ಹೊಸ ಕಾರು ಖರೀದಿಸಿದ ಯುವರಾಜ..11.4 ಕಿ.ಮೀ ಮೈಲೇಜ್, 5-ಸೀಟರ್.. ಬೆಲೆ ಕೇಳಿದ್ರೆ ಶಾಕ್ ಆಗ್ತೀರಾ?
ಭಾರತದಲ್ಲಿ ಹಲವಾರು ರಾಜಮನೆತನಗಳಿದ್ದು, ಈಗಲೂ ವಿಲಾಸಿ ಜೀವನ ನಡೆಸುತ್ತಿದ್ದಾರೆ. ಇತ್ತೀಚೆಗೆ ಗುಜರಾತ್‌ನ ರಾಜ್‌ಕೋಟ್ ಸಂಸ್ಥಾನದ ಯುವರಾಜ ಜೈದೀಪ್ ಸಿನ್ಹಾ ಜಡೇಜಾ (Jaideep Sinh Jadeja) ಹೊಚ್ಚ ಹೊಸ ಜೀಪ್ ರಾಂಗ್ಲರ್ ವಿಲ್ಲಿಸ್ 41 (Jeep Wrangler Willys 41) ಆಫ್-ರೋಡ್ ಎಸ್‌ಯುವಿಯನ್ನು ಖರೀದಿ ಮಾಡಿದ್ದಾರೆ. ನೂತನ ಕಾರನ್ನು ವಿತರಣೆ ಪಡೆಯುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲೂ ವೈರಲ್ ಆಗುತ್ತಿದೆ.
ಜೀಪ್ ರಾಂಗ್ಲರ್ ವಿಲ್ಲಿಸ್ 41 ವಿಶೇಷತೆಗಳೇನು:
ಇದೊಂದು ಸ್ಪೆಷಲ್ ಎಡಿಷನ್ (Special Edition) ಮಾಡೆಲ್ ಆಗಿದೆ. ಸ್ಟ್ಯಾಂಡರ್ಡ್ 'ಜೀಪ್ ರಾಂಗ್ಲರ್'ಗೆ ಹೋಲಿಕೆ ಮಾಡಿದರೆ, ವಿನ್ಯಾಸ ಹಾಗೂ ವೈಶಿಷ್ಟ್ಯಗಳಲ್ಲಿ ಒಂದಷ್ಟು ಬದಲಾವಣೆಗಳನ್ನು ಪಡೆದಿದೆ. 1941ರ 'ವಿಲ್ಲಿಸ್ ಮಿಲಿಟರಿ ಜೀಪ್' ಮಾಡೆಲ್‌ಗೆ ಗೌರವಾರ್ಥವಾಗಿ ಈ ಸ್ಪೆಷಲ್ ಎಡಿಷನ್‌ನ್ನು ಅಭಿವೃದ್ಧಿಪಡಿಸಲಾಗಿದ್ದು, ಕೇವಲ 30 ಯುನಿಟ್‌ಗಳನ್ನು ಮಾತ್ರ ತಯಾರಿಸಲಾಗಿದೆ.

ನೂತನ 'ಜೀಪ್ ರಾಂಗ್ಲರ್ ವಿಲ್ಲಿಸ್ 41 ಸ್ಪೆಷಲ್ ಎಡಿಷನ್' ಐಷಾರಾಮಿ ಆಫ್ ಎಸ್‌ಯುವಿಯಾಗಿದ್ದು, ದುಬಾರಿ ಬೆಲೆಯಲ್ಲಿ ಗ್ರಾಹಕರ ಖರೀದಿಗೆ ಲಭ್ಯವಿದೆ. ರೂ.75 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. 'ಆಲಿವ್ ಗ್ರೀನ್' ಎಂಬ ಬಣ್ಣದ ಆಯ್ಕೆಯೊಂದಿಗೆ ಸಿಗುತ್ತದೆ.
ಈ ಎಸ್‌ಯುವಿಯು ತುಂಬಾ ಅಚ್ಚುಕಟ್ಟಾದ ವಿನ್ಯಾಸವನ್ನು ಒಳಗೊಂಡಿದ್ದು, ನೋಡುಗರ ಕಣ್ಣು ಕುಕ್ಕುವಂತಿದೆ. ಬಾಕ್ಸಿ ಬಾಡಿಯನ್ನು ಹೊಂದಿದೆ. ಉತ್ತಮವಾದ ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, ಎಲ್ಇಡಿ ಟೈಲ್‌ಲ್ಯಾಂಪ್‌ಗಳು, ಸಿಗ್ನೇಚರ್ ಸೆವೆನ್-ಸ್ಲಾಟ್ ಗ್ರಿಲ್, ವಿಂಡ್‌ಶೀಲ್ಡ್, ಮಾಡ್ಯುಲರ್ ಹಾರ್ಡ್‌ಟಾಪ್ ಹಾಗೂ 17 ಇಂಚಿನ ಅಲಾಯ್ ವೀಲ್‌ಗಳನ್ನು ಪಡೆದಿದೆ.
