RCB ಸ್ಟಾರ್ ಪ್ಲೇಯರ್ ಮನೆಗೆ ಬಂತು ಐರಾವತದಂತಹ ಹೊಸ ಕಾರು: ಬೆಲೆ ಕೇಳಿದ್ರೆ ಬೆಚ್ಚಿಬೀಳ್ತಿರಾ?
ಯುವ ಕ್ರಿಕೆಟಿಗ ದೇವದತ್ ಪಡಿಕ್ಕಲ್ (Devdutt Padikkal) ಅಸಂಖ್ಯಾತ ಅಭಿಮಾನಿ ಬಳಗವನ್ನು ಹೊಂದಿದ್ದಾರೆ. 24ರ ಹರೆಯದ ಪಡಿಕ್ಕಲ್ ದೇಶೀಯ ಕ್ರಿಕೆಟ್‌ನಲ್ಲಿ ಕರ್ನಾಟಕ ತಂಡವನ್ನು ಪ್ರತಿನಿಧಿಸುತ್ತಾರೆ. ಹಾಗೆಯೇ ಐಪಿಎಲ್‌ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಪರ ಬ್ಯಾಟ್ ಬೀಸುತ್ತಾರೆ. 2021ರ ಜುಲೈನಲ್ಲಿ ಶ್ರೀಲಂಕಾ ವಿರುದ್ಧದ ಟಿ20ಐ ಪಂದ್ಯದ ಮೂಲಕ ಅಂತರರಾಷ್ಟ್ರೀಯ ಕ್ರಿಕೆಟ್‌ಗೂ ಪಾದಾರ್ಪಣೆ ಮಾಡಿದ್ದರು. ಆ ಬಳಿಕ, ಟೀಮ್ ಇಂಡಿಯಾ ಪರವಾಗಿ ಹಲವು ಪಂದ್ಯಗಳನ್ನು ಆಡಿದ್ದಾರೆ.
ಸದ್ಯ, ಕ್ರಿಕೆಟಿಗ ದೇವದತ್ ಪಡಿಕ್ಕಲ್ ದುಬಾರಿ ಬೆಲೆಯ ಹೊಚ್ಚ ಹೊಸ ಐಷಾರಾಮಿ ರೇಂಜ್ ರೋವರ್ ಸ್ಪೋರ್ಟ್ (Range Rover Sport) ಕಾರನ್ನು ಖರೀದಿ ಮಾಡಿದ್ದಾರೆ. ಅದಕ್ಕೆ ಸಂಬಂಧಿಸಿದ ಫೋಟೋಗಳು ಸಾಮಾಜಿಕ ಜಾಲತಾಣದಲ್ಲೂ ವೈರಲ್ ಆಗಿವೆ. ಎಲ್ಲೆಡೆಗಳಿಂದ ಶುಭಾಶಯಗಳ ಮಹಾಪೂರವೇ ಹರಿದುಬರುತ್ತಿದೆ.

ರೇಂಜ್ ರೋವರ್ ಸ್ಪೋರ್ಟ್ (Range Rover Sport) ಕಾರಿನ ವಿಶೇಷತೆಗಳೇನು: ಈ ಕಾರು, ರೂ.1.45 ಕೋಟಿ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. 'ಡೈನಾಮಿಕ್ ಎಸ್ಇ' ಎಂಬ ಏಕೈಕ ರೂಪಾಂತರದ (ವೇರಿಯೆಂಟ್) ಆಯ್ಕೆಯಲ್ಲಿ ಮಾತ್ರ ಖರೀದಿಗೆ ಲಭ್ಯವಿದೆ. ಇದು ಹೊರಭಾಗದಲ್ಲಿ ಆಕರ್ಷಕವಾದ ವಿನ್ಯಾಸವನ್ನು ಪಡೆದಿದ್ದು, ವಿವಿಧ ಬಣ್ಣಗಳೊಂದಿಗೂ ದೊರೆಯುತ್ತದೆ.
