ಸರಿಗಮಪ ಸೀಸನ್ 20: ಗ್ರ್ಯಾಂಡ್ ಪರ್ಫಾರ್ಮೆರ್ ಅಮೂಲ್ಯಗೆ ದೊರೆಯಿತು ಜನಪ್ರಿಯ ಗ್ರ್ಯಾಂಡ್ ವಿಟಾರಾ ಕಾರು

ಜೀ ಕನ್ನಡದಲ್ಲಿ ಪ್ರಸಾರವಾಗುವ ಜನಪ್ರಿಯ ರಿಯಾಲಿಟಿ ಶೋ ಸರಿಗಮಪ ಸೀಸನ್ 20 (SaReGaMaPa Season 20)ಕ್ಕೆ ಭಾನುವಾರ ಅದ್ದೂರಿಯಾಗಿ ತೆರೆ ಬಿದ್ದಿದೆ. ದರ್ಶನ್​ ನಾರಾಯಣ್​ ಅವರಿಗೆ ವಿಜಯಲಕ್ಷ್ಮೀ ಒಲಿದಿದ್ದಾಳೆ. ರಮೇಶ್​​ ಲಮಾಣಿ ಮೊದಲ​ ರನರ್ ಅಪ್ ಆಗಿದ್ದು, ಡಾ.ಶ್ರಾವ್ಯಾ ರಾವ್ 2ನೇ ರನ್ನರ್ ಅಪ್ ಆಗಿ ಹೊರಹೊಮ್ಮಿದ್ದಾರೆ.

ಶೋ ಆರಂಭದಿಂದ ತಮ್ಮ ಮಧುರವಾದ ಧ್ವನಿಯಿಂದಲೇ ಎಲ್ಲರನ್ನು ಸೆಳೆದಿದ್ದ ಮೈಸೂರಿನ ಅಮೂಲ್ಯ ಸರಿಗಮಪ ಸೀಸನ್ 20ರ ಗ್ರ್ಯಾಂಡ್ ಪರ್ಫಾರ್ಮೆರ್ ಆಗಿದ್ದು, ಅವರಿಗೆ ಹೊಚ್ಚ ಹೊಸ ಮಾರುತಿ ಸುಜುಕಿ ಗ್ರ್ಯಾಂಡ್ ವಿಟಾರಾ (Maruti Suzuki Grand Vitara) ಎಸ್‌ಯುವಿಯನ್ನು ಬಹುಮಾನವಾಗಿ ನೀಡಲಾಗಿದೆ. ಈ ಸಂದರ್ಭದಲ್ಲಿ ವೇದಿಕೆ ಮೇಲೆ ಗಾಯಕರಾದ ವಿಜಯ್ ಪ್ರಕಾಶ್, ರಾಜೇಶ್ ಕೃಷ್ಣನ್ ಇತರರು ಉಪಸ್ಥಿತರಿದ್ದರು.

Saregamapa 20 kannada Signing Show Amulya become Grand Performer Maruti Suzuki Grand Vitara Car award

ಸದ್ಯ ಯುವ ಗಾಯಕಿ ಅಮೂಲ್ಯಗೆ ಮಾರುತಿ ಸುಜುಕಿ ಗ್ರ್ಯಾಂಡ್ ವಿಟಾರಾದ ಯಾವ ರೂಪಾಂತರವನ್ನು ಕೊಡಲಾಗಿದೆ ಎಂಬುದರ ಬಗ್ಗೆ ಹೆಚ್ಚಿನ ವಿವರಗಳಿಲ್ಲ. ಈ ಕಾರು ದೇಶೀಯ ಮಾರುಕಟ್ಟೆಯಲ್ಲಿ ರೂ.10.80 ಲಕ್ಷದಿಂದ ರೂ.20.09 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ ಸಿಗುತ್ತದೆ. ಸಿಗ್ಮಾ, ಡೆಲ್ಟಾ ಮತ್ತು ಜಿಟಾ ಸೇರಿದಂತೆ 6 ರೂಪಾಂತರ ಮತ್ತು ವಿವಿಧ ಆಕರ್ಷಕ ಬಣ್ಣಗಳೊಂದಿಗೂ ದೊರೆಯುತ್ತದೆ. ಈ ಕಾರಿನಲ್ಲಿ 5 ಮಂದಿ ಪ್ರಯಾಣಿಸಬಹುದು.

