇಂದು ಒಂದು ಲೀಟರ್ ಪೆಟ್ರೋಲ್ ಬೆಲೆ ರೂ.102.04ಗಳಾಗಿದೆ. ಮುಂಬೈನಲ್ಲಿ ಮೇ 27ರಂದು ಪ್ರತಿ ಲೀಟರ್ ಪೆಟ್ರೋಲ್ ಬೆಲೆ ರೂ.100ರ ಸಮೀಪ ಬಂದಿತ್ತು.

MOST READ: 10 ಲಕ್ಷ ಬೆಲೆಯ ಕಾರಿಗೆ 20 ಲಕ್ಷದ ಬಿಲ್ ನೀಡಿದ ಸರ್ವೀಸ್ ಸೆಂಟರ್

ಮುಂಬೈನಲ್ಲಿ ಅಮೋಘ ಶತಕ ಬಾರಿಸಿದ ಪೆಟ್ರೋಲ್ ಬೆಲೆ

ಆದರೆ ನಿನ್ನೆ ಪೆಟ್ರೋಲ್ ಬೆಲೆಯಲ್ಲಿ ಯಾವುದೇ ಏರಿಕೆ ಕಂಡು ಬಂದಿರಲಿಲ್ಲ. ಮುಂಬೈನಲ್ಲಿ ಪ್ರತಿ ಲೀಟರ್ ಡೀಸೆಲ್ ಬೆಲೆ ರೂ.92.17ಗಳಾಗಿದೆ. ಭಾರತದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆಗಳು ಒಂದು ನಗರದಿಂದ ಮತ್ತೊಂದು ನಗರಕ್ಕೆ ಬೇರೆ ಬೇರೆಯಾಗಿರುತ್ತವೆ.

ಮುಂಬೈನಲ್ಲಿ ಅಮೋಘ ಶತಕ ಬಾರಿಸಿದ ಪೆಟ್ರೋಲ್ ಬೆಲೆ

ಹೈದರಾಬಾದ್'ನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ ರೂ.97.63ಗಳಾದರೆ, ನಮ್ಮ ಬೆಂಗಳೂರಿನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ ರೂ.97.07ಗಳಾಗಿದೆ. ಚೆನ್ನೈನಲ್ಲಿ ಒಂದು ಲೀಟರ್ ಪೆಟ್ರೋಲ್ ಬೆಲೆ ರೂ.95.51ಗಳಾಗಿದೆ.

Most Read Articles

Kannada
English summary
Petrol price crosses 100 Rupees mark in Mumbai. Read in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X