Just In
Don't Miss!
- News
ಹುಣಸೋಡು ಜಿಲೆಟಿನ್ ಸ್ಪೋಟ: ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ
- Sports
ಯುವರಾಜ್ ಸಿಂಗ್ ಕೋಚಿಂಗ್ ಬಹಳ ಉಪಯೋಗಕ್ಕೆ ಬಂತು: ಗಿಲ್
- Lifestyle
ಕೊಲೆಸ್ಟ್ರಾಲ್ ಹೆಚ್ಚಾಗಿದೆಯೇ? ಈ ಆಹಾರ ಸೇವಿಸಿ
- Education
RITES Limited Recruitment 2021: ವಿವಿಧ 9 ಹುದ್ದೆಗಳಿಗೆ ಅರ್ಜಿ ಆಹ್ವಾನ
- Movies
ದುಬಾರಿ ವಿವಾಹ; ವರುಣ್ ಧವನ್ ಮದುವೆ ನಡೆಯುತ್ತಿರುವ ಐಷಾರಾಮಿ ಹೋಟೆಲ್ ಗೆ ಇಷ್ಟೊಂದು ಖರ್ಚು ಮಾಡುತ್ತಿದ್ದಾರಾ?
- Finance
ಬಜೆಟ್ 2021: ಜ. 23ರಂದು ಹಲ್ವಾ ಕಾರ್ಯಕ್ರಮ- ಇದೇನು, ಎತ್ತ?
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಠಾಣೆಗಳಲ್ಲಿರುವ ವಾಹನಗಳನ್ನು ಮಾರಾಟ ಮಾಡಲು ಮುಂದಾದ ಪೊಲೀಸರು
ನಗರದ ವಿವಿಧ ಪೊಲೀಸ್ ಠಾಣೆಗಳಲ್ಲಿರುವ 2 ಸಾವಿರಕ್ಕೂ ಹೆಚ್ಚು ವಾಹನಗಳನ್ನು ಮಾರಾಟ ಮಾಡಲು ಹೈದರಾಬಾದ್ ಪೊಲೀಸರು ಹರಾಜು ಪ್ರಕ್ರಿಯೆಯನ್ನು ಆರಂಭಿಸುತ್ತಿದ್ದಾರೆ.

ಹೈದರಾಬಾದ್ ಪೊಲೀಸ್ ಆಯುಕ್ತರು ಇತ್ತೀಚೆಗೆ ಸಂಬಂಧಪಟ್ಟ ವಾಹನ ಮಾಲೀಕರಿಗೆ ವಾಹನದ ಮಾಲೀಕತ್ವಕ್ಕೆ ಸಂಬಂಧಿಸಿದ ದಾಖಲೆಗಳನ್ನು ಸಲ್ಲಿಸುವಂತೆ ನೋಟಿಸ್ ನೀಡಿದ್ದಾರೆ. 175 ದ್ವಿಚಕ್ರ ವಾಹನಗಳ ಜೊತೆಗೆ ಎಂಜಿನ್ ಹಾಗೂ ಚಾಸಿಸ್ ನಂಬರಿಗೆ ಸಂಬಂಧಿಸಿದ ದಾಖಲೆಗಳನ್ನು ಸಹ ಸಲ್ಲಿಸುವಂತೆ ಸೂಚಿಸಲಾಗಿದೆ. ವಾಹನದ ಮಾಲೀಕರು ಯಾರೂ ಇಲ್ಲದಿದ್ದರೆ ಪೊಲೀಸರು ಈ ವಾಹನಗಳನ್ನು ಹರಾಜು ಹಾಕಲಿದ್ದಾರೆ.

