ಲಾಕ್‌ಡೌನ್ ನಿಯಮಗಳನ್ನು ಉಲ್ಲಂಘಿಸಿದ ಮಾದಕ ನಟಿ..!

ಕೋವಿಡ್ -19 ಕಾರಣಕ್ಕೆ ದೇಶದಲ್ಲೆಡೆ ಲಾಕ್‌ಡೌನ್ ಇನ್ನೂ ಜಾರಿಯಲ್ಲಿದೆ. ಸರ್ಕಾರವು ದೇಶವನ್ನು ಗ್ರೀನ್ ಝೋನ್, ರೆಡ್ ಝೋನ್ ಹಾಗೂ ಆರೇಂಜ್ ಝೋನ್‌ಗಳೆಂದು ವಿಂಗಡಿಸಿದ್ದು, ನಿಧಾನಕ್ಕೆ ಲಾಕ್‌ಡೌನ್ ಅನ್ನು ತೆರವುಗೊಳಿಸುವ ಚಿಂತನೆಯಲ್ಲಿದೆ. ಲಾಕ್‌ಡೌನ್ ಅವಧಿಯಲ್ಲಿ ಜನರು ಮನೆಯಿಂದ ಹೊರಬರುವುದನ್ನು ನಿಷೇಧಿಸಲಾಗಿದೆ.

ಲಾಕ್‌ಡೌನ್ ನಿಯಮಗಳನ್ನು ಉಲ್ಲಂಘಿಸಿದ ಮಾದಕ ನಟಿ..!

ಮಹಾರಾಷ್ಟ್ರದಲ್ಲಿ ಕರೋನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಅದರಲ್ಲೂ ಮುಂಬೈ ನಗರವು ಕರೋನಾದಿಂದ ಹೆಚ್ಚು ತತ್ತರಿಸಿದೆ. ಕರೋನಾ ವಿರುದ್ಧದ ಹೋರಾಟದಲ್ಲಿ ಪೊಲೀಸರು, ವೈದ್ಯರು 24 ಗಂಟೆಗಳ ಕಾಲ ಕೆಲಸ ಮಾಡುತ್ತಿದ್ದು, ಜನರನ್ನು ಮನೆಯಲ್ಲಿಯೇ ಇರುವಂತೆ ಸೂಚಿಸಲಾಗಿದೆ. ಆದರೆ ಕೆಲವರು ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿಲ್ಲ.

ಲಾಕ್‌ಡೌನ್ ನಿಯಮಗಳನ್ನು ಉಲ್ಲಂಘಿಸಿದ ಮಾದಕ ನಟಿ..!

ಲಾಕ್‌ಡೌನ್ ಅವಧಿಯಲ್ಲಿ ನಟಿ ಪೂನಂ ಪಾಂಡೆರವರು ಮುಂಬೈನಲ್ಲಿ ಅನಗತ್ಯವಾಗಿ ಓಡಾಡುತ್ತಿರುವುದು ಕಂಡುಬಂದಿದೆ. ಈ ಕಾರಣಕ್ಕೆ ಆಕೆಯನ್ನು ಬಂಧಿಸಿರುವ ಪೊಲೀಸರು ಆಕೆಯ ಬಿಎಂಡಬ್ಲ್ಯು ಕಾರನ್ನು ವಶಕ್ಕೆ ಪಡೆದಿದ್ದಾರೆ. ಅವರು ವಿನಾಕಾರಣ ತಿರುಗಾಡುತ್ತಿದ್ದ ವಿಷಯ ಬೆಳಕಿಗೆ ಬಂದಿದೆ.

MOST READ:ಕರೋನಾದಿಂದ ಬೈಕ್ ಕಳೆದುಕೊಂಡ ಯುವಕನಿಗೆ ಸರ್ ಪ್ರೈಸ್ ಗಿಫ್ಟ್ ನೀಡಿದ ಟಿವಿಎಸ್

ಲಾಕ್‌ಡೌನ್ ನಿಯಮಗಳನ್ನು ಉಲ್ಲಂಘಿಸಿದ ಮಾದಕ ನಟಿ..!

ಪೂನಂ ಪಾಂಡೆ ತನ್ನ ಸ್ನೇಹಿತ ಸ್ಯಾಮ್ ಅಹ್ಮದ್ ಅವರೊಂದಿಗೆ ಐಷಾರಾಮಿ ಬಿಎಂಡಬ್ಲ್ಯು 5 ಸೀರಿಸ್ ಕಾರಿನಲ್ಲಿ ತಿರುಗಾಡುತ್ತಿದ್ದಾಗ ಪೊಲೀಸರಿಗೆ ಸಿಕ್ಕಿ ಬಿದ್ದಿದ್ದಾರೆ. ಮುಂಬೈನ ಮೆರೈನ್ ಡ್ರೈವ್ ಪೊಲೀಸರು ಪ್ರಕರಣ ದಾಖಲಿಸಿ, ನಂತರ ಇಬ್ಬರನ್ನೂ ಪೊಲೀಸರು ಬಿಡುಗಡೆ ಮಾಡಿದ್ದಾರೆ.

ಲಾಕ್‌ಡೌನ್ ನಿಯಮಗಳನ್ನು ಉಲ್ಲಂಘಿಸಿದ ಮಾದಕ ನಟಿ..!

ಅವರು ಪ್ರಯಾಣಿಸುತ್ತಿದ್ದ ಬಿಎಂಡಬ್ಲ್ಯು 5 ಸೀರಿಸ್ ಸೆಡಾನ್ ಕಾರ್ ಅನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಪೂನಂ ಪಾಂಡೆ ಹಾಗೂ ಆಕೆಯ ಸ್ನೇಹಿತನ ವಿರುದ್ಧ ರಾಷ್ಟ್ರೀಯ ವಿಪತ್ತು ನಿಯಮ ಕಾಯ್ದೆಯ ಸೆಕ್ಷನ್ 269 ಹಾಗೂ ಸೆಕ್ಷನ್ 188 ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

MOST READ:ಮನೆ ತಲುಪಲು 1800 ಕಿ.ಮೀ ಸೈಕಲ್ ತುಳಿದ ಯುವಕ..!

ಲಾಕ್‌ಡೌನ್ ನಿಯಮಗಳನ್ನು ಉಲ್ಲಂಘಿಸಿದ ಮಾದಕ ನಟಿ..!

ಪೂನಂ ಪಾಂಡೆ ಇಂತಹ ಗಿಮಿಕ್‌ಗಳನ್ನು ಮಾಡುತ್ತಿರುವುದು ಇದೇ ಮೊದಲಲ್ಲ. ಈ ಹಿಂದೆಯೂ ತನ್ನ ಅಜಾಗರೂಕ ಕೆಲಸಗಳಿಂದಾಗಿ ಸುದ್ದಿ ಮಾಧ್ಯಮಗಳಲ್ಲಿ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಸುದ್ದಿಯಲ್ಲಿರುತ್ತಾರೆ. ಪೊಲೀಸರು ಇದುವರೆಗೂ ಲಾಕ್‌ಡೌನ್ ನಿಯಮಗಳನ್ನು ಉಲ್ಲಂಘಿಸಿರುವ ಹಲವಾರು ಜನರ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ.

ಲಾಕ್‌ಡೌನ್ ನಿಯಮಗಳನ್ನು ಉಲ್ಲಂಘಿಸಿದ ಮಾದಕ ನಟಿ..!

ಲಾಕ್‌ಡೌನ್‌ ಕಾರಣಕ್ಕೆ ಬಹುತೇಕ ರಾಜ್ಯಗಳಲ್ಲಿ ಲಕ್ಷಾಂತರ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ವಾಹನಗಳನ್ನು ಲಾಕ್‌ಡೌನ್ ಮುಗಿದ ನಂತರ ಮಾಲೀಕರಿಗೆ ಹಿಂದಿರುಗಿಸಲಾಗುವುದು. ಮಹಾರಾಷ್ಟ್ರದ ಹೆಚ್ಚಿನ ಸ್ಥಳಗಳಲ್ಲಿ ಲಾಕ್‌ಡೌನ್ ನಿಯಮಗಳನ್ನು ಕಟ್ಟುನಿಟ್ಟಾಗಿ ಅನುಸರಿಸಲಾಗುತ್ತಿದೆ.

MOSTREAD: ನಟ ವಿಕ್ರಮ್‌ಗಾಗಿ ತಯಾರಾಯ್ತು ವಿಶೇಷ ಕಾರವ್ಯಾನ್

ಲಾಕ್‌ಡೌನ್ ನಿಯಮಗಳನ್ನು ಉಲ್ಲಂಘಿಸಿದ ಮಾದಕ ನಟಿ..!

ಇತ್ತೀಚೆಗೆ ಮಹಾರಾಷ್ಟ್ರದ ನಾಗ್ಪುರದಲ್ಲಿ ಇಬ್ಬರು ಯುವತಿಯರು ಲಾಕ್‌ಡೌನ್ ನಡುವೆಯೂ ರಸ್ತೆಗಿಳಿದು ಪೊಲೀಸರಿಂದ ತಪ್ಪಿಸಿಕೊಳ್ಳಲು ಯತ್ನಿಸಿದ್ದರು. ಪೊಲೀಸರು ಅವರನ್ನು ಬಂಧಿಸಿ, ಅವರು ಚಾಲನೆ ಮಾಡುತ್ತಿದ್ದ ಸ್ಕೂಟರ್ ಅನ್ನು ವಶಕ್ಕೆ ಪಡೆದಿದ್ದರು.

More from DriveSpark

Article Published On: Tuesday, May 12, 2020, 16:54 [IST]
English summary
Poonam Pandey violates lockdown regulations drives out in BMW, cops seize vehicle. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+