ಕರೋನಾ ವೈರಸ್‌ನಿಂದ ಸಂಕಷ್ಟಕ್ಕೆ ಸಿಲುಕಿದ್ದ ಖಾಸಗಿ ಬಸ್ ಮಾಲೀಕರಿಗೆ ಸಿಹಿ ಸುದ್ದಿ
ಭಾರತದಲ್ಲಿ ಕರೋನಾ ವೈರಸ್ ಹರಡುವುದನ್ನು ತಡೆಯಲು ಮಾರ್ಚ್ 24ರಿಂದ ಲಾಕ್‌ಡೌನ್ ಜಾರಿಗೊಳಿಸಲಾಗಿದೆ. ಲಾಕ್‌ಡೌನ್ ಕಾರಣದಿಂದಾಗಿ ಎಲ್ಲಾ ರೀತಿಯ ಸಾರ್ವಜನಿಕ ಸಾರಿಗೆ ಸೇವೆಗಳನ್ನು ರದ್ದುಪಡಿಸಲಾಗಿತ್ತು.

ಸಾರಿಗೆ ಸೇವೆಗಳಾದ ಬಸ್, ರೈಲು, ವಿಮಾನ, ಆಟೋ ಹಾಗೂ ಟ್ಯಾಕ್ಸಿಗಳ ಸಂಚಾರವನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಲಾಗಿತ್ತು. ಖಾಸಗಿ ಕಾರು ಹಾಗೂ ದ್ವಿಚಕ್ರ ವಾಹನಗಳ ಓಡಾಟಕ್ಕೂ ನಿರ್ಬಂಧ ವಿಧಿಸಲಾಗಿತ್ತು. ಲಾಕ್‌ಡೌನ್ ಉಲ್ಲಂಘಿಸಿ ಹೊರಬಂದ ಲಕ್ಷಾಂತರ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ.

ಈಗ ಲಾಕ್‌ಡೌನ್ ಸಡಿಲಿಸಲಾಗಿದೆ. ಇದರಿಂದಾಗಿ ಸಾರ್ವಜನಿಕ ಸಾರಿಗೆ ಸೇವೆಗಳು ಸಹಜ ಸ್ಥಿತಿಯತ್ತ ಮರಳುತ್ತಿವೆ. ದೇಶದ ವಿವಿಧ ಭಾಗಗಳಲ್ಲಿ ಆಟೋ ಹಾಗೂ ಟ್ಯಾಕ್ಸಿಗಳು ಸಂಚಾರವನ್ನು ಆರಂಭಿಸಿವೆ. ದೇಶದ ಹಲವು ದಿನಗಳ ವಿರಾಮದ ಬಳಿಕ ವಿಮಾನಯಾನ ಸೇವೆಗಳು ಸಹ ಪುನರಾರಂಭಗೊಂಡಿವೆ.
MOSTREAD: ಕರೋನಾ ವೈರಸ್ ಎಫೆಕ್ಟ್: ಭಾರೀ ಪ್ರಮಾಣದಲ್ಲಿ ಕುಸಿದ ಇಂಧನ ಮಾರಾಟ

ವಲಸೆ ಕಾರ್ಮಿಕರಿಗಾಗಿ ವಿಶೇಷ ರೈಲುಗಳನ್ನು ಆರಂಭಿಸಲಾಗಿದೆ. ಬಸ್ ಸೇವೆಯನ್ನು ಪುನರಾರಂಭಿಸಿದ ರಾಜ್ಯಗಳಲ್ಲಿ ಓಡಿಶಾ ರಾಜ್ಯವು ಸಹ ಸೇರಿದೆ. ಕಳೆದ ಗುರುವಾರದಿಂದ ಓಡಿಶಾದಲ್ಲಿ ಖಾಸಗಿ ಬಸ್ಸುಗಳು ಮತ್ತೆ ಕಾರ್ಯನಿರ್ವಹಿಸುತ್ತಿವೆ.

ಮಾರ್ಚ್ 22ರಿಂದ ಓಡಿಶಾದಲ್ಲಿ ಬಸ್ ಸೇವೆಯನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಲಾಗಿತ್ತು. ದೀರ್ಘ ವಿರಾಮದ ಬಳಿಕ ಬಸ್ ಸೇವೆಗಳನ್ನು ಪುನರಾರಂಭಿಸಲಾಗಿದೆ. ಇದರ ಮಧ್ಯೆ ಓಡಿಶಾ ಸರ್ಕಾರವು ಖಾಸಗಿ ಬಸ್ ಮಾಲೀಕರಿಗೆ ಸಂತಸದ ಸುದ್ದಿಯೊಂದನ್ನು ನೀಡಿದೆ.
MOSTREAD: ರಾಷ್ಟ್ರೀಯ ಹೆದ್ದಾರಿ ನಿರ್ಮಾಣದಲ್ಲಿ ಹೊಸ ದಾಖಲೆ ಬರೆದ ಕೇಂದ್ರ ಸರ್ಕಾರ

ಖಾಸಗಿ ಬಸ್‌ಗಳಿಗೆ ಏಪ್ರಿಲ್, ಮೇ ಹಾಗೂ ಜೂನ್ ತಿಂಗಳ ರಸ್ತೆ ತೆರಿಗೆ ಪಾವತಿಯಿಂದ ವಿನಾಯಿತಿ ನೀಡಲಾಗಿದೆ. ಓಡಿಶಾ ಸರ್ಕಾರವು ಈ ಬಗ್ಗೆ ಶುಕ್ರವಾರ ಅಧಿಕೃತ ಪ್ರಕಟಣೆಯನ್ನು ಹೊರಡಿಸಿದೆ. ಕರೋನಾ ವೈರಸ್‌ನಿಂದ ಸಂಕಷ್ಟಕ್ಕೆ ಒಳಗಾಗಿದ್ದ ಖಾಸಗಿ ಬಸ್ ಮಾಲೀಕರಿಗೆ ಇದರಿಂದ ಅನುಕೂಲವಾಗಲಿದೆ.

ಲಾಕ್‌ಡೌನ್‌ನಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದ ಖಾಸಗಿ ಬಸ್ ಮಾಲೀಕರಿಗೆ ಮೂರು ತಿಂಗಳವರೆಗೆ ರಸ್ತೆ ತೆರಿಗೆಯನ್ನು ವಿಧಿಸುವುದಿಲ್ಲವೆಂದು ಓಡಿಶಾ ಸರ್ಕಾರವು ಪ್ರಕಟಿಸಿದೆ. ಓಡಿಶಾ ಬಸ್ ಮಾಲೀಕರ ಸಂಘವು ಸರ್ಕಾರದ ಮುಂದೆ ಈ ಬೇಡಿಕೆಯನ್ನಿಟ್ಟಿತ್ತು.
MOSTREAD: ನಟ ವಿಕ್ರಮ್‌ಗಾಗಿ ತಯಾರಾಯ್ತು ವಿಶೇಷ ಕಾರವ್ಯಾನ್

ಮುಖ್ಯಮಂತ್ರಿ ನವೀನ್ ಪಟ್ನಾಯಕ್ ನೇತೃತ್ವದ ಓಡಿಶಾ ಸರ್ಕಾರ ಬಸ್ ಮಾಲೀಕರ ಸಂಘದ ಬೇಡಿಕೆಗೆ ಅಸ್ತು ಎಂದಿದೆ. ಮುಂಬರುವ ವರ್ಷಗಳಲ್ಲಿ ಸಾರ್ವಜನಿಕ ಸಾರಿಗೆ ಸೇವೆಗಳು ಎಷ್ಟು ಲಾಭದಾಯಕವಾಗಿರಲಿವೆ ಎಂಬುದರ ಬಗ್ಗೆ ಅನುಮಾನಗಳಿವೆ. ಕರೋನಾ ವೈರಸ್ ಭಯದಿಂದಾಗಿ ಸಾರ್ವಜನಿಕರು ಸಾರ್ವಜನಿಕ ಸಾರಿಗೆಗಳಲ್ಲಿ ಸಂಚರಿಸುವುದನ್ನು ತಪ್ಪಿಸುವ ಸಾಧ್ಯತೆಗಳಿವೆ.

ಸಾರ್ವಜನಿಕ ಸಾರಿಗೆಗಳ ಬದಲಿಗೆ, ಸುರಕ್ಷತೆಯ ದೃಷ್ಟಿಯಿಂದ ತಮ್ಮ ಸ್ವಂತ ವಾಹನಗಳಲ್ಲಿ ಪ್ರಯಾಣಿಸಲು ಆದ್ಯತೆ ನೀಡಲಿದ್ದಾರೆ ಎಂದು ಹೇಳಲಾಗುತ್ತಿದೆ. ಇದೇ ವೇಳೆ ಸಾರ್ವಜನಿಕರ ಈ ನಿರ್ಧಾರದಿಂದ ಕಾರು ಹಾಗೂ ಬೈಕ್‌ಗಳ ಮಾರಾಟದಲ್ಲಿ ಹೆಚ್ಚಳವಾಗುವ ಸಾಧ್ಯತೆಗಳಿದ್ದು, ಲಾಕ್‌ಡೌನ್‌ನಿಂದ ನಷ್ಟಕ್ಕೆ ಸಿಲುಕಿದ್ದ ವಾಹನ ತಯಾರಕ ಕಂಪನಿಗಳಿಗೆ ಭರವಸೆಯನ್ನು ಮೂಡಿಸಿದೆ.
ಸೂಚನೆ: ಈ ಚಿತ್ರಗಳನ್ನು ರೆಫರೆನ್ಸ್‌ಗಾಗಿ ಬಳಸಲಾಗಿದೆ.


Click it and Unblock the Notifications