ಮಹೀಂದ್ರಾದ 5-ಸ್ಟಾರ್ ಸೇಫ್ಟಿ ಕಾರು ಖರೀದಿಸಿದ ಸುಂದರ ರೂಪದರ್ಶಿ.. ಕೇಕ್ ಕಟ್ ಮಾಡಿ ಸಂಭ್ರಮಾಚರಣೆ!
ಕೇರಳದ ಎರ್ನಾಕುಲಂ ಮೂಲದ ವೀಣಾ ಮುಕುಂದನ್ (Veena Mukundan), ಜನಪ್ರಿಯ ಸೊಷಿಯಲ್ ಮೀಡಿಯಾ ಇನ್‌ಫ್ಲ್ಯುಯೆನ್ಸರ್, ಮಾಡೆಲ್ ಹಾಗೂ ಆ್ಯಂಕರ್ ಆಗಿ ಗುರುತಿಸಿಕೊಂಡಿದ್ದಾರೆ. 2016ರಲ್ಲಿ 'ಮನೋರಮಾ ಮೆಟ್ರೋ ಕ್ವೀನ್' ಸ್ಪರ್ಧೆ ವಿಜೇತರಾದ ಬಳಿಕ ಅವರ ಅದೃಷ್ಟವೇ ಬದಲಾಗಿ ಹೋಯಿತು. ವೃತ್ತಿ ಬದುಕಿನ ಒಂದೊಂದೆ ಮೆಟ್ಟಿಲು ಹತ್ತಿದ ವೀಣಾ, ಸದ್ಯ ಜನಪ್ರಿಯ ಆ್ಯಂಕರ್ ಆಗಿದ್ದು, ವಿವಿಧ ಶೋಗಳನ್ನು ಮಾಡುವ ಮೂಲಕ ದೊಡ್ಡ ಸಂಖ್ಯೆಯ ಅಭಿಮಾನಿ ಬಳಗವನ್ನು ಹೊಂದಿದ್ದಾರೆ.
ಇತ್ತೀಚೆಗೆ ವೀಣಾ ಮುಕುಂದನ್ ಹೊಚ್ಚ ಹೊಸ ಮಹೀಂದ್ರಾ ಎಕ್ಸ್‌ಯುವಿ 3ಎಕ್ಸ್ಒ (Mahindra XUV 3XO) ಕಾರನ್ನು ಖರೀದಿ ಮಾಡಿದ್ದಾರೆ. ಅದಕ್ಕೆ ಸಂಬಂಧಿಸಿದಂತೆ ವಿಡಿಯೋವೊಂದನ್ನು ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಕೂಡ ಪೋಸ್ಟ್ ಮಾಡಿದ್ದರು. ಈ ವಿಡಿಯೋದಲ್ಲಿ ವೀಣಾ ಅವರು ಶೋರೂಂಗೆ ಬರುತ್ತಿರುವುದು.. ಕಾರನ್ನು ವಿತರಣೆ ಪಡೆಯುತ್ತಿರುವುದು ಹಾಗೂ ಕೇಕ್ ಕಟ್ ಮಾಡಿ ಸಂಭ್ರಮಿಸುತ್ತಿರುವುದನ್ನು ಕಾಣಬಹುದು.

ಆ್ಯಂಕರ್ ವೀಣಾ ಮುಕುಂದನ್ ಕಪ್ಪು (ಬ್ಲ್ಯಾಕ್) ಬಣ್ಣದ 'ಎಕ್ಸ್‌ಯುವಿ 3ಎಕ್ಸ್ಒ' ಎಸ್‌ಯುವಿ ಖರೀದಿ ಮಾಡಿದ್ದಾರೆ. ಸದ್ಯ, ದೇಶೀಯ ಮಾರುಕಟ್ಟೆಯಲ್ಲಿ ಈ ಕಾರು, ಕನಿಷ್ಠ ರೂ.7.79 ಲಕ್ಷ ಮತ್ತು ಗರಿಷ್ಠ ರೂ.15.49 ಲಕ್ಷ (ಎಕ್ಸ್ ಶೋರೂಂ) ದರವನ್ನು ಹೊಂದಿದೆ. ಎಂಎಕ್ಸ್1, ಎಂಎಕ್ಸ್2, ಎಂಎಕ್ಸ್3 & ಎಎಕ್ಸ್5 ಸೇರಿದಂತೆ ವಿವಿಧ ರೂಪಾಂತರಗಳನ್ನು (ವೇರಿಯೆಂಟ್) ಒಳಗೊಂಡಿದೆ.
ಈ ಕಾರು, ಹೊರಭಾಗದಲ್ಲಿ ಆಕರ್ಷಕ ವಿನ್ಯಾಸವನ್ನು ಹೊಂದಿದೆ. ಉತ್ತಮವಾಗಿರುವ ಎಲ್ಇಡಿ ಹೆಡ್‌ಲೈಟ್‌ಗಳು ಮತ್ತು ಇಂಟಿಗ್ರೇಟೆಡ್ ಡೇಟೈಮ್ ರನ್ನಿಂಗ್ ಲೈಟ್‌ಗಳನ್ನು ಪಡೆದಿದೆ. ಡೀಪ್ ಫಾರೆಸ್ಟ್, ಡ್ಯೂನ್ ಬೀಜ್ ಮತ್ತು ಎವರೆಸ್ಟ್ ವೈಟ್ ಸೇರಿದಂತೆ ವಿವಿಧ ಬಣ್ಣಗಳೊಂದಿಗೂ ಸಿಗುತ್ತದೆ. ಇದರಲ್ಲಿ 5 ಮಂದಿ ಸುಲಭವಾಗಿ ಓಡಾಟ ನಡೆಸಬಹುದು.

ನೂತನ ಎಸ್‌ಯುವಿ ವಿವಿಧ ಪವರ್‌ಟ್ರೇನ್‌ಗಳನ್ನು ಹೊಂದಿದೆ. ಇದರ 1.2-ಲೀಟರ್ ಪೆಟ್ರೋಲ್ ಎಂಜಿನ್ 110 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 200 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತದೆ. ಮತ್ತೊಂದು 1.2-ಲೀಟರ್ ಟಿಜಿಡಿಐ ಟರ್ಬೊ ಪೆಟ್ರೋಲ್ ಎಂಜಿನ್ 130 ಪಿಎಸ್ ಶಕ್ತಿ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 250 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುತ್ತದೆ.
ಇನ್ನೊಂದು 1.5-ಲೀಟರ್ ಡೀಸೆಲ್ ಎಂಜಿನ್ 117 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 300 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತದೆ. 6-ಸ್ಪೀಡ್ ಮ್ಯಾನುವಲ್ ಮತ್ತು 6-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್ ಆಯ್ಕೆಯನ್ನು ಹೊಂದಿದೆ. 17.96 ರಿಂದ 21.2 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ.
ಹೊಸ ಮಹೀಂದ್ರಾ ಎಕ್ಸ್‌ಯುವಿ 3ಎಕ್ಸ್ಒ ಕಾರು, ಇನ್ಫೋಟೈನ್‌ಮೆಂಟ್ ಸಿಸ್ಟಮ್ - ಇನ್ಸ್ಟ್ರುಮೆಂಟ್ ಕ್ಲಸ್ಟರ್‌ಗಾಗಿ ಡುಯಲ್ ಡಿಸ್‌ಪ್ಲೇಗಳು, ಮತ್ತು ಸನ್‌ರೂಫ್ ಒಳಗೊಂಡಂತೆ ಹಲವು ವೈಶಿಷ್ಟ್ಯಗಳನ್ನು ಪಡೆದಿದೆ. ಪ್ರಯಾಣಿಕರ ರಕ್ಷಣೆಗಾಗಿ 6-ಏರ್‌ಬ್ಯಾಗ್‌ಗಳು, ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) ಹಾಗೂ 360-ಡಿಗ್ರಿ ಕ್ಯಾಮೆರಾವನ್ನು ಪಡೆದಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications