ಮಾಲಿನ್ಯ ನಿಯಂತ್ರಣ ಪ್ರಮಾಣ ಪತ್ರ ಹೊಂದಿಲ್ಲದ ವಾಹನ ಸವಾರರಿಗೆ ಬೀಳಲಿದೆ ಭಾರೀ ಪ್ರಮಾಣದ ದಂಡ

ಎಲ್ಲಾ ವಾಹನ ಸವಾರರು ಮಾಲಿನ್ಯ ನಿಯಂತ್ರಣ ಪ್ರಮಾಣ ಪತ್ರಗಳನ್ನು (ಪಿಯುಸಿ) ಹೊಂದಿರುವುದನ್ನು ದೆಹಲಿ ಸರ್ಕಾರವು ಕಡ್ಡಾಯಗೊಳಿಸಿದೆ. ತಮ್ಮ ವಾಹನಗಳಿಗೆ ಪಿಯುಸಿ ಹೊಂದಿರದ ವಾಹನ ಸವಾರರಿಗೆ ರೂ. 10,000 ದಂಡ ವಿಧಿಸಲಾಗುವುದು ಎಂದು ದೆಹಲಿ ಸರ್ಕಾರವು ತಿಳಿಸಿದೆ. ಇದರ ಜೊತೆಗೆ ಸಂಬಂಧ ಪಟ್ಟ ವಾಹನ ಸವಾರನ ಚಾಲನಾ ಪರವಾನಗಿಯನ್ನು ಮೂರು ತಿಂಗಳವರೆಗೆ ಅಮಾನತು ಮಾಡಲಾಗುತ್ತದೆ.

ಮಾಲಿನ್ಯ ನಿಯಂತ್ರಣ ಪ್ರಮಾಣ ಪತ್ರ ಹೊಂದಿಲ್ಲದ ವಾಹನ ಸವಾರರಿಗೆ ಬೀಳಲಿದೆ ಭಾರೀ ಪ್ರಮಾಣದ ದಂಡ

ಈ ನಿಯಮ ಉಲ್ಲಂಘಿಸುವವರಿಗೆ ಆರು ತಿಂಗಳ ಜೈಲು ಶಿಕ್ಷೆ ವಿಧಿಸಲಾಗುವುದು ಎಂದು ದೆಹಲಿ ರಾಜ್ಯ ಸಾರಿಗೆ ಇಲಾಖೆಯು ಎಚ್ಚರಿಕೆ ನೀಡಿದೆ. ದೆಹಲಿಯಲ್ಲಿ ವಾಯು ಮಾಲಿನ್ಯ ವಿಪರೀತವಾಗಿ ಹೆಚ್ಚಾಗಿದೆ ಎಂಬುದು ಎಲ್ಲರಿಗೂ ತಿಳಿದಿರುವ ಸತ್ಯ. ಪೆಟ್ರೋಲ್ ಹಾಗೂ ಡೀಸೆಲ್ ಎಂಜಿನ್ ವಾಹನಗಳು ಈ ವಾಯು ಮಾಲಿನ್ಯಕ್ಕೆ ಪ್ರಮುಖ ಕಾರಣವಾಗಿವೆ.

