ಮೊಬೈಲ್‌ನಲ್ಲಿ ಮಾತನಾಡಲು ಹೋಗಿ ಮಕ್ಕಳ ಪ್ರಾಣ ತೆಗೆದ !!

ಕೆ.ಎಸ್.ಆರ್.ಟಿ.ಸಿ ಮತ್ತು ಖಾಸಗಿ ಶಾಲಾ ವಾಹನದ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಒಬ್ಬ ವಿದ್ಯಾರ್ಥಿ ಸ್ಥಳದಲೇ ಸಾವನ್ನಪ್ಪಿದ್ದು, 6 ವಿದ್ಯಾರ್ಥಿಗಳು ಗಂಬೀರವಾಗಿ ಗಾಯಗೊಂಡಿರುವ ಘಟನೆ ರಾಮನಗರ ಜಿಲ್ಲೆಯಲ್ಲಿ ನೆಡೆದಿದೆ.

By Girish

ಕೆ.ಎಸ್.ಆರ್.ಟಿ.ಸಿ ಮತ್ತು ಖಾಸಗಿ ಶಾಲಾ ವಾಹನದ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಒಬ್ಬ ವಿದ್ಯಾರ್ಥಿ ಸ್ಥಳದಲೇ ಸಾವನ್ನಪ್ಪಿದ್ದು, 6 ವಿದ್ಯಾರ್ಥಿಗಳು ಗಂಬೀರವಾಗಿ ಗಾಯಗೊಂಡಿರುವ ಘಟನೆ ರಾಮನಗರ ಜಿಲ್ಲೆಯಲ್ಲಿ ನೆಡೆದಿದೆ.

ಮೊಬೈಲ್‌ನಲ್ಲಿ ಮಾತನಾಡುತ್ತಾ ಬಸ್‌ಗೆ ಡಿಕ್ಕಿ ಹೊಡೆದ ಶಾಲಾ ಬಸ್ ಚಾಲಕ: 6 ವರ್ಷದ ವಿದ್ಯಾರ್ಥಿ ಸಾವು

ರಾಮನಗರದ ಜಿಲ್ಲೆಯ ಹಾರೋಹಳ್ಳಿ ಪೋಲಿಸ್ ಠಾಣೆ ವ್ಯಾಪ್ತಿಯ ಮರಳುವಾಡಿ ರಸ್ತೆಯಲ್ಲಿ ಕೆ.ಎಸ್.ಆರ್.ಟಿ.ಸಿ ಮತ್ತು ಖಾಸಗಿ ಶಾಲಾ ವಾಹನದ ನಡುವೆ ಭೀಕರ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಮರಳವಾಡಿ ಹೋಬಳಿಯ ಗೆಂಡೇಗೌಡನದೊಡ್ಡಿ ಗ್ರಾಮದ ಜಯಲಕ್ಷ್ಮೀ ಮತ್ತು ಗಣೇಶ್‌ ದಂಪತಿಯ 7ವರ್ಷದ ಮಗು ಚರಣ್‌ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ಮೊಬೈಲ್‌ನಲ್ಲಿ ಮಾತನಾಡುತ್ತಾ ಬಸ್‌ಗೆ ಡಿಕ್ಕಿ ಹೊಡೆದ ಶಾಲಾ ಬಸ್ ಚಾಲಕ: 6 ವರ್ಷದ ವಿದ್ಯಾರ್ಥಿ ಸಾವು

ತೀವ್ರವಾಗಿ ಗಾಯಗೊಂಡಿರುವ ಶರತ್, ಹೇಮಚಂದ್ರ, ಮಹೇಶ್, ಹರ್ಷಿತಾ ಹಾಗೂ ಲಿಖಿತಾಳನ್ನು ಬೆಂಗಳೂರಿನ ನಿಮ್ಹಾನ್ಸ್ ಆಸ್ಪತ್ರೆಗೆ, ದಿವ್ಯಾ, ದೀಪು ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಮೊಬೈಲ್‌ನಲ್ಲಿ ಮಾತನಾಡುತ್ತಾ ಬಸ್‌ಗೆ ಡಿಕ್ಕಿ ಹೊಡೆದ ಶಾಲಾ ಬಸ್ ಚಾಲಕ: 6 ವರ್ಷದ ವಿದ್ಯಾರ್ಥಿ ಸಾವು

ಶಾಲಾ ವಾಹನ ಚಾಲಕ ದಾನಪ್ಪ ಮೊಬೈಲ್‌ನಲ್ಲಿ ಮಾತನಾಡಿಕೊಂಡು ಅಜಾಗರೂಕತೆಯಿಂದ ಚಾಲನೆ ಮಾಡಿರುವುದೇ ಇಷ್ಟೆಲ್ಲಾ ಅವಘಡಕ್ಕೆ ಮುಖ್ಯ ಕಾರಣ ಎನ್ನಲಾಗಿದೆ. ಅಪಘಾತದಲ್ಲಿ ಶಾಲಾ ಬಸ್ ಸಂಪೂರ್ಣ ಜಖಂಗೊಂಡಿದ್ದು, ಎರಡೂ ಬಸ್​ಗಳ ಚಾಲಕರು ಗಾಯಗೊಂಡಿದ್ದಾರೆ.

ಮೊಬೈಲ್‌ನಲ್ಲಿ ಮಾತನಾಡುತ್ತಾ ಬಸ್‌ಗೆ ಡಿಕ್ಕಿ ಹೊಡೆದ ಶಾಲಾ ಬಸ್ ಚಾಲಕ: 6 ವರ್ಷದ ವಿದ್ಯಾರ್ಥಿ ಸಾವು

ಹಲವು ಗ್ರಾಮಗಳ ಸುಮಾರು 20 ಮಕ್ಕಳು ಪ್ರಭಾಕರ್ ಗುರೂಜಿ ಆಶ್ರಮಕ್ಕೆ ಸೇರಿದ ಭಾರತೀಯ ಋಷಿ ಸಂಸ್ಕೃತಿ ವಿದ್ಯಾಶಾಲೆಗೆ ವಾಹನದಲ್ಲಿ ತೆರಳುತ್ತಿದ್ದರು. ಸತ್ತ ವಿದ್ಯಾರ್ಥಿ ಶರಣ್ ಆಗಿದ್ದು, ಆಶ್ರಮದ 1ನೇ ತರಗತಿ ವಿದ್ಯಾರ್ಥಿ ಎನ್ನಲಾಗಿದ್ದು, ಮರಳವಾಡಿ ಗ್ರಾಮದ ಗೆಂಡೆಕಟ್ಟೆದೊಡ್ಡಿ ಗ್ರಾಮದವನು ಎಂಬ ಮಾಹಿತಿ ಸಿಕ್ಕಿದೆ.

ಮೊಬೈಲ್‌ನಲ್ಲಿ ಮಾತನಾಡುತ್ತಾ ಬಸ್‌ಗೆ ಡಿಕ್ಕಿ ಹೊಡೆದ ಶಾಲಾ ಬಸ್ ಚಾಲಕ: 6 ವರ್ಷದ ವಿದ್ಯಾರ್ಥಿ ಸಾವು

ಆಶ್ರಮಕ್ಕೆ ಸೇರಿದ ಶಾಲೆಯ ವಾಹನದ ಚಾಲಕ ದಾನಪ್ಪನ ನಿರ್ಲಕ್ಷ್ಯದಿಂದ ಅಪಘಾತ ಸಂಭವಿಸಿ ಮಗು ಮೃತಪಟ್ಟಿದೆ. ಉಳಿದ ಮಕ್ಕಳು ಗಂಭೀರವಾಗಿ ಗಾಯಗೊಂಡಿದ್ದರೂ ಶಾಲೆಗೆ ಸಂಬಂಧಿಸಿದವರು ಮಕ್ಕಳ ಆರೋಗ್ಯ ವಿಚಾರಿಸಿಲ್ಲ ಎಂದು ಆಕ್ರೋಶಗೊಂಡ ಮಕ್ಕಳ ಪೋಷಕರು ಆಶ್ರಮದ ಮುಂದೆ ಮಗುವಿನ ಶವವನ್ನಿಟ್ಟು ಪ್ರತಿಭಟನೆ ನಡೆಸಿದ್ದಾರೆ.

ಮೊಬೈಲ್‌ನಲ್ಲಿ ಮಾತನಾಡುತ್ತಾ ಬಸ್‌ಗೆ ಡಿಕ್ಕಿ ಹೊಡೆದ ಶಾಲಾ ಬಸ್ ಚಾಲಕ: 6 ವರ್ಷದ ವಿದ್ಯಾರ್ಥಿ ಸಾವು

ಸ್ಥಳಕ್ಕೆ ಹಾರೋಹಳ್ಳಿ ಪೊಲೀಸರು ಮತ್ತು ಸಾರಿಗೆ ಸಂಸ್ಥೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹಾರೋಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಜಿಲ್ಲಾಧಿಕಾರಿ ಡಾ.ಮಮತಾ, ಆಸ್ಪತ್ರೆಗಳಿಗೆ ಭೇಟಿ ನೀಡಿ ಮಕ್ಕಳ ಆರೋಗ್ಯ ವಿಚಾರಿಸಿದರು.

Trending on DriveSpark kannada :

ಡಿಸೆಂಬರ್ 1ರ ನಂತರ ಟೋಲ್‌ಗಳಲ್ಲಿ ಕಾರುಗಳು ಕಾಯುವ ಹಾಗಿಲ್ಲ !!

ವಿಡಿಯೋ- ಸಿಸಿಟಿವಿಯಲ್ಲಿ ಸೆರೆಯಾದ ಭೀಕರ ಅಪಘಾತದ ಕ್ಷಣಗಳು

ಮುಕೇಶ್ ಅಂಬಾನಿ ಡ್ರೈವರ್ ಸಂಬಳ ಕೇಳಿದ್ರೆ ಬೆಚ್ಚಿ ಬೀಳ್ತೀರಾ !!

ಯಾಕ್ರಿ ಲಂಚ ಕೊಡ್ತಿರಾ? ಇನ್ಮುಂದೆ ಸುಲಭದಲ್ಲೇ ಸಿಗಲಿದೆ ಡ್ರೈವಿಂಗ್ ಲೈಸೆನ್ಸ್..!!

Most Read Articles

Kannada
Read more on accident ಅಪಘಾತ
English summary
In a tragic incident, one student was killed in an accident after their school bus driver lost his control and rammed into a KSRTC bus and then to a tree on November 16.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X