ಬೆಂಗಳೂರಿನಲ್ಲಿ ನಮೋ ಹವಾ: ಹರಿದು ಬಂದ ಜನ ಸಾಗರ, ಪ್ರಧಾನಿ ಮೋದಿ ರೋಡ್ ಶೋ ವಾಹನ ಹೇಗಿದೆ ನೋಡಿ!
ರಾಜ್ಯ ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ವಿಧಾನಸಭೆ ಚುನಾವಣೆ ಕಾವು ರಂಗೇರಿದೆ. ಮತದಾರನ ಮನ ಗೆಲ್ಲಲು ರಾಜಕೀಯ ಪಕ್ಷಗಳು ಕಸರತ್ತು ನಡೆಸುತ್ತಿವೆ. ಅದರಂತೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿರುವ ಮತದಾರರ ಮನಗೆಲ್ಲಲು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ನಗರದಲ್ಲಿ ಮೆಗಾ ರೋಡ್ ಶೋ ನಡೆಸುತ್ತಿದ್ದಾರೆ.
ಬೆಂಗಳೂರಿನಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು 26 ಕಿಮೀ ರೋಡ್ ಶೋ ನಡೆಸುತ್ತಿದ್ದಾರೆ. ಬಹುತೇಕ ಬೆಂಗಳೂರು ಕೇಸರಿಮಯವಾಗಿದೆ. ಎಲ್ಲಡೆ ಬಿಜೆಪಿ ಮತ್ತು ಹಿಂದುತ್ವದ ಧ್ವಜಗಳು ರಾರಾಜಿಸುತ್ತಿವೆ. ಇನ್ನು ಪ್ರಧಾನಿ ಮೋದಿಯವರನ್ನು ನೋಡಲು ರಸ್ತೆಯ ಅಕ್ಕಪಕ್ಕದಲ್ಲಿ ಅಪಾರ ಸಂಖ್ಯೆಯಲ್ಲಿ ಜನ ಬಂದಿದ್ದಾರೆ. ಜೆ.ಪಿ. ನಗರ ಬ್ರಿಗೇಡ್ ಮಿಲೇನಿಯಂನಿಂದ ಆರಂಭವಾದ ರೋಡ್ ಶೋ ಮಲ್ಲೇಶ್ವರಂನಲ್ಲಿ ಅಂತ್ಯವಾಗಲಿದೆ.

ರಾಜ್ಯ ಬಿಜೆಪಿ ನಾಯಕರು ಪ್ರಧಾನಿ ನರೇಂದ್ರ ಮೋದಿ ಅವರನ್ನೇ ಕರೆತಂದು ಮತ ಸೆಳೆಯುವ ತಂತ್ರಗಾರಿಕೆ ಮಾಡಿದೆ. ಬೆಂಗಳೂರಿಗರ ಮನಸೆಳೆಯುವ ಉದ್ದೇಶದಿಂದ ಪ್ರಧಾನಿ ಮೋದಿಯವರು ಬಂದಿದ್ದಾರೆ. ಇದರಿಂದ ಬಿಜೆಪಿ ಕಾರ್ಯಕರ್ತರಲ್ಲಿ ಹುಮ್ಮಸ್ಸು ಮನೆ ಮಾಡಿದೆ.ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ರೋಡ್ ಶೋನಲ್ಲಿ ಬೆಂಗಳೂರು ದಕ್ಷಿಣ ಮತ್ತು ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರಗಳ ಸಂಸದರಾದ ತೇಜಸ್ವೀ ಸೂರ್ಯ ಮತ್ತು ಪಿಸಿ ಮೋಹನ್ ಸಾಥ್ ನೀಡಿದ್ದಾರೆ.
ಪ್ರಧಾನಿ ಮೋದಿಯವರು ರೋಡ್ ಶೋ ವೇಳೆ ಮಾರ್ಗದುದ್ದಕ್ಕೂ ಬಿಜೆಪಿ ಕಾರ್ಯಕರ್ತರು ಹೂವಿನ ಮಳೆ ಸುರಿಸುತ್ತಿದ್ದು, ಮೋದಿ ಪರ ಜೈಕಾರ ಕೂಗುತ್ತಿದ್ದಾರೆ. ಸಿಲಿಕಾನ್ ಸಿಟಿಯು ಅಕ್ಷರಶಃ ಹಬ್ಬದ ವಾತಾವಾರಣ ನಿರ್ಮಾಣವಾಗಿದೆ. ಪ್ರಧಾನಿ ಮೋದಿಯವರು ರೋಡ್ ಶೋ ಹಾದು ಹೋಗುವ ಕೆಲವು ಭಾಗದಲ್ಲಿ ಸಾಂಪ್ರದಾಯಿಕ ನೃತ್ಯಗಳ ಮೂಲಕ ಅವರನ್ನು ಸ್ವಾಗತ ಕೋರುತ್ತಿದ್ದಾರೆ.

