ಲಾಕ್‌ಡೌನ್ ನಿಯಮ ಉಲ್ಲಂಘನೆ: ಭಾರೀ ಪ್ರಮಾಣದ ದಂಡ ವಿಧಿಸಿದ ಪೊಲೀಸರು
ಲಾಕ್‌ಡೌನ್ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ ಮೋಟಾರು ವಾಹನ (ಎಂವಿ) ಕಾಯ್ದೆಯಡಿ 1.28 ಲಕ್ಷ ವಾಹನಗಳನ್ನು ವಶಪಡಿಸಿಕೊಂಡು, ರೂ.5 ಕೋಟಿ ದಂಡ ವಿಧಿಸಲಾಗಿದೆ ಎಂದು ರಾಜಸ್ತಾನ ಪೊಲೀಸರ ವರದಿಯಲ್ಲಿ ಹೇಳಲಾಗಿದೆ. ರಾಜ್ಯದಲ್ಲಿ ಶಾಂತಿ ಉಲ್ಲಂಘನೆಗಾಗಿ 14,400 ಜನರನ್ನು ಬಂಧಿಸಲಾಗಿದೆ ಎಂದು ರಾಜಸ್ತಾನದ ಹೆಚ್ಚುವರಿ ಡಿಜಿಪಿ ಬಿ.ಎಲ್.ಸೋನಿರವರು ತಿಳಿಸಿದ್ದಾರೆ.

ಲಾಕ್‌ಡೌನ್ ಅವಧಿಯಲ್ಲಿ ನಿಯಮಗಳನ್ನು ಉಲ್ಲಂಘಿಸಿದ 5,600ಕ್ಕೂ ಹೆಚ್ಚು ಜನರ ವಿರುದ್ಧ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ, ಸಾಂಕ್ರಾಮಿಕ ಕಾಯ್ದೆ ಹಾಗೂ ಭಾರತೀಯ ದಂಡ ಸಂಹಿತೆಯಡಿಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದರ ಜೊತೆಗೆ ಕರೋನಾ ವಾರಿಯರ್ಸ್‌ಗಳ ಮೇಲೆ ಹಲ್ಲೆ ನಡೆಸಿದ 409 ಜನರನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ.

ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ, ವದಂತಿಗಳನ್ನು ಹಬ್ಬಿದ 199 ಜನರ ವಿರುದ್ಧ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ಸಮಾಜ ವಿರೋಧಿ ಚಟುವಟಿಕೆಗಳಲ್ಲಿ ಭಾಗವಹಿಸಿದ 280 ಜನರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
MOSTREAD: ರಾಷ್ಟ್ರೀಯ ಹೆದ್ದಾರಿ ನಿರ್ಮಾಣದಲ್ಲಿ ಹೊಸ ದಾಖಲೆ ಬರೆದ ಕೇಂದ್ರ ಸರ್ಕಾರ

ಲಾಕ್‌ಡೌನ್ ಅವಧಿಯಲ್ಲಿ ಸರಕುಗಳ ಬೆಲೆಗಳನ್ನು ಹೆಚ್ಚಿಸಿದ 121 ಜನರ ವಿರುದ್ಧ ಅಗತ್ಯ ಸರಕುಗಳ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಲಾಕ್‌ಡೌನ್ ಅವಧಿಯಲ್ಲಿ ಗ್ರೀನ್ ಝೋನ್ ಹಾಗೂ ಆರೇಂಜ್ ಝೋನ್‌ಗಳಲ್ಲಿ ಕೆಲವು ನಿರ್ಬಂಧಗಳೊಂದಿಗೆ ವಾಹನಗಳ ಓಡಾಟಕ್ಕೆ ಅನುಮತಿ ನೀಡಲಾಗಿದೆ.

ಈ ಕಾರಣಕ್ಕೆ ವಾಹನಗಳ ಸಂಚಾರವು ಹೆಚ್ಚಾಗಿದೆ. ಆದರೆ ರೆಡ್ ಝೋನ್‌ಗಳಲ್ಲಿ ವಾಣಿಜ್ಯ ಹಾಗೂ ಖಾಸಗಿ ವಾಹನಗಳ ಮೇಲಿನ ನಿಷೇಧ ಮುಂದುವರೆದಿದೆ. ಏಪ್ರಿಲ್ 20ರಿಂದ ಎಲ್ಲಾ ಟೋಲ್ ಪ್ಲಾಜಾಗಳಲ್ಲಿ ಶುಲ್ಕ ಪಾವತಿಯನ್ನು ಮರು ಆರಂಭಿಸಲಾಗಿದೆ. ಲಾಕ್‌ಡೌನ್‌ನಿಂದ ವಿನಾಯಿತಿ ಸಿಕ್ಕ ನಂತರ ಗುರುಗ್ರಾಮ-ಜೈಪುರ ಹೆದ್ದಾರಿಯಲ್ಲಿ ವಾಹನಗಳ ಓಡಾಟವು 95%ನಷ್ಟು ಹೆಚ್ಚಳವಾಗಿದೆ.
MOSTREAD: ಕರೋನಾ ವೈರಸ್ ಎಫೆಕ್ಟ್: ಭಾರೀ ಪ್ರಮಾಣದಲ್ಲಿ ಕುಸಿದ ಇಂಧನ ಮಾರಾಟ

ಲಾಕ್‌ಡೌನ್‌ನಿಂದ ತುರ್ತು ಸೇವೆ ವಾಹನಗಳಿಗೆ ವಿನಾಯಿತಿ ನೀಡಲಾಗಿದೆ. ಇವುಗಳಲ್ಲಿ ವೈದ್ಯಕೀಯ, ಪಶುವೈದ್ಯಕೀಯ ಹಾಗೂ ಅಗತ್ಯ ವಸ್ತುಗಳ ವಿತರಣಾ ವಾಹನಗಳು ಸೇರಿವೆ. ಕರೋನಾ ವೈರಸ್ ಸೋಂಕು ಹೆಚ್ಚಾಗಿರುವ ಪ್ರದೇಶಗಳಲ್ಲಿ ನಿರ್ಬಂಧಗಳು ಮುಂದುವರೆಯಲಿವೆ ಎಂದು ಕೇಂದ್ರ ಸರ್ಕಾರ ಹೇಳಿದೆ.

ವಾಹನಗಳ ಸಂಚಾರಕ್ಕೆ ಕೇಂದ್ರ ಸರ್ಕಾರವು ಹಲವು ಮಾರ್ಗಸೂಚಿಗಳ ಹೊರಡಿಸಿದೆ. ಈ ಮಾರ್ಗಸೂಚಿಗಳನ್ನು ಉಲ್ಲಂಘಿಸಿದ ವಾಹನಗಳ ಮೇಲೆ ಪೊಲೀಸರು ಕಠಿಣ ಕ್ರಮಗಳನ್ನು ತೆಗೆದುಕೊಂಡಿದ್ದಾರೆ.
MOST READ:ಕರೋನಾದಿಂದ ಬೈಕ್ ಕಳೆದುಕೊಂಡ ಯುವಕನಿಗೆ ಸರ್ ಪ್ರೈಸ್ ಗಿಫ್ಟ್ ನೀಡಿದ ಟಿವಿಎಸ್

ತಮಿಳುನಾಡಿನಲ್ಲಿ ಲಾಕ್‌ಡೌನ್ ಉಲ್ಲಂಘಿಸಿದ 2.5 ಲಕ್ಷ ವಾಹನಗಳಿಂದ ರೂ.3.13 ಕೋಟಿ ದಂಡ ವಸೂಲಿ ಮಾಡಲಾಗಿದೆ. ತೆಲಂಗಾಣದಲ್ಲಿ ಏಪ್ರಿಲ್ 21ರವರೆಗೆ ಲಾಕ್‌ಡೌನ್ ನಿಯಮಗಳನ್ನು ಉಲ್ಲಂಘಿಸಿದ 1.20 ಲಕ್ಷ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ.


Click it and Unblock the Notifications