ಸಂಬಂಧಪಟ್ಟ ದಾಖಲೆಗಳನ್ನು ಸಲ್ಲಿಸಲು ಪೊಲೀಸರು ವಾಹನ ಮಾಲೀಕರಿಗೆ 6 ತಿಂಗಳು ಕಾಲಾವಕಾಶ ನೀಡಿದ್ದಾರೆ. ಹೈದರಾಬಾದ್ ನಗರ ಪೊಲೀಸ್ ಕಾಯ್ದೆಯ ಪ್ರಕಾರ ಪೊಲೀಸ್ ಠಾಣೆಗಳಲ್ಲಿ ವಶಪಡಿಸಿಕೊಂಡ ವಾಹನಗಳನ್ನು ಹರಾಜು ಮಾಡುವ ಅಧಿಕಾರವನ್ನು ಪೊಲೀಸ್ ಆಯುಕ್ತರಿಗೆ ನೀಡುತ್ತದೆ.
MOSTREAD: ಟ್ರ್ಯಾಕ್ಟರ್‌ಗಳ ಹಿಂಭಾಗದಲ್ಲಿ ದೊಡ್ಡ ಗಾತ್ರದ ಟಯರ್‌ಗಳಿರಲು ಕಾರಣಗಳಿವು

ಪೊಲೀಸ್ ಠಾಣೆಯಲ್ಲಿರುವ ವಾಹನಗಳಿಂದಾಗಿ ಜಾಗದ ಸಮಸ್ಯೆ ಎದುರಾಗಿದೆ. ಸಣ್ಣ ಪೊಲೀಸ್ ಠಾಣೆಗಳಲ್ಲಿ ವಾಹನಗಳನ್ನು ಇಟ್ಟುಕೊಳ್ಳುವುದು ತ್ರಾಸದ ಕೆಲಸ. ವಿಚಾರಣೆ ಮುಗಿದು ಆದೇಶ ಹೊರ ಬಂದ ನಂತರವೂ ಅನೇಕ ವಾಹನ ಮಾಲೀಕರು ಪೊಲೀಸ್ ಠಾಣೆಯಿಂದ ವಾಹನಗಳನ್ನು ಪಡೆಯುತ್ತಿಲ್ಲ.

ಪೊಲೀಸ್ ಠಾಣೆಯಲ್ಲಿ ದ್ವಿಚಕ್ರ ಹಾಗೂ ತ್ರಿಚಕ್ರ ವಾಹನಗಳು ಹೆಚ್ಚಿನ ಸಂಖ್ಯೆಯಲ್ಲಿ ಕಂಡುಬಂದಿವೆ. ಕಾನೂನು ಪ್ರಕ್ರಿಯೆಯನ್ನು ಪೂರ್ಣಗೊಳಿಸದೆ ಪೊಲೀಸರು ಅವುಗಳನ್ನು ಮಾರಾಟ ಮಾಡುವಂತಿಲ್ಲ. ಈ ಸಮಸ್ಯೆಯನ್ನು ನಿಭಾಯಿಸಿದ ನಂತರ ವಶಪಡಿಸಿಕೊಂಡ ವಾಹನಗಳನ್ನು ತೆರವುಗೊಳಿಸಬಹುದು.
MOSTREAD: ಚಿಕ್ಕ ಜಾಗದಲ್ಲಿ ದೊಡ್ಡ ಕಾರನ್ನು ಪಾರ್ಕ್ ಮಾಡಿದ ಅಪ್ರತಿಮ ಚಾಲಕನನ್ನು ಸನ್ಮಾನಿಸಿದ ಟೊಯೊಟಾ ಡೀಲರ್

ಅನೇಕ ಪೊಲೀಸ್ ಠಾಣೆಗಳಲ್ಲಿ ವಾಹನಗಳ ನಿಲುಗಡೆಗೆ ಸ್ಥಳವಕಾಶವಿಲ್ಲದೇ ವಾಹನಗಳು ಹಾಳಾಗುತ್ತಿವೆ. ಹೈದರಾಬಾದ್ ಪೊಲೀಸರಂತೆ ಮಹಾರಾಷ್ಟ್ರ ಪೊಲೀಸರು ಸಹ 2,000ಕ್ಕೂ ಹೆಚ್ಚು ವಾಹನಗಳ ಹರಾಜು ಪ್ರಕ್ರಿಯೆಯನ್ನು ಆರಂಭಿಸಿದ್ದಾರೆ. ಇದಕ್ಕಾಗಿ ಮಹಾರಾಷ್ಟ್ರ ಪೊಲೀಸರು ಸಾಮಾಜಿಕ ಸೇವಾ ಸಂಸ್ಥೆಗಳ ನೆರವನ್ನು ಪಡೆಯುತ್ತಿದ್ದಾರೆ.

ಸಂಚಾರ ನಿಯಮಗಳನ್ನು ಸುಗಮವಾಗಿ ಜಾರಿಗೊಳಿಸಲು ದೆಹಲಿ ಪೊಲೀಸರು ಮಂಗಳವಾರದಿಂದ ಹೈ ಸೆಕ್ಯೂರಿಟಿ ನಂಬರ್ ಪ್ಲೇಟ್ ಹೊಂದಿಲ್ಲದ ವಾಹನಗಳಿಗೆ ದಂಡ ವಿಧಿಸುತ್ತಿದ್ದಾರೆ. ದೆಹಲಿಯ ಎಲ್ಲಾ ವಾಹನಗಳು ಹೈ ಸೆಕ್ಯೂರಿಟಿ ನಂಬರ್ ಪ್ಲೇಟ್ ಹೊಂದಿರುವುದು ಕಡ್ಡಾಯವೆಂದು ದೆಹಲಿ ಪೊಲೀಸರು ಈ ಹಿಂದೆಯೇ ನೋಟಿಸ್‌ನಲ್ಲಿ ತಿಳಿಸಿದ್ದರು.
MOSTREAD: ಲಾಕ್‌ಡೌನ್ ನಿಂದ ಕೆಲಸ ಕಳೆದುಕೊಂಡವ ಇಂದು ವಿಶ್ವ ವಿಖ್ಯಾತ ವ್ಯಕ್ತಿ

ಹೈ ಸೆಕ್ಯೂರಿಟಿ ನಂಬರ್ ಪ್ಲೇಟ್ ಹೊಂದಿಲ್ಲದ ವಾಹನಗಳಿಗೆ ರೂ.5,500ಗಳ ದಂಡ ವಿಧಿಸಲಾಗುತ್ತದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. 2018ರ ಅಕ್ಟೋಬರ್‌ನಲ್ಲಿ ಎಲ್ಲಾ ರಾಜ್ಯಗಳಲ್ಲಿ ಹೈ ಸೆಕ್ಯೂರಿಟಿ ನಂಬರ್ ಪ್ಲೇಟ್ ಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವಂತೆ ಸುಪ್ರೀಂ ಕೋರ್ಟ್ ಆದೇಶ ನೀಡಿತ್ತು.

ಇದರ ಹೊರತಾಗಿಯೂ, ದೆಹಲಿಯಲ್ಲಿ ಅತಿ ಕಡಿಮೆ ಸಂಖ್ಯೆಯ ವಾಹನಗಳು ಹೈ ಸೆಕ್ಯೂರಿಟಿ ನಂಬರ್ ಪ್ಲೇಟ್ ಗಳನ್ನು ಹೊಂದಿವೆ. ದೆಹಲಿ ಸಾರಿಗೆ ಇಲಾಖೆಯ ಪ್ರಕಾರ 40 ಲಕ್ಷಕ್ಕೂ ಹೆಚ್ಚು ದ್ವಿಚಕ್ರ ಹಾಗೂ ನಾಲ್ಕು ಚಕ್ರ ವಾಹನಗಳು ಹೈ ಸೆಕ್ಯೂರಿಟಿ ನಂಬರ್ ಪ್ಲೇಟ್ ಇಲ್ಲದೇ ಸಂಚರಿಸುತ್ತಿವೆ.
MOSTREAD: 13 ವರ್ಷಗಳಲ್ಲಿ 10 ಲಕ್ಷ ಕಿ.ಮೀ ಸಂಚರಿಸಿದ ಟೊಯೊಟಾ ಇನೋವಾ ಕಾರು