ಮಾಲಿನ್ಯ ನಿಯಂತ್ರಣ ಪ್ರಮಾಣ ಪತ್ರ ಹೊಂದಿಲ್ಲದ ವಾಹನ ಸವಾರರಿಗೆ ಬೀಳಲಿದೆ ಭಾರೀ ಪ್ರಮಾಣದ ದಂಡ

ಈ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ವಾಯು ಮಾಲಿನ್ಯ ಸಮಸ್ಯೆಯನ್ನು ಕಡಿಮೆ ಮಾಡಲು ಹಾಗೂ ಗಾಳಿಯ ಗುಣಮಟ್ಟವನ್ನು ಸುಧಾರಿಸಲು, ವಾಹನಗಳು ಮಾಲಿನ್ಯ ನಿಯಂತ್ರಣ ಪ್ರಮಾಣ ಪತ್ರವನ್ನು ಹೊಂದುವುದನ್ನು ಕಡ್ಡಾಯಗೊಳಿಸಿ ಆದೇಶ ಹೊರಡಿಸಲಾಗಿದೆ. ಎಲ್ಲಾ ವಾಹನ ಸವಾರರು ತಮ್ಮ ವಾಹನಗಳನ್ನು ಪರೀಕ್ಷಿಸಬೇಕು ಹಾಗೂ ಮಾಲಿನ್ಯ ನಿಯಂತ್ರಣ ಪ್ರಮಾಣ ಪತ್ರವನ್ನು ಸಾರಿಗೆ ಇಲಾಖೆಯಿಂದ ಅನುಮೋದಿಸಿದ ಕೇಂದ್ರಗಳಲ್ಲಿ ಪಡೆಯಬೇಕು ಎಂದು ತಿಳಿಸಲಾಗಿದೆ.

ಮಾಲಿನ್ಯ ನಿಯಂತ್ರಣ ಪ್ರಮಾಣ ಪತ್ರ ಹೊಂದಿಲ್ಲದ ವಾಹನ ಸವಾರರಿಗೆ ಬೀಳಲಿದೆ ಭಾರೀ ಪ್ರಮಾಣದ ದಂಡ

ಈ ಪ್ರಮಾಣ ಪತ್ರವನ್ನು ಪಡೆಯುವ ಮೂಲಕ ದಂಡ ವಿಧಿಸುವುದರಿಂದ ಚಾಲನಾ ಪರವಾನಗಿ ಅಮಾನತುಗೊಳ್ಳುವುದರಿಂದ ಹಾಗೂ ಜೈಲುವಾಸಕ್ಕೆ ತುತ್ತಾಗುವಂತಹ ಕ್ರಮಗಳಿಂದ ಪಾರಾಗಬಹುದು. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ವಾಯು ಮಾಲಿನ್ಯ ಸಮಸ್ಯೆ ಹೆಚ್ಚಾಗಿದೆ. ಈ ಸಮಸ್ಯೆಯನ್ನು ಕಡಿಮೆ ಮಾಡಲು ದೆಹಲಿ ರಾಜ್ಯ ಸರ್ಕಾರವು ವಿವಿಧ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ.

ಮಾಲಿನ್ಯ ನಿಯಂತ್ರಣ ಪ್ರಮಾಣ ಪತ್ರ ಹೊಂದಿಲ್ಲದ ವಾಹನ ಸವಾರರಿಗೆ ಬೀಳಲಿದೆ ಭಾರೀ ಪ್ರಮಾಣದ ದಂಡ

ಇವುಗಳಲ್ಲಿ ಎಲೆಕ್ಟ್ರಿಕ್ ವಾಹನಗಳ ಬಳಕೆಗೆ ಉತ್ತೇಜನ ನೀಡುವುದು ಸಹ ಸೇರಿದೆ. ದೆಹಲಿ ರಾಜ್ಯ ಸರ್ಕಾರವು ತನ್ನ ಎಲೆಕ್ಟ್ರಿಕ್ ವಾಹನ ನೀತಿಯ ಅಡಿಯಲ್ಲಿ ಎಲೆಕ್ಟ್ರಿಕ್ ವಾಹನಗಳನ್ನು ಖರೀದಿಸುವವರಿಗೆ ಸಬ್ಸಿಡಿ ನೀಡುತ್ತಿದೆ. ಇದರ ಜೊತೆಗೆ ಕೇಂದ್ರ ಸರ್ಕಾರವು ಸಹ ಫೇಮ್ ಇಂಡಿಯಾ 2 ಯೋಜನೆಯಡಿ ಎಲೆಕ್ಟ್ರಿಕ್ ವಾಹನಗಳನ್ನು ಖರೀದಿಸುವವರಿಗೆ ಸಬ್ಸಿಡಿ ನೀಡುತ್ತಿದೆ.

