ಶೆಟ್ರು ಮೆಚ್ಚಿರುವ ಕಾರುಗಳಿವು.. ರಸ್ತೆ ಮೇಲಿನ ಗಜರಾಜನಂತಿರುವ MPVಯೂ ಉಂಟು, ಯಾರು ಹೇಳಲ್ಲ!
ರಿಷಬ್ ಶೆಟ್ಟಿ (Rishab Shetty) ನಟಿಸಿ, ನಿರ್ದೇಶಿಸರುವ ಕಾಂತಾರ ಚಾಪ್ಟರ್ 1 (Kantara Chapter 1) ಸಿನಿಮಾದ ಟ್ರೈಲರ್ ರಿಲೀಸ್ ಆಗಿದ್ದು, ಸಖತ್ ಹಲ್‌ಚಲ್ ಸೃಷ್ಟಿಸುತ್ತಿದೆ. ಚಿತ್ರದ ಮೇಲೆ ಪ್ರೇಕ್ಷಕರ ನೀರಿಕ್ಷೆಗಳು ದುಪ್ಪಟ್ಟಾಗಿದೆ. ವಿಶ್ವಾದ್ಯಂತ ಅಕ್ಟೋಬರ್ 2 ರಂದು ಬಿಡುಗಡೆಯಾಗಲಿದೆ. ರಿಷಬ್ ಶೆಟ್ಟಿ ಅವರಿಗೆ ಸಿನಿಮಾದಂತೆ ಕಾರುಗಳು ಮೇಲೆಯೂ ವಿಶೇಷವಾದ ಪ್ರೀತಿಯಿದೆ. ಮಹೀಂದ್ರಾ ಥಾರ್, ಜೀಪ್ ಕಂಪಾಸ್, ಆಡಿ ಕ್ಯೂ7 ಹಾಗೂ ಟೊಯೊಟಾ ವೆಲ್‌ಫೈರ್ ಕಾರಿನ ಮಾಲೀಕರು ಆಗಿದ್ದಾರೆ. ಈ ಬಗ್ಗೆ ವಿವಿಧ ಮಾಧ್ಯಮಗಳಲ್ಲೂ ವರದಿಯಾಗಿದೆ.
ಮಹೀಂದ್ರಾ ಥಾರ್ (Mahindra Thar):
ಇದೊಂದು ಆಫ್-ರೋಡ್ ಎಸ್‌ಯುವಿಯಾಗಿದೆ. ರೂ.11.50 ಲಕ್ಷದಿಂದ ರೂ.17.62 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. ತುಂಬಾ ಅಚ್ಚುಕಟ್ಟಾದ ವಿನ್ಯಾಸವನ್ನು ಪಡೆದಿದೆ. ಎವರೆಸ್ಟ್ ವೈಟ್, ರೇಜ್ ರೆಡ್, ಗ್ಯಾಲಕ್ಸಿ ಗ್ರೇ, ಡೀಪ್ ಫಾರೆಸ್ಟ್, ಡಸರ್ಟ್ ಫ್ಯೂರಿ ಹಾಗೂ ನೇಪಲ್ಸ್ ಬ್ಲ್ಯಾಕ್ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ.

ಈ ಕಾರು ಬಲಿಷ್ಠವಾದ ಪವರ್‌ಟ್ರೇನ್‌ನ್ನು ಹೊಂದಿದೆ. 1.5-ಲೀಟರ್ ಡೀಸೆಲ್, 2.2-ಲೀಟರ್ ಡೀಸೆಲ್ ಹಾಗೂ 2.0-ಲೀಟರ್ ಟರ್ಬೋಚಾರ್ಜ್ಡ್ ಪೆಟ್ರೋಲ್ ಎಂಜಿನ್‌ನ್ನು ಪಡೆದಿದೆ. 15 ಕಿ.ಮೀ ವರೆಗೆ ಮೈಲೇಜ್ ನೀಡುತ್ತದೆ. 4 ಆಸನಗಳನ್ನು ಒಳಗೊಂಡಿದೆ. 7 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಹಾಗೂ ಡುಯಲ್ ಫ್ರಂಟ್ ಏರ್‌ಬ್ಯಾಗ್‌ಗಳು ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ತನ್ನದಾಗಿಸಿಕೊಂಡಿದೆ.
ಜೀಪ್ ಕಂಪಾಸ್ (Jeep Compass):
ಇದು ಜನಪ್ರಿಯ ಎಸ್‌ಯುವಿಯಾಗಿದೆ. ರೂ.17.73 ಲಕ್ಷದಿಂದ ರೂ.32.41 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಉತ್ತಮವಾದ ವಿನ್ಯಾಸವನ್ನು ಹೊಂದಿದೆ. ಬ್ರೈಟ್ ವೈಟ್, ಸಿಲ್ವರ್ ಮೂನ್, ಎಕ್ಸೋಟಿಕಾ ರೆಡ್, ಮ್ಯಾಗ್ನೆಸಿಯೊ ಗ್ರೇ, ಟೆಕ್ನೋ ಮೆಟಾಲಿಕ್ ಗ್ರೀನ್ ಮತ್ತು ಗ್ಯಾಲಕ್ಸಿ ಬ್ಲ್ಯೂ ಎಂಬ ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ.