2019ರ ಏಪ್ರಿಲ್ 1ರ ಮೊದಲು ಖರೀದಿಸಿದ ವಾಹನಗಳಲ್ಲಿ ಹೊಸ ನಂಬರ್ ಪ್ಲೇಟ್ ಹಾಗೂ ಹೊಲೊಗ್ರಾಮ್ ಸ್ಟಿಕ್ಕರ್ ಅಳವಡಿಸುವುದು ಕಡ್ಡಾಯವಾಗಿದೆ. 2019ರ ಏಪ್ರಿಲ್ 1ರ ನೋಂದಾಯಿಸಲಾದ ವಾಹನಗಳಲ್ಲಿ ವಿತರಕರು ಹೊಸ ನಂಬರ್ ಪ್ಲೇಟ್ ಹಾಗೂ ಹೊಲೊಗ್ರಾಮ್ ಸ್ಟಿಕ್ಕರ್‌ಗಳನ್ನು ಅಳವಡಿಸಿ ಮಾರಾಟ ಮಾಡುತ್ತಿದ್ದಾರೆ.

ಹೈ ಸೆಕ್ಯೂರಿಟಿ ನಂಬರ್ ಪ್ಲೇಟ್ ಗಳು ಸಾಮಾನ್ಯ ನಂಬರ್ ಪ್ಲೇಟ್ ಅನ್ನು ಹೋಲುತ್ತವೆಯಾದರೂ ಅದರ ತಾಂತ್ರಿಕ ಲಕ್ಷಣಗಳು ವಿಭಿನ್ನವಾಗಿವೆ. ಹೈ ಸೆಕ್ಯುರಿಟಿ ನಂಬರ್ ಪ್ಲೇಟ್ ಕ್ರೋಮಿಯಂ ಹೊಲೊಗ್ರಾಮ್ ಸ್ಟಿಕ್ಕರ್ ಹೊಂದಿದ್ದು, ಅದರಲ್ಲಿ ವಾಹನಕ್ಕೆ ಸಂಬಂಧಿಸಿದ ರಿಜಿಸ್ಟ್ರೇಷನ್ ನಂಬರ್, ಎಂಜಿನ್ ನಂಬರ್ ಹಾಗೂ ಚಾಸಿಸ್ ನಂಬರ್ ಗಳನ್ನು ನಮೂದಿಸಲಾಗಿರುತ್ತದೆ.
MOSTREAD: ಇನ್ನು ಮುಂದೆ ಈ ನಗರಗಳಲ್ಲಿ ಡೀಸೆಲ್ ವಾಹನಗಳನ್ನು ಮಾರಾಟ ಮಾಡುವಂತಿಲ್ಲ

ಹೊಲೊಗ್ರಾಮ್ ಸ್ಟಿಕ್ಕರ್‌ನಲ್ಲಿ ಈ ಮಾಹಿತಿಯನ್ನು ಮಿಷಿನ್ ಮೂಲಕ ದಾಖಲಿಸಲಾಗುತ್ತದೆ. ಇವುಗಳನ್ನು ವಿಶೇಷವಾಗಿ ವಿನ್ಯಾಸಗೊಳಿಸಲಾದ ಯಂತ್ರದಿಂದ ಮಾತ್ರ ಓದಬಹುದು. ಈ ಹೊಲೊಗ್ರಾಮ್ ಸ್ಟಿಕ್ಕರ್ ಅನ್ನು ಹಾಟ್-ಸ್ಟ್ಯಾಂಪಿಂಗ್ ಮೂಲಕ ಅಳವಡಿಸಲಾಗುತ್ತದೆ.