ಶಿವಮೊಗ್ಗದ ಹ್ಯುಂಡೈ ಶೋರೂಂನಲ್ಲಿ ಭಾರೀ ಅಗ್ನಿ ಅವಘಡ: 6 ಹೊಚ್ಚ ಹೊಸ ಕಾರುಗಳು ಭಸ್ಮ

ಶುಕ್ರವಾರ ತಡರಾತ್ರಿ ಶಿವಮೊಗ್ಗ ನಗರದ ಶೇಷಾದ್ರಿಪುರಂ ಶಂಕರ ಮಠದ ರಸ್ತೆಯಲ್ಲಿರುವ ಹ್ಯುಂಡೈ ಕಾರ್ ಶೋರೂಮ್ (Hyundai showroom)‌ ನಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ಆರು ಕಾರುಗಳು ಸುಟ್ಟು ಭಸ್ಮವಾಗಿವೆ. ಜಿಲ್ಲಾ ಅಗ್ನಿಶಾಮಕ ಇಲಾಖೆ ಅಧಿಕಾರಿಗಳ ಪ್ರಕಾರ, ಘಟನೆ ರಾತ್ರಿ 10 ಗಂಟೆ ಸುಮಾರಿಗೆ ಸಂಭವಿಸಿದೆ.

ಡೀಲರ್‌ಶಿಪ್ ಔಟ್‌ಲೆಟ್‌ನಲ್ಲಿ ಶುಕ್ರವಾರ ರಾತ್ರಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಹ್ಯುಂಡೈ (Hyundai) ಮೋಟಾರ್ ಕಂಪನಿಯ ಸುಮಾರು ಆರು ಕಾರುಗಳು ಸುಟ್ಟು ಕರಕಲಾಗಿವೆ. ಬೃಹತ್ ಜ್ವಾಲೆ ಆವರಿಸಿದ್ದರಿಂದ ಔಟ್‌ಲೆಟ್‌ನೊಳಗೆ ನಿಲ್ಲಿಸಲಾಗಿದ್ದ ಕಾರುಗಳು ನಾಶವಾಗುತ್ತಿರುವುದನ್ನು ಅಲ್ಲಿ ನೆರೆದಿದ್ದ ಸ್ಥಳೀಯರು ಮೊಬೈಲ್‌ನಲ್ಲಿ ಸೆರೆಹಿಡಿದಿದ್ದು, ನೋಡ ನೋಡುತ್ತಲೇ ಕಾರುಗಳು ಬೆಂಕಿಯಲ್ಲಿ ಸುಟ್ಟು ಕರಕಲಾಗಿರುವ ವಿಡಿಯೋಗಳು ವೈರಲ್ ಆಗಿವೆ.

shimoga-hyundai-showroom-fire-incident-6-new-cars-gutted

ರಾತ್ರಿ 10 ಗಂಟೆ ಸುಮಾರಿಗೆ ಅಗ್ನಿಶಾಮಕ ದಳಕ್ಕೆ ಕರೆ ಬಂದಿದ್ದು, ಮಾಹಿತಿ ಪಡೆದು ಸ್ಥಳಕ್ಕೆ ಆಗಮಿಸಿದ ನಾಲ್ಕು ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಅಧಿಕಾರಿಗಳು ಬೆಂಕಿಯನ್ನು ಹತೋಟಿಗೆ ತರಲು ಕಾರ್ಯಾಚರಣೆ ಆರಂಭಿಸಿದ್ದರು. ಸತತ ಮೂರು ಗಂಟೆಗಳಿಗೂ ಹೆಚ್ಚು ಕಾಲ 30ಕ್ಕೂ ಹೆಚ್ಚು ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಲು ಕಾರ್ಯಾಚರಣೆ ನಡೆಸಿದ್ದಾರೆ.

10 ಕ್ಕೂ ಹೆಚ್ಚು ಅಗ್ನಿಶಾಮಕ ವಾಹನಗಳ ಮೂಲಕ ಬೆಂಕಿಯನ್ನು ನಂದಿಸಲಾಗಿದೆ. ಬೆಳಗಿನ ಜಾವ 3 ಗಂಟೆ ಸುಮಾರಿಗೆ ಬೆಂಕಿಯನ್ನು ನಂದಿಸಲಾಗಿದೆ. ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಅಥವಾ ಗಾಯಗಳಾಗಿರುವ ಬಗ್ಗೆ ವರದಿಯಾಗಿಲ್ಲ. ಆರು ವಾಹನಗಳಿಗೆ ಹಾನಿಯಾಗಿದೆ. ಪ್ರಾಥಮಿಕ ತನಿಖೆಯು ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಘಟನೆ ಸಂಭವಿಸಿರಬಹುದು ಎಂದು ಸೂಚಿಸುತ್ತಿದೆ.

shimoga-hyundai-showroom-fire-incident-6-new-cars-gutted

ಕಾರ್‌ ಶೋರೂಮ್‌ ಒಳಗಿದ್ದ ಮೂರು ಕಾರುಗಳು ಸಂಪೂರ್ಣ ಸುಟ್ಟು ಕರಕಲಾಗಿದ್ದು, ಪ್ರವೇಶ ದ್ವಾರದಲ್ಲಿ ನಿಲ್ಲಿಸಿದ್ದ ನಾಲ್ಕು ಕಾರುಗಳು ಭಾಗಶಃ ಬೆಂಕಿಗೆ ಆಹುತಿಯಾಗಿವೆ. ಅಪಘಾತದಲ್ಲಿ ಬಿಡಿಭಾಗಗಳು, ಟೈರ್‌ಗಳು ಮತ್ತು ಸರಕುಗಳು ಬೂದಿಯಾಗಿವೆ. ವಿಷಯದ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಜಿಲ್ಲಾ ಅಗ್ನಿಶಾಮಕ ಅಧಿಕಾರಿ ಮಹಾಲಿಂಗಪ್ಪ ತಿಳಿಸಿದ್ದಾರೆ.

ಬೆಂಗಳೂರಿನಲ್ಲೂ ಇಂಥದ್ದೇ ಘಟನೆ: ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ಬೆಂಗಳೂರಿನ ಕೋರಮಂಗಲದ ಮಾರುತಿ ಸುಜುಕಿ ನೆಕ್ಸಾ ಶೋರೂಂ ಕಟ್ಟಡದಲ್ಲಿ ಭಾರೀ ಅಗ್ನಿ ದುರಂತ ಸಂಭವಿಸಿತ್ತು. ಸಿಲಿಂಡರ್ ಸ್ಪೋಟದಿಂದ ಈ ಘಟನೆ ಸಂಭವಿಸಿದೆ ಎಂದು ವರದಿಯಾಗಿತ್ತು. ಅದೇ ಕಟ್ಟಡದಲ್ಲಿರುವ ಮಡ್ ಪೈಪ್ ಪಬ್‌ನಲ್ಲಿ ಮೊದಲಿಗೆ ಬೆಂಕಿ ಕಾಣಿಸಿಕೊಂಡಿತ್ತು. ಕಟ್ಟಡದಲ್ಲಿದ್ದ ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಕೂಡ ಬೆಂಕಿಗಾಹುತಿಯಾಗಿದ್ದವು.

shimoga-hyundai-showroom-fire-incident-6-new-cars-gutted

ನೆಲ ಅಂತಸ್ತಿನಲ್ಲಿರುವ ಮಾರುತಿ ಸುಜುಕಿ ನೆಕ್ಸಾ ಶೋರೂಂಗೂ ಬೆಂಕಿ ವ್ಯಾಪಿಸಿ ಕೆಲವು ಕಾರುಗಳಿಗೆ ಹಾನಿಯಾಗಿತ್ತು. ಬೆಳಗ್ಗೆ 10.30ರ ಸುಮಾರಿಗೆ ಘಟನೆ ನಡೆದಾಗ, ಸತತ 3 ಗಂಟೆ ಇಡೀ ಕಟ್ಟಡ ಹೊತ್ತಿ ಉರಿದಿದೆ. ಅಕ್ಕ-ಪಕ್ಕದ ಕಟ್ಟಡಗಳಿಗೂ ಬೆಂಕಿ ಆವರಿಸಿಕೊಳ್ಳುವ ಭೀತಿಯಿತ್ತಾದರೂ, ಸ್ಥಳದಲ್ಲಿ ಆರು ಅಗ್ನಿಶಾಮಕ ವಾಹನಗಳೊಂದಿಗೆ ಸಿಬ್ಬಂದಿ ಬೆಂಕಿ ನಂದಿಸಿದ್ದರು.

ಮಾರುತಿ ಸುಜುಕಿ ನೆಕ್ಸಾದಲ್ಲಿ ಕಂಪನಿಯು ಇನ್ವಿಕ್ಟೋ, ಫ್ರಾಂಕ್ಸ್, ಜಿಮ್ನಿ 5 ಡೋರ್, ಗ್ರಾಂಡ್ ವಿಟಾರಾ, ಇಗ್ನಿಸ್, ಬಲೆನೊ ಹಾಗೂ ಸಿಯಾಜ್ ಕಾರುಗಳನ್ನು ಪ್ರದರ್ಶನಕ್ಕೆ ಇಟ್ಟಿತ್ತು. ಇವು, ಪ್ರೀಮಿಯಂ ಮಾದರಿಗಳಾಗಿದ್ದು, ಕೊಂಚ ದುಬಾರಿ ದರವನ್ನು ಹೊಂದಿರುತ್ತವೆ. ಈ ಕಾರುಗಳಲ್ಲಿ ಕೆಲವಕ್ಕೆ ಹಾನಿಯಾಗಿತ್ತು ಎಂದು ಡೀಲರ್ ಹೇಳಿದ್ದರು.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತ ಆಟೋಮೊಬೈಲ್ ಸುದ್ದಿಗಳನ್ನು ಒದಗಿಸುತ್ತದೆ, ಎಲ್ಲಾ ಸಾಮಾಜಿಕ ಮಾಧ್ಯಮಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಹಂಚಿಕೊಳ್ಳುತ್ತದೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್ ಮತ್ತು ಯೂಟ್ಯೂಬ್ ಪೇಜ್‌ಗಳೊಂದಿಗೆ ಸಂಪರ್ಕದಲ್ಲಿರಿ. ನಿಮಗೆ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Saturday, February 17, 2024, 11:00 [IST]
English summary
Shimoga hyundai showroom fire incident 6 new cars gutted
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+