ಸಾಮಾನ್ಯ ಕಾರಿನಲ್ಲಿ ಬಂದು ಬೆಳಗಾವಿಯ ಗೂಡಂಗಡಿಯಲ್ಲಿ ಟೀ ಕುಡಿದು ಸಮಯ ಕಳೆದ ಕ್ರಿಕೆಟ್ ದೇವರು

ಮಾಸ್ಟರ್‌ ಬ್ಲಾಸ್ಟರ್‌ ಸಚಿನ್‌ ತೆಂಡೂಲ್ಕರ್‌ ಕ್ರಿಕೆಟ್ ಇತಿಹಾಸದಲ್ಲಿ ಶ್ರೇಷ್ಠ ಬ್ಯಾಟ್ಸ್‌ಮನ್‌ಗಳಲ್ಲಿ ಒಬ್ಬರು. ನವೆಂಬರ್ 1989 ರಲ್ಲಿ, ಅವರು ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ಕಾಲಿಟ್ಟರು. ಕರಾಚಿಯಲ್ಲಿ ಪಾಕಿಸ್ತಾನದ ವಿರುದ್ಧ ಪಾದಾರ್ಪಣೆ ಮಾಡಿದ ಅವರು ಭಾರತದ ಅತ್ಯಂತ ಕಿರಿಯ ಆಟಗಾರ ಎನಿಸಿಕೊಂಡರು.

ಸಾಮಾನ್ಯ ಕಾರಿನಲ್ಲಿ ಬಂದು ಬೆಳಗಾವಿಯ ಗೂಡಂಗಡಿಯಲ್ಲಿ ಟೀ ಕುಡಿದು ಸಮಯ ಕಳೆದ ಕ್ರಿಕೆಟ್ ದೇವರು

ಮಾಸ್ಟರ್‌ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಅವರು ಕ್ರಿಕೆಟ್ ಕ್ಷೇತ್ರದಲ್ಲಿ ಹಲವು ದಾಖಲೆಗಳನ್ನು ನಿರ್ಮಿಸಿದ್ದಾರೆ. ಅವರ ಕೆಲವು ದಾಖಲೆಗಳ ಹತ್ತಿರ ಯಾರೂ ಕೂಡ ಈವರೆಗೂ ಬಂದಿಲ್ಲ. ಸಚಿನ್ 2013ರಲ್ಲಿ ಅಂತರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದರು. ಸಚಿನ್ ತೆಂಡೂಲ್ಕರ್ ಅವರು ಭಾರತೀಯ ಸಂಸತ್ತಿನ ಮೇಲ್ಮನೆಯಾದ ರಾಜ್ಯಸಭೆಯ ಸದಸ್ಯರಾಗಿದ್ದರು. 2014 ರಲ್ಲಿ, ಅವರಿಗೆ ಭಾರತದ ಅತ್ಯುನ್ನತ ನಾಗರಿಕ ಗೌರವವಾದ 'ಭಾರತ ರತ್ನ' ಪ್ರಶಸ್ತಿಯನ್ನು ನೀಡಲಾಯಿತು. ಇಂತಹ ಗೌರವಕ್ಕೆ ಪಾತ್ರರಾದ ದೇಶದ ಏಕೈಕ ಆಟಗಾರ ಸಚಿನ್ ಆಗಿದ್ದಾರೆ.

ಸಾಮಾನ್ಯ ಕಾರಿನಲ್ಲಿ ಬಂದು ಬೆಳಗಾವಿಯ ಗೂಡಂಗಡಿಯಲ್ಲಿ ಟೀ ಕುಡಿದು ಸಮಯ ಕಳೆದ ಕ್ರಿಕೆಟ್ ದೇವರು

ಸಚಿನ್ ತೆಂಡೂಲ್ಕರ್ ಇತ್ತೀಚೆಗೆ ತಮ್ಮ ಯೂಟ್ಯೂಬ್ ಚಾನೆಲ್‌ನಲ್ಲಿ ವೀಡಿಯೊವನ್ನು ಹಂಚಿಕೊಂಡಿದ್ದಾರೆ, ಈ ವೀಡಿಯೊ ಹೆಚ್ಚಿನ ಮತ್ತು ನೂರಾರು ಕಾಮೆಂಟ್‌ಗಳು ಬಂದಿದೆ. ವಿಡಿಯೋದಲ್ಲಿ ಸಚಿನ್ ತೆಂಡುಲ್ಕರ್ ಬೆಳಗಾವಿ ಬಳಿಯ ರಾಷ್ಟ್ರೀಯ ಹೆದ್ದಾರಿ ನಾಲ್ಕು(ಎ) ರಸ್ತೆ ಪಕ್ಕದಲ್ಲಿನ ಸಣ್ಣ ಗೂಡಂಗಡಿಯಲ್ಲಿ ಟೀ ಸವಿದಿದ್ದಾರೆ.

