Just In
- 6 min ago
ಕಡಿಮೆ ಬೆಲೆಯ ಟಾಟಾ ಎಲೆಕ್ಟ್ರಿಕ್ ಕಾರಿನ ವಿತರಣೆ ಪ್ರಾರಂಭ: 2,000 ಕಾರುಗಳ ಹಸ್ತಾಂತರ
- 1 hr ago
ಮಾರುತಿ, ಟಾಟಾ ಕಾರುಗಳ ಪ್ರಾಬಲ್ಯದ ನಡುವೆ ದಾಖಲೆ ಮಟ್ಟದ ಮಾರಾಟವಾದ ಹ್ಯುಂಡೈ ಕ್ರೆಟಾ
- 1 hr ago
13 ಉದ್ಯೋಗಿಗಳಿಗೆ ಹೊಸ ಟೊಯೋಟಾ ಗ್ಲಾನ್ಜಾ ಕಾರುಗಳನ್ನು ಉಡುಗೊರೆಯಾಗಿ ನೀಡಿದ ಕಂಪನಿ
- 2 hrs ago
ಸಂಚಾರಿ ನಿಯಮ ಉಲ್ಲಂಘನೆ ದಂಡ ಪಾವತಿಸಿದ್ರೆ 50% ರಿಯಾಯಿತಿ: ರಾಜ್ಯ ಸರ್ಕಾರ ಆದೇಶ
Don't Miss!
- Sports
Border-Gavaskar Trophy: ಭಾರತ ವಿರುದ್ಧ ಮೊದಲ ಪಂದ್ಯದಲ್ಲಿ ಈ ವೇಗಿ ಬೌಲಿಂಗ್ ಮಾಡಲ್ಲ; ಪ್ಯಾಟ್ ಕಮ್ಮಿನ್ಸ್
- News
Namma Metro: ನೆಲಮಂಗಲದ BIEC ವರೆಗೂ ಗ್ರೀನ್ ಲೈನ್ ವಿಸ್ತರಣೆ- ಆಸ್ತಿ ಖರೀದಿದಾರರಿಗೆ ಸ್ಪರ್ಗ ಸೃಷ್ಟಿ, ಯಾರ್ಯಾರಿಗೆ ಲಾಭ?
- Finance
ಅದಾನಿ ಗ್ರೂಪ್ ಬಿಕ್ಕಟ್ಟಿನ ಮಧ್ಯೆ ಭರವಸೆ ನೀಡಿದ ವಿತ್ತ ಸಚಿವೆ, ಹೇಳಿದ್ದೇನು?
- Lifestyle
ಗಂಡ-ಹೆಂಡತಿ ಜಗಳವಾಡಿದರೆ ಈ ಪ್ರಯೋಜನಗಳೂ ಇವೆ!
- Technology
ಕ್ಯಾನನ್ ಕಂಪೆನಿಯಿಂದ ಹೊಸ ಪ್ರಿಂಟರ್ ಬಿಡುಗಡೆ! ಏನೆಲ್ಲಾ ಸೌಲಭ್ಯವಿದೆ ಗೊತ್ತಾ?
- Movies
Paaru: ತಾಯಿ ಆಗುತ್ತಿರುವ ವಿಚಾರವನ್ನು ಆದಿ ಬಳಿ ಹೇಳಿಯೇ ಬಿಡುತ್ತಾಳಾ ಪಾರು?
- Education
KVS Recruitment 2022 : ಕೇಂದ್ರೀಯ ವಿದ್ಯಾಲಯ ಸಂಗತನ್ ದಲ್ಲಿ 13404 ಹುದ್ದೆಗಳ ನೇಮಕಾತಿ
- Travel
ಯಾವುದೇ ಚಿಂತೆ ಇಲ್ಲದೆ ಸುಖಕರ ಪ್ರಯಾಣ ಅನುಭವಿಸಲು ಇಲ್ಲಿದೆ ಸಲಹೆಗಳು
ನಿರ್ದೇಶಕನ ಶ್ರಮ ಮೊದಲೇ ಗುರ್ತಿಸಿದ್ದ ನಿರ್ಮಾಪಕ...ಸಿನಿಮಾ ಹಿಟ್ ಆಗಿದ್ದೇ ತಡ ಕಾರ್ ಗಿಫ್ಟ್ ನೀಡಿ ಅಭಿನಂದನೆ
ದುಬಾರಿ ಗಿಫ್ಟ್‌ಗಳನ್ನು ಕೊಡುವುದು , ಪಡೆಯುವುದು ಸಿನಿಮಾ ಸೆಲೆಬ್ರಿಟಿಗಳಿಗೇನೂ ಹೊಸದಲ್ಲ. ಸಿರಿವಂತ ಸಿನಿಮಾ ನಟ, ನಟಿಯರಿಗಂತೂ ದುಬಾರಿ ಉಡುಗೊರೆಗಳು ಕಾಮನ್ ಆಗಿದೆ. ಅನೇಕ ಸಿನಿಮಾ ಸೆಲೆಬ್ರಿಟಿಗಳು ಕಾರುಗಳನ್ನು ಉಡುಗೊರೆಯಾಗಿ ಪಡೆಯುವುದು ಆಗಾಗ ಸುದ್ದಿಯಾಗುತ್ತದೆ.

ಇತ್ತೀಚೆಗೆ ಸರ್ದಾರ್ ಎಂಬ ತಮಿಳು ಚಿತ್ರ ಸೂಪರ್ ಹಿಟ್ ಆದ ಬಳಿಕ ನಿರ್ಮಾಪಕರು ನಿರ್ದೇಶಕ ಪಿಎಸ್ ಮಿತ್ರನ್ ಅವರಿಗೆ ದುಬಾರಿ ಟೊಯೊಟಾ ಫಾರ್ಚೂನರ್ ಕಾರನ್ನು ಉಡುಗೊರೆಯಾಗಿ ನೀಡಿದ್ದಾರೆ. ಸರ್ದಾರ್ ಚಿತ್ರಕ್ಕೆ ಸಿನಿಮಾಗೆ ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ದಕ್ಕಿದೆ. ಈ ಸಿನಿಮಾವು ಬಾಕ್ಸ್ ಆಫೀಸ್‌ನಲ್ಲಿ ಸಖತ್ ಕಲೆಕ್ಷನ್ ಮಾಡಿದೆ. ದೀಪಾವಳಿಗೆ ಮುನ್ನ ಬಿಡುಗಡೆಯಾದ ಈ ಸರ್ದಾರ್ ಸಿನಿಮಾ ತಮಿಳುನಾಡಿನಾದ್ಯಂತ ಹಿಟ್ ಆಗಿ ಹೊರಹೊಮ್ಮಿದೆ. ವರದಿಗಳ ಪ್ರಕಾರ, ಚಿತ್ರವು ಸುಮಾರು 85 ಕೋಟಿ (ವಿಶ್ವದಾದ್ಯಂತ ಬಾಕ್ಸ್ ಆಫೀಸ್ ಕಲೆಕ್ಷನ್) ಗಳಿಸಿದೆ.

ಸದ್ಯದಲ್ಲೇ 100 ಕೋಟಿ ಕ್ಲಬ್ ಸೇರುವ ನಿರೀಕ್ಷೆ ಇದೆ. ಕಾರ್ತಿ ಮತ್ತು ಪಿಎಸ್ ಮಿತ್ರನ್ ಚಿತ್ರದ ಎರಡನೇ ಭಾಗಕ್ಕಾಗಿ ಮತ್ತೆ ಒಂದಾಗಲಿದ್ದಾರೆ, ಇದನ್ನು ಸರ್ದಾರ್ ಯಶಸ್ಸಿನ ಸಭೆಯಲ್ಲಿ ಅಧಿಕೃತವಾಗಿ ಖಚಿತಪಡಿಸಲಾಯಿತು.

ಸರ್ದಾರ್ ಚಿತ್ರದ ನಿರ್ಮಾಪಕರು ಗಿಫ್ಟ್ ಕೊಟ್ಟ ಟೊಯೊಟಾ ಫಾರ್ಚೂನರ್ ಎಸ್‍ಯುವಿಯ ಬಗ್ಗೆ ಹೇಳುವುದಾದರೆ, ಟೊಯೊಟಾ ಫಾರ್ಚುನರ್ ಭಾರತೀಯ ಮಾರುಕಟ್ಟೆಯಲ್ಲಿ ಬಹುದೀರ್ಘ ಕಾಲದಿಂದ ಜನಪ್ರಿಯ ಎಸ್‍ಯುವಿಯಾಗಿದೆ.

