ತಮ್ಮ ಹೊಸ ಐಷಾರಾಮಿ ಮರ್ಸಿಡಿಸ್ ಬೆಂಝ್ ಕಾರಿನಲ್ಲಿ ಕಾಣಿಸಿಕೊಂಡ ಶಾರುಖ್ ಖಾನ್

ಬಾಲಿವುಡ್‌ ಬಾದ್‌ಷಾ, ಕಿಂಗ್ ಖಾನ್ ಖ್ಯಾತಿಯ ಸೂಪರ್‌ಸ್ಟಾರ್ ಶಾರುಖ್ ಖಾನ್ ಅವರು ಇತ್ತೀಚೆಗೆ ತಮ್ಮ ಹೊಸ ಮರ್ಸಿಡಿಸ್ ಬೆಂಝ್ ಎಸ್-ಕ್ಲಾಸ್ (Mercedes-Benz S-Class) ಕಾರಿನಲ್ಲಿ ಕಾಣಿಸಿಕೊಂಡಿದ್ದಾರೆ. ಇದು ಮರ್ಸಿಡಿಸ್ ಬೆಂಝ್ ಎಸ್-ಕ್ಲಾಸ್ ಎಸ್350ಡಿ 4ಮ್ಯಾಟಿಕ್ ರೂಪಾಂತರವಾಗಿದೆ.

ತಮ್ಮ ಹೊಸ ಐಷಾರಾಮಿ ಮರ್ಸಿಡಿಸ್ ಬೆಂಝ್ ಕಾರಿನಲ್ಲಿ ಕಾಣಿಸಿಕೊಂಡ ಶಾರುಖ್ ಖಾನ್

ಈ ಐಷಾರಾಮಿ ಕಾರಿನ ಬೆಲೆಯು ಎಕ್ಸ್ ಶೋ ರೂಂ ಪ್ರಕಾರ ರೂ.1.59 ಕೋಟಿಯಾಗಿದೆ. ಹೊಸ ಐಷಾರಾಮಿ ಸಲೂನ್ ಅನ್ನು ಶಾರುಖ್ ಖಾನ್ ಅವರ ಹೆಸರಿಗೆ ನೋಂದಾಯಿಸಲಾಗಿದೆ ಮತ್ತು ಅವರು ಬಿಳಿ ಬಣ್ಣದ ಮಾದರಿಯನ್ನು ಆರಿಸಿಕೊಂಡರು. ಈ ಮರ್ಸಿಡಿಸ್ ಬೆಂಝ್ ಎಸ್-ಕ್ಲಾಸ್ ಕಾರು S450 4MATIC ಎಂದು ಕರೆಯಲ್ಪಡುವ ಎಸ್-ಕ್ಲಾಸ್‌ನ ಮತ್ತೊಂದು ರೂಪಾಂತರವನ್ನು ಸಹ ಮಾರಾಟ ಮಾಡುತ್ತದೆ. ಇನ್ನು ಶಾರುಖ್ ಖಾನ್ ಅವರ ಮೊದಲ ಕಾರು ಮಾರುತಿ ಸುಜುಕಿ ಓಮ್ನಿ ಅವರು ಹಲವು ವರ್ಷಗಳಿಂದ ಇಟ್ಟುಕೊಂಡಿದ್ದರು, ಈಗ ಅವರು ಹೆಚ್ಚಾಗಿ ಬಿಳಿ ಬಣ್ಣದ ಲ್ಯಾಂಡ್ ರೋವರ್ ರೇಂಜ್ ರೋವರ್ ಸ್ಪೋರ್ಟ್ ಎಸ್‍ಯುವಿಯಲ್ಲಿ ಕಾಣಿಸಿಕೊಳ್ಳುತ್ತಾರೆ.