ಸಾಮಾನ್ಯ ಕಾರಿನಲ್ಲಿ ಬಂದು ಬೆಳಗಾವಿಯ ಗೂಡಂಗಡಿಯಲ್ಲಿ ಟೀ ಕುಡಿದು ಸಮಯ ಕಳೆದ ಕ್ರಿಕೆಟ್ ದೇವರು

ವೈಜು ನಿತೂರ್ಕರ್ ಎಂಬುವವರ ಫೌಜಿ ಟೀ ಸ್ಟಾಲ್ ನಲ್ಲಿ ಚಹಾ ಸವಿದ ಸಚಿನ್ ತೆಂಡೂಲ್ಕರ್, ಟೀ ಮಾಲೀಕನ ಜೊತೆ ಸೆಲ್ಫಿ ಕ್ಲಿಕ್ಕಿಸಿಕೊಂಡಿದ್ದಾರೆ. ಸಚಿನ್ ತೆಂಡೂಲ್ಕರ್ ತಮ್ಮ ಪುತ್ರ ಅರ್ಜುನ್ ಜೊತೆ ಮುಂಬೈನಿಂದ ಗೋವಾಕ್ಕೆ ತೆರಳಿದ್ದರು. ಇದೇ ವೇಳೆ ಬೆಳಗಾವಿ ಮೂಲಕ ಹಾದು ಹೋಗಿದ್ದಾರೆ.

ಸಾಮಾನ್ಯ ಕಾರಿನಲ್ಲಿ ಬಂದು ಬೆಳಗಾವಿಯ ಗೂಡಂಗಡಿಯಲ್ಲಿ ಟೀ ಕುಡಿದು ಸಮಯ ಕಳೆದ ಕ್ರಿಕೆಟ್ ದೇವರು

ಇನ್ನು ಸಚಿನ್ ತೆಂಡೂಲ್ಕರ್ ಮತ್ತು ಅವರ ಪುತ್ರ ಅರ್ಜುನ್ ತೆಂಡೂಲ್ಕರ್ ಕುಡಿದ ಟೀ 175 ರೂ.ಗೆ ಆಗಿತ್ತು. ಸಚಿನ್ 200 ರೂಪಾಯಿ ಕೊಟ್ಟು ಈ ಬಿಲ್ ಪಾವತಿಸಿದ್ದಾರೆ. ಅಲ್ಲದೆ ವಾಪಸ್ ತೆಗೆದುಕೊಳ್ಳದೆ 25 ರೂ. ಅಷ್ಟೇ ಅಲ್ಲ ಈ ನೋಟಿಗೆ ಸಹಿ ಹಾಕಿದ್ದಾರೆ. ಬಳಿಕ ಟೀ ಅಂಗಡಿ ಮಾಲೀಕನ ಜೊತೆ ಸೆಲ್ಫಿ ಕೂಡ ತೆಗೆದುಕೊಂಡಿದ್ದಾರಂತೆ. ಸಚಿನ್ ತೆಂಡೂಲ್ಕರ್ ಅವರ ಸರಳತೆಗೆ ಇದೀಗ ಎಲ್ಲಡೆ ಮೆಚ್ಚುಗೆ ವ್ಯಕ್ತವಾಗುತ್ತಿದೆ.

ಸಾಮಾನ್ಯ ಕಾರಿನಲ್ಲಿ ಬಂದು ಬೆಳಗಾವಿಯ ಗೂಡಂಗಡಿಯಲ್ಲಿ ಟೀ ಕುಡಿದು ಸಮಯ ಕಳೆದ ಕ್ರಿಕೆಟ್ ದೇವರು

ಸಚಿನ್ ಅವರು ಕಿಯಾ ಕಾರೆನ್ಸ್ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು ಮತ್ತು ಅವರ ಅಂಗರಕ್ಷಕರು ಮತ್ತೊಂದು ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಈ ಕಿಯಾ ಕಾರೆನ್ಸ್ ಕಾರಿನ ಬಗ್ಗೆ ಹೇಳುವುದಾದರೆ, ಇದು 6 ಸೀಟರ್ ಮತ್ತು 7 ಸೀಟರ್ ಸೌಲಭ್ಯದೊಂದಿಗೆ ಮಧ್ಯಮ ಕ್ರಮಾಂಕದ ಎಂಪಿವಿ ಮತ್ತು ಎಸ್‌ಯುವಿ ಕಾರುಗಳಿಗೆ ಭರ್ಜರಿ ಪೈಪೋಟಿ ನೀಡುತ್ತಿದೆ.

ಸಾಮಾನ್ಯ ಕಾರಿನಲ್ಲಿ ಬಂದು ಬೆಳಗಾವಿಯ ಗೂಡಂಗಡಿಯಲ್ಲಿ ಟೀ ಕುಡಿದು ಸಮಯ ಕಳೆದ ಕ್ರಿಕೆಟ್ ದೇವರು

ಕಿಯಾ ಕಾರೆನ್ಸ್ ಪ್ರೀಮಿಯಂ, ಪ್ರೆಸ್ಟಿಜ್, ಪ್ರೆಸ್ಟಿಜ್ ಪ್ಲಸ್, ಲಗ್ಷುರಿ ಮತ್ತು ಲಗ್ಷುರಿ ಪ್ಲಸ್ ಎನ್ನುವ ಐದು ವೆರಿಯೆಂಟ್‌ಗಳಲ್ಲಿ ಹೊಸ ಕಾರು ಖರೀದಿಗೆ ಲಭ್ಯವಿದೆ. ಕಿಯಾ ಕಂಪನಿಯು ಸೆಲ್ಟೊಸ್ ಎಸ್‌ಯುವಿ ಮಾದರಿಯುವಂತೆಯೇ ಕಾರೆನ್ಸ್ ಕಾರಿನಲ್ಲೂ 1.5-ಲೀಟರ್ ಸಾಮಾನ್ಯ ಪೆಟ್ರೋಲ್, 1.4-ಲೀಟರ್ ಟರ್ಬೊ ಪೆಟ್ರೋಲ್ ಮತ್ತು 1.5-ಲೀಟರ್ ಡೀಸೆಲ್ ಎಂಜಿನ್ ಗಳಲ್ಲಿ ಲಭ್ಯವಿದೆ.

ಸಾಮಾನ್ಯ ಕಾರಿನಲ್ಲಿ ಬಂದು ಬೆಳಗಾವಿಯ ಗೂಡಂಗಡಿಯಲ್ಲಿ ಟೀ ಕುಡಿದು ಸಮಯ ಕಳೆದ ಕ್ರಿಕೆಟ್ ದೇವರು

ಅತ್ಯುತ್ತಮ ಪರ್ಫಾಮೆನ್ಸ್‌ನೊಂದಿಗೆ ಈ ವಿಭಾಗದಲ್ಲಿಯೇ ಅತಿ ಹೆಚ್ಚು ಮೈಲೇಜ್ ನೀಡುವ ಮಾದರಿ ಇದಾಗಿದೆ. ವಿವಿಧ ಎಂಜಿನ್ ಆಯ್ಕೆಯೊಂದಿಗೆ 6-ಸ್ಪೀಡ್ ಮ್ಯಾನುವಲ್, 6-ಸ್ಪೀಡ್ ಆಟೋಮ್ಯಾಟಿಕ್ ಅಥವಾ 7-ಸ್ಪೀಡ್ ಡ್ಯುಯಲ್ ಕ್ಲಚ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಮಾದರಿಯನ್ನು ಆಯ್ಕೆ ಮಾಡಬಹುದಾಗಿದೆ.

ಸಾಮಾನ್ಯ ಕಾರಿನಲ್ಲಿ ಬಂದು ಬೆಳಗಾವಿಯ ಗೂಡಂಗಡಿಯಲ್ಲಿ ಟೀ ಕುಡಿದು ಸಮಯ ಕಳೆದ ಕ್ರಿಕೆಟ್ ದೇವರು

ಈ ಕಾರಿನಲ್ಲಿ 1.5-ಲೀಟರ್ ಪೆಟ್ರೋಲ್ ಮಾದರಿಯು 6-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್‌ನೊಂದಿಗೆ 115 ಬಿಎಚ್‌ಪಿ ಪವರ್ ಮತ್ತು 144-ಎನ್ಎಂ ಟಾರ್ಕ್ ಉತ್ಪಾದನೆ ಮಾಡಿದ್ದಲ್ಲಿ 1.4-ಲೀಟರ್ ಟರ್ಬೊ ಪೆಟ್ರೋಲ್ ಮಾದರಿಯು 6-ಸ್ಪೀಡ್ ಮ್ಯಾನುವಲ್ ಮತ್ತು 7-ಸ್ಪೀಡ್ ಡ್ಯುಯಲ್ ಕ್ಲಚ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್‌ನೊಂದಿಗೆ 140-ಬಿಎಚ್‌ಪಿ, 242-ಎನ್ಎಂ ಟಾರ್ಕ್ ಉತ್ಪಾದನೆ ಮಾಡುತ್ತದೆ.

ಸಾಮಾನ್ಯ ಕಾರಿನಲ್ಲಿ ಬಂದು ಬೆಳಗಾವಿಯ ಗೂಡಂಗಡಿಯಲ್ಲಿ ಟೀ ಕುಡಿದು ಸಮಯ ಕಳೆದ ಕ್ರಿಕೆಟ್ ದೇವರು

1.5-ಲೀಟರ್ ಡೀಸೆಲ್ ಮಾದರಿಯು 6-ಸ್ಪೀಡ್ ಮ್ಯಾನುವಲ್ ಮತ್ತು 6-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆಯೊಂದಿಗೆ 115-ಬಿಎಚ್‌ಪಿ ಪವರ್ ಮತ್ತು 250 ಎನ್ಎಂ ಟಾರ್ಕ್ ಉತ್ಪಾದನೆ ಮಾಡಲಿದೆ. ಈ ಕಾರು ಪ್ರತಿಸ್ಪರ್ಧಿ ಮಾದರಿಗಳಿಂತಲೂ ಹೆಚ್ಚು ಮೈಲೇಜ್ ನೀಡುತ್ತದೆ.

ಸಾಮಾನ್ಯ ಕಾರಿನಲ್ಲಿ ಬಂದು ಬೆಳಗಾವಿಯ ಗೂಡಂಗಡಿಯಲ್ಲಿ ಟೀ ಕುಡಿದು ಸಮಯ ಕಳೆದ ಕ್ರಿಕೆಟ್ ದೇವರು

ಕಾರೆನ್ಸ್ ಕಾರಿನ 1.5 ಲೀಟರ್ ಪೆಟ್ರೋಲ್ ಮ್ಯಾನುವಲ್ ಮಾದರಿಯು ಪ್ರತಿ ಲೀಟರ್‌ಗೆ 15.7 ಕಿ.ಮೀ ಮೈಲೇಜ್ ನೀಡಿದ್ದಲ್ಲಿ 1.4 ಲೀಟರ್ ಟರ್ಬೊ ಪೆಟ್ರೋಲ್ ಮ್ಯಾನುವಲ್ ಮಾದರಿಯು ಪ್ರತಿ ಲೀಟರ್‌ಗೆ 16.2 ಕಿ.ಮೀ ಮತ್ತು ಆಟೋಮ್ಯಾಟಿಕ್ ಮಾದರಿಯು 16.5 ಕಿ.ಮೀ ಮೈಲೇಜ್ ನೀಡುತ್ತದೆ.

ಸಾಮಾನ್ಯ ಕಾರಿನಲ್ಲಿ ಬಂದು ಬೆಳಗಾವಿಯ ಗೂಡಂಗಡಿಯಲ್ಲಿ ಟೀ ಕುಡಿದು ಸಮಯ ಕಳೆದ ಕ್ರಿಕೆಟ್ ದೇವರು

ಹಾಗೆಯೇ 1.5 ಲೀಟರ್ ಡೀಸೆಲ್ ಮಾದರಿಯಲ್ಲಿನ ಮ್ಯಾನುವಲ್ ಮಾದರಿಯು ಪ್ರತಿ ಲೀಟರ್‌ಗೆ 21.3 ಕಿ.ಮೀ ಮೈಲೇಜ್ ನೀಡಿದ್ದಲ್ಲಿ ಆಟೋಮ್ಯಾಟಿಕ್ ಮಾದರಿಯು ಪ್ರತಿ ಲೀಟರ್‌ಗೆ 18.3 ಕಿ.ಮೀ ಮೈಲೇಜ್ ನೀಡಲಿದೆ. ಹೊಸ ಕಾರು ಸೆಲ್ಟೊಸ್ ಮಾದರಿಗಿಂತಲೂ ಹೆಚ್ಚಿನ ಮೈಲೇಜ್ ನೀಡಲಿದೆ. ಪರ್ಫಾಮೆನ್ಸ್‌ನಲ್ಲೂ ಗಮನಸೆಳೆಯಲಿದೆ.