ನೂತನ ರೇಂಜ್ ರೋವರ್ ಸ್ಪೋರ್ಟ್ ಎಸ್‌ಯುವಿ, ಎರಡು ಪವರ್‌ಟ್ರೇನ್ ಆಯ್ಕೆಯನ್ನು ಒಳಗೊಂಡಿದೆ. ಇದರ 3.0-ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್, 394 ಹೆಚ್‌ಪಿ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 550 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುವ ಸಾಮರ್ಥ್ಯವನ್ನು ಹೊಂದಿದೆ.

ಮತ್ತೊಂದು 3.0-ಲೀಟರ್ ಟರ್ಬೊ ಡೀಸೆಲ್ ಎಂಜಿನ್‌ನ್ನು ಪಡೆದಿದೆ. 346 ಹೆಚ್‌ಪಿ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 700 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುತ್ತದೆ. ಜೊತೆಗೆ 8-ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಹೊಂದಿದೆ. 10 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ.
ಹೊಸ ರೇಂಜ್ ರೋವರ್ ಸ್ಪೋರ್ಟ್ ಕಾರು 4946 ಎಂಎಂ ಉದ್ದ, 2047 ಎಂಎಂ ಅಗಲ ಹಾಗೂ 1820 ಎಂಎಂ ಎತ್ತರವಿದೆ. 2997 ಎಂಎಂ ವೀಲ್‌ಬೇಸ್‌ನ್ನು ಒಳಗೊಂಡಿದೆ. ಇದರಲ್ಲಿ 5 ಆಸನ ಆಯ್ಕೆ ವ್ಯವಸ್ಥೆಯಿದ್ದು, ಪ್ರಯಾಣಿಕರು ಸುಲಭವಾಗಿ ಸಂಚರಿಸಬಹುದು. ಹೆಚ್ಚಿನ ಲಗೇಜ್ ತೆಗೆದುಕೊಂಡು ಹೋಗಲು 530 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ಹೊಂದಿದೆ.
ಈ ಎಸ್‌ಯುವಿ ಹತ್ತಾರು ಅತ್ಯಾಧುನಿಕ ವೈಶಿಷ್ಟ್ಯಗಳನ್ನು ಪಡೆದಿದೆ. ಬಹುಮುಖ್ಯವಾಗಿ 13.1-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ವೈರ್‌ಲೆಸ್ ಚಾರ್ಜಿಂಗ್ ಸಿಸ್ಟಮ್, ಮೆರಿಡಿಯನ್ 3ಡಿ-ಸರೌಂಡ್ ಸೌಂಡ್ ಸಿಸ್ಟಮ್, ಆಲ್-ವೀಲ್-ಸ್ಟೀರಿಂಗ್, ಎಲೆಕ್ಟ್ರಾನಿಕ್ ಏರ್ ಸಸ್ಪೆನ್ಷನ್ ಮತ್ತು ಹೆಡ್-ಅಪ್ ಡಿಸ್‌ಪ್ಲೇಯನ್ನು ಒಳಗೊಂಡಿದೆ.
ನೂತನ ರೇಂಜ್ ರೋವರ್ ಸ್ಪೋರ್ಟ್ ಕಾರು ಪ್ರಯಾಣಿಕರಿಗೆ ಗರಿಷ್ಠ ರಕ್ಷಣೆಯನ್ನು ಒದಗಿಸುತ್ತದೆ. ಸುರಕ್ಷತೆಯ ದೃಷ್ಟಿಯಿಂದ ಮಲ್ಟಿಪಲ್ ಏರ್‌ಬ್ಯಾಗ್‌ಗಳು, ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ಎಇಬಿ (ಆಟೊನೊಮಸ್ ಎಮರ್ಜೆನ್ಸಿ ಬ್ರೇಕಿಂಗ್), ಅಡಾಪ್ಟಿವ್ ಕ್ರೂಸ್ ಕಂಟ್ರೋಲ್ ಮತ್ತು 360-ಡಿಗ್ರಿ ಕ್ಯಾಮೆರಾವನ್ನು ಹೊಂದಿದೆ.
ಡ್ರೈವ್ ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋ ಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications








