ನಟ ವಸಿಷ್ಠ ಸಿಂಹ - ಹರಿಪ್ರಿಯಾ ಜೋಡಿಯಿಂದ ಐಷಾರಾಮಿ ಮರ್ಸಿಡಿಸ್ ಕಾರು ಖರೀದಿ.. ಇಷ್ಟೊಂದು ಬೆಲೆಯೇ?
ನಟ ವಸಿಷ್ಠ ಸಿಂಹ ಹಾಗೂ ನಟಿ ಹರಿಪ್ರಿಯಾ ಸ್ಯಾಂಡಲ್‌ವುಡ್‌ನ ಕ್ಯೂಟ್ ಕಪಲ್ ಆಗಿದ್ದು, ತಮ್ಮ ಅದ್ಭುತ ನಟನೆಯ ಮೂಲಕ ದೊಡ್ಡ ಸಂಖ್ಯೆಯಲ್ಲಿ ಅಭಿಮಾನಿ ಬಳಗವನ್ನು ಹೊಂದಿದ್ದಾರೆ. ಕಂಚಿನ ಕಂಠದ ವಸಿಷ್ಠ ಸಿಂಹ, 2011ರಲ್ಲಿ ಐಟಿ ಕ್ಷೇತ್ರವನ್ನು ತೊರೆದು ಕನ್ನಡ ಚಿತ್ರರಂಗವನ್ನು ಪ್ರವೇಶಿದರು. ಅವರಿಗೆ 'ರಾಜಾಹುಲಿ' ಸಿನಿಮಾ ಸಾಕಷ್ಟು ಖ್ಯಾತಿಯನ್ನು ತಂದುಕೊಟ್ಟಿತ್ತು.
ನಟಿ ಹರಿಪ್ರಿಯಾ 2007ರಲ್ಲಿ ಸ್ಯಾಂಡಲ್‌ವುಡ್‌ಗೆ ಪಾದಾರ್ಪಣೆ ಮಾಡಿದರು. ಮಳೆ ಬರಲಿ ಮಂಜು ಇರಲಿ, ಕಳ್ಳರ ಸಂತೆ, ರನ್ನ , ಉಗ್ರಂ ಸಿನಿಮಾಗಳಲ್ಲಿ ನಟಿಸುವ ಮೂಲಕ ಭಾರೀ ಜನಪ್ರಿಯತೆಯನ್ನು ಗಳಿಸಿದರು. ಅವರು ಕನ್ನಡ ಮಾತ್ರವಲ್ಲದೆ ತೆಲುಗು, ತಮಿಳು ಹಾಗೂ ಮಲಯಾಳಂ ಚಿತ್ರಗಳಲ್ಲಿಯೂ ಅಭಿನಯಿಸಿದ್ದಾರೆ. ಕಳೆದ ವರ್ಷ ನಟ ವಸಿಷ್ಠ ಸಿಂಹ ಹಾಗೂ ನಟಿ ಹರಿಪ್ರಿಯಾ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು.

ಸದ್ಯ, ಅಭಿಮಾನಿಗಳಿಂದ 'ಸಿಂಹಪ್ರಿಯಾ' ಎಂದು ಕರೆಸಿಕೊಳ್ಳುವ ಈ ಜೋಡಿ, ಹೊಚ್ಚ ಹೊಸ ಮರ್ಸಿಡಿಸ್-ಬೆಂಜ್ ಜಿಎಲ್ಇ 450ಡಿ (Mercedes-Benz GLE 450d 4Matic) ಕಾರನ್ನು ಖರೀದಿಸಿದೆ. ನೂತನ ಎಸ್‌ಯುವಿಯನ್ನು ವಿತರಣೆ ಪಡೆಯುತ್ತಿರುವ ವಿಡಿಯೋವನ್ನು ವಸಿಷ್ಠ ಸಿಂಹ ಮತ್ತು ಹರಿಪ್ರಿಯಾ ತಮ್ಮ ಸಾಮಾಜಿಕ ಜಾಲತಾಣ ಖಾತೆಯಲ್ಲಿ ಹಂಚಿಕೊಂಡಿದ್ದು, ಆಪ್ತರು, ಚಿತ್ರರಂಗದ ಸ್ನೇಹಿತರು ಹಾಗೂ ಫ್ಯಾನ್ಸ್‌ಗಳಿಂದ ಶುಭಾಶಯಗಳ ಮಹಾಪೂರವೇ ಹರಿದುಬರುತ್ತಿದೆ.