ಹೊಸ 'ಜೀಪ್ ರಾಂಗ್ಲರ್' ಹೆಚ್ಚು ವಿಶಾಲ ಗಾತ್ರದಲ್ಲಿದೆ. 4,786 ಮಿ.ಮೀ ಉದ್ದ, 1,877 ಮಿ.ಮೀ ಅಗಲ ಹಾಗೂ 1,867 ಮಿ.ಮೀ ಎತ್ತರವಿದೆ. 274 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 3,007 ಮಿ.ಮೀ ವೀಲ್‌ಬೇಸ್‌ನ್ನು ಹೊಂದಿದೆ. ಬರೋಬ್ಬರಿ 960 ಕೆಜಿ ತೂಕವಿದೆ.
ಇದು 5 ಆಸನ ಆಯ್ಕೆ ವ್ಯವಸ್ಥೆಯನ್ನು ಒಳಗೊಂಡಿದ್ದು, ಪ್ರಯಾಣಿಕರು ಸುಲಭವಾಗಿ ಓಡಾಟ ನಡೆಸಬಹುದು. ವಾರಾಂತ್ಯ ಹಾಗೂ ರಜಾ ದಿನಗಳಲ್ಲಿ ದೂರದ ಊರುಗಳಿಗೆ ಪ್ರವಾಸಕ್ಕೆ ಹೋಗುವ ಸಂದರ್ಭದಲ್ಲಿ ಹೆಚ್ಚಿನ ಲಗೇಜ್ ತೆಗೆದುಕೊಂಡು ಹೋಗಲು ಸಾಧ್ಯವಾಗುವಂತೆ 192 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ಹೊಂದಿದೆ.
ಈ ಕಾರು ಬಲಿಷ್ಠವಾದ ಪವರ್‌ಟ್ರೇನ್‌ನ್ನು ಪಡೆದಿದೆ. ಇದರ 2.0-ಲೀಟರ್ 4-ಸಿಲಿಂಡರ್ ಟರ್ಬೊ-ಪೆಟ್ರೋಲ್ ಎಂಜಿನ್, 270 ಬಿಹೆಚ್‍ಪಿ ಅಶ್ವ (ಹಾರ್ಸ್ ಪವರ್) ಹಾಗೂ 400 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತದೆ. 8-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ತನ್ನದಾಗಿಸಿಕೊಂಡಿದೆ.
ನೂತನ 'ಜೀಪ್ ರಾಂಗ್ಲರ್' ಉತ್ತಮ ಇಂಧನ ದಕ್ಷತೆಗೂ ಹೆಸರುವಾಸಿಯಾಗಿದ್ದು, 10.6 ರಿಂದ 11.4 ಕಿ.ಮೀವರೆಗೆ ಮೈಲೇಜ್ ನೀಡುತ್ತದೆ. 81 ಲೀಟರ್‌ನಷ್ಟು ಫ್ಯುಯೆಲ್ ಟ್ಯಾಂಕ್‍ನ್ನು ಪಡೆದಿದೆ. 177 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಹೊಂದಿದೆ. 6.1 ಸೆಕೆಂಡುಗಳಲ್ಲಿ 0 ರಿಂದ 60 ಕೆಎಂಪಿಹೆಚ್ ವೇಗವನ್ನು ಪಡೆಯಲಿದೆ.
ಇದು ಹತ್ತಾರು ವೈಶಿಷ್ಟ್ಯಗಳನ್ನು ಹೊಂದಿದೆ. ಬಹುಮುಖ್ಯವಾಗಿ 12.3 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ಡುಯಲ್ ಜೋನ್ ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, ಮಲ್ಟಿ ಫಂಕ್ಷನ್ ಸ್ಟೀರಿಂಗ್ ವೀಲ್, ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಆಂಬಿಯೆಂಟ್ ಲೈಟಿಂಗ್, ಪುಶ್-ಬಟನ್ ಸ್ಟಾರ್ಟ್ ಹಾಗೂ ಕೀಲೆಸ್ ಎಂಟ್ರಿಯನ್ನು ಒಳಗೊಂಡಿದೆ.
ಈ ಕಾರು ಸುರಕ್ಷತೆಗೂ ಹೆಸರುವಾಸಿಯಾಗಿದೆ. ಪ್ರಯಾಣಿಕರಿಗೆ ಗರಿಷ್ಠ ಮಟ್ಟದಲ್ಲಿ ರಕ್ಷಣೆ ಒದಗಿಸುತ್ತದೆ. ಅದಕ್ಕಾಗಿ 6 ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) ಸೇರಿದಂತೆ ವಿವಿಧ ರಕ್ಷಣಾತ್ಮಕ ವೈಶಿಷ್ಟ್ಯಗಳನ್ನು ಹೊಂದಿದೆ.


Click it and Unblock the Notifications








