ವಾಹನಗಳಿಗೆ ಪೂಜೆ; ಆಯುಧ ಪೂಜೆ ಮಹತ್ವವೇನು?

By Nagaraja

ದೇಶದ್ಯಾಂತ ಸಾಂಪ್ರದಾಯಿಕವಾಗಿ ನವರಾತ್ರಿ ಮತ್ತು ವಿಜಯದಶಮಿ ಹಬ್ಬಗಳನ್ನು ಆಚರಿಸಲಾಗುತ್ತದೆ. ನವರಾತ್ರಿಯ ಕೊನೆಯ ದಿನವಾದ ವಿಶಜದಶಮಿಯಂದು ಆಯುಧ ಪೂಜೆಗೆ ಹೆಚ್ಚಿನ ಮಹತ್ವ. ಅಡುಣೆ ಮನೆಯಲ್ಲಿ ತರಕಾರಿ ಹೆಚ್ಚುವ ಚಾಕುವನಿಂದ ಹಿಡಿದು ದೇಶದ ಗಡಿ ಕಾಯುವ ಅತ್ಯಾಧುನಿಕ ಯುದ್ಧ ವಿಮಾನಗಳಗೆ ಆಯುಧ ಪೂಜೆ ನೇರವೇರಿಸಲಾಗುತ್ತದೆ. ವಾಹನಗಳಿಗೆ ಪೂಜೆ ಸಲ್ಲಿಸುವುದರಿಂದ ಅಪಘಾತಗಳನ್ನು ತಪ್ಪಿಸಬಹುದು ಎಂಬುದು ನಂಬಿಕೆಯಾಗಿದೆ.

ವಾಹನಗಳಿಗೆ ಪೂಜೆ; ಆಯುಧ ಪೂಜೆ ಮಹತ್ವವೇನು?

ಆಯುಧ ಪೂಜೆಯಂದು ಮಾಲಿಕರು ತಮ್ಮ ವಾಹನಗಳನ್ನು ತೊಳೆದು, ಹೂವುಗಳಿಂದ ಶೃಂಗರಿಸಿ, ಕುಂಕುಮ, ಅರಶಿನವನ್ನು ಹಚ್ಚಿ, ಅದಕ್ಕೆ ನಿಂಬೆ ಹಣ್ಣು ಇಲ್ಲವೆ ಕುಂಬಳ ಕಾಯಿ ಒಡೆದು ಪೂಜೆ ಸಲ್ಲಿಸುತ್ತಾರೆ.

ವಾಹನಗಳಿಗೆ ಪೂಜೆ; ಆಯುಧ ಪೂಜೆ ಮಹತ್ವವೇನು?

ಆಯುಧ ಪೂಜೆ ದಿನದಂದು ಮಾವಿನ ಸೊಪ್ಪು, ಬಾಳೆಕಂದು, ಕಬ್ಬು ಹಾಗೂ ಚಂಡು ಹೂವುಗಳಿಂದ ಆಲಂಕರಿಸಿದ್ದ ವಾಹನಗಳು ಮದುವಣಗಿತ್ತಿಯಂತೆ ರಸ್ತೆಯೆಲ್ಲೆಡೆ ಓಡಾಡುತ್ತಿರುವ ದೃಶ್ಯ ಸರ್ವೇ ಸಾಮಾನ್ಯವಾಗಿದೆ.

ವಾಹನಗಳಿಗೆ ಪೂಜೆ; ಆಯುಧ ಪೂಜೆ ಮಹತ್ವವೇನು?

ನೂತನ ವಾಹನ ಖರೀದಿಗಾರರು ಹೆಚ್ಚಾಗಿ ಆಯುಧ ಪೂಜೆಯಂದೇ ತಮ್ಮ ಕಾರು, ಬೈಕ್‌ಗಳಿಗೆ ಪೂಜೆ ಸಲ್ಲಿಸಿ ಮೊದಲ ಪ್ರಯಾಣ ಆರಂಭಿಸುತ್ತಾರೆ. ಹೀಗೆ ಮಾಡುವುದರಿಂದ ವಾಹನಗಳಿಗೆ ದೀರ್ಘ ಬಾಳ್ವಿಕೆ ಪ್ರಾಪ್ತಿಯಾಗುವುದರೊಂದಿಗೆ ಅಪಘಾತವನ್ನು ತಪ್ಪಿಸಬಹುದಾಗಿದೆ ಎಂಬುದು ನಂಬಿಕೆಯಾಗಿದೆ.

ವಾಹನಗಳಿಗೆ ಪೂಜೆ; ಆಯುಧ ಪೂಜೆ ಮಹತ್ವವೇನು?

ಹಿಂದೂ ಸಂಸ್ಕೃತಿಯ ಪ್ರಕಾರ ಯಂತ್ರಗಳಿಗೂ ದೈವಿಕ ಶಕ್ತಿ ಇದ್ದೇ ಇರುತ್ತದೆ. ಇದರಿಂದಾಗಿ ಆಯುಧ ಪೂಜೆಯಂದು ವಾಹನಗಳಿಗೆ ಪೂಜೆ ಸಲ್ಲಿಸಿದರೆ ಯಾವುದೇ ರೀತಿಯ ಸಮಸ್ಯೆಗಳು ಎದುರಾಗುವುದಿಲ್ಲ.

ವಾಹನಗಳಿಗೆ ಪೂಜೆ; ಆಯುಧ ಪೂಜೆ ಮಹತ್ವವೇನು?

ಗ್ರಾಮೀಣ ಪ್ರದೇಶದಲ್ಲೂ ಆಯುಧ ಪೂಜೆಗೆ ಅತಿ ಹೆಚ್ಚು ಮಹತ್ವವಿದ್ದು, ರೈತರು ತಮ್ಮ ಕೃಷಿ ಸಾಮಾಗ್ರಿಗಳಿಗೆ ಪೂಜಿಸುತ್ತಾರೆ. ಅತ್ತ ಗ್ಯಾರೇಜ್ ನಲ್ಲಿ ಆಯುಧ ಪೂಜೆಯಂದು ವಿಶೇಷ ಪೂಜೆಯನ್ನು ನಡೆಸಿ ಮಾಲಿಕರು ತಮ್ಮ ಕೆಲಸಗಾರರಿಗೆ ವಿಶೇಷ ಬೋನಸ್, ವಸ್ತ್ರಗಳನ್ನು ನೀಡಿ ಸಂಭ್ರಮವನ್ನು ಹಂಚಿಕೊಳ್ಳುತ್ತಾರೆ.

ವಾಹನಗಳಿಗೆ ಪೂಜೆ; ಆಯುಧ ಪೂಜೆ ಮಹತ್ವವೇನು?

ಜೀವನದಲ್ಲಿ ನಿತ್ಯ ಉಪಯೋಗಿಸುವ ಆಯುಧಗಳನ್ನು ದೇವರ ಮುಂದಿಟ್ಟು ಭಕ್ತಿಭಾವದಿಂದ ಪೂಜಿಸಲಾಗುತ್ತದೆ. ಸಾಫ್ಟ್ ವೇರ್ ಕಂಪನಿಗಳು ಆಯುಧ ಪೂಜೆಯನ್ನು ಸಂಭ್ರಮ ಸಡಗರದಿಂದ ಆಚರಿಸಿಕೊಳ್ಳುತ್ತಾರೆ.

ಮಹಾಭಾರತದ ಮಹತ್ವ...

ಮಹಾಭಾರತದ ಮಹತ್ವ...

ದ್ವಾಪರ ಯುಗದಲ್ಲಿ ಪಾಂಡವರು 13 ವರ್ಷಗಳ ವನವಾಸ ಮುಗಿಸಿ ಬಂದ ಬಳಿಕ ಒಂದು ವರ್ಷದ ಅಜ್ಞಾತವಾಸ ಮುಗಿಸಿದ ದಿನವೇ ವಿಜಯದಶಮಿ. ಅಜ್ಞಾತವಾಸದ ಸಮಯದಲ್ಲಿ ಪಾಂಡವರು ತಮ್ಮ ಶಸ್ತ್ರಾಸ್ತ್ರಗಳನ್ನು ಬನ್ನಿ ಮರದಲ್ಲಿ ಬಚ್ಚಿಡುತ್ತಾರೆ. ವನವಾಸದ ನಂತರ ಬನ್ನಿ ಮರದಲ್ಲಿ ಬಚ್ಚಿಟ್ಟಿದ್ದ ಆಯುಧಗಳನ್ನು ತೆಗೆದು ಪೂಜಿಸಿದ್ದರು ಎಂಬ ಐತಿಹ್ಯವಿದೆ. ಬಳಿಕ ಆಯುಧಗಳನ್ನು ತೆಗೆದು ವಿರಾಟರಾಜನ ಶತ್ರುಗಳ ವಿರುದ್ಧ ವಿಜಯವನ್ನು ಸಾಧಿಸುತ್ತಾರೆ.

ವಾಹನಗಳಿಗೆ ಪೂಜೆ; ಆಯುಧ ಪೂಜೆ ಮಹತ್ವವೇನು?

ದೇಶದೆಲ್ಲೆಡೆ ಸಂಭ್ರಮದ ವಾತಾವರಣ ಮನೆ ಮಾಡಿರುವಂತೆಯೇ ಮುಂಚೂಣಿಯ ವಾಹನ ಸಂಸ್ಥೆಗಳು ಕಾರು, ಬೈಕ್ ಗಳಿಗೆ ಆಕರ್ಷಕ ಆಫರುಗಳನ್ನು ನೀಡುತ್ತಲ್ಲದೆ ತನ್ಮೂಲಕ ಗರಿಷ್ಠ ಮಾರಾಟವನ್ನು ಗುರಿ ಮಾಡುತ್ತಿದೆ.

ವಾಹನಗಳಿಗೆ ಪೂಜೆ; ಆಯುಧ ಪೂಜೆ ಮಹತ್ವವೇನು?

ಈ ಸಂಬಂಧ ಓದುಗರ ಜೊತೆಗೆ ಹಬ್ಬದ ಸಂಭ್ರಮವನ್ನು ಹಂಚಿಕೊಳ್ಳಲು ಹಾಗೂ ನಿಮ್ಮ ಅಭಿಪ್ರಾಯಗಳನ್ನು ನಮ್ಮ ಕಾಮೆಂಟ್ ಬಾಕ್ಸ್ ಹಂಚಿಕೊಳ್ಳಲು ಮರೆಯದಿರಿ.

More from DriveSpark

Article Published On: Monday, October 10, 2016, 11:21 [IST]
English summary
Significance of Ayudha Pooja & Worship of Vehicles
Read more on ಕಾರು vehicle
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+