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ರೋಡ್ ಶೋಗಾಗಿ ವಿಶೇಷವಾಗಿ ಸಿದ್ಧವಾದ ವಾಹನದಲ್ಲಿ ರೋಡ್ ಶೋ ನಡೆಸುತ್ತಿದ್ದಾರೆ. ಮೋದಿ ಅವರು ತೆರೆದ ವಾಹನದಲ್ಲಿ ಪ್ರಚಾರ ಆರಂಭಿಸಿದದ್ದಾರೆ. ವಾಹನದ ಮುಂಭಾಗ ಮತ್ತು ಹಿಂಭಾಗದಲ್ಲಿ ಹೂವಿನಿಂದ ಅಲಂಕಾರಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ರೋಡ್ ಶೋಗಾಗಿ ಬಳಿಸಿರುವುದು ಇಸುಝು ಪಿಕ್ಅಪ್ ಟ್ರಕ್ ಆಗಿದೆ.
ರೋಡ್ ಶೋನಲ್ಲಿ ಬಳಿಸಿದ ವಾಹನ ಇಸುಝುವಿನ ಯಾವ ಮಾದರಿ ಎಂಬುದರ ಬೆಗ್ಗೆ ಮಾಹಿತಿಗಳು ತಿಳಿದುಬಂದಿಲ್ಲ. ವಾಹನದ ಮುಂಭಾಗ ಮತ್ತು ಹಿಂಭಾಗದಲ್ಲಿ ಹೂವಿನಿಂದ ಅಲಂಕರಿಸಿರುವುದರಿಂದ ವಾಹನದ ಹೆಸರು ಕಾಣುವುದಿಲ್ಲ. ಇನ್ನು ಈ ವಾಹನದ ಸೈಡ್ ನೋಡುವಾಗ ಇಸುಝು ವಿ-ಕ್ರಾಸ್ ರೀತಿ ಕಾಣುತ್ತಿದೆ. ಇಸುಝು ಮಾದರಿಗಳು ಬಲಿಷ್ಠ ಮತ್ತು ಶಕ್ತಿಶಾಲಿ ಪಿಕ್ಅಪ್ ಟ್ರಕ್ ಗಳಾಗಿವೆ. ಇವುಗಳು ಉತ್ತಮ ಆಫ್-ರೋಡ್ ಸಾಮರ್ಥ್ಯವನ್ನು ಹೊಂದಿದೆ.
ಇನ್ನು ಇಸುಝು ಮಾದರಿಗಳಲ್ಲಿ ಅತ್ಯಾಧುನಿಕ ಫೀಚರ್ಸ್ ಗಳನ್ನು ಒಳಗೊಂಡಿವೆ. ಈ ವಾಹನಗಳನ್ನು ಚುನಾವಣಾ ಪ್ರಚಾರಗಳಿಗೆ ಸುಲಭವಾಗಿ ಬಲಸಬಹುದು. ಇನ್ನು 26 ಕಿಮೀ ರೋಡ್ಶೋ ಮೂಲಕ 13 ವಿಧಾನಸಭಾ ಕ್ಷೇತ್ರಗಳ ಮೇಲೆ ಪ್ರಧಾನಿ ನರೇಂದ್ರ ಮೋದಿ ಕಣ್ಣೀರಿಸಿದ್ದಾರೆ. ಇನ್ನು ರಸ್ತೆಯ ಇಕ್ಕೆಲಗಳಲ್ಲಿ ನೆರೆದಿದ್ದ ಜನರು ಪ್ರಧಾನಿಗಳ ಮೇಲೆ ಹೂಮಳೆಯನ್ನು ಸುರಿಸುತ್ತಿದ್ದಾರೆ. ರೋಡ್ಶೋ ಮಾರ್ಗದುದ್ದಕ್ಕೂ ಪೊಲೀಸರ ಸರ್ಪಗಾವಲು ನಿಯೋಜನೆ ಮಾಡಲಾಗಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತ ಆಟೋಮೊಬೈಲ್ ಸಂಬದಿಸಿದ ಸುದ್ದಿಗಳನ್ನು ಒದಗಿಸುತ್ತದೆ. ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಕೂಡ ಮರೆಯದಿರಿ. ಜೊತೆಗೆ ನಿಮ್ಮ ಸ್ನೇಹಿತರಿಗೂ ಶೇರ್ ಮಾಡಿ.


Click it and Unblock the Notifications