ದೇಶೀಯ ಮಾರುಕಟ್ಟೆಯಲ್ಲಿ ಹೊಸ ಹೊಸ ಮರ್ಸಿಡಿಸ್-ಬೆಂಜ್ ಜಿಎಲ್ಇ 450ಡಿ ಎಸ್‌ಯುವಿ ರೂ.1.15 ಕೋಟಿ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. 3-ಲೀಟರ್ 6-ಸಿಲಿಂಡರ್ ಡೀಸೆಲ್ ಎಂಜಿನ್ ಆಯ್ಕೆಯನ್ನು ಪಡೆದಿದ್ದು, 367 ಪಿಎಸ್ ಗರಿಷ್ಠ ಪವರ್ (ಶಕ್ತಿ) ಹಾಗೂ 750 ಎನ್ಎಂ ಪೀಕ್ ಟಾರ್ಕ್ ಹೊರಹಾಕುತ್ತದೆ. ಜೊತೆಗೆ 9-ಸ್ಪೀಡ್ ಆಟೋಮೆಟಿಕ್ ಗೇರ್ ಬಾಕ್ಸ್ ಅನ್ನು ಒಳಗೊಂಡಿದೆ.

ಈ ಕಾರು AWD (ಆಲ್ ವೀಲ್ ಡ್ರೈವ್) ತಂತ್ರಜ್ಞಾನವನ್ನು ಹೊಂದಿದ್ದು, 230 ಕೆಎಂಪಿಹೆಚ್ ಗರಿಷ್ಠ ವೇಗ (ಟಾಪ್ ಸ್ಪೀಡ್)ವನ್ನು ಪಡೆಯಲಿದೆ. ನೂತನ ಎಸ್‌ಯುವಿಯಲ್ಲಿ 5 ಮಂದಿ ಆರಾಮದಾಯಕವಾಗಿ ಕುಳಿತುಕೊಂಡು ಪ್ರಯಾಣಿಸಬಹುದಾಗಿದ್ದು, 9 ಕೆಎಂಪಿಎಲ್ ಮೈಲೇಜ್ ನೀಡುತ್ತದೆ. ಪ್ರವಾಸದ ಸಂದರ್ಭದಲ್ಲಿ ಲಗೇಜ್ ಸಾಗಿಸಲು 630 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇಸ್ ಅನ್ನು ತನ್ನದಾಗಿಸಿಕೊಂಡಿದೆ.
ಹೊಸ ಮರ್ಸಿಡಿಸ್-ಬೆಂಜ್ ಜಿಎಲ್ಇ 450ಡಿ ಎಸ್‌ಯುವಿಯು ಬೆಲೆಗೆ ತಕ್ಕಂತೆ ಹಲವು ಅತ್ಯಾಧುನಿಕ ವೈಶಿಷ್ಟ್ಯಗಳನ್ನು ಹೊಂದಿದೆ. ಪ್ರಮುಖವಾಗಿ ಇನ್ಫೋಟೈನ್‌ಮೆಂಟ್ ಸಿಸ್ಟಮ್ & ಇನ್‌ಸ್ಟ್ರುಮೆಂಟೇಶನ್ ಕ್ಲಸ್ಟರ್‌ಗಾಗಿ 12.3-ಇಂಚಿನ ಡುಯಲ್ ಡಿಸ್ಪ್ಲೇ, 4-ಜೋನ್ ಕ್ಲೇಮೇಟ್ ಕಂಟ್ರೋಲ್, ಹೆಡ್ - ಅಪ್ ಡಿಸ್ಪ್ಲೇ, 590ಡಬ್ಲ್ಯೂ 13 - ಸ್ಪೀಕರ್ ಬರ್ಮೆಸ್ಟರ್ ಸೌಂಡ್ ಸಿಸ್ಟಮ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ.
ಈ ಕಾರು ಸುರಕ್ಷತೆಗೂ ಹೆಸರುವಾಸಿಯಾಗಿದ್ದು, 9 ಏರ್‌ಬ್ಯಾಗ್, ADAS (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) ನಂತಹ ಹತ್ತಾರು ರಕ್ಷಣಾತ್ಮಕ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಮರ್ಸಿಡಿಸ್-ಬೆಂಜ್ ಜಿಎಲ್ಇ 450ಡಿ ಎಸ್‌ಯುವಿಗೆ ಬಿಎಂಡಬ್ಲ್ಯೂ ಎಕ್ಸ್5 (BMW X5), ಆಡಿ ಕ್ಯೂ7 (Audi Q7) ಮತ್ತು ವೋಲ್ವೋ ಎಕ್ಸ್‌ಸಿ90 (Volvo XC90) ಕಾರುಗಳು ಪ್ರಬಲ ಪ್ರತಿಸ್ಪರ್ಧಿಯಾಗಿವೆ.
ಡ್ರೈವ್‌ಸ್ಪಾರ್ಕ್ ಕನ್ನಡ ತಂಡ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ಒದಗಿಸುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್ ಗಳನ್ನು ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications








