ದಕ್ಷಿಣ ಭಾರತದ ಮೊದಲ ವಂದೇ ಭಾರತ್‌ ರೈಲಿಗೆ ಬೆಂಗಳೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಚಾಲನೆ

ದಕ್ಷಿಣ ಭಾರತದ ಮೊದಲ ಸೆಮಿ ಹೈಸ್ಪೀಡ್‌ ವಂದೇ ಭಾರತ್‌ ರೈಲಿಗೆ ಬೆಂಗಳೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದ್ದಾರೆ. ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ (ಕೆಎಸ್‌ಆರ್‌) ನಿಲ್ದಾಣದ ಪ್ಲಾಟ್​ಫಾರಂ ಸಂಖ್ಯೆ 7ರಲ್ಲಿ ವಂದೇ ಭಾರತ್ ಎಕ್ಸ್​ಪ್ರೆಸ್ ರೈಲಿಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದರು.

ದಕ್ಷಿಣ ಭಾರತದ ಮೊದಲ ವಂದೇ ಭಾರತ್‌ ರೈಲಿಗೆ ಬೆಂಗಳೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಚಾಲನೆ

ಪ್ರಧಾನಿ ನರೇಂದ್ರ ಮೋದಿಯವರನ್ನು ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಲ್ಲಿ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಸ್ವಾಗತಿಸಿದರು. ಈ ವಂದೇ ಭಾರತ್ ಹಾಗೂ ಭಾರತ್ ಗೌರವ್ ರೈಲಿಗೆ ಚಾಲನೆ ನೀಡುವ ಹಿನ್ನೆಲಯಲ್ಲಿ ಅವರು ರೈಲ್ವೆ ನಿಲ್ದಾಣಕ್ಕೆ ಬಂದಿದ್ದರು. ರೈಲ್ವೇ ನಿಲ್ದಾಣಕ್ಕೆ ಬರುವ ಮುನ್ನ ಕಾರಿನಿಂದ ಕೆಳಗಿಳಿದ್ರು ಪ್ರಧಾನಿ ನರೇಂದ್ರ ಮೋದಿ ಜನರತ್ತ ಕೈಬೀಸಿದರು. ರೈಲು ಚಾಲನೆ ನೀಡುವ ಮಾಡುವ ಮುನ್ನ ರೈಲಿನ ಒಳಗೆ ಹೊಕ್ಕು ವ್ಯವಸ್ಥೆಗಳನ್ನು ಪರಿಶೀಲನೆ ಮಾಡಿದರು.

ದಕ್ಷಿಣ ಭಾರತದ ಮೊದಲ ವಂದೇ ಭಾರತ್‌ ರೈಲಿಗೆ ಬೆಂಗಳೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಚಾಲನೆ

ದಕ್ಷಿಣ ಭಾರತದ ಈ ಮೊದಲ ವಂದೇ ಭಾರತ್‌ ರೈಲು ನಿತ್ಯ ಚೆನ್ನೈ- ಬೆಂಗಳೂರು - ಮೈಸೂರು ನಡುವೆ ಸಾಗಲಿದೆ. ಬುಧವಾರ ಹೊರತುಪಡಿಸಿ ವಾರದಲ್ಲಿ ಆರು ದಿನ ಕೂಡ ವಂದೇ ಭಾರತ್‌ ರೈಲು ಸಂಚರಿಸಲಿದೆ.

ದಕ್ಷಿಣ ಭಾರತದ ಮೊದಲ ವಂದೇ ಭಾರತ್‌ ರೈಲಿಗೆ ಬೆಂಗಳೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಚಾಲನೆ

ಬೆಳಗ್ಗೆ 5:50ಕ್ಕೆ ತಮಿಳುನಾಡಿನ ಚೆನ್ನೈ ಸೆಂಟ್ರಲ್‌ನಿಂದ ಹೊರಡುವ ಎಕ್ಸ್‌ಪ್ರೆಸ್ ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ನಿಲ್ದಾಣದಲ್ಲಿ ಒಂದು ನಿಲುಗಡೆಯೊಂದಿಗೆ ಮಧ್ಯಾಹ್ನ 12:30 ಕ್ಕೆ ಮೈಸೂರು ತಲುಪುತ್ತದೆ. ರೈಲು ಪೆರಂಬೂರ್, ವೆಪ್ಪಂಪಟ್ಟು, ಕಟ್ಪಾಡಿ ಜಂಕ್ಷನ್, ಗುಡುಪಲ್ಲಿ ಮತ್ತು ಮಾಲೂರು ಹಾದುಹೋಗಲಿದೆ.

ದಕ್ಷಿಣ ಭಾರತದ ಮೊದಲ ವಂದೇ ಭಾರತ್‌ ರೈಲಿಗೆ ಬೆಂಗಳೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಚಾಲನೆ

ಭಾರತೀಯ ರೈಲ್ವೆಯಿಂದ ನಿರ್ವಹಿಸಲ್ಪಡುವ ಈ ಸೆಮಿ ಹೈ ಸ್ಪೀಡ್ ವಂದೇ ಭಾರತ್ ರೈಲು ವಿದ್ಯುಚ್ಛಕ್ತಿಯಿಂದ ಚಲಿಸುತ್ತದೆ. ಎಲ್ಲಾ ಕೋಚ್‌ಗಳು ಆಟೋಮ್ಯಾಟಿಕ್ ಡೋರುಗಳು, ಜಿಪಿಎಸ್-ಆಧಾರಿತ ಆಡಿಯೋ-ವಿಡಿಯೋ ಪ್ರಯಾಣಿಕರ ಮಾಹಿತಿ ಸಿಸ್ಟಂ, ಮನರಂಜನಾ ಉದ್ದೇಶಗಳಿಗಾಗಿ ಆನ್‌ಬೋರ್ಡ್ ಹಾಟ್‌ಸ್ಪಾಟ್ ವೈ-ಫೈ ಮತ್ತು ಆರಾಮದಾಯಕ ಸೀಟುಗಳೊಂದಿಗೆ ಸಜ್ಜುಗೊಂಡಿವೆ.

ದಕ್ಷಿಣ ಭಾರತದ ಮೊದಲ ವಂದೇ ಭಾರತ್‌ ರೈಲಿಗೆ ಬೆಂಗಳೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಚಾಲನೆ

ಈ ರೈಲು ಎರಡು ವಿಭಾಗಗಳನ್ನು ಹೊಂದಿರುತ್ತದೆ. ಇದು ಎಕ್ಸಿಕ್ಯುಟಿವ್ ಮತ್ತು ಎಕಾನಮಿ ಕ್ಲಾಸ್‌ ಆಗಿದ್ದು. ಇದರಲ್ಲಿ ಎಕ್ಸಿಕ್ಯುಟಿವ್ ಕ್ಲಾಸ್‌ನಲ್ಲಿರುವ ಸೀಟುಗಳು 180-ಡಿಗ್ರಿ ತಿರುಗಿಸಬಹುದಾದ ಸೀಟುಗಳನ್ನು ಹೊಂದಿದ್ದು, ಎಕಾನಮಿ ಕ್ಲಾಸ್‌ನಲ್ಲಿರುವ ಸೀಟ್‌ಗಳನ್ನು ಸುಲಭವಾಗಿ ಒರಗಿಕೊಳ್ಳಬಹುದು ಮತ್ತು ಮುಂದಕ್ಕೆ ಸ್ಲೈಡ್ ಮಾಡಬಹುದು.

ದಕ್ಷಿಣ ಭಾರತದ ಮೊದಲ ವಂದೇ ಭಾರತ್‌ ರೈಲಿಗೆ ಬೆಂಗಳೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಚಾಲನೆ

ಎಕ್ಸ್‌ಪ್ರೆಸ್ ರೈಲು ಬುಧವಾರ ಹೊರತುಪಡಿಸಿ ಎಲ್ಲಾ ದಿನಗಳಲ್ಲಿ ಚೆನ್ನೈ, ಬೆಂಗಳೂರು ಮತ್ತು ಮೈಸೂರು ನಡುವೆ 16 ಕೋಚ್‌ಗಳೊಂದಿಗೆ ಸಂಚರಿಸಲಿದೆ ಮತ್ತು 1,128 ಪ್ರಯಾಣಿಕರಿಗೆ ಸಾಮರ್ಥ್ಯವನ್ನು ಹೊಂದಿದೆ.

ದಕ್ಷಿಣ ಭಾರತದ ಮೊದಲ ವಂದೇ ಭಾರತ್‌ ರೈಲಿಗೆ ಬೆಂಗಳೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಚಾಲನೆ

ಮೇಕ್‌ ಇನ್‌ ಇಂಡಿಯಾ ಯೋಜನೆಯಲ್ಲಿ ನಿರ್ಮಾಣವಾಗಿರುವ ದೇಶದ ಅತಿವೇಗದ ರೈಲು ಎಂಬ ಹೆಗ್ಗಳಿಕೆ ವಂದೇ ಭಾರತ್ ಹೊಂದಿದೆ. ಗಂಟೆಗೆ 160.ಕಿ.ಮೀ ವೇಗದಲ್ಲಿ ಸಂಚರಿಸಲ್ಲ ಸಾಮರ್ಥ್ಯವನ್ನು ಹೊಂದಿದೆ. ಈ ರೈಲು 0 ದಿಂದ 100 ಕಿ.ಮೀ ವೇಗ ತಲುಪಲು ಕೇವಲ 52 ಸೆಕೆಂಡ್‌ ಸಮಯ ತೆಗೆದುಕೊಳ್ಳಲಿದೆ.

ದಕ್ಷಿಣ ಭಾರತದ ಮೊದಲ ವಂದೇ ಭಾರತ್‌ ರೈಲಿಗೆ ಬೆಂಗಳೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಚಾಲನೆ

ವಂದೇ ಭಾರತ್‌ ರೈಲ್ ಏರೋ ಡೈನಾಮಿಕ್ಸ್‌ ಮಾದರಿಯಲ್ಲಿ ನಿರ್ಮಾಣ ಮಾಡಿದೆ. ಗಾಳಿಯಲ್ಲಿ ವೇಗವಾಗಿ ನುಗ್ಗುವ ಸಾಮರ್ಥ್ಯ ಹೊಂದಿದೆ. ಐಷಾರಾಮಿ ಸೀಟ್ ವ್ಯವಸ್ಥೆ ಇದೆ. ಇದಕ್ಕೆ ಎಂಜಿನ್‌ ಇರುವುದಿಲ್ಲ. ಬದಲಾಗಿ ಮೆಟ್ರೋ ರೀತಿಯಲ್ಲಿ ಪ್ರತಿ ಬೋಗಿ ಕೂಡಾ ಪ್ರತ್ಯೇಕ ವ್ಯವಸ್ಥೆಯನ್ನು ಹೊಂದಿರಲಿದೆ.

ದಕ್ಷಿಣ ಭಾರತದ ಮೊದಲ ವಂದೇ ಭಾರತ್‌ ರೈಲಿಗೆ ಬೆಂಗಳೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಚಾಲನೆ

ವಂದೇ ಭಾರತ್‌ ರೈಲಿನ ಅಧಿಕೃತ ವೇಳಾಪಟ್ಟಿಪ್ರಕಟವಾಗಿದೆ. ಶನಿವಾರದಿಂದ ಪ್ರಯಾಣಿಕರ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗಿದೆ. ಈಗಾಗಲೇ ಐಆರ್‌ಸಿಟಿಸಿ ವೆಬ್‌ಸೈಟ್‌, ಆ್ಯಪ್‌ಗಳಲ್ಲಿ ಟಿಕೆಟ್‌ ಬುಕ್ಕಿಂಗ್ ಕೂಡ ಆರಂಭವಾಗಿದೆ.

ದಕ್ಷಿಣ ಭಾರತದ ಮೊದಲ ವಂದೇ ಭಾರತ್‌ ರೈಲಿಗೆ ಬೆಂಗಳೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಚಾಲನೆ

ಈ ರೈಲು ಬುಧವಾರ ಹೊರತು ಪಡಿಸಿ ಉಳಿದ ಆರು ದಿನಗಳ ಕಾಲ ಚೆನ್ನೈ- ಮೈಸೂರು ನಡುವೆ ಸಂಚಾರ ನಡೆಸಲಿದೆ. ಮಾರ್ಗ ಮಧ್ಯೆ ಕಟ್ಪಾಡಿ ಜಂಕ್ಷನ್‌ ಮತ್ತು ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಜಂಕ್ಷನ್‌ ನಲ್ಲಿ ನಿಲುಗಡೆಯಾಗಲಿದೆ.

ದಕ್ಷಿಣ ಭಾರತದ ಮೊದಲ ವಂದೇ ಭಾರತ್‌ ರೈಲಿಗೆ ಬೆಂಗಳೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಚಾಲನೆ

ಮೈಸೂರು ವಂದೇ ಭಾರತ್‌ ರೈಲು (20607) ಬೆಳಿಗ್ಗೆ 5.50ಕ್ಕೆ ಚೆನ್ನೈ ಸೆಂಟ್ರಲ್‌ ನಿಲ್ದಾಣದಿಂದ ಹೊರಟರೆ ಬೆಂಗಳೂರು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಜಂಕ್ಷನ್‌ ಮೂಲಕ ಮೈಸೂರು ಜಂಕ್ಷನ್‌ಗೆ 12.20ಕ್ಕೆ ತಲುಪಲಿದೆ.

ದಕ್ಷಿಣ ಭಾರತದ ಮೊದಲ ವಂದೇ ಭಾರತ್‌ ರೈಲಿಗೆ ಬೆಂಗಳೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಚಾಲನೆ

ಇನ್ನು ಚೆನ್ನೈಸೆಂಟ್ರಲ್‌ ವಂದೇ ಭಾರತ್‌ ರೈಲು (20608) ಮಧ್ಯಾಹ್ನ 1.05ಕ್ಕೆ ಮೈಸೂರಿನಿಂದ ಹೊರಟು ಬೆಂಗಳೂರು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಜಂಕ್ಷನ್‌ ದಾಟಿ ರಾತ್ರಿ 7.30ಕ್ಕೆ ಚೆನ್ನೈ ಸೆಂಟ್ರಲ್‌ ನಿಲ್ದಾಣವನ್ನು ತಲುಪಲಿದೆ. ಇನ್ನು ಈ ರೈಲು ಸುಮಾರು 497 ಕಿ.ಮೀ ದೂರವನ್ನು 6 ಗಂಟೆ 40 ನಿಮಿಷಗಳಲ್ಲಿ ಕ್ರಮಿಸಲಿದೆ.

More from DriveSpark

Article Published On: Friday, November 11, 2022, 13:40 [IST]
English summary
Pm modi flags off chennai mysuru vande bharat train in bengaluru details
Read more on ರೈಲು train
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+