ಸಿನಿಮೀಯ ಶೈಲಿಯಲ್ಲಿ ದುಷ್ಕರ್ಮಿಗಳ ಬೆನ್ನತ್ತಿದ ಪೊಲೀಸ್ ಸಬ್ ಇನ್ಸ್‌ಪೆಕ್ಟರ್

ಚಲಿಸುತ್ತಿರುವ ವಾಹನಗಳ ಮೇಲೆ ಸ್ಟಂಟ್ ಮಾಡುವ ದೃಶ್ಯಗಳನ್ನು ಸಾಮಾನ್ಯವಾಗಿ ಸಿನಿಮಾಗಳಲ್ಲಿ ಕಾಣಬಹುದು. ಇತ್ತೀಚಿನ ದಿನಗಳಲ್ಲಿ ಬಹುತೇಕ ಎಲ್ಲಾ ಭಾಷೆಯ ಚಿತ್ರಗಳಲ್ಲಿ ಈ ದೃಶ್ಯಗಳು ಸಾಮಾನ್ಯವಾಗಿವೆ. ವಿಲನ್ ಗಳನ್ನು ಸದೆಬಡಿಯಲು ಹೀರೋ ವಾಹನಗಳ ಮೇಲೆ ಸಾಗುವ ದೃಶ್ಯಗಳನ್ನು ಕನ್ನಡ ಸೇರಿದಂತೆ ಎಲ್ಲಾ ಭಾಷೆಯ ಸಿನಿಮಾಗಳಲ್ಲಿ ಕಾಣಬಹುದು.

ಸಿನಿಮೀಯ ಶೈಲಿಯಲ್ಲಿ ದುಷ್ಕರ್ಮಿಗಳ ಬೆನ್ನತ್ತಿದ ಪೊಲೀಸ್ ಸಬ್ ಇನ್ಸ್‌ಪೆಕ್ಟರ್

ಇದೇ ರೀತಿಯ ಘಟನೆಯೊಂದು ಆಂಧ್ರಪ್ರದೇಶದಲ್ಲಿ ನಡೆದಿದೆ. ಕಳ್ಳಸಾಗಾಣಿಕೆದಾರರನ್ನು ಹಿಡಿಯುವ ಸಲುವಾಗಿ ಪೊಲೀಸ್ ಅಧಿಕಾರಿಯೊಬ್ಬರು ಕಾರಿನ ಬಾನೆಟ್‌ ಮೇಲೆಯೇ ಸುಮಾರು 2 ಕಿ.ಮೀ ದೂರ ಸಾಗಿದ್ದಾರೆ. ಮದ್ಯವನ್ನು ಆಕ್ರಮವಾಗಿ ಸರಬರಾಜು ಮಾಡುತ್ತಿದ್ದವರನ್ನು ಹಿಡಿಯುವ ಸಲುವಾಗಿ ಪೊಲೀಸ್ ಅಧಿಕಾರಿ ತಮ್ಮ ಪ್ರಾಣವನ್ನೇ ಪಣಕ್ಕಿಟ್ಟಿದ್ದಾರೆ.

ಸಿನಿಮೀಯ ಶೈಲಿಯಲ್ಲಿ ದುಷ್ಕರ್ಮಿಗಳ ಬೆನ್ನತ್ತಿದ ಪೊಲೀಸ್ ಸಬ್ ಇನ್ಸ್‌ಪೆಕ್ಟರ್

ಈ ಘಟನೆ ಆಗಸ್ಟ್ 28ರಂದು ಆಂಧ್ರಪ್ರದೇಶದ ಕಡಪಾ ಜಿಲ್ಲೆಯ ಪುಲಿವೆಂದುಲದಲ್ಲಿ ನಡೆದಿದೆ. ಅಪರಿಚಿತ ವ್ಯಕ್ತಿಗಳು ಕಾರಿನಲ್ಲಿ ಮದ್ಯದ ಬಾಟಲಿಗಳನ್ನು ಕಳ್ಳಸಾಗಣೆ ಮಾಡುತ್ತಿರುವ ಮಾಹಿತಿ ಪೊಲೀಸರಿಗೆ ಸಿಕ್ಕಿದೆ. ತಕ್ಷಣವೇ ಪೊಲೀಸರು ಸಬ್ ಇನ್ಸ್‌ಪೆಕ್ಟರ್ ಗೋಪಿನಾಥ್ ನೇತೃತ್ವದಲ್ಲಿ ವಾಹನಗಳ ಶೋಧ ಕಾರ್ಯ ನಡೆಸಿದ್ದಾರೆ.