ತಮ್ಮ ಹೊಸ ಐಷಾರಾಮಿ ಮರ್ಸಿಡಿಸ್ ಬೆಂಝ್ ಕಾರಿನಲ್ಲಿ ಕಾಣಿಸಿಕೊಂಡ ಶಾರುಖ್ ಖಾನ್

ಅವರ ವಾಹನಗಳ ನಂಬರ್ ಪ್ಲೇಟ್‌ಗಳಲ್ಲಿ ಹೆಚ್ಚಾಗಿ "05" ಇರುವುದನ್ನು ನಾವು ಗಮನಿಸಿದ್ದೇವೆ. ಶಾರುಖ್ ಖಾನ್ ಹ್ಯುಂಡೈ ಮೋಟಾರ್ ಇಂಡಿಯಾದೊಂದಿಗೆ ದಶಕಗಳಿಂದ ಸಂಬಂಧ ಹೊಂದಿದ್ದಾರೆ ಮತ್ತು ಮೊದಲ ತಲೆಮಾರಿನ ಸ್ಯಾಂಟ್ರೊದ ದಿನಗಳಿಂದ ಶಾರುಖ್ ಖಾನ್ ಜೊತೆಯಿದ್ದಾರೆ. ಇತ್ತೀಚೆಗೆ ಅಲ್ಕಾಜರ್ ಎಸ್‍ಯುವಿಯಲ್ಲಿ ಟಿವಿಸಿಯಲ್ಲಿಯು ಕಾಣಿಸಿಕೊಂಡಿದ್ದಾರೆ.

ತಮ್ಮ ಹೊಸ ಐಷಾರಾಮಿ ಮರ್ಸಿಡಿಸ್ ಬೆಂಝ್ ಕಾರಿನಲ್ಲಿ ಕಾಣಿಸಿಕೊಂಡ ಶಾರುಖ್ ಖಾನ್

ಇನ್ನು ಶಾರುಖ್ ಖಾನ್ ಬಹುನಿರೀಕ್ಷಿತ ಮುಂದಿನ ಚಿತ್ರ 'ಪಠಾಣ್' ಆಗಿದೆ. ಈ ಚಿತ್ರದಲ್ಲಿ ನಟಿ ದೀಪಿಕಾ ಪಡುಕೋಣೆ ಮತ್ತು ನಟ ಜಾನ್ ಅಬ್ರಹಾಂ ಸಹ ನಟಿಸಿದ್ದಾರೆ ಮತ್ತು ಸಿದ್ಧಾರ್ಥ್ ಆನಂದ್ ನಿರ್ದೇಶಿಸಿದ್ದಾರೆ. ಇದು ಜನವರಿ 25, 2023 ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ.

ತಮ್ಮ ಹೊಸ ಐಷಾರಾಮಿ ಮರ್ಸಿಡಿಸ್ ಬೆಂಝ್ ಕಾರಿನಲ್ಲಿ ಕಾಣಿಸಿಕೊಂಡ ಶಾರುಖ್ ಖಾನ್

ಮರ್ಸಿಡಿಸ್ ಬೆಂಝ್ ಎಸ್-ಕ್ಲಾಸ್ ಕಾರು ಆಕರ್ಷವಾಗಿದ್ದು, ಹೆಚ್ಚು ಫೀಚರ್ ಗಳನ್ನು ಹೊಂದಿದೆ. ವಿನ್ಯಾಸ ಹಾಗೂ ಸ್ಟೈಲಿಂಗ್ ಬಗ್ಗೆ ಹೇಳುವುದಾದರೆ ಈ ಕಾರಿನ ಮುಂಭಾಗದ ಗ್ರಿಲ್ ಕಪ್ಪು ಬಣ್ಣವನ್ನು ಹೊಂದಿದ್ದು, ಹಲವು ಭಾಗಗಳಲ್ಲಿ ನಯವಾದ ಲೈನ್ ಹಾಗೂ ಕ್ರೋಮ್ ಅಂಶಗಳನ್ನು ನೀಡಲಾಗಿದೆ.

