ಶಕ್ತಿ ಯೋಜನೆ: ಟೀಕೆಗಳ ನಡುವೆ ಸಾರಿಗೆ ನಿಗಮಗಳ ಆದಾಯ ಹೆಚ್ಚಳ, ಸಾವಿರಕ್ಕೂ ಅಧಿಕ ಬಸ್‌ ಖರೀದಿಗೆ ನಿರ್ಧಾರ!

ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ (siddaramaiah) ಅವರು ಬಸ್‌ ಕಂಡಕ್ಟರ್‌ (conductor) ಆಗಿ ಶಕ್ತಿ ಯೋಜನೆಗೆ ವಿನೂತನವಾಗಿ ಜೂನ್‌ 11 ರಂದು ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದರು. ರಾಜ್ಯದಲ್ಲಿ ಮಹಿಳೆಯರಿಗೆ ಉಚಿತ ಬಸ್‌ (Bus) ಪ್ರಯಾಣಕ್ಕೆ ಅವಕಾಶ ನೀಡುವ ಶಕ್ತಿ ಯೋಜನೆ ಜಾರಿಯಾದ ಬಳಿಕ ಕೆಲವು ಆರಂಭಿಕ ಹಲವು ಅವಘಡಗಳು ಬಿಟ್ಟರೆ ಉಳಿದಂತೆ ಉತ್ತಮ ಯಶಸ್ವಿ ಕಾಣುತ್ತಿದೆ.

ರಾಜ್ಯದಲ್ಲಿ ಶಕ್ತಿ ಯೋಜನೆ (shakti scheme) ಯಶಸ್ವಿ ಕಂಡಿದೆ. ಮಹಿಳೆಯರ ಉಚಿತ ಪ್ರಯಾಣದ ಟಿಕೆಟ್‌ ಮೌಲ್ಯ ಸೇರಿದಂತೆ ರಾಜ್ಯದ ನಾಲ್ಕೂ ಸಾರಿಗೆ ನಿಗಮಗಳ ಆದಾಯದಲ್ಲಿ ಸರಾಸರಿ 4.41 ಕೋಟಿ ರು. ಹೆಚ್ಚಳವಾಗಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಹೇಳಿದ್ದಾರೆ. ನಿನ್ನ ನಡೆಸಿದ ಸುದ್ದಿಗೋಷ್ಠಿಯಲ್ಲಿ ಸಚಿವ ರಾಮಲಿಂಗಾರೆಡ್ಡಿ ಅವರು ಮಾತನಾಡಿ, ಶಕ್ತಿ ಯೋಜನೆ ಜಾರಿ ನಂತರ ರಾಜ್ಯದ ನಾಲ್ಕೂ ನಿಗಮಗಳ ಬಸ್ ಗಳಲ್ಲಿ ಪ್ರಯಾಣಿಸುವ ಸಂಖ್ಯೆಯಲ್ಲಿಗಣನೀಯ ಪ್ರಮಾಣದಲ್ಲಿ ಹೆಚ್ಚಾಗಿದೆ.

KSRTC bus

ಸಾರಿಗೆ ಸಚಿವ ನೀಡಿದ ಮಾಹಿತಿ ಪ್ರಕಾರ, ಶಕ್ತಿ ಯೋಜನೆಗೂ ಮುನ್ನ ಬಸ್ ಗಳಲ್ಲಿ ನಿತ್ಯ ಸರಾಸರಿ 84.91 ಲಕ್ಷ ಜನರು ಪ್ರಯಾಣಿಸುತ್ತಿದ್ದರು. ಯೋಜನೆ ಜಾರಿಯಾದ ಬಳಿಕ ಈಗ ಸರಾಸರಿ 1.09 ಕೋಟಿ ಜನರು ಸಂಚರಿಸುತ್ತಿದ್ದಾರೆ. ಇದಲ್ಲದೇ ಸಾರಿಗೆ ನಿಗಮದ ಅದಾಯದಲ್ಲೂ ಗಣನೀಯ ಪ್ರಮಾಣದಲ್ಲಿ ಏರಿಕೆಯಾಗಿದೆ.

ಯೋಜನೆ ಜಾರಿಗೂ ಮುನ್ನ ಪ್ರತಿದಿನ ಸರಾಸರಿ ರೂ.24.48 ಕೋಟಿಯಾಗಿತ್ತು. ಶಕ್ತಿ ಯೋಜನೆ ಜಾರಿಯಾದ ಬಳಿಕ ಟಿಕೆಟ್‌ ಮೌಲ್ಯವೂ ಸೇರಿದಂತೆ ನಿತ್ಯ ಸರಾಸರಿ ರೂ.28.89 ಕೋಟಿ ಬರುತ್ತಿದೆ. ಇನ್ನು ಒಟ್ಟಾರೆ ರೂ.4.41 ಕೋಟಿ ಆದಾಯ ಹೆಚ್ಚಳವಾಗಿದೆ. ಅಲ್ಲದೆ ಪ್ರಸ್ತುತ ಮಹಿಳಾ ಪ್ರಯಾಣಿಕರನ್ನು ಹೊರತುಪಡಿಸಿ ಇತರ ಪ್ರಯಾಣಿಕರ ಸರಾಸರಿ ಆದಾಯ ರೂ.16.87 ಕೋಟಿ ಬರುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.

KSRTC bus

ಇನ್ನು ರಾಜ್ಯದ ನಾಲ್ಕು ರಸ್ತೆ ಸಾರಿಗೆ ನಿಗಮಗಳ ಉನ್ನತೀಕರಣಕ್ಕೆ ರಾಜ್ಯ ಸರ್ಕಾರ ಮುಂದಾಗಿದೆ. ವರದಿಗಳ ಪ್ರಕಾರ, ಹೊಸ ಬಸ್‌ ಖರೀದಿ, ಹೊಸ ಸಿಬ್ಬಂದಿ ನೇಮಕದ ಮತ್ತು ಆದಾಯ ಹೆಚ್ಚಳಕ್ಕೆ ಹಲವು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಪ್ರಮುಖವಾಗಿ ಕೆಎಸ್‌ಆರ್‌ಟಿಸಿ (KSRTC), ಬಿಎಂಟಿಸಿ (BMTC), ವಾಯವ್ಯ ಹಾಗೂ ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಗಳಿಗೆ ಒಟ್ಟಾರೆ 13 ಸಾವಿರಕ್ಕೂ ಅಧಿಕ ಸಿಬ್ಬಂದಿ ನೇಮಕಕ್ಕೆ ಮುಂದಾಗಿದೆ.

ರಾಜ್ಯ ಸರ್ಕಾಋಆ 1,324 ಡಿಸೇಲ್‌ ಹಾಗೂ ಎಲೆಕ್ಟ್ರಿಕ್‌ ಬಸ್‌ ಖರೀದಿ ಮಾಡಲು ಒಪ್ಪಂದಕ್ಕೆ ನಿರ್ಧರಿಸಿದೆ. ಇನ್ನು ಕೆಎಸ್‌ಆರ್‌ಟಿಸಿಯಲ್ಲಿ 3,745 ಚಾಲನಾ ಸಿಬ್ಬಂದಿಗಳು ಹಾಗೂ 726 ತಾಂತ್ರಿಕ ಸಿಬ್ಬಂದಿಗಳ ನೇಮಕಾತಿ ಈಗಾಗಲೇ ಕರೆಯಲಾಗಿದೆ. ಇನ್ನು ಹೊಸದಾಗಿ 1,433 ಚಾಲನಾ ಸಿಬ್ಬಂದಿಗಳ ಮತ್ತು 2,738 ತಾಂತ್ರಿಕ ಸಿಬ್ಬಂದಿಗಳನ್ನು ನೇರ ನೇಮಕಾತಿ ಮೂಲಕ ತುಂಬಲು ಸರ್ಕಾರದಿಂದ ಅನುಮತಿ ಪಡೆಯಲು ತೀರ್ಮಾನಿಸಲಾಗಿದೆ.

ಇನ್ನು ರಾಜ್ಯದಲ್ಲಿ ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣದ 'ಶಕ್ತಿ' ಯೋಜನೆ ಹಿನ್ನೆಲೆಯಲ್ಲಿ ಮಹಿಳೆಯರು ದೇವಾಲಯಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿದ್ದಾರೆ. ರಾಜ್ಯದ ತೀರ್ಥಕ್ಷೇತ್ರಗಳಲ್ಲಿ ಎಲ್ಲಿ ನೋಡಿದರಲ್ಲಿ ಮಹಿಳೆಯರು ಕಾಣಿಸಿಕೊಳ್ಳುತ್ತಿದ್ದರು. ಆದರೆ ಬಸ್‌ಗಳ ರಶ್ ಕ್ರಮೇಣ ಕಡಿಮೆಯಾಗುತ್ತಿದೆ. ಇನ್ನು ಕಳೆದ ವೀಕೆಂಡ್‌ಗೆ ಹೋಲಿಸಿದರೆ ಧಾರ್ಮಿಕ ಕ್ಷೇತ್ರಗಳಲ್ಲಿ ನಿನ್ನೆ ರಶ್‌ ಸ್ವಲ್ಪ ಕಡಿಮೆ ಇದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ಒದಗಿಸುತ್ತೇವೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಹೊಸ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್, ರಿವ್ಯೂ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳನ್ನು ಫಾಲೋ ಮಾಡಿ. ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡಲು ಮರೆಯಬೇಡಿ.

Article Published On: Saturday, July 1, 2023, 17:56 [IST]
English summary
Shakti scheme helps more revenue karnataka transport corporations details
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+