MOSTREAD: ಮದುವೆ ಉಂಗುರದ ಶೋಧಕ್ಕಾಗಿ ಚೆಲ್ಲಾಪಿಲ್ಲಿಯಾದ ಕಾರಿನ ಇಂಟಿರಿಯರ್

ಸಿನಿಮೀಯ ಶೈಲಿಯಲ್ಲಿ ದುಷ್ಕರ್ಮಿಗಳ ಬೆನ್ನತ್ತಿದ ಪೊಲೀಸ್ ಸಬ್ ಇನ್ಸ್‌ಪೆಕ್ಟರ್

ಪೊಲೀಸರ ತಪಾಸಣೆ ವೇಳೆ ಕಾರೊಂದು ಬಂದಿದೆ. ಪೊಲೀಸರನ್ನು ನೋಡಿದ ತಕ್ಷಣ ಆ ಕಾರಿನ ಚಾಲಕ ಕಾರನ್ನು ಸ್ಲೋ ಮಾಡಿದ್ದಾನೆ. ನಂತರ ಇದ್ದಕ್ಕಿದ್ದಂತೆ ಕಾರನ್ನು ವೇಗವಾಗಿ ಚಾಲನೆ ಮಾಡಿ ಸಬ್ ಇನ್ಸ್‌ಪೆಕ್ಟರ್ ಗೋಪಿನಾಥ್ ರವರ ಮೇಲೆ ಕಾರು ಹತ್ತಿಸಲು ಯತ್ನಿಸಿದ್ದಾನೆ.

ಸಿನಿಮೀಯ ಶೈಲಿಯಲ್ಲಿ ದುಷ್ಕರ್ಮಿಗಳ ಬೆನ್ನತ್ತಿದ ಪೊಲೀಸ್ ಸಬ್ ಇನ್ಸ್‌ಪೆಕ್ಟರ್

ಇದರಿಂದ ಸಬ್ ಇನ್ಸ್‌ಪೆಕ್ಟರ್ ಗೋಪಿನಾಥ್ ಕಾರಿನ ಬಾನೆಟ್‌ ಮೇಲೆ ಬಿದ್ದಿದ್ದಾರೆ. ತಮ್ಮ ಎರಡೂ ಕಾಲುಗಳನ್ನು ವೇಗವಾಗಿ ಚಲಿಸುತ್ತಿದ್ದ ಕಾರಿನ ವಿಂಡ್‌ಸ್ಕ್ರೀನ್‌ ಮೇಲೆ ಹಾಕಿದ್ದ ಸಬ್ ಇನ್ಸ್‌ಪೆಕ್ಟರ್ ಗೋಪಿನಾಥ್ ಕಾರಿನ ಎರಡೂ ಬದಿಯ ರೂಫ್ ಗಳನ್ನು ಭದ್ರವಾಗಿ ಹಿಡಿದುಕೊಂಡಿದ್ದರು.

MOSTREAD: ಬೀದಿ ನಾಯಿಯೇ ಈ ಶೋರೂಂನ ರಿಸೆಪ್ಶನಿಸ್ಟ್

ಸಿನಿಮೀಯ ಶೈಲಿಯಲ್ಲಿ ದುಷ್ಕರ್ಮಿಗಳ ಬೆನ್ನತ್ತಿದ ಪೊಲೀಸ್ ಸಬ್ ಇನ್ಸ್‌ಪೆಕ್ಟರ್

ಈ ವೇಳೆ ಕಾರಿನ ಮುಂಭಾಗದ ವಿಂಡ್‌ಶೀಲ್ಡ್ ಮುರಿದಿದೆ. ಗೋಪಿನಾಥ್ ಅದರ ಮೂಲಕ ಕಾರಿನೊಳಗೆ ಹೋಗಲು ಪ್ರಯತ್ನಿಸಿದ್ದಾರೆ. ಆದರೆ ಚಾಲಕನ ಸೀಟಿನ ಪಕ್ಕದ ಸೀಟಿನಲ್ಲಿ ಕುಳಿತಿದ್ದ ವ್ಯಕ್ತಿ ಅವರನ್ನು ಹಿಂದಕ್ಕೆ ತಳ್ಳಿದ್ದಾನೆ.

ಸಿನಿಮೀಯ ಶೈಲಿಯಲ್ಲಿ ದುಷ್ಕರ್ಮಿಗಳ ಬೆನ್ನತ್ತಿದ ಪೊಲೀಸ್ ಸಬ್ ಇನ್ಸ್‌ಪೆಕ್ಟರ್

ಸುಮಾರು 2 ಕಿ.ಮೀ ನಂತರ ಪೊಲೀಸ್ ವಾಹನವು ತಮ್ಮನ್ನು ಬೆನ್ನಟ್ಟಿ ಬರುತ್ತಿರುವುದನ್ನು ಕಂಡ ಕಾರು ಚಾಲಕ ಹಾಗೂ ಆತನ ಜೊತೆಗಿದ್ದವನು ಕಾರನ್ನು ನಿಲ್ಲಿಸಿ ಪರಾರಿಯಾಗಿದ್ದಾರೆ. ಘಟನೆಯಲ್ಲಿ ಸಬ್ ಇನ್ಸ್‌ಪೆಕ್ಟರ್ ಗೋಪಿನಾಥ್ ಅವರ ಹೊಟ್ಟೆ, ಕಾಲು ಹಾಗೂ ತೋಳುಗಳಿಗೆ ಗಾಯಗಳಾಗಿವೆ ಎಂದು ವರದಿಯಾಗಿದೆ.

MOSTREAD: ನ್ಯಾನೋ ಕಾರಿಗೆ ಗುದ್ದಿ ಅಪ್ಪಚ್ಚಿಯಾದ ಹೋಂಡಾ ಸಿಟಿ ಕಾರು

ಈ ಘಟನೆಯ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಮಾರುತಿ ಸುಜುಕಿ ಸಿಯಾಜ್ ಸೆಡಾನ್ ಕಾರನ್ನು ದುಷ್ಕರ್ಮಿಗಳು ತಮ್ಮ ಕಾರ್ಯಕ್ಕೆ ಬಳಸಿಕೊಂಡಿದ್ದಾರೆ. ಕಾರಿನಿಂದ ಸುಮಾರು 80 ಮದ್ಯದ ಬಾಟಲಿಗಳನ್ನು ವಶಕ್ಕೆ ಪಡೆಯಲಾಗಿದೆ.

ಸಿನಿಮೀಯ ಶೈಲಿಯಲ್ಲಿ ದುಷ್ಕರ್ಮಿಗಳ ಬೆನ್ನತ್ತಿದ ಪೊಲೀಸ್ ಸಬ್ ಇನ್ಸ್‌ಪೆಕ್ಟರ್

ಪೊಲೀಸರು ಪರಾರಿಯಾದವರ ಬಂಧನಕ್ಕೆ ಬಲೆ ಬೀಸಿದ್ದಾರೆ. ದುಷ್ಕರ್ಮಿಗಳ ಬಂಧನಕ್ಕೆ ಎರಡು ಕಿ.ಮೀ ಕಾರಿನ ಬಾನೆಟ್ ಮೇಲೆ ಸಾಗಿದ ಸಬ್ ಇನ್ಸ್‌ಪೆಕ್ಟರ್ ಗೋಪಿನಾಥ್ ರವರ ಕಾರ್ಯಕ್ಕೆ ಸಾರ್ವಜನಿಕರಿಂದ ವ್ಯಾಪಕ ಪ್ರಶಂಸೆ ವ್ಯಕ್ತವಾಗುತ್ತಿದೆ. ಹಿರಿಯ ಪೊಲೀಸ್ ಅಧಿಕಾರಿಗಳೂ ಸಹ ಸಬ್ ಇನ್ಸ್‌ಪೆಕ್ಟರ್ ಗೋಪಿನಾಥ್ ರವರ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತ ಪಡಿಸಿದ್ದಾರೆ.

Most Read Articles

Kannada
English summary
Police Sub Inspector chases liquor smugglers on Maruti Suzuki Ciaz car roof. Read in Kannada.
Story first published: Monday, August 31, 2020, 9:51 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X