ಮಾಲಿನ್ಯ ನಿಯಂತ್ರಣ ಪ್ರಮಾಣ ಪತ್ರ ಹೊಂದಿಲ್ಲದ ವಾಹನ ಸವಾರರಿಗೆ ಬೀಳಲಿದೆ ಭಾರೀ ಪ್ರಮಾಣದ ದಂಡ

ಈ ಕಾರಣಕ್ಕೆ ದೆಹಲಿಯಲ್ಲಿ ಎಲೆಕ್ಟ್ರಿಕ್ ವಾಹನಗಳು ಉಳಿದ ರಾಜ್ಯಗಳಿಗೆ ಹೋಲಿಸಿದರೆ ಕಡಿಮೆ ಬೆಲೆಯಲ್ಲಿ ಮಾರಾಟವಾಗುತ್ತವೆ. ಇದರಿಂದ ದೆಹಲಿಯ ಜನರಲ್ಲಿ ಎಲೆಕ್ಟ್ರಿಕ್ ವಾಹನಗಳ ಬಳಕೆಗೆ ಆಸಕ್ತಿ ಹೆಚ್ಚುತ್ತಿದೆ. ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಗಳು ಗಗನಕ್ಕೇರುತ್ತಿರುವ ಹಿನ್ನೆಲೆಯಲ್ಲಿ ವಾಹನ ಸವಾರರು ಎಲೆಕ್ಟ್ರಿಕ್ ವಾಹನಗಳ ಖರೀದಿಗೆ ಮುಂದಾಗುತ್ತಿದ್ದಾರೆ.

ಮಾಲಿನ್ಯ ನಿಯಂತ್ರಣ ಪ್ರಮಾಣ ಪತ್ರ ಹೊಂದಿಲ್ಲದ ವಾಹನ ಸವಾರರಿಗೆ ಬೀಳಲಿದೆ ಭಾರೀ ಪ್ರಮಾಣದ ದಂಡ

ಎಲೆಕ್ಟ್ರಿಕ್ ವಾಹನಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಬಳಸುವುದರಿಂದ ಮುಂಬರುವ ದಿನಗಳಲ್ಲಿ ದೆಹಲಿಯಲ್ಲಿ ವಾಯು ಮಾಲಿನ್ಯ ಸಮಸ್ಯೆ ಕಡಿಮೆಯಾಗುವ ನಿರೀಕ್ಷೆಗಳಿವೆ. ದೆಹಲಿ ರಾಜ್ಯ ಸರ್ಕಾರದ ಹೊರತಾಗಿ ಇತರ ರಾಜ್ಯ ಸರ್ಕಾರಗಳು ಸಹ ಎಲೆಕ್ಟ್ರಿಕ್ ವಾಹನಗಳಿಗೆ ಸಬ್ಸಿಡಿ ನೀಡಲು ಮುಂದಾಗಿವೆ. ಕೆಲವು ರಾಜ್ಯ ಸರ್ಕಾರಗಳು ಎಲೆಕ್ಟ್ರಿಕ್ ವಾಹನಗಳಿಗಾಗಿ ಎಲೆಕ್ಟ್ರಿಕ್ ವಾಹನ ನೀತಿಯನ್ನು ಜಾರಿಗೊಳಿಸಿವೆ.

ಮಾಲಿನ್ಯ ನಿಯಂತ್ರಣ ಪ್ರಮಾಣ ಪತ್ರ ಹೊಂದಿಲ್ಲದ ವಾಹನ ಸವಾರರಿಗೆ ಬೀಳಲಿದೆ ಭಾರೀ ಪ್ರಮಾಣದ ದಂಡ

ದೆಹಲಿ ಸರ್ಕಾರವು ಎಲೆಕ್ಟ್ರಿಕ್ ವಾಹನಗಳ ಬಳಕೆಗೆ ಉತ್ತೇಜನ ನೀಡುವುದರಲ್ಲಿ ಇತರ ರಾಜ್ಯಗಳಿಗಳಿಂತಲೂ ಸಾಕಷ್ಟು ಮುಂದಿದ್ದು, ಎಲೆಕ್ಟ್ರಿಕ್ ವಾಹನಗಳಿಗೆ ಪೂರಕವಾದ ವಾತಾವರಣವನ್ನು ಸೃಷ್ಟಿಸುತ್ತಿದೆ. ದೆಹಲಿ ಸರ್ಕಾರವು ಎಲೆಕ್ಟ್ರಿಕ್ ದ್ವಿಚಕ್ರ ವಾಹನ ಖರೀದಿಯನ್ನು ಉತ್ತೇಜಿಸಲು ಗರಿಷ್ಠ ಸಬ್ಸಿಡಿ ನೀಡುವುದರ ಜೊತೆಗೆ ಎಲೆಕ್ಟ್ರಿಕ್ ವಾಹನಗಳಿಗೆ ನೋಂದಣಿ ಶುಲ್ಕದಿಂದ ವಿನಾಯಿತಿ ನೀಡುತ್ತಿದೆ.

ಮಾಲಿನ್ಯ ನಿಯಂತ್ರಣ ಪ್ರಮಾಣ ಪತ್ರ ಹೊಂದಿಲ್ಲದ ವಾಹನ ಸವಾರರಿಗೆ ಬೀಳಲಿದೆ ಭಾರೀ ಪ್ರಮಾಣದ ದಂಡ

ಹೊಸ ಸಬ್ಸಿಡಿ ಯೋಜನೆಯಿಂದಾಗಿ ದೆಹಲಿಯಲ್ಲಿ ಎಲೆಕ್ಟ್ರಿಕ್ ವಾಹನಗಳ ನೋಂದಣಿ ಪ್ರಮಾಣವು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಈ ವರ್ಷದ ಜೂನ್ ತಿಂಗಳಿಗೆ ಹೋಲಿಸಿದರೆ ಜುಲೈ ತಿಂಗಳಿನಲ್ಲಿ ಎಲೆಕ್ಟ್ರಿಕ್ ವಾಹನ ಮಾರಾಟ ಪ್ರಮಾಣವು 20% ನಷ್ಟು ಏರಿಕೆಯಾಗಿದೆ. ದೆಹಲಿಯಲ್ಲಿ ಎಲೆಕ್ಟ್ರಿಕ್ ವಾಹನಗಳ ಖರೀದಿಗೆ ರಾಜ್ಯ ಸರ್ಕಾರವು ಸಬ್ಸಿಡಿ ನೀಡಲು ಆರಂಭಿಸಿದ ನಂತರ ಇದುವರೆಗೂ ಸುಮಾರು 1,12,321 ಎಲೆಕ್ಟ್ರಿಕ್ ವಾಹನಗಳು ನೋಂದಣಿಯಾಗಿವೆ.

