ದೀಪಾವಳಿ ಹಬ್ಬಕ್ಕೆ ಹೊಸ ಬೆಂಝ್ ಕಾರು ಖರೀದಿಸಿದ ಸಲ್ಮಾನ್ ಖಾನ್ ತಂದೆ... ಕಾರಿಗೆ ವಿಶೇಷ ಪೂಜೆ
ಬಾಲಿವುಡ್ ಸೂಪರ್ ಸ್ಟಾರ್ ಸಲ್ಮಾನ್ ಖಾನ್‌ಗೆ ಲಾರೆನ್ಸ್ ಬಿಷ್ಣೋಯಿ ಗ್ಯಾಂಗ್ನಿಂದ ಕೊಲೆ ಬೆದರಿಕೆಗಳು ಸತತವಾಗಿ ಬರುತ್ತಲೇ ಇವೆ. ಬೆದರಿಕೆಯಿಂದಾಗಿ ಸಲ್ಮಾನ್ ಖಾನ್ ಸಂಪೂರ್ಣ ಭದ್ರತೆಗಾಗಿ ಬುಲೆಟ್ ಪ್ರೂಫ್ ಕಾರಿನಲ್ಲಿ ಓಡಾಡುತ್ತಾರೆ. ಇತ್ತೀಚೆಗೆ ಮತ್ತಷ್ಟು ಸೆಕ್ಯುರಿಟಿಗಾಗಿ ಕೋಟಿ ರೂಪಾಯಿ ಮೌಲ್ಯದ ಮತ್ತೊಂದು ಬುಲೆಟ್ಪ್ರೂಫ್ ಕಾರನ್ನು ಖರೀದಿ ಮಾಡಿದ್ದಾರೆ. ಸಲ್ಮಾನ್ ಖಾನ್ ತಂದೆ ಹಾಗೂ ಹಿರಿಯ ಬರಹಗಾರ ಸಲೀಂ ಖಾನ್ ( Salim Khan) ಕೂಡ ಅವರು ಹೊಸ ಕಾರನ್ನು ಖರೀದಿಸಿದ್ದಾರೆ. ಇದು ಮರ್ಸಿಡಿಸ್ ಬೆಂಝ್ ಜಿಎಲ್ಎಸ್ (Mercedes-Benz GLS) ಆಗಿದೆ. ಈ ಹೊಸ ಐಷಾರಾಮಿ ಕಾರಿಗೆ ವಿಶೇಷ ಪೂಜೆಯನ್ನು ಸಲ್ಲಿಸಿದ್ದಾರೆ.
ಮರ್ಸಿಡಿಸ್ ಬೆಂಝ್ ಜಿಎಲ್ಎಸ್ ಐಷಾರಾಮಿ ಕ್ಯಾಬಿನ್‌ನೊಂದಿಗೆ ಬರುವ ಭಾರತೀಯ ಸೆಲೆಬ್ರಿಟಿಗಳ ನೆಚ್ಚಿನ ಕಾರುಗಳಲ್ಲಿ ಒಂದಾಗಿದೆ. ನಟ ಅರ್ಜುನ್ ಕಪೂರ್, ರಣವೀರ್ ಸಿಂಗ್, ಅಜಯ್ ದೇವಗನ್ ಸೇರಿದಂತೆ ಅನೇಕ ತಾರೆಯರು ಈ ಕಾರನ್ನು ಹೊಂದಿದ್ದಾರೆ. ಈ ಮರ್ಸಿಡಿಸ್ ಬೆಂಝ್ ಜಿಎಲ್ಎಸ್ ಎಸ್‍ಯುವಿ ಬಗ್ಗೆ ಹೇಳುವುದಾದರೆ, ಇದರ ಬೆಲೆಯು 1.57 ಕೋಟಿ ರೂ. ಆಗಿದೆ.

ಅಮಿತಾಬ್ ಬಚ್ಚನ್ ಅವರ ವೃತ್ತಿಜೀವನದ ಅತ್ಯುತ್ತಮ ಚಿತ್ರಗಳಲ್ಲಿ ಒಂದಾದ ಶೋಲೆಯನ್ನು ಸಲೀಂ ಖಾನ್ ಬರೆದಿದ್ದಾರೆ. ಸಲೀಂ ಬಾಲಿವುಡ್ ಸೂಪರ್ ಸ್ಟಾರ್ ಸಲ್ಮಾನ್ ಖಾನ್ ಅವರ ತಂದೆಯೂ ಹೌದು. ಅವರ ಇತರ ಇಬ್ಬರು ಪುತ್ರರಾದ ಸೊಹೈಲ್ ಖಾನ್ ಮತ್ತು ಅರ್ಬಾಜ್ ಖಾನ್ ನಟರಾಗಿದ್ದಾರೆ. ಸಲೀಂ ಖಾನ್ ಖರೀದಿಸಿದ ಹೊಸ ಮರ್ಸಿಡಿಸ್ ಬೆಂಝ್ ಕಾರಿಗೆ ಪೂಜೆ ಸಲ್ಲಿಸುತ್ತಿರುವ ವೀಡೀಯೋ ಸೋಷಿಯಲ್ ಮೀಡಿಯಾಗಳಲ್ಲಿ ವೈರಲ್ ಆಗಿದೆ.
ಮರ್ಸಿಡಿಸ್ ಬೆಂಜ್ ಜಿಎಲ್‍ಎಸ್ ಫೇಸ್‌ಲಿಫ್ಟ್ ವಿನ್ಯಾಸದಲ್ಲಿ ಸಾಕಷ್ಟು ಬದಲಾವಣೆಯನ್ನು ಪಡೆದುಕೊಂಡಿದೆ. ಮುಂಭಾಗ ಗ್ರೀಲ್ ಅತ್ಯಾಧುನಿಕವಾಗಿದ್ದು, ಹಾರಿಜಾಂಟಲ್ ಕ್ರೋಮ್ ಸ್ಟ್ರಿಪ್, ನವೀನವಾದ ಡೇಟೈಮ್ ರನ್ನಿಂಗ್ ಲ್ಯಾಂಪ್ (DRL) ಹೊಂದಿದೆ. ಹಿಂಭಾಗದ ವಿನ್ಯಾಸ ಕೂಡ ಹೆಚ್ಚು ಆಕರ್ಷಣೀಯವಾಗಿದ್ದು, 21 - ಇಂಚಿನ ಅಲಾಯ್ ವೀಲ್ ಅನ್ನು ಪಡೆದಿದೆ.

ಈ ಜಿಎಲ್‍ಎಸ್ ಎಸ್‍ಯುವಿಯು, ಹೈಟೆಕ್ ಸಿಲ್ವರ್, ಸೊಡಲೈಟ್ ಬ್ಲೂ, ಸೆಲೆನೈಟ್ ಗ್ರೇ ಸೇರಿದಂತೆ 5 ಆಕರ್ಷಕ ಬಣ್ಣಗಳ ಆಯ್ಕೆಯಲ್ಲಿ ಖರೀದಿಗೆ ದೊರೆಯಲಿದ್ದು, ಒಳಭಾಗದಲ್ಲಿ ಹಲವು ಅತ್ಯಾಧುನಿಕ ವೈಶಿಷ್ಟ್ಯಗಳನ್ನು ಪಡೆದುಕೊಂಡಿದೆ. ಸೀಟುಗಳು ಹೆಚ್ಚು ಆರಾಮದಾಯಕವಾಗಿದ್ದು, ಹೊಸದಾದ ಸ್ಟೀರಿಂಗ್ ವೀಲ್ ಹಾಗೂ MBUX ಸಿಸ್ಟಮ್ (ಮಲ್ಟಿಮೀಡಿಯಾ ಡಿಜಿಟಲ್ ಕಾಕ್‌ಪಿಟ್) ಅನ್ನು ಹೊಂದಿದೆ.
ಮರ್ಸಿಡಿಸ್ ಬೆಂಜ್ ಜಿಎಲ್‍ಎಸ್ ಫೇಸ್‌ಲಿಫ್ಟ್ ಎಸ್‌ಯುವಿ, 2 ಎಂಜಿನ್ ಆಯ್ಕೆಯನ್ನು ಒಳಗೊಂಡಿದೆ. 3.0 - ಲೀಟರ್ ಇನ್-ಲೈನ್ 6 ಸಿಲಿಂಡರ್ ಡೀಸೆಲ್ ಎಂಜಿನ್, 362 bhp ಗರಿಷ್ಠ ಪವರ್ ಹಾಗೂ 750 Nm ಪೀಕ್ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. ಮತ್ತೊಂದು 3.0 - ಲೀಟರ್ ಇನ್-ಲೈನ್ 6 ಸಿಲಿಂಡರ್ ಪೆಟ್ರೋಲ್ ಎಂಜಿನ್, 375 bhp ಪವರ್, 500 Nm ಪೀಕ್ ಟಾರ್ಕ್ ಉತ್ಪಾದಿಸುತ್ತದೆ.
ಇವೆರೆಡು ಎಂಜಿನ್ 48ವಿ ಮೈಲ್ಡ್ ಹೈಬ್ರಿಡ್ ತಂತ್ರಜ್ಞಾನವನ್ನು ಪಡೆದಿದ್ದು, AWD (ಆಲ್ ವೀಲ್ ಡ್ರೈವ್) ಟೆಕ್ನಲಾಜಿಯನ್ನು ಒಳಗೊಂಡಿವೆ. ಜೊತೆಗೆ 8 ಸ್ವೀಡ್ ಆಟೋಮೆಟಿಕ್ ಗೇರ್ ಬಾಕ್ಸ್ ಆಯ್ಕೆಯಲ್ಲೂ ಸಿಗುತ್ತವೆ. ರ್ಸಿಡಿಸ್ ಬೆಂಜ್ ಜಿಎಲ್‍ಎಸ್ ಫೇಸ್‌ಲಿಫ್ಟ್ ಕಾರಿಗೆ ದೇಶೀಯ ಮಾರುಕಟ್ಟೆಯಲ್ಲಿ ಬಿಎಂಡಬ್ಲ್ಯೂ ಎಕ್ಸ್7 (BMW X7), ಆಡಿ ಕ್ಯೂ8 (Audi Q8), ರೇಂಜ್ ರೋವರ್ ಸ್ಪೋರ್ಟ್ (Range Rover Sport) ಪ್ರಬಲ ಎದುರಾಳಿಯಾಗಿವೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications