ಬೆಂಗಳೂರಿನಲ್ಲಿ ಮೋದಿ ಹವಾ: ಚಂದ್ರಯಾನ-3 ಟಚ್‌ಡೌನ್ ಪಾಯಿಂಟ್ 'ಶಿವಶಕ್ತಿ' ಎಂದು ನಾಮಕರಣ
ಐತಿಹಾಸಿಕ ಚಂದ್ರಯಾನ 3 ಯಶಸ್ಸಿನ ಹಿನ್ನೆಲೆಯಲ್ಲಿ ಇಸ್ರೋ (ISRO) ವಿಜ್ಞಾನಿಗಳನ್ನು ಅಭಿನಂದಿಸಲು ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಬೆಂಗಳೂರಿಗೆ ಆಗಮಿಸಿದ್ದಾರೆ. ಚಂದ್ರಯಾನ 3ರ (Chandrayaan-3) ಅಭೂತಪೂರ್ವ ಯಶಸ್ಸಿಗೆ ಬೆಂಗಳೂರಿನ ಪೀಣ್ಯದ ಇಸ್ರೋ ಕೇಂದ್ರಕ್ಕೆ ಆಗಮಿಸಿ ಇಸ್ರೋ ವಿಜ್ಞಾನಿಗಳಿಗೆ ಅಭಿನಂದನೆ ಸಲ್ಲಿಸಿ ತೆರಳಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಶನಿವಾರ (ಆ.26) ಹೆಚ್ಎಎಲ್ ಏರ್ಪೋರ್ಟ್ಗೆ ಬಂದಿಳಿದರು. ಹೆಚ್ಎಎಲ್ ಏರ್ಪೋರ್ಟ್ನಲ್ಲಿ ಪ್ರಧಾನಿ ಮೋದಿ ಹಿರಿಯ ಅಧಿಕಾರಿಗಳು, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ಬೆಂಗಳೂರು ನಗರ ಜಿಲ್ಲಾಧಿಕಾರಿ ಕೆ.ಎ.ದಯಾನಂದ್, ರಾಜ್ಯ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್, ಬೆಂಗಳೂರು ಪೊಲೀಸ್ ಕಮಿಷನರ್ ಬಿ.ದಯಾನಂದ್ ಮತ್ತು ಬೆಂಗಳೂರು ಪ್ರಾದೇಶಿಕ ಆಯುಕ್ತ ಆದಿತ್ಯ ಅಮ್ಲಾನ್ ಬಿಸ್ವಾಸ್ ಸ್ವಾಗತಿಸಿದರು.

ಬೆಂಗಳೂರಿನ ಪೀಣ್ಯದ ಇಸ್ರೋ ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಇಸ್ರೋ ಅಧ್ಯಕ್ಷ ಎಸ್.ಸೋಮನಾಥ್ ಅವರಿಗೆ ಹೂಗುಚ್ಛ ನೀಡಿ ಸ್ವಾಗತ ಮಾಡಿದರು. ಈ ವೇಳೆ ಇತರ ವಿಜ್ಞಾನಿಗಳು .ಆರ್.ರಾವ್ ಬಾಹ್ಯಾಕಾಶ ಕೇಂದ್ರದ ನಿರ್ದೇಶಕ ಎಂ.ಶಂಕರನ್, ಇಸ್ಟ್ರಾಕ್ ನಿರ್ದೇಶಕ ಬಿ.ಎನ್.ರಾಮಕೃಷ್ಣ ಅವರು ಮತ್ತು ಇತರ ವಿಜ್ಞಾನಿಗಳು ಜೊತೆಗಿದ್ದರು. ಪ್ರಧಾನಿ ಅವರು ಇಸ್ರೋ ವಿಜ್ಞಾನಿಗಳನ್ನು ಅಭಿನಂದಿಸಿದರು.
ಇಸ್ರೋದ ಆವರಣದಲ್ಲಿ ಚಂದ್ರಯಾನದ-3 ವಿಕ್ರಮ್ ಲ್ಯಾಂಡರ್‌ಗಳ ಮಾದರಿ ಇಡಲಾಗಿದೆ. ವಿಕ್ರಮ್ ಲ್ಯಾಂಡರ್‌ನಲ್ಲಿರುವ ಸೋಲಾರ್ ಪ್ಯಾನೆಲ್‌ಗಳು ಅದು ಕಾರ್ಯನಿರ್ವಹಿಸುವ ರೀತಿಯ ಬಗ್ಗೆ ಇಸ್ರೋ ವಿಜ್ಞಾನಿಗಳು ಪ್ರಧಾನಿ ಅವರಿಗೆ ಮಾಹಿತಿ ನೀಡಿದರು. ರೋವರ್‌ಗಳು ವಿಕ್ರಮ್ ಲ್ಯಾಂಡರ್‌ನಿಂದ ಹೊರಬರುವುದು ಹೇಗೆ ಮತ್ತು ಅನ್ವೇಷಣೆ ಬಗ್ಗೆ ಇಸ್ರೋ ಅಧ್ಯಕ್ಷರಾದ ಎಸ್.ಸೋಮನಾಥ್ ಅವರು ವಿವರಣೆ ನೀಡಿದರು.

ಐತಿಹಾಸಿಕ ಚಂದ್ರಯಾನ 3 ಯಶಸ್ಸಿನ ಕಾರಣರಾದ ಇಸ್ರೋ ವಿಜ್ಞಾನಿಗಳಿಗೆ ಮೋದಿ ಅಭಿನಂದನೆ ಸಲ್ಲಿಸಿದ್ದು ಇಸ್ರೋ ಸಂಸ್ಥೆಯ ಅಧ್ಯಕ್ಷ ಹಾಗೂ ಹಿರಿಯ ವಿಜ್ಞಾನಿಗಳ ಜೊತೆ ಕೆಲವು ಕಾಲ ಸಂವಾದ ನಡೆಸಿದರು. ಈ ವೇಳೆ ಪ್ರಧಾನಿ ನರೇಂದ್ರ ಮೋದಿ ಚಂದ್ರಯಾನ-3 ವಿಕ್ರಮ್ ಲ್ಯಾಂಡರ್ ಸಾಫ್ಟ್ ಲ್ಯಾಂಡ್ ಆದ ಸ್ಥಳವನ್ನು ಶಿವಶಕ್ತಿ ಸ್ಥಳ ಎಂದು ನಾಮಕರಣ ಮಾಡಿದರು.
ಇದರೊಂದಿಗೆ ಚಂದ್ರಯಾನ-2 ವಿಕ್ರಮ್ ಲ್ಯಾಂಡರ್ ಬಿದ್ದು ಇಂಪ್ಯಾಕ್ಟ್ ಆದ ಸ್ಥಳವನ್ನು ತಿರಂಗಾ ಪಾಯಿಂಟ್ ಎಂದು ಮೋದಿ ನಾಮಕರಣ ಮಾಡಿದ್ದಾರೆ. ಅಷ್ತೇ ಅಲ್ಲದೇ ಚಂದ್ರಯಾನ-3 ಯಶಸ್ಸು ಕಂಡ ದಿನವನ್ನು ಇನ್ನು ಮುಂದೆ ರಾಷ್ಟ್ರೀಯ ಬಾಹ್ಯಾಕಾಶ ದಿನವನ್ನಾಗಿ ದೇಶದಲ್ಲಿ ಆಚರಣೆ ಮಾಡಲಾಗುತ್ತದೆ ಎಂದು ಕೂಡ ಪ್ರದಾನಿಯವರು ಘೋಷಣೆ ಮಾಡಿದ್ದಾರೆ. ಈ ಮೂಲಕ ಐತಿಹಾಸಿಕ ಚಂದ್ರಯಾನ 3 ಯಶಸ್ಸಿನ ದಿನ ಪ್ರತಿ ವರ್ಷ ಆಚರಿಸಲಾಗುತ್ತದೆ.
ಚಂದ್ರಯಾನ-3ರ ಡೆರೆಕ್ಟರ್ ತಮಿಳುನಾಡು ಮೂಲದ ಪಿ.ವೀರಮುತ್ತುವೇಲ್ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಚಂದ್ರಯಾನ-3 ಮಾದರಿಯನ್ನು ನೀಡಿ ಗೌರವಿಸಿದರು. ಇನ್ನು ಮೋದಿ ಚುನಾವಣಾ ಫಲಿತಾಂಶದ ಬಳಿಕ ಮೊದಲ ಬಾರಿಗೆ ರಾಜ್ಯಕ್ಕೆ ಬಂದಿದ್ದಾರೆ. ಚಂದ್ರಯಾನ 3ರ ಯಶಸ್ಸು ಹಿನ್ನೆಲೆ ಇಸ್ರೋ ವಿಜ್ಞಾನಿಗಳಿಗೆ ಅಭಿನಂದನೆ ಸಲ್ಲಿಕೆಗೆ ಅವರು ಬಂದಿರುವುದಕ್ಕೆ ಈ ನಿರ್ದಿಷ್ಟ ಕಾರ್ಯಕ್ರಮಕ್ಕೆ ಮಾತ್ರ ಸಮಯ ನಿಗದಿಪಡಿಸಲಾಗಿತ್ತು.
ಮೋದಿ ಅವರ ಭೇಟಿಗೆ ಅವಕಾಶ ಸಿಗದೆ ಬ್ಯಾರಿಕೇಡ್ ಆಚೆ ನಿಂತು ಕೈಬೀಸಿದ ರಾಜ್ಯ ಬಿಜೆಪಿ ನಾಯಕರ ಚಿತ್ರಕ್ಕೆ ವ್ಯಾಪಕ ಟೀಕೆಗಳು ಮತ್ತು ಕೆಲವರು ಟ್ರೋಲ್ ಮಾಡುತ್ತಿದ್ದಾರೆ. ಮೋದಿಯವರು ಯಾವುದೇ ನಾಯಕರನ್ನು ಭೇಟಿಯಾಗದೆ ನೇರವಾಗಿ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದಾರೆ. ಕಾರ್ಯಕ್ರಮದ ಬಳಿಕ ಕೂಡ ಬಿಜೆಪಿ ನಾಯಕರನ್ನು ಭೇಟಿಯಾಗದೆ ದೆಹಲಿಗೆ ತೆರಳಿದ್ದಾರೆ. ಕಾಂಗ್ರೆಸ್ ಬಿಜೆಪಿ ನಾಯಕರದ್ದು ಎಂತಹಾ ದುಸ್ಥಿತಿ, ರಾಜ್ಯ ಬಿಜೆಪಿಯ 'ದಂಡ'ನಾಯಕರು, ಚಕ್ರವರ್ತಿಗಳು, ಸಾಮ್ರಾಟರೆಲ್ಲಾ ಬೀದಿ ಪಾಲಾಗಿದ್ದಾರೆ ಎಂದು ಟೀಕೆ ಮಾಡಿದ್ದಾರೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications