Puneeth Rajkumar: ಬಾಲಿವುಡ್ ಸ್ಟಾರ್‌ಗಳಿಗೂ ಕಮ್ಮಿಯಿಲ್ಲ ನಮ್ಮ 'ಅಪ್ಪು'.. ಈ ಜನಪ್ರಿಯ ಬೈಕ್, ಕಾರುಗಳ ಒಡೆಯ!
ಅಭಿಮಾನಿಗಳ ಪ್ರೀತಿಯ ಅಪ್ಪು.. ಪವರ್‌ಸ್ಟಾರ್ ಪುನೀತ್ ರಾಜ್‌ಕುಮಾರ್ (Puneeth Rajkumar) ಅಗಲಿ ಇಂದಿಗೆ 3 ವರ್ಷಗಳಾಗಿವೆ. ಸಿನಿಮಾ ಮಾತ್ರವಲ್ಲದೇ ನಿಜ ಜೀವನದಲ್ಲೂ ಹೀರೋ ಆಗಿದ್ದ ಅವರು, ಸದ್ದಿಲ್ಲದೇ ಸಮಾಜ ಸೇವೆ ಮಾಡುತ್ತಿದ್ದರು. 2021ರ ಇದೇ ದಿನ ಅವರ ಹಠಾತ್ ನಿಧನ ಸಿನಿರಂಗ ಹಾಗೂ ಅಭಿಮಾನಿಗಳಿಗೆ ದೊಡ್ಡ ಆಘಾತ ಉಂಟು ಮಾಡಿತ್ತು. ಇದಾಗಿ ವರ್ಷಗಳು ಉರುಳಿದರೂ ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿರುವ ಪರಮಾತ್ಮನ ಸಮಾಧಿ ಸ್ಥಳಕ್ಕೆ ಭೇಟಿ ನೀಡುತ್ತಿರುವ ಅಭಿಮಾನಿಗಳ ಸಂಖ್ಯೆಯೇನು ಕಡಿಮೆಯಾಗಿಲ್ಲ. ಇಂದು ಮೂರನೇ ವರ್ಷದ ಪುಣ್ಯಸ್ಮರಣೆ ಹಿನ್ನೆಲೆ, ಅವರ ಕುಟುಂಬ ಸದಸ್ಯರೆಲ್ಲರೂ ಸಮಾಧಿ ಸ್ಥಳಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ.
ನಟ ಪುನೀತ್ ರಾಜ್‌ಕುಮಾರ್ ಅವರಿಗೆ ಬೈಕ್ ಮತ್ತು ಕಾರುಗಳ ಮೇಲೆ ವಿಶೇಷವಾದ ಪ್ರೀತಿಯಿತ್ತು. ಅವರು ಹಲವು ಐಷಾರಾಮಿ ಕಾರುಗಳ ಮಾಲೀಕರೂ ಆಗಿದ್ದರು. 2019ರ ಮಹಿಳಾ ದಿನದಂದು ಅಪ್ಪು ತಮ್ಮ ಪತ್ನಿ ಅಶ್ವಿನಿ ಅವರಿಗೆ ದುಬಾರಿ ಬೆಲೆಯ ಲ್ಯಾಂಬರ್ಗಿನಿ ಉರುಸ್ (Lamborghini Urus) ಎಸ್‌ಯುವಿಯನ್ನು ಉಡುಗೊರೆಯಾಗಿಯೂ ನೀಡಿದ್ದರು.

ಸದ್ಯ ದೇಶೀಯ ಮಾರುಕಟ್ಟೆಯಲ್ಲಿ ಖರೀದಿಗೆ ಸಿಗುವ ಈ 'ಲ್ಯಾಂಬರ್ಗಿನಿ ಉರುಸ್' ರೂ.4.18 ರಿಂದ ರೂ.4.57 ಕೋಟಿ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. ಪರ್ಫಾರ್ಮಂಟೆ & ಎಸ್ಇ ಎಂಬ 2 ಆಕರ್ಷಕ ರೂಪಾಂತರಗಳ (ವೇರಿಯೆಂಟ್) ಆಯ್ಕೆಯನ್ನು ಪಡೆದಿದೆ. ಇದರಲ್ಲಿ 5 ಮಂದಿ ಸುಲಭವಾಗಿ ಸಂಚಾರ ನಡೆಸಬಹುದು.
ಈ ಲ್ಯಾಂಬರ್ಗಿನಿ ಉರುಸ್ 4-ಲೀಟರ್ ಟ್ವಿನ್-ಟರ್ಬೊ ವಿ8 ಪೆಟ್ರೋಲ್ ಎಂಜಿನ್‌ನ್ನು ಒಳಗೊಂಡಿದೆ. 666 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 850 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುತ್ತದೆ. 8-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. 5.5 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. ಡುಯಲ್ ಟಚ್‌ಸ್ಕ್ರೀನ್ ಡಿಸ್‌ಪ್ಲೇ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ.

