ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ ಬಗ್ಗೆ ಸುಳಿವು ನೀಡಿದ ಪೆಟ್ರೋಲಿಯಂ ಸಚಿವ

ಭಾರತದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದೆ. ಇದರಿಂದಾಗಿ ವಾಹನ ಸವಾರರು ತತ್ತರಿಸಿ ಹೋಗಿದ್ದಾರೆ. ಇಂಧನ ಬೆಲೆಗಳ ಏರಿಕೆಯಿಂದಾಗಿ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗಿದೆ.

ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ ಬಗ್ಗೆ ಸುಳಿವು ನೀಡಿದ ಪೆಟ್ರೋಲಿಯಂ ಸಚಿವ

ಇದು ಗೃಹಿಣಿಯರ ಮೇಲೂ ಪರಿಣಾಮ ಬೀರಿದೆ. ಈ ಕಾರಣಕ್ಕೆ ಜನರು ಪೆಟ್ರೋಲ್, ಡೀಸೆಲ್ ಬೆಲೆಯನ್ನು ಕಡಿಮೆ ಮಾಡುವಂತೆ ಒತ್ತಾಯಿಸುತ್ತಿದ್ದಾರೆ. ಕೇಂದ್ರ ಪೆಟ್ರೋಲಿಯಂ ಸಚಿವರಾದ ಧರ್ಮೇಂದ್ರ ಪ್ರಧಾನ್ ನಿನ್ನೆ ಜನರಿಗೆ ಶುಭ ಸುದ್ದಿಯೊಂದನ್ನು ನೀಡಿದ್ದಾರೆ. ಚಳಿಗಾಲದ ಅಂತ್ಯಕ್ಕೆ ಪೆಟ್ರೋಲಿಯಂ ಉತ್ಪನ್ನಗಳ ಬೆಲೆ ಕಡಿಮೆಯಾಗಲಿದೆ ಎಂದು ಅವರು ಹೇಳಿದ್ದಾರೆ.

ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ ಬಗ್ಗೆ ಸುಳಿವು ನೀಡಿದ ಪೆಟ್ರೋಲಿಯಂ ಸಚಿವ

ಈ ಮೂಲಕ ಜನರ ಆತಂಕವನ್ನು ಕಡಿಮೆ ಮಾಡಲು ಮುಂದಾಗಿದ್ದಾರೆ. ಈ ಬಗ್ಗೆ ಮಾತನಾಡಿರುವ ಧರ್ಮೇಂದ್ರ ಪ್ರಧಾನ್, ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಪೆಟ್ರೋಲಿಯಂ ಉತ್ಪನ್ನಗಳ ಬೆಲೆ ಏರಿಕೆಯು ಜನರ ಮೇಲೆ ಪರಿಣಾಮ ಬೀರಿದೆ.

MOST READ:ರಿಕ್ಷಾ ಕಳೆದುಕೊಂಡವನಿಗೆ ಹೊಸ ರಿಕ್ಷಾ ಕೊಡಿಸಿದ ಆಪದ್ಭಾಂಧವ

ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ ಬಗ್ಗೆ ಸುಳಿವು ನೀಡಿದ ಪೆಟ್ರೋಲಿಯಂ ಸಚಿವ

ಚಳಿಗಾಲ ಅಂತ್ಯವಾಗುತ್ತಿದ್ದಂತೆ ಬೆಲೆಗಳು ಕುಸಿಯಲಿವೆ. ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಬೇಡಿಕೆ ಹೆಚ್ಚಾದಂತೆ ಬೆಲೆಯೂ ಹೆಚ್ಚುತ್ತದೆ. ಇದು ಚಳಿಗಾಲದಲ್ಲಿ ಸಹಜ. ಚಳಿಗಾಲದ ಅಂತ್ಯದೊಂದಿಗೆ ಪೆಟ್ರೋಲ್, ಡೀಸೆಲ್ ಬೆಲೆ ಕಡಿಮೆಯಾಗಲಿದೆ ಎಂದು ಹೇಳಿದರು.

ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ ಬಗ್ಗೆ ಸುಳಿವು ನೀಡಿದ ಪೆಟ್ರೋಲಿಯಂ ಸಚಿವ

ಪೆಟ್ರೋಲ್, ಡೀಸೆಲ್ ಬೆಲೆ ಎಷ್ಟು ಕಡಿಮೆಯಾಗಲಿದೆ ಎಂದು ಸಚಿವ ಧರ್ಮೇಂದ್ರ ಪ್ರಧಾನ್ ಮಾಹಿತಿ ನೀಡಿಲ್ಲ. ಆದರೆ ಅವರ ಈ ಹೇಳಿಕೆ ವಾಹನ ಸವಾರರಲ್ಲಿ ಭಾರೀ ನಿರೀಕ್ಷೆ ಮೂಡಿಸಿದೆ.

MOST READ:ಶೋಚನೀಯ ಸ್ಥಿತಿಯಲ್ಲಿವೆ ದುಬಾರಿ ಬೆಲೆಯ ಐಷಾರಾಮಿ ರೋಲ್ಸ್ ರಾಯ್ಸ್ ಕಾರುಗಳು

ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ ಬಗ್ಗೆ ಸುಳಿವು ನೀಡಿದ ಪೆಟ್ರೋಲಿಯಂ ಸಚಿವ

ವಾಹನ ಸವಾರರು ತಮಿಳುನಾಡು, ಪಾಂಡಿಚೆರಿ, ಕೇರಳ, ಅಸ್ಸಾಂ ಹಾಗೂ ಪಶ್ಚಿಮ ಬಂಗಾಳ ರಾಜ್ಯಗಳಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಪೆಟ್ರೋಲ್, ಡೀಸೆಲ್ ಬೆಲೆಗಳು ಕಡಿಮೆಯಾಗಬಹುದು ಎಂಬ ನಿರೀಕ್ಷೆಯಲ್ಲಿದ್ದಾರೆ.

ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ ಬಗ್ಗೆ ಸುಳಿವು ನೀಡಿದ ಪೆಟ್ರೋಲಿಯಂ ಸಚಿವ

ಈ ಹಿಂದೆ ತೈಲ ಕಂಪನಿಗಳು ಭಾರತದಲ್ಲಿ ನಡೆದ ಹಲವು ವಿಧಾನಸಭೆ ಹಾಗೂ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿಯೂ ಪೆಟ್ರೋಲ್, ಡೀಸೆಲ್ ಬೆಲೆ ಇಳಿಸುವ ತಂತ್ರವನ್ನು ಬಳಸಿದ್ದವು.

MOSTREAD: ಇನ್ನು ಮುಂದೆ ಈ ನಗರಗಳಲ್ಲಿ ಡೀಸೆಲ್ ವಾಹನಗಳನ್ನು ಮಾರಾಟ ಮಾಡುವಂತಿಲ್ಲ

ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ ಬಗ್ಗೆ ಸುಳಿವು ನೀಡಿದ ಪೆಟ್ರೋಲಿಯಂ ಸಚಿವ

ಈ ಕಾರಣಕ್ಕೆ ಸದ್ಯದಲ್ಲೇ ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆಯಾಗುವ ಸಾಧ್ಯತೆಗಳಿವೆ. ಈ 5 ರಾಜ್ಯಗಳಲ್ಲಿ ಮತದಾನ ಮುಗಿದ ನಂತರ ಮತ್ತೆ ಪೆಟ್ರೋಲ್, ಡೀಸೆಲ್ ಬೆಲೆಗಳು ಏರಿಕೆಯಾಗಬಹುದು ಎಂಬುದು ವಾಹನ ಸವಾರರ ಅಭಿಪ್ರಾಯ.

ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ ಬಗ್ಗೆ ಸುಳಿವು ನೀಡಿದ ಪೆಟ್ರೋಲಿಯಂ ಸಚಿವ

ಪೆಟ್ರೋಲ್, ಡೀಸೆಲ್ ಬೆಲೆಗಳು ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಭಾರತದಲ್ಲಿ ಹೆಚ್ಚು ಮೈಲೇಜ್ ನೀಡುವ ಬೈಕುಗಳ ಮಾರಾಟವು ಹೆಚ್ಚಾಗುತ್ತಿದೆ. ಇನ್ನೂ ಕೆಲವು ವಾಹನ ಸವಾರರು ಎಲೆಕ್ಟ್ರಿಕ್ ವಾಹನಗಳನ್ನು ಖರೀದಿಸಲು ಮುಂದಾಗುತ್ತಿದ್ದಾರೆ.

Most Read Articles

Kannada
English summary
Petroleum minister hints about decrease in petrol diesel price. Read in Kannada.
Story first published: Saturday, February 27, 2021, 9:48 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X