ಮಾಲಿನ್ಯ ನಿಯಂತ್ರಣ ಪ್ರಮಾಣ ಪತ್ರ ಹೊಂದಿಲ್ಲದ ವಾಹನ ಸವಾರರಿಗೆ ಬೀಳಲಿದೆ ಭಾರೀ ಪ್ರಮಾಣದ ದಂಡ

ದೆಹಲಿ ಸರ್ಕಾರವು ಎಲೆಕ್ಟ್ರಿಕ್ ವಾಹನಗಳನ್ನು ಬಳಸುವ ಅಗತ್ಯತೆಯ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುತ್ತಿದೆ. ಇದರ ಜೊತೆಗೆ ಎಲೆಕ್ಟ್ರಿಕ್ ವಾಹನಗಳಿಗೆ ಚಾರ್ಜಿಂಗ್ ಕೇಂದ್ರಗಳಂತಹ ಮೂಲ ಸೌಕರ್ಯಗಳನ್ನು ಕಲ್ಪಿಸಲು ನಿರಂತರವಾಗಿ ಹೊಸ ಯೋಜನೆಗಳನ್ನು ಜಾರಿಗೆ ತರುತ್ತಿದೆ. ದೆಹಲಿ ಎನ್‌ಸಿಆರ್‌ನಲ್ಲಿ ಸರ್ಕಾರಿ ಹಾಗೂ ಖಾಸಗಿ ಕಂಪನಿಗಳ ಸಹಭಾಗಿತ್ವದಲ್ಲಿ ಸುಮಾರು 100 ಕ್ಕೂ ಹೆಚ್ಚು ಫಾಸ್ಟ್ ಚಾರ್ಜಿಂಗ್ ಕೇಂದ್ರಗಳನ್ನು ತೆರೆಯಲಾಗಿದೆ.

ಮಾಲಿನ್ಯ ನಿಯಂತ್ರಣ ಪ್ರಮಾಣ ಪತ್ರ ಹೊಂದಿಲ್ಲದ ವಾಹನ ಸವಾರರಿಗೆ ಬೀಳಲಿದೆ ಭಾರೀ ಪ್ರಮಾಣದ ದಂಡ

ಈ ಮೂಲಕ ದೆಹಲಿ ಸರ್ಕಾರವು ದೆಹಲಿಯನ್ನು ಭಾರತದ ಎಲೆಕ್ಟ್ರಿಕ್ ವಾಹನ ರಾಜಧಾನಿಯನ್ನಾಗಿ ಮಾಡಲು ಪ್ರಯತ್ನಿಸುತ್ತಿದೆ. ಇನ್ನು ಎಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಉತ್ತೇಜಿಸಲು ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಇಲಾಖೆಯು ಹೊಸ ಅಧಿಸೂಚನೆಯನ್ನು ಹೊರಡಿಸಿದೆ. ಈ ಅಧಿಸೂಚನೆಯನ್ವಯ ಎಲೆಕ್ಟ್ರಿಕ್ ವಾಹನಗಳಿಗೆ ನೋಂದಣಿ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ.

ಮಾಲಿನ್ಯ ನಿಯಂತ್ರಣ ಪ್ರಮಾಣ ಪತ್ರ ಹೊಂದಿಲ್ಲದ ವಾಹನ ಸವಾರರಿಗೆ ಬೀಳಲಿದೆ ಭಾರೀ ಪ್ರಮಾಣದ ದಂಡ

ದೆಹಲಿ ರಾಜ್ಯದಂತೆ ಗುಜರಾತ್ ರಾಜ್ಯದಲ್ಲಿಯೂ ಸಹ ಎಲೆಕ್ಟ್ರಿಕ್ ವಾಹನಗಳಿಗೆ ಸಬ್ಸಿಡಿ ನೀಡಲಾಗುತ್ತಿದೆ. ಇದರಿಂದ ಮುಂಬರುವ ದಿನಗಳಲ್ಲಿ ಭಾರತದ ರಸ್ತೆಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಎಲೆಕ್ಟ್ರಿಕ್ ವಾಹನಗಳನ್ನು ಕಾಣುವುದು ಖಚಿತ.

ಗಮನಿಸಿ: ಈ ಲೇಖನದಲ್ಲಿರುವ ಚಿತ್ರಗಳನ್ನು ರೆಫರೆನ್ಸ್'ಗಾಗಿ ಬಳಸಲಾಗಿದೆ.

Most Read Articles

Kannada
English summary
Rs 10000 fine for not carrying puc certificate with vehicles in delhi details
Story first published: Wednesday, September 22, 2021, 11:42 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X