ಸಾಮಾನ್ಯ ಕಾರಿನಲ್ಲಿ ಬಂದು ಬೆಳಗಾವಿಯ ಗೂಡಂಗಡಿಯಲ್ಲಿ ಟೀ ಕುಡಿದು ಸಮಯ ಕಳೆದ ಕ್ರಿಕೆಟ್ ದೇವರು

ಜೊತೆಗೆ ಹೊಸ ಕಾರೆನ್ಸ್ ಪ್ರತಿಸ್ಪರ್ಧಿ ಮಾದರಿಗಳಿಂತಲೂ ಹೆಚ್ಚಿನ ಸ್ಥಳಾವಕಾಶದೊಂದಿಗೆ 4540 ಎಂಎಂ ಉದ್ದ, 1800 ಎಂಎಂ ಅಗಲ, 1700 ಎಂಎಂ ಎತ್ತರ, 2780 ಎಂಎಂ ವ್ಹೀಲ್ ಬೆಸ್ ಮತ್ತು 195 ಎಂಎಂ ಗ್ರೌಂಡ್ ಕ್ಲಿಯೆರೆನ್ಸ್ ಹೊಂದಿದೆ. ಇದರೊಂದಿಗೆ ಆಕರ್ಷಕವಾದ ಡಿಸೈನ್ ಮತ್ತು ಗುಣಮಟ್ಟದ ಫೀಚರ್ಸ್ ಹೊಂದಿರುವುದು ಗ್ರಾಹಕರ ಆಯ್ಕೆಗೆ ಪ್ರಮುಖ ಆಕರ್ಷಣೆಯಾಗಿದೆ.

ಸಾಮಾನ್ಯ ಕಾರಿನಲ್ಲಿ ಬಂದು ಬೆಳಗಾವಿಯ ಗೂಡಂಗಡಿಯಲ್ಲಿ ಟೀ ಕುಡಿದು ಸಮಯ ಕಳೆದ ಕ್ರಿಕೆಟ್ ದೇವರು

ಇದರೊಂದಿಗೆ ಹೊಸ ಕಾರಿನಲ್ಲಿ ಕಿಯಾ ಕಂಪನಿಯು ಬೆಸ್ ವೆರಿಯೆಂಟ್‌ನಲ್ಲೂ ಲಭ್ಯವಾಗುವಂತೆ ಸ್ಟ್ಯಾಂಡರ್ಡ್ ಆಗಿ 6 ಏರ್‌ಬ್ಯಾಗ್ ಮತ್ತು ಆಲ್ ವ್ಹೀಲ್ ಡಿಸ್ಕ್ ಬ್ರೇಕ್ ಜೋಡಿಸಿದ್ದು, ಇನ್ನುಳಿದಂತೆ ವಿವಿಧ ವೆರಿಯೆಂಟ್‌ಗಳಿಗೆ ಅನ್ವಯಿಸುವಂತೆ ಎಬಿಎಸ್ ಜೊತೆ ಇಬಿಡಿ, ಇಎಸ್‌ಸಿ, ಹಿಲ್ ಸ್ಟಾರ್ಟ್ ಅಸಿಸ್ಟ್, ಟೈರ್ ಪ್ರೆಷರ್ ಮಾನಿಟರಿಂಗ್ ಸಿಸ್ಟಂ, ರಿಯರ್ ಪಾರ್ಕಿಂಗ್ ಸೆನ್ಸಾರ್ ಸೌಲಭ್ಯಗಳಿವೆ.

ಸಾಮಾನ್ಯ ಕಾರಿನಲ್ಲಿ ಬಂದು ಬೆಳಗಾವಿಯ ಗೂಡಂಗಡಿಯಲ್ಲಿ ಟೀ ಕುಡಿದು ಸಮಯ ಕಳೆದ ಕ್ರಿಕೆಟ್ ದೇವರು

ಇನ್ನು ಕಿಯಾ ಕಾರೆನ್ಸ್ ಕಾರು ಇಂಪೀರಿಯಲ್ ಬ್ಲೂ, ಇಂಟೆನ್ಸ್ ರೆಡ್, ಮಾಸ್ ಬ್ರೌನ್, ಸ್ಪಾರ್ಕ್ಲಿಂಗ್ ಸಿಲ್ವರ್, ಅರೋರಾ ಬ್ಲ್ಯಾಕ್ ಪರ್ಲ್, ಗ್ರಾವಿಟಿ ಗ್ರೇ ಮತ್ತು ಗ್ಲೇಸಿಯರ್ ವೈಟ್ ಪರ್ಲ್ ಬಣ್ಣಗಳಲ್ಲಿ ಆಯ್ಕೆ ಮಾಡಬಹುದಾಗಿದೆ.

Most Read Articles

Kannada
English summary
Sachin tendulkar roadtrip to goa in a kia carens mpv details
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X