ಮಾರುತಿ ಸುಜುಕಿ ಗ್ರ್ಯಾಂಡ್ ವಿಟಾರಾ 1.5-ಲೀಟರ್ ಪೆಟ್ರೋಲ್ ಮೈಲ್ಡ್ ಹೈಬ್ರಿಡ್, 1.5-ಲೀಟರ್ ಸ್ಟ್ರಾಂಗ್ ಹೈಬ್ರಿಡ್ ಮತ್ತು ಸಿಎನ್‌ಜಿ ಎಂಜಿನ್ ಆಯ್ಕೆಯನ್ನು ಹೊಂದಿದೆ. ಜೊತೆಗೆ 5-ಸ್ವೀಡ್ ಮ್ಯಾನುವಲ್, 6-ಸ್ವೀಡ್ ಆಟೋಮೆಟಿಕ್ ಅಥವಾ ಇ-ಸಿವಿಟಿ ಗೇರ್ ಬಾಕ್ಸ್ ನೊಂದಿಗೂ ಲಭ್ಯವಿದೆ. ಪೆಟ್ರೋಲ್ ರೂಪಾಂತರಗಳು 19.38 ರಿಂದ 27.97 ಕೆಎಂಪಿಎಲ್ ಮತ್ತು ಸಿಎನ್‌ಜಿ ಮಾದರಿ 26.6 ಕೆಎಂ/ಕೆಜಿ ಮೈಲೇಜ್ ಕೊಡುತ್ತದೆ.

Saregamapa 20 kannada Signing Show Amulya become Grand Performer Maruti Suzuki Grand Vitara Car award

ವಿನ್ಯಾಸದ ದೃಷ್ಟಿಯಿಂದಲೂ ಗ್ರ್ಯಾಂಡ್ ವಿಟಾರಾ ಎಸ್‌ಯುವಿ ಅತ್ಯಾಧುನಿಕವಾಗಿದ್ದು, ರೂಪಾಂತರಗಳಿಗೆ ಅನುಗುಣವಾಗಿ FWD (ಫ್ರಂಟ್ ವೀಲ್ ಡ್ರೈವ್) ಮತ್ತು AWD (ಆಲ್ ವೀಲ್ ಡ್ರೈವ್) ತಂತ್ರಜ್ಞಾನವನ್ನು ಹೊಂದಿದೆ. 7-ಇಂಚಿನ ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ಸನ್‌ರೂಫ್, ಆಂಬಿಯೆಂಟ್ ಲೈಟಿಂಗ್, ವೈರ್‌ಲೆಸ್ ಫೋನ್ ಚಾರ್ಜರ್, ವೆಂಟಿಲೇಟೆಡ್ ಫ್ರಂಟ್ ಸೀಟ್ ಮತ್ತು ಹೆಡ್ಸ್ ಅಪ್ ಡಿಸ್ಪ್ಲೇನಂತಹ ಹಲವು ವೈಶಿಷ್ಟ್ಯಗಳನ್ನು ಒಳಗೊಂಡಿದೆ.

ಸುರಕ್ಷತೆಗೂ ಗ್ರ್ಯಾಂಡ್ ವಿಟಾರಾ (Grand Vitara) ಎಸ್‌ಯುವಿ ಹೆಸರುವಾಸಿಯಾಗಿದ್ದು, ಪ್ರಯಾಣಿಕರಿಗೆ ಗರಿಷ್ಠ ರಕ್ಷಣೆಯನ್ನು ಒದಗಿಸುತ್ತದೆ. 6 ಏರ್‌ಬ್ಯಾಗ್‌, ESP (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ), TPMS (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), 360 ಡಿಗ್ರಿ ಕ್ಯಾಮೆರಾ, ಹಿಲ್ ಡಿಸೆಂಟ್ ಕಂಟ್ರೋಲ್ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಹೊಂದಿದೆ.

ಭಾರತದಲ್ಲಿ ಮಾರುತಿ ಸುಜುಕಿ ಗ್ರ್ಯಾಂಡ್ ವಿಟಾರಾ ಕಾರಿಗೆ ಹ್ಯುಂಡೈ ಕ್ರೆಟಾ, ಹೋಂಡಾ ಎಲಿವೇಟ್, ಕಿಯಾ ಸೆಲ್ಟೋಸ್, ಪೋಕ್ಸ್‌ವ್ಯಾಗನ್ ಟೈಗನ್, ಸ್ಕೋಡಾ ಕುಶಾಕ್, ಎಂಜಿ ಆಸ್ಟರ್, ಟೊಯೊಟಾ ಹೈರೈಡರ್, ಸಿಟ್ರಸ್ ಸಿ3 ಏರ್‌ಕ್ರಾಸ್. ಮಹೀಂದ್ರಾ ಸ್ಕಾರ್ಪಿಯೊ ಕ್ಲಾಸಿಕ್ ಪ್ರಬಲ ಎದುರಾಳಿಯಾಗಿವೆ. ಈ ಎಸ್‌ಯುವಿ ಉತ್ತಮ ವಿನ್ಯಾಸದೊಂದಿಗೆ ಆಕರ್ಷಕ ವೈಶಿಷ್ಟ್ಯವನ್ನು ಹೊಂದಿರುವುದರಿಂದ ಬಹುತೇಕರ ಆಯ್ಕೆಯ ವಾಹನವಾಗಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Monday, March 18, 2024, 11:41 [IST]
English summary
Saregamapa 20 amulya become grand performer maruti suzuki grand vitara car award
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+