ಈ ಟೊಯೋಟಾ ಫಾರ್ಚೂನರ್ ಫೇಸ್‌ಲಿಫ್ಟ್ ಎಸ್‍ಯುವಿಯ ವಿನ್ಯಾಸದ ಬಗ್ಗೆ ಹೇಳುವುದಾದರೆ, 2021ರ ಫಾರ್ಚೂನರ್ ಫೇಸ್‌ಲಿಫ್ಟ್ ಸಂಯೋಜಿತ ಎಲ್‌ಇಡಿ ಡಿಆರ್‌ಎಲ್‌ಗಳೊಂದಿಗೆ ನವೀಕರಿಸಿದ ಎಲ್‌ಇಡಿ ಪ್ರೊಜೆಕ್ಟರ್ ಹೆಡ್‌ಲ್ಯಾಂಪ್‌ಗಳನ್ನು ಹೊಂದಿವೆ.

ಇದರೊಂದಿಗೆ ಕ್ರೋಮ್ ಸರೌಂಡ್‌ನೊಂದಿಗೆ ದೊಡ್ಡ ಫ್ರಂಟ್ ಗ್ರಿಲ್, ಫಾಗ್ ಲ್ಯಾಂಪ್‌ಗಳಿಗಾಗಿ ಹೊಸ ಹೌಸಿಂಗ್‌ಗಳೊಂದಿಗೆ ನವೀಕರಿಸಿದ ಫ್ರಂಟ್ ಬಂಪರ್ ಹೊಂದಿದೆ. ಹೊಸ 18 ಇಂಚಿನ ಅಲಾಯ್ ವ್ಹೀಲ್ ಗಳು ಮತ್ತು ಹಿಂಭಾಗದಲ್ಲಿ ಎಲ್ಇಡಿ ಟೈಲ್ ಲ್ಯಾಂಪ್ ಗಳನ್ನು ಅಳವಡಿಸಲಾಗಿದೆ.

ಇನ್ನು ಟೊಯೊಟಾ ಫಾರ್ಚೂನರ್ ಫೇಸ್‌ಲಿಫ್ಟ್ ಎಸ್‍ಯುವಿಯ ಒಳಭಾಗದಲ್ಲಿ ಈಗ ಹೆಚ್ಚು ಪ್ರೀಮಿಯಂ ಆಗಿ ನವೀಕರಿಸಿದ್ದು, ಕೆಲವು ಹೊಸ ಫೀಚರ್ಸ್ ಅನ್ನು ಅಳವಡಿಸಿದೆ. ಆಪಲ್ ಕಾರ್ ಪ್ಲೇ ಮತ್ತು ಆಂಡ್ರಾಯ್ಡ್ ಆಟೋಗಳೊಂದಿಗಿನ ಹೊಸ 8.0-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಂ ಮತ್ತು ಕನೆಕ್ಟಿವಿಟಿ ಕಾರು ತಂತ್ರಜ್ಞಾನವನ್ನು ಹೊಂದಿದೆ.

ಇದರೊಂದಿಗೆ ವೆಂಟಿಲೇಟಡ್ ಮುಂಭಾಗದ ಸೀಟುಗಳು, ಇನ್ಸ್ ಟ್ರೂಮೆಂಟ್ ಕ್ಲಸ್ಟರ್, 11-ಸ್ಪೀಕರ್ ಜೆಬಿಎಲ್ ಆಡಿಯೊ ಸಿಸ್ಟಂ, ಆಂಬಿಯೆಂಟ್ ಲೈಟಿಂಗ್ ಮತ್ತು ಇತರ ಫೀಚರ್ ಗಳನ್ನು ಒಳಗೊಂಡಿದೆ. ಇನ್ನು ಟೊಯೊಟಾ ತನ್ನ ಫಾರ್ಚುನರ್ ಲೆಜೆಂಡರ್ 4X4 ವೆರಿಯೆಂಟ್ ಭಾರತೀಯ ಮಾರುಕಟ್ಟೆಯಲ್ಲಿ ಇತ್ತೀಚೆಗೆ ಬಿಡುಗಡೆಗೊಳಿಸಿತ್ತು. ಈ ಜನಪ್ರಿಯ ಟೊಯೊಟಾ ಫಾರ್ಚುನರ್ ಎಸ್‍ಯುವಿಯ ಟಾಪ್ ವೆರಿಯೆಂಟ್ ಲೆಜೆಂಡರ್ ಆಗಿದೆ.

ಹೊಸ ಟೊಯೊಟಾ ಫಾರ್ಚೂನರ್ ಲೆಜೆಂಡರ್ ವೆರಿಯೆಂಟ್ ನಲ್ಲಿ ಸುರಕ್ಷತೆಗಾಗಿ 7 ಏರ್‌ಬ್ಯಾಗ್‌ಗಳು, ಇಬಿಡಿಯೊಂದಿಗೆ ಎಬಿಎಸ್, ಬ್ರೇಕ್ ಅಸಿಸ್ಟ್, 360 ಡಿಗ್ರಿ ಕ್ಯಾಮೆರಾ, ಸ್ಟೆಬಿಲಿಟಿ ಕಂಟ್ರೋಲ್, ಐಎಸ್‌ಒಫಿಕ್ಸ್ ಚೈಲ್ಡ್ ಸೀಟ್ ಮೌಂಟಡ್, ಸ್ಪೀಡ್ ಸೆನ್ಸಿಂಗ್ ಆಟೋ ಡೋರ್ ಲಾಕ್ (ಆಟೋ ಎಮರ್ಜೆನ್ಸಿ ಅನ್‌ಲಾಕ್) ಮತ್ತು ಎಮರ್ಜನ್ಸಿ ಬ್ರೇಕ್ ಸಿಗ್ನಲ್‌ನಂತಹ ಸಾಕಷ್ಟು ಸುರಕ್ಷತಾ ವೈಶಿಷ್ಟ್ಯಗಳನ್ನು ಹೊಂದಿವೆ.

ಈ ಎಸ್‍ಯುವಿ 2.7-ಲೀಟರ್ ಪೆಟ್ರೋಲ್ ಮತ್ತು 2.8-ಲೀಟರ್ ಡೀಸೆಲ್ ಎಂಜಿನ್ ಆಯ್ಕೆಗಳನ್ನು ಒಳಗೊಂಡಿದೆ. 2.7-ಲೀಟರ್ ಪೆಟ್ರೋಲ್ ಎಂಜಿನ್ 166 ಬಿಹೆಚ್‍ಪಿ ಪವರ್ ಮತ್ತು 245 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಇದನ್ನು ಐದು-ಸ್ಪೀಡ್ ಮ್ಯಾನುವಲ್ ಅಥವಾ ಆರು-ಸ್ಪೀಡ್ ಆಟೋಮ್ಯಾಟಿಕ್ ಗೇರ್ ಬಾಕ್ಸ್ ನೊಂದಿಗೆ ಜೋಡಿಸಲಾಗಿದೆ.

ಆಟೋಮ್ಯಾಟಿಕ್ ಗೇರ್‌ಬಾಕ್ಸ್ ನೊಂದಿಗೆ ಡೀಸೆಲ್ ಎಂಜಿನ್ 177 ಬಿಹೆಚ್‍ಪಿ ಪವರ್ ಮತ್ತು 420 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಇನ್ನು ಆರು-ಸ್ಪೀಡ್ ಟಾರ್ಕ್ ಕರ್ನವಾಟರ್ ಗೇರ್ ಬಾಕ್ಸ್ ಜೋಡಿಸಲಾದ ಯುನಿಟ್ 201 ಬಿಹೆಚ್‍ಪಿ ಪವರ್ ಮತ್ತು 500 ಎನ್ಎಂ ಟಾರ್ಕ್ ಉತ್ಪಾದಿಸುತ್ತದೆ.

ಟೊಯೊಟಾ ಫಾರ್ಚುನರ್ ಲೆಜೆಂಡರ್ 4X2 ಮಾದರಿಗೆ ಹೋಲಿಸಿದರೆ 4X4 ವೆರಿಯೆಂಟ್ ಯಾವುದೇ ವಿಶೇಷ ಬಾಹ್ಯ ಬಿಟ್‌ಗಳನ್ನು ಪಡೆಯುವುದಿಲ್ಲ. ಈ ಹೊಸ ಲೆಜೆಂಡರ್ ಎಸ್‍ಯುವಿಯು ಹೆಚ್ಚು ಅಗ್ರೇಸಿವ್ ಮತ್ತು ಸ್ಪೋರ್ಟಿಯರ್ ವಿನ್ಯಾಸವನ್ನು ಹೊಂದಿದೆ. ಲೆಜೆಂಡರ್ ಮರುವಿನ್ಯಾಸಗೊಳಿಸಲಾದ ಹೆಡ್‌ಲ್ಯಾಂಪ್ ಕ್ಲಸ್ಟರ್ ಅನ್ನು ಹೊಂದಿದೆ. ಡಿಆರ್‌ಎಲ್‌ಗಳು ಹೊಂದಿದೆ. ಇದನ್ನು ಟೊಯೊಟಾ ವಾಟರ್ ಫಾಲ್ ಡಿಆರ್‌ಎಲ್‌ಗಳು' ಎಂದು ಕರೆಯಲಾಗಿದೆ.

ಇದರ ಹೆಡ್‌ಲ್ಯಾಂಪ್‌ಗಳ ಕೆಳಗೆ ಫಾಗ್ ಲ್ಯಾಂಪ್ ಗಳಿವೆ. ಇನ್ನು ಡೈನಾಮಿಕ್ ಟರ್ನ್ ಸಿಗ್ನಲ್ ಇಂಡೀಕೆಟರ್ ಗಳಿವೆ. ಫಾರ್ಚೂನರ್ ಲೆಜೆಂಡರ್ ಸುತ್ತಲೂ ಎಲ್ಇಡಿ ಲೈಟಿಂಗ್ ಹೊಂದಿದೆ. ಇನ್ನು ಇದರ ಸೈಡ್ ಪ್ರೊಫೈಲ್ ಬಗ್ಗೆ ಹೇಳುವುದಾದರೆ, ಇದರಲ್ಲಿ 18 ಇಂಚಿನ ಮೆಷಿನ್-ಕಟ್ ಅಲಾಯ್ ವ್ಹೀಲ್‌ಗಳನ್ನು ಅಳವಡಿಸಲಾಗಿದೆ. ಇನ್ನು ಡೋರಿನ ಹ್ಯಾಂಡಲ್‌ಗಳಲ್ಲಿ ಕೆಲವು ಕ್ರೋಮ್ ಇದೆ ಮತ್ತು ಉದ್ದಕ್ಕೂ ಸ್ಟ್ರಿಪ್ ಅನ್ನು ಸಹ ಕ್ರೋಮ್‌ನಿಂದಮಾಡಲಾಗಿದೆ.

ಲೆಜೆಂಡರ್ ವೆರಿಯೆಂಟ್ ಮಾದರಿಯ ಹಿಂಭಾಗದಲ್ಲಿ ನಯವಾದ-ಕಾಣುವ ಎಲ್ಇಡಿ ಟೈಲ್ ಲ್ಯಾಂಪ್ ಗಳನ್ನು ಅಳವಡಿಸಲಾಗಿದೆ. ಅದನ್ನು ಎರಡು ವಿಭಾಗಗಳಾಗಿ ವಿಂಗಡಿಸಲಾಗಿದೆ. ಇದು ಬ್ಲ್ಯಾಕ್ ಸ್ಟ್ರಿಪ್ ಸಹ ಪಡೆಯುತ್ತದೆ, ಅದು ಎರಡೂ ಟೈಲ್ ಲೈಟ್‌ಗಳನ್ನು ಅದರ ಉದ್ದಕ್ಕೂ 'ಫೋರ್ಟೂನರ್' ಬ್ರ್ಯಾಂಡಿಂಗ್‌ನೊಂದಿಗೆ ಸಂಪರ್ಕಿಸುತ್ತದೆ.

ಈ ಎಸ್‍ಯುವಿಯು ಟೂ ವ್ಹೀಲ್ ಡ್ರೈವ್ ಮತ್ತು ಫ್ಹೋರ್ ವ್ಹೀಲ್ ಡ್ರೈವ್ ಕಾನ್ಫಿಗರೇಶನ್‌ಗಳ ಆಯ್ಕೆಯನ್ನು ಹೊಂದಿರಲಿದೆ. ಈ ಹಿಂದಿನ ಫಾರ್ಚೂನರ್ ಮಾದರಿಗೆ ಹೋಲಿಸಿದರೆ ಫಾರ್ಚೂನರ್ ಫೇಸ್‌ಲಿಫ್ಟ್ ಹಲವಾರು ಅಪ್ಡೇಟ್ ಗಳನ್ನು ಪಡೆದುಕೊಂಡಿದೆ.