Just In
- 11 min ago
ವಿನೂತನ ವೈಶಿಷ್ಟ್ಯತೆಯೊಂದಿಗೆ ಪ್ರತಿಷ್ಠಿತ ಪ್ರಶಸ್ತಿಗೆ ಭಾಜನವಾದ ರಾಯಲ್ ಎನ್ಫೀಲ್ಡ್ ಮಿಟಿಯೊರ್ 350
- 48 min ago
ಹೊಸ ಜೀಪ್ ರ್ಯಾಂಗ್ಲರ್ ರೂಬಿಕಾನ್ 392 ಲಾಂಚ್ ಎಡಿಷನ್ ಬಿಡುಗಡೆ
- 1 hr ago
ಸ್ಪ್ಲೆಂಡರ್ ಬೈಕುಗಳ ಮೇಲೆ ಭರ್ಜರಿ ಡಿಸ್ಕೌಂಟ್ ನೀಡುತ್ತಿದೆ ಹೀರೋ ಮೋಟೊಕಾರ್ಪ್
- 2 hrs ago
2021ರ ಸ್ವಿಫ್ಟ್ ಕಾರಿನ ಆಕ್ಸೆಸರಿಸ್ ಪ್ಯಾಕೇಜ್ ಬಿಡುಗಡೆ ಮಾಡಿದ ಮಾರುತಿ ಸುಜುಕಿ
Don't Miss!
- News
ಅಂತರರಾಷ್ಟ್ರೀಯ ವಿಮಾನ ಸಂಚಾರದ ಮೇಲಿನ ನಿರ್ಬಂಧ ಮುಂದುವರಿಕೆ
- Movies
ನಿರ್ದೇಶಕನಿಗೆ ಅವಮಾನ: ಸ್ಟಾರ್ ನಟ ಆಗಿದ್ರೆ ಸುಮ್ಮನೆ ಬಿಡುತ್ತಿದ್ರಾ? ಚಂದ್ರಶೇಖರ್ ಅಸಮಾಧಾನ
- Finance
ಮುಂದಿನ 6 ತಿಂಗಳಿನಲ್ಲಿ ದೆಹಲಿಯ ಎಲ್ಲಾ ಸರ್ಕಾರಿ ಕಾರುಗಳು, ಎಲೆಕ್ಟ್ರಿಕ್ ಕಾರುಗಳಾಗಿ ಬದಲಾಗಲಿವೆ!
- Education
MCL Recruitment 2021: 8 ಸಾಮಾನ್ಯ ವೈದ್ಯಕೀಯ ಸಲಹೆಗಾರ ಹುದ್ದೆಗಳಿಗೆ ಅರ್ಜಿ ಆಹ್ವಾನ
- Sports
ಐಪಿಎಲ್ 2021: ರಾಜಸ್ಥಾನ್ ರಾಯಲ್ಸ್ ಜೊತೆ ಇಶ್ ಸೋಧಿ ಒಪ್ಪಂದ
- Lifestyle
ಅರಿಶಿನದ ಈ ಆರೋಗ್ಯ ಪ್ರಯೋಜನಗಳನ್ನು ಕೇಳಿದರೆ, ನೀವೂ ಶಾಕ್ ಆಗ್ತೀರಾ!
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಸೀಟ್ ಬೆಲ್ಟ್ ಧರಿಸುವುದರ ಮಹತ್ವ ವಿವರಿಸಿದ ಪೊಲೀಸ್ ಅಧಿಕಾರಿ
ಭಾರತದಲ್ಲಿ ರಸ್ತೆ ಅಪಘಾತಗಳಿಂದ ಉಂಟಾಗುವ ಸಾವುನೋವುಗಳ ಸಂಖ್ಯೆಯನ್ನು ಕಡಿಮೆ ಮಾಡಲು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಹಲವಾರು ಕ್ರಮಗಳನ್ನು ಕೈಗೊಳ್ಳುತ್ತಿವೆ. ಕೇಂದ್ರ ಸರ್ಕಾರವು ಹೊಸ ಮೋಟಾರು ವಾಹನ ಕಾಯ್ದೆಯಡಿ ಸಂಚಾರ ನಿಯಮಗಳನ್ನು ಉಲ್ಲಂಘಿಸುವವರಿಗೆ ಭಾರೀ ಪ್ರಮಾಣದ ದಂಡವನ್ನು ವಿಧಿಸುತ್ತಿದೆ.

ಆದರೂ ಇನ್ನೂ ಹಲವಾರು ವಾಹನ ಸವಾರರು ಸಂಚಾರ ನಿಯಮಗಳನ್ನು ಸರಿಯಾಗಿ ಪಾಲಿಸುತ್ತಿಲ್ಲ. ಕುಡಿದು ವಾಹನ ಚಾಲನೆ ಮಾಡುವುದು, ವಾಹನ ಚಾಲನೆ ವೇಳೆ ಮೊಬೈಲ್ ಬಳಕೆ, ಹೆಲ್ಮೆಟ್ ಧರಿಸದೇ ದ್ವಿಚಕ್ರ ವಾಹನ ಚಾಲನೆ ಸೇರಿದಂತೆ ಹಲವು ರೀತಿಯ ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳು ವರದಿಯಾಗುತ್ತಲೇ ಇವೆ.

ಕಾರು ಚಾಲನೆ ವೇಳೆ ಸೀಟ್ ಬೆಲ್ಟ್ ಧರಿಸದೆ ಇರುವುದು ಸಹ ಸಂಚಾರ ನಿಯಮದ ಉಲ್ಲಂಘನೆಯಾಗಿದೆ. ಆಧುನಿಕ ಕಾರುಗಳು ಹಲವಾರು ಸುರಕ್ಷತಾ ವೈಶಿಷ್ಟ್ಯಗಳನ್ನು ಹೊಂದಿವೆ. ಇವುಗಳಲ್ಲಿ ಸೀಟ್ ಬೆಲ್ಟ್ಗಳು ಸಹ ಸೇರಿವೆ.
MOSTREAD: ಟ್ರ್ಯಾಕ್ಟರ್ಗಳ ಹಿಂಭಾಗದಲ್ಲಿ ದೊಡ್ಡ ಗಾತ್ರದ ಟಯರ್ಗಳಿರಲು ಕಾರಣಗಳಿವು

ಸೀಟ್ ಬೆಲ್ಟ್ ಧರಿಸದಿದ್ದರೆ ಕಾರು ಅಪಘಾತಕ್ಕೀಡಾದಾಗ ಗಾಯಗೊಳ್ಳುವ ಸಾಧ್ಯತೆಗಳು ಹೆಚ್ಚು. ಸೀಟ್ ಬೆಲ್ಟ್ ಧರಿಸಿದ್ದರೆ ಅದು ಕಾರಿನಲ್ಲಿರುವವರನ್ನು ಸೀಟಿಗೆ ಹಿಡಿದಿಟ್ಟುಕೊಳ್ಳುತ್ತದೆ. ಅಪಘಾತದಲ್ಲಿ ಕಾರು ತಲೆಕೆಳಗಾಗಿ ಉರುಳಿದರೂ, ಸೀಟ್ ಬೆಲ್ಟ್ ದೇಹಕ್ಕೆ ಗಾಯವಾಗುವ ಸಾಧ್ಯತೆಗಳನ್ನು ಕಡಿಮೆಗೊಳಿಸುತ್ತದೆ.

ರಸ್ತೆ ಅಪಘಾತಗಳಿಂದ ಸಾವನ್ನಪ್ಪುವವರ ಸಂಖ್ಯೆಯನ್ನು ಕಡಿಮೆಗೊಳಿಸುವ ಸಲುವಾಗಿ ಕಾರುಗಳಲ್ಲಿ ಪ್ರಯಾಣಿಸುವ ಪ್ರತಿಯೊಬ್ಬರೂ ಸೀಟ್ ಬೆಲ್ಟ್ ಧರಿಸುವಂತೆ ಕಾನೂನು ಜಾರಿಗೆ ತರಲಾಗಿದೆ. ಆದರೆ ಚಾಲಕ ಹಾಗೂ ಮುಂಭಾಗದ ಪ್ರಯಾಣಿಕರು ಮಾತ್ರ ಸೀಟ್ ಬೆಲ್ಟ್ ಧರಿಸಬೇಕು ಎಂಬುದು ಕೆಲವರ ಭಾವನೆ.
MOSTREAD: ಚಿಕ್ಕ ಜಾಗದಲ್ಲಿ ದೊಡ್ಡ ಕಾರನ್ನು ಪಾರ್ಕ್ ಮಾಡಿದ ಅಪ್ರತಿಮ ಚಾಲಕನನ್ನು ಸನ್ಮಾನಿಸಿದ ಟೊಯೊಟಾ ಡೀಲರ್

ಆದರೆ ಇದು ತಪ್ಪು ಅಭಿಪ್ರಾಯ. ಹಿಂದಿನ ಸೀಟಿನಲ್ಲಿರುವ ಪ್ರಯಾಣಿಕರು ಸೇರಿದಂತೆ ಕಾರಿನಲ್ಲಿ ಪ್ರಯಾಣಿಸುವ ಪ್ರತಿಯೊಬ್ಬರೂ ಸೀಟ್ ಬೆಲ್ಟ್ ಧರಿಸಬೇಕು. ಆದರೆ ಹಲವರು ಈ ನಿಯಮವನ್ನು ಸರಿಯಾಗಿ ಪಾಲಿಸುವುದಿಲ್ಲ. ಜೊತೆಗೆ ಪೊಲೀಸರು ಸಹ ಈ ನಿಯಮವನ್ನು ಸರಿಯಾಗಿ ಜಾರಿಗೊಳಿಸುತ್ತಿಲ್ಲ.

ಕಾರಿನಲ್ಲಿ ಸೀಟ್ ಬೆಲ್ಟ್ ಧರಿಸದೆ ಪ್ರಯಾಣಿಸುವವರಿಗಾಗಿ ವೀಡಿಯೊವೊಂದನ್ನು ಬಿಡುಗಡೆಗೊಳಿಸಲಾಗಿದೆ. ಈ ವೀಡಿಯೊದಲ್ಲಿ ತಮಿಳುನಾಡಿನ ಪೊಲೀಸ್ ಅಧಿಕಾರಿಯೊಬ್ಬರು ಸೀಟ್ ಬೆಲ್ಟ್ ಧರಿಸುವ ಅಗತ್ಯವನ್ನು ವಿವರಿಸಿದ್ದಾರೆ.
MOSTREAD: ಲಾಕ್ಡೌನ್ ನಿಂದ ಕೆಲಸ ಕಳೆದುಕೊಂಡವ ಇಂದು ವಿಶ್ವ ವಿಖ್ಯಾತ ವ್ಯಕ್ತಿ

ಈ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಹಿಂದಿನ ಸೀಟಿನಲ್ಲಿರುವ ಪ್ರಯಾಣಿಕರು ಸೀಟ್ ಬೆಲ್ಟ್ ಏಕೆ ಧರಿಸಬೇಕು ಎಂಬುದನ್ನು ಈ ಅಧಿಕಾರಿ ವೀಡಿಯೊದಲ್ಲಿ ವಿವರಿಸಿದ್ದಾರೆ.
ಅಪಘಾತದ ಸಮಯದಲ್ಲಿ ಸೀಟ್ ಬೆಲ್ಟ್ ಧರಿಸದಿದ್ದರೆ ಎದುರಾಗುವ ಅಪಾಯಗಳ ಬಗ್ಗೆಯೂ ಅವರು ವಿವರಿಸಿದ್ದಾರೆ. ಅಪಘಾತದ ಸಂದರ್ಭದಲ್ಲಿ ಏರ್ಬ್ಯಾಗ್'ಗಳು ಪ್ರಯಾಣಿಕರ ಪ್ರಾಣ ಉಳಿಸುವಲ್ಲಿ ಸೀಟ್ ಬೆಲ್ಟ್ಗಳು ಪ್ರಮುಖ ಪಾತ್ರ ವಹಿಸುತ್ತವೆ.
MOSTREAD: 13 ವರ್ಷಗಳಲ್ಲಿ 10 ಲಕ್ಷ ಕಿ.ಮೀ ಸಂಚರಿಸಿದ ಟೊಯೊಟಾ ಇನೋವಾ ಕಾರು

ಕಾರುಗಳಲ್ಲಿ ಹೆಚ್ಚುವರಿ ಬಂಪರ್ಗಳನ್ನು ಅಳವಡಿಸುವುದರಿಂದ ಪಾದಚಾರಿಗಳಿಗೆ ಹಾನಿಯಾಗುತ್ತದೆ. ಜೊತೆಗೆ ಹೆಚ್ಚುವರಿ ಬಂಪರ್'ಗಳು ಅಪಘಾತದ ಸಂದರ್ಭದಲ್ಲಿ ಏರ್ಬ್ಯಾಗ್ಗಳು ವಿಸ್ತರಿಸಲು ಅಡ್ಡಿಪಡಿಸುತ್ತವೆ.