ತಮ್ಮ ಹೊಸ ಐಷಾರಾಮಿ ಮರ್ಸಿಡಿಸ್ ಬೆಂಝ್ ಕಾರಿನಲ್ಲಿ ಕಾಣಿಸಿಕೊಂಡ ಶಾರುಖ್ ಖಾನ್

ಈ ಐಷಾರಾಮಿ ಕಾರು ಹೊಸ ಡಿಜಿಟಲ್ ಎಲ್ಇಡಿ ಹೆಡ್‌ಲೈಟ್‌ ಹಾಗೂ 20 ಇಂಚಿನ ಅಲಾಯ್ ವ್ಹೀಲ್ ಗಳನ್ನು ಹೊಂದಿದೆ. ಈ ಕಾರಿನಲ್ಲಿರುವ ಫ್ಲಶ್ ಅಳವಡಿಸಿದ ಡೋರ್ ಹ್ಯಾಂಡಲ್‌, ಕಾರಿನ ಬಳಿ ಕೀಲಿಯನ್ನು ಚಲಿಸಿದ ನಂತರವೇ ಹೊರ ಬರುತ್ತದೆ. ಇದರ ಜೊತೆಗೆ ಈ ಫೀಚರ್ ಕಾರಿನ ಏರೋ ಡೈನಾಮಿಕ್ ಸಾಮರ್ಥ್ಯವನ್ನು ಸುಧಾರಿಸುತ್ತದೆ.

ತಮ್ಮ ಹೊಸ ಐಷಾರಾಮಿ ಮರ್ಸಿಡಿಸ್ ಬೆಂಝ್ ಕಾರಿನಲ್ಲಿ ಕಾಣಿಸಿಕೊಂಡ ಶಾರುಖ್ ಖಾನ್

ಇನ್ನು ಈ ಕಾರಿನ ಇಂಟಿರಿಯರ್ ಬಗ್ಗೆ ಹೇಳುವುದಾದರೆ, ಈ ಕಾರಿನಲ್ಲಿ - ವೈಟ್, ಸಿಯೆನ್ನಾ ಬ್ರೌನ್ ಹಾಗೂ ಬ್ಲಾಕ್ ಎಂಬ ಮೂರು ಅಪ್ ಹೊಲೆಸ್ಟರಿ ಆಯ್ಕೆಗಳನ್ನು ನೀಡಲಾಗಿದೆ. ಈ ಹೊಸ ಕಾರಿನಲ್ಲಿ 12.8-ಇಂಚಿನ ಒಎಲ್‌ಇಡಿ ಟಚ್‌ಸ್ಕ್ರೀನ್, 12.3 ಇಂಚಿನ ಡಿಜಿಟಲ್ ಎಂಐ‌ಡಿ ಹಾಗೂ ಎರಡನೇ ತಲೆಮಾರಿನ MBUX ವಾಯ್ಸ್ ಕಂಟ್ರೋಲ್ ಗಳನ್ನು ನೀಡಲಾಗಿದೆ.

ತಮ್ಮ ಹೊಸ ಐಷಾರಾಮಿ ಮರ್ಸಿಡಿಸ್ ಬೆಂಝ್ ಕಾರಿನಲ್ಲಿ ಕಾಣಿಸಿಕೊಂಡ ಶಾರುಖ್ ಖಾನ್

ಇದರ ಜೊತೆಗೆ ಎಸ್-ಕ್ಲಾಸ್ ಕಾರಿನಲ್ಲಿ ಫಿಂಗರ್ ಪ್ರಿಂಟ್ ಐಡೆಂಟಿಫಿಕೇಶನ್, ಎರಡನೇ ಸಾಲಿನಲ್ಲಿ ವೆಂಟಿಲೇಟೆಡ್ ಸೀಟ್, ಮಸಾಜ್ ಫಂಕ್ಷನ್, ಸೆಂಟ್ರಲ್ ಆರ್ಮ್ ರೆಸ್ಟ್ ಮೇಲೆ ಟ್ಯಾಬ್ಲೆಟ್, 64 ಕಲರ್ ಆಂಬಿಯೆಂಟ್ ಲೈಟಿಂಗ್ ಹಾಗೂ ಬರ್ಮಿಸ್ಟರ್ 4 ಡಿ ಸರೌಂಡ್ ಸೌಂಡ್ ಸಿಸ್ಟಂ ಸೇರಿದಂತೆ ಹಲವಾರು ಫೀಚರ್ ಗಳನ್ನು ನೀಡಲಾಗಿದೆ.

ತಮ್ಮ ಹೊಸ ಐಷಾರಾಮಿ ಮರ್ಸಿಡಿಸ್ ಬೆಂಝ್ ಕಾರಿನಲ್ಲಿ ಕಾಣಿಸಿಕೊಂಡ ಶಾರುಖ್ ಖಾನ್

ಮರ್ಸಿಡಿಸ್ ಬೆಂಝ್ ಕಂಪನಿಯು ಹೊಸ 2021 ಎಸ್-ಕ್ಲಾಸ್ ಕಾರಿನಲ್ಲಿ ಹಲವು ಸುರಕ್ಷತಾ ಫೀಚರ್ ಗಳನ್ನು ನೀಡಲಾಗಿದೆ. ಇವುಗಳಲ್ಲಿ 10 ಏರ್‌ಬ್ಯಾಗ್‌ಗಳು, ಫ್ರಂಟ್ ಹಾಗೂ ರೇರ್ ಪಾರ್ಕಿಂಗ್ ಸೆನ್ಸಾರ್‌, 360 ಡಿಗ್ರಿ ಕ್ಯಾಮೆರಾ, ಸ್ಟೆಬಿಲಿಟಿ ಕಂಟ್ರೋಲ್, ಎಮರ್ಜೆನ್ಸಿ ಬ್ರೇಕ್ ಅಸಿಸ್ಟ್, ಟ್ರಾಕ್ಷನ್ ಕಂಟ್ರೋಲ್, ಸೈಡ್ ಡಿಕ್ಕಿಂಗ್ ಮಾನಿಟರಿಂಗ್ ಹಾಗೂ ಬ್ಲೈಂಡ್ ಸ್ಪಾಟ್ ಮಾನಿಟರಿಂಗ್ ಸೇರಿದಂತೆ ಹಲವಾರು ಫೀಚರ್ ಗಳು ಸೇರಿವೆ.

ತಮ್ಮ ಹೊಸ ಐಷಾರಾಮಿ ಮರ್ಸಿಡಿಸ್ ಬೆಂಝ್ ಕಾರಿನಲ್ಲಿ ಕಾಣಿಸಿಕೊಂಡ ಶಾರುಖ್ ಖಾನ್

ಮರ್ಸಿಡಿಸ್ ಬೆಂಝ್ ಎಸ್-ಕ್ಲಾಸ್ ಕಾರಿನಲ್ಲಿ 3.0 ಲೀಟರ್ ಪೆಟ್ರೋಲ್ ಹಾಗೂ 3.0 ಲೀಟರ್ ಡೀಸೆಲ್ ಎಂಜಿನ್ ಎಂಬ ಎರಡು ಎಂಜಿನ್ ಆಯ್ಕೆಗಳೊಂದಿಗೆ ಮಾರಾಟ ಮಾಡಲಾಗುತ್ತದೆ. ಪೆಟ್ರೋಲ್ ಎಂಜಿನ್ 367 ಬಿಹೆಚ್‌ಪಿ ಪವರ್ ಹಾಗೂ 500 ಎನ್ಎಂ ಟಾರ್ಕ್ ಉತ್ಪಾದಿಸಿದರೆ, ಡೀಸೆಲ್ ಎಂಜಿನ್ 286 ಬಿಹೆಚ್‌ಪಿ ಪವರ್ ಹಾಗೂ 600 ಎನ್ಎಂ ಟಾರ್ಕ್ ಉತ್ಪಾದಿಸುತ್ತದೆ. ಪೆಟ್ರೋಲ್ ಎಂಜಿನ್‌ನೊಂದಿಗೆ 48 ವೋಲ್ಟ್ ಮೈಲ್ಡ್ ಹೈಬ್ರಿಡ್ ಸಿಸ್ಟಂ ನೀಡಲಾಗಿದೆ.

ತಮ್ಮ ಹೊಸ ಐಷಾರಾಮಿ ಮರ್ಸಿಡಿಸ್ ಬೆಂಝ್ ಕಾರಿನಲ್ಲಿ ಕಾಣಿಸಿಕೊಂಡ ಶಾರುಖ್ ಖಾನ್

ಈಗ ಎಲ್ಲೆಲ್ಲೂ ಎಲೆಕ್ಟ್ರಿಕ್ ವಾಹನಗಳದೇ ಸದ್ದು. ಬಹುತೇಕ ಎಲ್ಲಾ ಜನಪ್ರಿಯ ವಾಹನ ತಯಾರಕ ಕಂಪನಿಗಳು ಈಗಾಗಲೇ ಎಲೆಕ್ಟ್ರಿಕ್ ವಾಹನಗಳನ್ನು ಬಿಡುಗಡೆಗೊಳಿಸಿ ಮಾರಾಟ ಮಾಡುತ್ತಿವೆ. ಕೆಲವು ಕಂಪನಿಗಳು ಭವಿಷ್ಯದಲ್ಲಿ ಎಲೆಕ್ಟ್ರಿಕ್ ವಾಹನಗಳನ್ನು ಮಾತ್ರ ಉತ್ಪಾದನೆ ಮಾಡುವುದಾಗಿ ತಿಳಿಸಿವೆ. ಮರ್ಸಿಡಿಸ್ ಬಂಝ್ ಕಂಪನಿಯು ಸಹ 2030 ರಿಂದ ಕೇವಲ ಎಲೆಕ್ಟ್ರಿಕ್ ಕಾರುಗಳನ್ನು ಮಾತ್ರ ಮಾರಾಟ ಮಾಡುವುದಾಗಿ ಘೋಷಿಸಿದೆ.

ತಮ್ಮ ಹೊಸ ಐಷಾರಾಮಿ ಮರ್ಸಿಡಿಸ್ ಬೆಂಝ್ ಕಾರಿನಲ್ಲಿ ಕಾಣಿಸಿಕೊಂಡ ಶಾರುಖ್ ಖಾನ್

ಜರ್ಮನಿ ಮೂಲದ ಕಾರು ತಯಾರಕ ಕಂಪನಿಯಾದ ಮರ್ಸಿಡಿಸ್ ಈಗಾಗಲೇ ಇಕ್ಯೂಸಿ 400, ಇಕ್ಯೂಎ ಎಲೆಕ್ಟ್ರಿಕ್ ಎಸ್‌ಯುವಿಗಳನ್ನು ಬಿಡುಗಡೆಗೊಳಿಸಿ ಮಾರಾಟ ಮಾಡುತ್ತಿದೆ. ಈ ಎಲೆಕ್ಟ್ರಿಕ್ ಕಾರುಗಳು ಹೆಚ್ಚಿನ ಸಂಖ್ಯೆಯಲ್ಲಿ ಮಾರಾಟವಾಗಿ ಹೊಸ ದಾಖಲೆಗಳಿಗೆ ಕಾರಣವಾಗಿವೆ. ಕಂಪನಿಯು 2023 ರ ವೇಳೆಗೆ ಒಟ್ಟು 6 ಎಲೆಕ್ಟ್ರಿಕ್ ಕಾರುಗಳನ್ನು ಮಾರಾಟ ಮಾಡುವ ಗುರಿಯನ್ನು ಹೊಂದಿದೆ.

ತಮ್ಮ ಹೊಸ ಐಷಾರಾಮಿ ಮರ್ಸಿಡಿಸ್ ಬೆಂಝ್ ಕಾರಿನಲ್ಲಿ ಕಾಣಿಸಿಕೊಂಡ ಶಾರುಖ್ ಖಾನ್

ಡ್ರೈವ್‌ಸ್ಪಾರ್ಕ್ ಅಭಿಪ್ರಾಯ

ಬಾಲಿವುಡ್‌ ಬಾದ್‌ಷಾ ಶಾರುಖ್ ಖಾನ್ ಅವರ ಬಳಿ ಹಲವಾರು ದುಬಾರಿ ಬೆಲೆಯ ಐಷಾರಾಮಿ ಕಾರುಗಳನ್ನು ಹೊಂದಿದ್ದಾರೆ. ಇವರು ತಮ್ಮ ಐಷಾರಾಮಿ ಕಾರುಗಳಲ್ಲಿ ಹಲವು ಬಾರಿ ಕಾಣಿಸಿಕೊಂಡಿದ್ದಾರೆ. ಈ ಬಾರಿ ಮರ್ಸಿಡಿಸ್ ಬೆಂಝ್ ಎಸ್-ಕ್ಲಾಸ್ ಕಾರಿನಲ್ಲಿ ಕಾಣಿಸಿಕೊಂಡಿದ್ದಾರೆ.

Article Published On: Friday, June 10, 2022, 18:56 [IST]
English summary
Shahrukh khan spotted in his new mercedes benz s class car details
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+