Ratan Tata: ರತನ್ ಟಾಟಾ ಇನ್ನಿಲ್ಲ.. ಶ್ರೀಸಾಮಾನ್ಯರ ಕಾರಿನ ಕನಸು ನನಸು ಮಾಡಿದ್ದ ಮಹಾನ್ ವ್ಯಕ್ತಿ ಇನ್ನು ನೆನಪು ಮಾತ್ರ!

ಟಾಟಾ ಸಮೂಹದ (Tata Sons) ಗೌರವ ಅಧ್ಯಕ್ಷ ರತನ್ ಟಾಟಾ (Ratan Tata) ಬುಧವಾರ ತಡರಾತ್ರಿ ಇಹಲೋಕ ತ್ಯಜಿಸಿದ್ದಾರೆ. ಅವರಿಗೆ 86 ವರ್ಷ ವಯಸಾಗಿತ್ತು. ಕೆಲ ದಿನಗಳ ಹಿಂದೆ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರನ್ನು ಮುಂಬೈನ ಬ್ರೀಚ್‌ ಕ್ಯಾಂಡಿ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗಾಗಿ ದಾಖಲು ಮಾಡಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ರತನ್ ಟಾಟಾ ನಿಧಾನಕ್ಕೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವು ಗಣ್ಯರು ಕಂಬನಿ ಮಿಡಿದಿದ್ದಾರೆ.

ಭಾರತದ ಆಟೋಮೊಬೈಲ್ ಮಾರುಕಟ್ಟೆಯಲ್ಲಿ ರತನ್ ಟಾಟಾ ತಮ್ಮದೇಯಾದ ಛಾಪನ್ನು ಮಾಡಿಸಿದ್ದರು. ಅವರ ಮಾಲೀಕತ್ವದ ಟಾಟಾ ಮೋಟಾರ್ಸ್ (Tata Motors) ಸುರಕ್ಷಿತ ಕಾರು ತಯಾರಿಕೆಗೆ ಹೆಸರುವಾಸಿಯಾಗಿದೆ. ದೇಶದ ಮಧ್ಯಮ ವರ್ಗದ ಜನರನ್ನು ಗಮನದಲ್ಲಿಟ್ಟುಕೊಂಡು 2008ರಲ್ಲಿ ರತನ್ ಟಾಟಾ ಅವರ ಕನಸಿನ ಕಾರದ ನ್ಯಾನೋವನ್ನು ಅತಿಕಡಿಮೆ ಬೆಲೆಗೆ ಪರಿಚಯಿಸಲಾಗಿತ್ತು. ಆದರೆ, ನಾನಾ ಕಾರಣಗಳಿಗೆ 2018ರಲ್ಲಿ ಈ ಕಾರಿನ ಮಾರಾಟವನ್ನು ಸ್ಥಗಿತಗೊಳಿಸಲಾಗಿತ್ತು. ಸದ್ಯ, ಟಾಟಾ ಮೋಟಾರ್ಸ್ ಹತ್ತಾರು ಕಾರುಗಳನ್ನು ಮಾರಾಟ ಮಾಡುತ್ತಿದೆ.

Ratan Tata Passes Away Remembering Visionary Leader Contribution To Indian Auto Industry

ಡಿಸೆಂಬರ್ 28, 1937ರಂದು ಜನಿಸಿದ ರತನ್ ಟಾಟಾ, ಮುಂಬೈನಲ್ಲಿ ಪ್ರಾಥಮಿಕ ಶಿಕ್ಷಣವನ್ನು ಪೂರೈಸಿದ್ದರು. ಆ ನಂತರ ಉನ್ನತ ವ್ಯಾಸಂಗಕ್ಕಾಗಿ ಅಮೆರಿಕಕ್ಕೆ ತೆರಳಿದ್ದ ಅವರು, ಕಾರ್ನೆಲ್ ವಿಶ್ವವಿದ್ಯಾಲಯದಿಂದ ಪದವಿ ಪಡೆದಿದ್ದರು. ಭಾರತಕ್ಕೆ ಹಿಂದಿರುಗಿದ ಅವರು ಟಾಟಾ ಸಮೂಹವನ್ನು ಹಂತಹಂತವಾಗಿ ಮಾದರಿ ಉದ್ಯಮ ಸಂಸ್ಥೆಯಾಗಿ ಬೆಳೆಸಿದ್ದರು.

1991 ರಲ್ಲಿ ಜೆ.ಆರ್.ಡಿ. ಟಾಟಾ (J.R.D. Tata) ಟಾಟಾ ಸಮೂಹದ ಅಧ್ಯಕ್ಷ ಸ್ಥಾನದಿಂದ ನಿವೃತ್ತಿ ಪಡೆದಿದ್ದರು. ಅವರ ಉತ್ತರಾಧಿಕಾರಿಯಾಗಿ ರತನ್ ಟಾಟಾ ಅಧಿಕಾರ ವಹಿಸಿಕೊಂಡಾಗ ಹಲವಾರು ಸವಾಲುಗಳನ್ನು ಎದುರಿಸಬೇಕಾಗಿತ್ತು. ಅದನ್ನೆಲ್ಲ ಅವರು ಮೆಟ್ಟಿ ನಿಂತಿದ್ದರು. ರತನ್ ಟಾಟಾ ಅವರ ಸಾರಥ್ಯದಲ್ಲಿಯೇ ಟಾಟಾ ಮೋಟಾರ್ಸ್ ಐಷಾರಾಮಿ ಕಾರು ತಯಾರಕ ಕಂಪನಿ 'ಜಾಗ್ವಾರ್ ಲ್ಯಾಂಡ್ ರೋವರ್'ನ್ನು ಸ್ವಾಧೀನಪಡಿಸಿಕೊಂಡಿತ್ತು.

Ratan Tata Passes Away Remembering Visionary Leader Contribution To Indian Auto Industry

ರತನ್ ಟಾಟಾ ಅವರು 2012 ರವರೆಗೆ ಟಾಟಾ ಸಮೂಹವನ್ನು ಯಶಸ್ವಿಯಾಗಿ ಮುನ್ನೆಡೆಸಿ, ನಿವೃತ್ತಿಯಾಗಿದ್ದರು. ಆ ಬಳಿಕ 2016 ರಿಂದ 2017ರ ಫೆಬ್ರವರಿವರೆಗೆ ಹಂಗಾಮಿ ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸಿದ್ದರು. ಅವಿವಾಹಿತರಾಗಿದ್ದ ಅವರು, ಟಾಟಾದ ಚಾರಿಟಬಲ್ ಟ್ರಸ್ಟ್‌ಗಳ ಮೂಲಕ ಸಮಾಜ ಸೇವೆಯಲ್ಲಿಯೂ ತೊಡಗಿಕೊಂಡಿದ್ದರು. ಭಾರತದ ಅತ್ಯುನ್ನತ ನಾಗರಿಕ ಗೌರವಗಳಾದ ಪದ್ಮ ವಿಭೂಷಣ ಹಾಗೂ ಪದ್ಮಭೂಷಣ ಪ್ರಶಸ್ತಿಗಳನ್ನು ಪಡೆದಿದ್ದರು.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Thursday, October 10, 2024, 1:02 [IST]
English summary
Ratan tata passes away remembering visionary leader contribution to indian auto industry
Read more on offbeat india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+