ನೂತನ ಜೀಪ್ ಕಂಪಾಸ್ ಹೆಚ್ಚು ಶಕ್ತಿಶಾಲಿಯಾದ ಪವರ್‌ಟ್ರೇನ್‌ನ್ನು ಪಡೆದಿದೆ. 2-ಲೀಟರ್ ಡೀಸೆಲ್ ಎಂಜಿನ್‌ನ್ನು ಹೊಂದಿದೆ. 14.9 ರಿಂದ 17.1 ಕಿ.ಮೀ ವರೆಗೆ ಮೈಲೇಜ್ ಕೊಡುತ್ತದೆ. 5 ಆಸನಗಳನ್ನು ತನ್ನದಾಗಿಸಿಕೊಂಡಿದೆ. 5 ಆಸನಗಳನ್ನು ಪಡೆದಿದೆ. 10.1 ಇಂಚಿನ ಫ್ರೀ-ಸ್ಟ್ಯಾಂಡಿಂಗ್ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಹಾಗೂ 6 ಏರ್‌ಬ್ಯಾಗ್‌ಗಳು ಒಳಗೊಂಡಂತೆ ಹಲವು ವೈಶಿಷ್ಟ್ಯಗಳನ್ನು ಹೊಂದಿದೆ.
ಆಡಿ ಕ್ಯೂ7 (Audi Q7):
ಇದೊಂದು ಎಸ್‌ಯುವಿಯಾಗಿದೆ. ರೂ.86.14 ಲಕ್ಷದಿಂದ ರೂ.99.81 (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. ಹೆಚ್ಚು ಅತ್ಯಾಧುನಿಕವಾದ ವಿನ್ಯಾಸವನ್ನು ಪಡೆದಿದೆ. ಮೈಥೋಸ್ ಬ್ಲ್ಯಾಕ್ ಮೆಟಾಲಿಕ್, ಸಮುರಾಯ್ ಗ್ರೇ ಮೆಟಾಲಿಕ್, ವೈಟೊಮೊ ಬ್ಲೂ ಮೆಟಾಲಿಕ್, ಸಖೀರ್ ಗೋಲ್ಡ್ ಮೆಟಾಲಿಕ್ ಹಾಗೂ ಗ್ಲೇಸಿಯರ್ ವೈಟ್ ಮೆಟಾಲಿಕ್ ಬಣ್ಣಗಳನ್ನು ಪಡೆದಿದೆ.

ಈ ಕಾರು ಬಲಿಷ್ಠವಾದ ಪವರ್‌ಟ್ರೇನ್‌ನ್ನು ಒಳಗೊಂಡಿದೆ. 3.0-ಲೀಟರ್ ವಿ6 ಪೆಟ್ರೋಲ್ ಎಂಜಿನ್‌ನ್ನು ಪಡೆದಿದೆ. 11 ಕಿ.ಮೀ ವರೆಗೆ ಮೈಲೇಜ್ ನೀಡುತ್ತದೆ. 7 ಆಸನಗಳನ್ನು ತನ್ನದಾಗಿಸಿಕೊಂಡಿದೆ. ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್ ಮತ್ತು 8 ಏರ್‌ಬ್ಯಾಗ್‌ಗಳು ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಹೊಂದಿದೆ.
ಟೊಯೊಟಾ ವೆಲ್‌ಫೈರ್ (Toyota Vellfire):
ಇದು ರಸ್ತೆ ಮೇಲಿನ ಗಜರಾಜನಂತಿರುವ ಎಂಪಿವಿಯಾಗಿದೆ. ರೂ.1.20 ಕೋಟಿಯಿಂದ ರೂ.1.30 ಕೋಟಿ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಅತ್ಯುತ್ತಮವಾದ ವಿನ್ಯಾಸವನ್ನು ಒಳಗೊಂಡಿದೆ.ಎಲ್ಇಡಿ ಹೆಡ್‌ಲೈಟ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು ಮತ್ತು 19 ಇಂಚಿನ ಡುಯಲ್ ಅಲಾಯ್ ವೀಲ್‌ಗಳನ್ನು ಹೊಂದಿದೆ. ಪ್ಲಾಟಿನಂ ವೈಟ್ ಪರ್ಲ್, ಪ್ರೆಶಿಯಸ್ ಮೆಟಲ್ ಮತ್ತು ಬ್ಲ್ಯಾಕ್ ಎಂಬ ಬಣ್ಣಗಳೊಂದಿಗೂ ಸಿಗುತ್ತದೆ.

ಹೊಸ ವೆಲ್‌ಫೈರ್ 2.5-ಲೀಟರ್ ಹೈಬ್ರಿಡ್ (ಪೆಟ್ರೋಲ್+ಎಲೆಕ್ಟ್ರಿಕ್) ಎಂಜಿನ್‌ನ್ನು ಹೊಂದಿದೆ. 19.28 ಕಿ.ಮೀ ವರೆಗೆ ಮೈಲೇಜ್ ಕೊಡುತ್ತದೆ. 7 ಆಸನ ಆಯ್ಕೆ ವ್ಯವಸ್ಥೆಯನ್ನು ತನ್ನದಾಗಿಸಿಕೊಂಡಿದೆ. 14 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಫುಲ್ ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ ಮತ್ತು 6 ಏರ್‌ಬ್ಯಾಗ್‌ಗಳು ಒಳಗೊಂಡಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ.


Click it and Unblock the Notifications








