ಸ್ವಾಮಿ ಅಯ್ಯಪ್ಪನ ಸನ್ನಿಧಿಯಲ್ಲಿ ರಾಷ್ಟ್ರಪತಿಗಳು ಬಳಸಿದ ಕಾರಿನ ಬಗ್ಗೆ ತಿಳಿದಿದೆಯೇ?

ಕೇರಳದ ಪತ್ತನಂತಿಟ್ಟ ಜಿಲ್ಲೆಯಲ್ಲಿರುವ ಶಬರಿಮಲೆ ಪ್ರಸಿದ್ದ ಯಾತ್ರಾ ಕ್ಷೇತ್ರವಾಗಿದೆ. ಅಯ್ಯಪ್ಪ ಸ್ವಾಮಿ ದರ್ಶನಕ್ಕಾಗಿ ಲಕ್ಷಾಂತರ ಸಂಖ್ಯೆಯಲ್ಲಿ ಭಕ್ತರು ಭೇಟಿ ನೀಡುತ್ತಾರೆ. ಸಾಮಾನ್ಯವಾಗಿ ನಡೆದುಕೊಂಡು ಅಥವಾ ಡೋಲಿಗಳ ನೆರವಿನಿಂದ ಯಾತ್ರಿಕರು ಶ್ರೀಕ್ಷೇತ್ರಕ್ಕೆ ತೆರಳುತ್ತಾರೆ. ಆದರೆ ಬುಧವಾರ ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Murmu) ಅವರು, ಫೋರ್ಸ್ ಗೂರ್ಖಾ ಕಾರಿನಲ್ಲಿ ರಸ್ತೆ ಮಾರ್ಗವಾಗಿ ದೇಗುಲವನ್ನು ತಲುಪಿದ್ದಾರೆ. ಈ ಮೂಲಕ ವಾಹನದಲ್ಲಿ ಅಯ್ಯಪ್ಪ ಸನ್ನಿಧಾನಕ್ಕೆ ತೆರಳಿದ ದೇಶದ ಮೊದಲ ರಾಷ್ಟ್ರಪತಿ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ. ಅವರ ಆರೋಗ್ಯ ಹಾಗೂ ಭದ್ರತೆಯ ಹಿತದೃಷ್ಟಿಯಿಂದ ಈ ಕಾರನ್ನು ಬಳಕೆ ಮಾಡಲಾಗಿದೆ ಎಂದು ವರದಿಯಾಗಿದೆ.

1973ರಲ್ಲಿ ಅಂದಿನ ರಾಷ್ಟ್ರಪತಿ ವಿ.ವಿ.ಗಿರಿ (V.V.Giri) ಡೋಲಿಯಲ್ಲಿ ಕುಳಿತುಕೊಂಡು ಅಯ್ಯಪ್ಪ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿದ್ದರು. ವಿಶೇಷವಾಗಿ ಅಲ್ಲಿನ ಸ್ಥಳೀಯರು ಬೆಟ್ಟದ ಮೇಲೆ ಸರಕು ಸರಂಜಾಮುಗಳನ್ನು ಸಾಗಿಸಾಲು ಟ್ರ್ಯಾಕ್ಟರ್‌ಗಳನ್ನು ಬಳಕೆ ಮಾಡುತ್ತಾರೆ. ಹೀಗಾಗಿ, ಶಬರಿಮಲೆ ಗಿರಿ ಏರಲು ಆಫ್-ರೋಡ್ ಚಾಲನೆಗೆ ಹೇಳಿ ಮಾಡಿಸಿದ ರೀತಿಯಲ್ಲಿರುವ 'ಫೋರ್ಸ್ ಗೂರ್ಖಾ' ಎಸ್‌ಯುವಿಯನ್ನು ರಾಷ್ಟ್ರಪತಿಗಳ ಸಂಚಾರಕ್ಕೆ ಉಪಯೋಗಿಸಲಾಗಿದೆ.

President Droupadi Murmu Travel Force Gurkha Suv Visit Sabarimala Ayyappa Temple Details

ಫೋರ್ಸ್ ಗೂರ್ಖಾ (Force Gurkha) ವಿಶೇಷತೆಗಳೇನು:

ಈ ಎಸ್‌ಯುವಿಯು ಸ್ಪರ್ಧಾತ್ಮಕ ಬೆಲೆಯಲ್ಲಿ ಗ್ರಾಹಕರ ಖರೀದಿಗೆ ದೊರೆಯುತ್ತದೆ. ಕನಿಷ್ಠ ರೂ.15.95 ಲಕ್ಷ ಹಾಗೂ ಗರಿಷ್ಠ ರೂ.17.27 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. 3 ಡೋರ್ ಮತ್ತು 5 ಡೋರ್ ಎಂಬ ಎರಡು ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿಯೂ ಸಿಗುತ್ತದೆ.

ಇದು ತುಂಬಾ ಅಚ್ಚುಕಟ್ಟಾದ ವಿನ್ಯಾಸ ಹೊಂದಿದ್ದು, ನೋಡುಗರ ಕಣ್ಣು ಕುಕ್ಕುವಂತಿದೆ. ಎಲ್ಇಡಿ ಹೆಡ್‌ಲೈಟ್‌ಗಳು, ಎಲ್ಇಡಿ ಡಿಆರ್‌ಎಲ್‌ಗ‌ಳು, ಫಾಗ್ ಲ್ಯಾಂಪ್‌ಗಳು, ಎಲ್ಇಡಿ ಟೈಲ್ ಲೈಟ್‌ಗಳು ಹಾಗೂ 18 ಇಂಚಿನ ಅಲಾಯ್ ವೀಲ್‌ಗಳನ್ನು ಒಳಗೊಂಡಿದೆ. ವೈಟ್, ಬ್ಲ್ಯಾಕ್, ಗ್ರೀನ್, ರೆಡ್ ಹಾಗೂ ಆರೆಂಜ್ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ.

President Droupadi Murmu Travel Force Gurkha Suv Visit Sabarimala Ayyappa Temple Details

ನೂತನ 'ಗೂರ್ಖಾ' 3 ಡೋರ್ ವಿಶಾಲವಾಗಿದೆ. 3,965 ಮಿ.ಮೀ ಉದ್ದ, 1,865 ಎಂಎಂ ಮಿ.ಮೀ ಮತ್ತು 2,080 ಮಿ.ಮೀ ಎತ್ತರವಿದೆ. ಜೊತೆಗಿದು 233 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 2,400 ಮಿ.ಮೀ ವೀಲ್‌ಬೇಸ್‌ನ್ನು ಹೊಂದಿದೆ.

ಅದೇ ರೀತಿಯಲ್ಲಿ 'ಗೂರ್ಖಾ' 5 ಡೋರ್ ಸಹ ದೊಡ್ಡ ಗಾತ್ರದಲ್ಲಿದೆ. 4,390 ಮಿ.ಮೀ ಉದ್ದ, 1,865 ಎಂಎಂ ಮಿ.ಮೀ ಮತ್ತು 2,095 ಮಿ.ಮೀ ಎತ್ತರವಿದೆ. 233 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ & 2,825 ಮಿ.ಮೀ ವೀಲ್‌ಬೇಸ್‌ನ್ನು ಒಳಗೊಂಡಿದೆ.

ಈ ಕಾರು ಬಲಿಷ್ಠವಾದ ಪವರ್‌ಟ್ರೇನ್‌ನ್ನು ಪಡೆದಿದೆ. 2.6-ಲೀಟರ್, 4-ಸಿಲಿಂಡರ್ ಡೀಸೆಲ್ ಎಂಜಿನ್ ಆಯ್ಕೆಯನ್ನು ಹೊಂದಿದೆ. 140 ಬಿಹೆಚ್‌ಪಿ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 320 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯವನ್ನು ಒಳಗೊಂಡಿದೆ. 5-ಸ್ಪೀಡ್ ಗೇರ್‌ಬಾಕ್ಸ್‌ನ್ನು ತನ್ನದಾಗಿಸಿಕೊಂಡಿದೆ.

ಇದು ಉತ್ತಮ ಇಂಧನ ದಕ್ಷತೆಗೂ ಹೆಸರುವಾಸಿಯಾಗಿದೆ. 9.5 ಕಿ.ಮೀವರೆಗೆ ಮೈಲೇಜ್ ಕೊಡುತ್ತದೆ. 4ಡಬ್ಲ್ಯೂಡಿ (4-ವೀಲ್ ಡ್ರೈವ್) ಟೆಕ್ನಾಲಜಿಯನ್ನು ಪಡೆದಿದೆ. 63.5 ಲೀಟರ್ ಸಾಮರ್ಥ್ಯದ ಫ್ಯುಯೆಲ್ ಟ್ಯಾಂಕ್‍ನ್ನು ಒಳಗೊಂಡಿದೆ. 150 ಕೆಎಂಪಿಹೆಚ್ ಸ್ಪೀಡ್‌ನ್ನು ಹೊಂದಿದೆ. 19 ಸೆಕೆಂಡುಗಳಲ್ಲಿ 0 ರಿಂದ 100 ಕೆಎಂಪಿಹೆಚ್ ವೇಗವನ್ನು ಪಡೆಯಲಿದೆ.

ಹೊಸ ಫೋರ್ಸ್ ಗೂರ್ಖಾ 4/ 7 ಆಸನ ಆಯ್ಕೆ ವ್ಯವಸ್ಥೆಯನ್ನು ಒಳಗೊಂಡಿದೆ. ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ (9 ಇಂಚು), ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್ ಮತ್ತು ಮ್ಯಾನುವಲ್ ಎಸಿ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ. ಸುರಕ್ಷತೆಯ ದೃಷ್ಟಿಯಿಂದ ಡುಯಲ್ ಫ್ರಂಟ್ ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) ಮತ್ತು ರೇರ್ ಪಾರ್ಕಿಂಗ್ ಸೆನ್ಸಾರ್‌ಗಳನ್ನು ಹೊಂದಿದೆ.

More from DriveSpark

Article Published On: Thursday, October 23, 2025, 11:31 [IST]
English summary
President droupadi murmu travel force gurkha suv visit sabarimala ayyappa temple details
Read more on offbeat india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+