ಅಪ್ಪು ಆಡಿ ಕ್ಯೂ7 (Audi Q7) ಎಸ್‌ಯುವಿಯ ಮಾಲೀಕರೂ ಆಗಿದ್ದರು. ಪ್ರಸ್ತುತ ಇದೇ ಕಾರು, ರೂ.88.66 ರಿಂದ ರೂ.97.84 ಲಕ್ಷ ಎಕ್ಸ್ ಶೋರೂಂ ದರವನ್ನು ಪಡೆದಿದೆ. 3-ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್ ಹೊಂದಿದ್ದು, 340 ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 500 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತದೆ. 8-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್ ಆಯ್ಕೆಯನ್ನು ಒಳಗೊಂಡಿದೆ.
ನಟ ಪುನೀತ್ ರಾಜ್‌ಕುಮಾರ್ ಅವರ ಬಳಿ ಜಾಗ್ವಾರ್ ಎಕ್ಸ್‌ಎಫ್ (Jaguar XF) ಕಾರು ಸಹ ಇತ್ತು. ದೇಶೀಯ ಮಾರುಕಟ್ಟೆಯಲ್ಲಿ ಈ ಕಾರಿನ ಮಾರಾಟವನ್ನು ಸ್ಥಗಿತಗೊಳಿಸಲಾಗಿದೆ. ಕಡೆಯಾದಾಗಿ ರೂ.48.51 ರಿಂದ 76 ಲಕ್ಷ (ಎಕ್ಸ್ ಶೋರೂಂ) ಎಕ್ಸ್ ಶೋರೂಂ ಬೆಲೆಯಲ್ಲಿ ಖರೀದಿಗೆ ದೊರೆಯುತ್ತಿತ್ತು.

ಈ ಜಾಗ್ವಾರ್ ಎಕ್ಸ್‌ಎಫ್ ಕಾರು, 1997 ರಿಂದ 5000 ಸಿಸಿ ಸಾಮರ್ಥ್ಯದ ಪೆಟ್ರೋಲ್ ಹಾಗೂ ಡೀಸೆಲ್ ಎಂಜಿನ್ ಆಯ್ಕೆಯನ್ನು ಒಳಗೊಂಡಿತ್ತು. ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಹೊಂದಿತ್ತು. 225 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಪಡೆದಿತ್ತು. ಜೊತೆಗೆ ಹಲವು ಆಕರ್ಷಕ ವೈಶಿಷ್ಟ್ಯಗಳೊಂದಿಗೂ ಖರೀದಿಗೆ ದೊರೆಯುತ್ತಿತ್ತು. ಇವು ಮಾತ್ರವಲ್ಲದೆ, 'ಅಪ್ಪು' ರೇಂಜ್ ರೋವರ್ ವೋಗ್ ಮತ್ತು ಬಿಎಂಡಬ್ಲ್ಯೂ ಎಕ್ಸ್6 ಕಾರುಗಳಿಗೂ ಮಾಲೀಕರಾಗಿದ್ದರು.
ದುಬಾರಿ ಬೆಲೆಯ ಇಂಡಿಯನ್ ಸ್ಕೌಟ್ (Indian Scout) ಹೆಸರಿನ ಬೈಕ್‌ಗೂ ಪುನೀತ್ ರಾಜ್‌ಕುಮಾರ್ ಒಡೆಯರಾಗಿದ್ದರು. ಸದ್ಯ ಈ ಮೋಟಾರ್‌ಸೈಕಲ್, ರೂ.17.52 ರಿಂದ ರೂ.18.33 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. 1133 ಸಿಸಿ ಪೆಟ್ರೋಲ್ ಎಂಜಿನ್ ಒಳಗೊಂಡಿದ್ದು, 25 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. ಸುರಕ್ಷತೆಗಾಗಿ ಡಬಲ್ ಡಿಸ್ಕ್ ಬ್ರೇಕ್‌ಗಳನ್ನು ಪಡೆದಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications