ಬೆಂಗಳೂರಿನಲ್ಲಿ ಹೆಲ್ಮೆಟ್ ಯಾಕೆ ಹಾಕಿಲ್ಲ ಎಂದು ಪ್ರಶ್ನಿಸಿದ್ದಕ್ಕೆ ಪೊಲೀಸಪ್ಪನ ಕೈ ಕಚ್ಚಿದ ಭೂಪ
ಭಾರತದಲ್ಲಿ ವಾಹನ ಅಪಘಾತಗಳಲ್ಲಿ ಸಾವು ನೋವಿನ ಪ್ರಮಾಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರ ಹಿತದೃಷ್ಟಿಯಿಂದ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ.ಇದರಿಂದ ಸುರಕ್ಷಿತ ವಾಹನ ಚಾಲನೆಗಾಗಿ ಹಲವಾರು ಕಠಿಣ ಕ್ರಮಗಳನ್ನು ಜಾರಿಗೆ ತರಲಾಗಿದೆ. ಅಲ್ಲದೇ ಸಂಚಾರಿ ನಿಯಮಗಳನ್ನು (Traffic Rules) ಪಾಲಿಸಬೇಕಾದದ್ದು ಸಾರ್ವಜನಿಕರ ಆದ್ಯ ಕರ್ತವ್ಯ ಎಂಬುವುದನ್ನು ಮರೆಯಬಾರದು.
ಆದರೆ ಕೆಲವರು ಹೆಲ್ಮೆಟ್ ಹಾಕದೆ ರಾಜರೋಷವಾಗಿ ದ್ವಿಚಕ್ರ ವಾಹನಗಳಲ್ಲಿ ಸುತ್ತಾಡುತ್ತಾರೆ. ಬೆಂಗಳೂರು (Bengaluru) ನಗರದಲ್ಲಿ ಹೆಲ್ಮೆಟ್ ಧರಿಸದೇ ಸ್ಕೂಟರ್ ಓಡಿಸುವಾಗ ಪ್ರಶ್ನಿಸಿದ ಟ್ರಾಫಿಕ್ ಪೊಲೀಸ್ ಪೇದೆಯ ಕೈಕಚ್ಚಿರುವ ಘಟನೆ ನಡೆದಿದೆ. ಈ ಘಟನೆಯು ವೀಡಿಯೋ ಫುಲ್ ವೈರಲ್ ಆಗಿದೆ. ಈ ಘಟನೆಯ ಬಗ್ಗೆ ವಿವರವಾಗಿ ಹೇಳುವುದಾದರೆ, ಬೆಂಗಳೂರಿನ ವಿಲ್ಸನ್ ಗಾರ್ಡನ್ 10ನೇ ಕ್ರಾಸ್ನಲ್ಲಿ ಹೆಲ್ಮೆಟ್ ಹಾಕದಿರುವ ಸ್ಕೂಟರ್ ಸವಾರನನ್ನು ಟ್ರಾಫಿಕ್ ಪೊಲೀಸ್ ( Traffic Police) ಪೇದೆ ಅಡ್ಡಹಾಕಿದ್ದಾರೆ.

ಹೆಲ್ಮೆಟ್ ಯಾಕೆ ಹಾಕಿಲ್ಲ ಎಂದು ಪ್ರಶ್ನಿಸಿ ಸ್ಕೂಟರ್ ಕೀಯನ್ನು ಕಿತ್ತುಕೊಂಡಿದ್ದಾರೆ. ಈ ವೇಳೆ ಇಬ್ಬರ ನಡುವೆ ವಾಗ್ದಾದ ನಡೆದಿದೆ. ಕೊನೆಗೆ ಸ್ಕೂಟರ್ ಸವಾರ ಸಿಟ್ಟಿನಿಂದ ಕೀ ಕೊಡುವಂತೆ ಪೊಲೀಸ್ ಕಾನ್ಸ್ಟೇಬಲ್ ಕೈ ಕಚ್ಚಿದ್ದಾನೆ. ಕೂಡಲೇ ಟ್ರಾಫಿಕ್ ಪೊಲೀಸ್ ಪೇದೆ ಹೊಯ್ಸಳಗೆ ಕರೆ ಮಾಡಿ ಸ್ಥಳಕ್ಕೆ ಕರೆಸಿಸಿದಿದ್ದಾರೆ. ನಂತರ ಮುಂದಿನ ಕ್ರಮ ಕೈಗೊಳ್ಳಲಾಗಿದೆ ಎಂದು ವರದಿಯಾಗಿದೆ.
ಕೆಆರ್ ಜಯತೀರ್ಥ ಎಂಬವರು ಈ ಘಟನೆಯ ವಿಡಿಯೋವನ್ನು ಎಕ್ಸ್ ನಲ್ಲಿ ಈ ಘಟನೆಯ ವೀಡಿಯೋವನು ಶೇರ್ ಮಾಡಿದ್ದಾರೆ. ಹೆಲ್ಮೆಟ್ ರಹಿತ ಚಾಲಕನ ಫೋಟೋ ಹಿಡಿದಿದಕ್ಕೆ ಫೋಟೋ ಅಪ್ಲೋಡ್ ಮಾಡಿದರೆ ಫೋನ್ ಒಡೆದು ಹಾಕುವುದಾಗಿ ಅವಾಜ್ ಹಾಕಿ ಎಳೆದಾಡಿ ಪೋಲೀಸರ ಕೈಕಚ್ಚಿದ ಸವಾರ. ಪೋಲೀಸರ ಕೈ ಬಲ ಹೆಚ್ಚಿಸಿ ಎಂದು ಬರೆದುಕೊಂಡಿದ್ದಾರೆ.

ಎಷ್ಟೇ ದಂಡ ವಿಧಿಸಿದರು ಕೆಲವರು ಸಂಚಾರಿ ನಿಯಮಗಳಿಗೆ ಡೋಂಟ್ ಕೇರ್ ಹೇಳಿ ಸಂಚಾರಿ ನಿಯಮಗಳನ್ನು ಪಾಲಿಸುವುದಿಲ್ಲ. ಬೆಂಗಳೂರು ನಗರದಲ್ಲಿ ದ್ವಿಚಕ್ರ ಸವಾರನೊಬ್ಬ 300ಕ್ಕೂ ಹೆಚ್ಚು ಬಾರಿ ಸಂಚಾರಿ ನಿಯಮ ಉಲ್ಲಂಘಿಸಿದ್ದಾರೆ. ಒಟ್ಟು 3 ಲಕ್ಷ ರೂ. ದಂಡ ಬಿದ್ದಿದೆ. ಬೆಂಗಳೂರಲ್ಲಿ ಅತಿ ಹೆಚ್ಚು ಸಂಚಾರಿ ನಿಯಮ ಉಲ್ಲಂಘಿಸಿದ ಸ್ಕೂಟರ್ ಎಂಬ ಕುಖ್ಯಾತಿ ಗಳಿಸಿದೆ.
ಈ ಸ್ಕೂಟರ್ ಬೆಲೆ 30,000 ರೂ. ಆಗಿದೆ. ಆದರೆ ನಗರದಲ್ಲಿ ಸಂಚಾರಿ ನಿಯಮ ಉಲ್ಲಂಘನೆ ಮಾಡಿರೋದರಲ್ಲಿ ಬೆಂಗಳೂರಿಗೆ ಮೊದಲನೇಯವರು ಸುಧಾಮ ನಗರದ ವೆಂಕಟರಮನ್. ಇವರ, KA05KF7969 ನಂಬರಿನ ಹೊಂಡಾ ಆಕ್ಟಿವಾ ಸ್ಕೂಟರ್ ಮೇಲೆ ಬರೋಬ್ಬರಿ 300 ಕೇಸ್‌ಗಳು ದಾಖಲಾಗಿದೆ. ಇತ ಹೆಲ್ಮಟ್ ಧರಿಸದೆ, ಸಿಗ್ನಲ್ ಜಂಪ್ ಮಾಡಿ, ಒನ್ ವೇಯಲ್ಲಿ ಮೊಬೈಲ್ನಲ್ಲಿ ಮಾತಾಡಾಡಿಕೊಂಡು ಸ್ಕೂಟರ್ ಓಡಿಸಿದ್ದಾರೆ.

ಇದಕ್ಕಾಕಿ ಸಂಚಾರಿ ಪೊಲೀಸರು 3 ಲಕ್ಷ ರೂ. ದಂಡ ವಿಧಿಸಿದ್ದಾರೆ. ಇವರು ಎಸ್ಆರ್ ನಗರ, ವಿಲ್ಸನ್ ಗಾರ್ಡನ್ ಸೇರಿದಂತೆ ನಗರದ ವಿವಿಧ ಪ್ರದೇಶಗಳಲ್ಲಿ ಸಂಚಾರಿ ನಿಯಮ ಉಲ್ಲಂಘಿಸಿದ್ದಾರೆ. ವೆಂಕಟರಮನ್ ಅವರು 3 ಲಕ್ಷ ರೂ. ದಂಡ ಕಟ್ಟಬೇಕಾಗಿರುವ ಹಿನ್ನೆಲೆಯಲ್ಲಿ ಸಂಚಾರಿ ಪೊಲೀಸರು ಅವರ ಮನೆಗೆ ತೆರಳಿದ್ದು, ದಂಡ ಕಟ್ಟುವಂತೆ ಸೂಚಿಸಿದ್ದಾರೆ.
ವೆಂಕಟರಮನ್ ಅವರು ಇಷ್ಟು ದಂಡ ಕಟ್ಟಲು ಆಗಲ್ಲ ಬೇಕಿದ್ದರೆ ನನ್ನ ಸ್ಕೂಟರ್ ತೆಗೆದುಕೊಂಡು ಹೋಗಿ ಎಂದಿದ್ದಾರೆ. ಆಗ ಪೊಲೀಸರು ಸ್ಕೂಟರ್ ಬೇಕಾಗಿಲ್ಲ, ದಂಡ ಕಟ್ಟಿ ಇಲ್ಲ ಕೇಸ್ ಮಾಡುತ್ತೇವೆ ಎಂದಿದ್ದಾರೆ. ಸದ್ಯ ಸಂಚಾರಿ ಪೊಲೀಸರು ನೊಟೀಸ್ ನೀಡಿದ್ದು, ದಂಡ ಕಟ್ಟಿಲ್ಲ ಅಂದರೆ ಕೇಸ್ ಹಾಕಲು ನಿರ್ಧರಿಸಿದ್ದಾರೆ. ಇನ್ನು ದ್ವಿ-ಚಕ್ರ ವಾಹನ ಸವಾರರ ಸುರಕ್ಷತೆಗಾಗಿ ಪೂರ್ತಿ ಮುಖ ಮುಚ್ಚದ ಹಾಫ್ ಹೆಲ್ಮೆಟ್, ಐಎಸ್‌ಐ ಮಾರ್ಕ್ ಇರದ ಕಳಪೆ ಹೆಲ್ಮೆಟ್ ಧರಿಸುವುದನ್ನು ನಿಷೇಧ ಮಾಡಲಾಗಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications








