Just In
Don't Miss!
- News
ಮೈಸೂರು ಕೈ ಪಾಳಯದಲ್ಲಿ ಭುಗಿಲೆದ್ದ ಅಸಮಾಧಾನ: ಶಾಸಕ ತನ್ವೀರ್ ಸೇಠ್ ಉಚ್ಚಾಟನೆಗೆ ಆಗ್ರಹ
- Movies
ರಾಬರ್ಟ್ ಸಂಭ್ರಮ: ವಿನಯದಿಂದ ತೆಲುಗು ಅಭಿಮಾನಿಗಳ ಮನಸು ಕದ್ದ ದರ್ಶನ್
- Finance
ಫಾಸ್ಟ್ಟ್ಯಾಗ್ ಟೋಲ್ ಕಲೆಕ್ಷನ್: ಒಂದು ದಿನಕ್ಕೆ 104 ಕೋಟಿ ರೂಪಾಯಿ
- Lifestyle
ಮಾರ್ಚ್ ತಿಂಗಳಲ್ಲಿ ವಿವಾಹವಾಗಲು ಇಲ್ಲಿದೆ ಶುಭದಿನಾಂಕಗಳು
- Sports
ಮೊಟೆರಾ ಪಿಚ್ ಬಗ್ಗೆ ವಿರಾಟ್ ಕೊಹ್ಲಿ ಹೇಳಿಕೆಗೆ ಅಲಾಸ್ಟೇರ್ ಕುಕ್ ಕಿಡಿ
- Education
RBI Grade B Admit Card 2021: ಪ್ರವೇಶ ಪತ್ರ ಡೌನ್ಲೋಡ್ ಮಾಡುವುದು ಹೇಗೆ ?
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಬೆಲೆ ಏರಿಕೆ ಎಫೆಕ್ಟ್: ವಿದೇಶದಿಂದ ಕಳ್ಳ ಸಾಗಾಣಿಕೆಯಾಗುತ್ತಿದೆ ಪೆಟ್ರೋಲ್, ಡೀಸೆಲ್
ದೇಶದ ಕೆಲವು ನಗರಗಳಲ್ಲಿ ಪೆಟ್ರೋಲ್ ಬೆಲೆ ರೂ.93ರ ಆಸುಪಾಸಿನಲ್ಲಿದ್ದರೆ, ಡೀಸೆಲ್ ಬೆಲೆ ರೂ.86ರ ಆಸುಪಾಸಿನಲ್ಲಿದೆ. ಇದರಿಂದಾಗಿ ಸಾರ್ವಜನಿಕರು ಪೆಟ್ರೋಲ್ ಬೆಲೆ ಶೀಘ್ರದಲ್ಲೇ ನೂರರ ಗಡಿ ದಾಟಬಹುದು ಎಂಬ ಆತಂಕದಲ್ಲಿದ್ದಾರೆ.

ಮನೆಗಳು, ಚಹಾ ಅಂಗಡಿಗಳು ಹೀಗೆ ಎಲ್ಲೆಡೆ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಬಗ್ಗೆ ಚರ್ಚೆಯಾಗುತ್ತಿದೆ. ದೇಶದ ಬಹುತೇಕ ಭಾಗಗಳಲ್ಲಿ ಪೆಟ್ರೋಲ್ ಬೆಲೆ ರೂ.90ಗಳಿಗಿಂತ ಹೆಚ್ಚಾಗಿರುವ ಸಂದರ್ಭದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಹಾಗೂ ಡೀಸೆಲ್ ಅನ್ನು ಕಡಿಮೆ ಬೆಲೆಗೆ ಮಾರಾಟ ಮಾಡುತ್ತಿರುವ ಮಾಹಿತಿ ಲಭ್ಯವಾಗಿದೆ.

ಹಿಂದೂಸ್ತಾನ್ ಟೈಮ್ಸ್ ವರದಿಯ ಪ್ರಕಾರ ನಮ್ಮ ನೆರೆಯ ದೇಶಗಳಲ್ಲಿ ಒಂದಾದ ನೇಪಾಳದಿಂದ ಪೆಟ್ರೋಲ್ ಅನ್ನು ಕಳ್ಳಸಾಗಣೆ ಮಾಡಲಾಗುತ್ತಿದ್ದು, ರೂ.50ಗಳವರೆಗೆ ಕಡಿಮೆ ಬೆಲೆಗೆ ಮಾರಾಟ ಮಾಡಲಾಗುತ್ತಿದೆ.
MOST READ:ರಿಕ್ಷಾ ಕಳೆದುಕೊಂಡವನಿಗೆ ಹೊಸ ರಿಕ್ಷಾ ಕೊಡಿಸಿದ ಆಪದ್ಭಾಂಧವ

ನೇಪಾಳವು ಭಾರತದಿಂದ ಸಂಸ್ಕರಿಸಿದ ಪೆಟ್ರೋಲ್ ಹಾಗೂ ಡೀಸೆಲ್ ಖರೀದಿಸಿ ಮಾರಾಟ ಮಾಡುತ್ತದೆ. ಆದರೂ ಸಹ ಪೆಟ್ರೋಲ್, ಡೀಸೆಲ್ ಅನ್ನು ಭಾರತಕ್ಕಿಂತ ಕಡಿಮೆ ಬೆಲೆಗೆ ನೇಪಾಳದಲ್ಲಿ ಮಾರಾಟ ಮಾಡಲಾಗುತ್ತದೆ.

ಈ ಕಾರಣಕ್ಕೆ ಕೆಲವರು ಉಭಯ ದೇಶಗಳ ನಡುವೆ ಅಸ್ತಿತ್ವದಲ್ಲಿರುವ ಅಡ್ಡ ದಾರಿಗಳ ಮೂಲಕ ನೇಪಾಳಕ್ಕೆ ಸಾಗಿ ಅಲ್ಲಿ ಪೆಟ್ರೋಲ್ ಖರೀದಿಸಿ ಭಾರತದಲ್ಲಿ ಮಾರಾಟ ಮಾಡುತ್ತಿದ್ದಾರೆ.
MOST READ:ಶೋಚನೀಯ ಸ್ಥಿತಿಯಲ್ಲಿವೆ ದುಬಾರಿ ಬೆಲೆಯ ಐಷಾರಾಮಿ ರೋಲ್ಸ್ ರಾಯ್ಸ್ ಕಾರುಗಳು

ಇನ್ನೂ ಕೆಲವರು ನೇಪಾಳದಿಂದ ಪೆಟ್ರೋಲ್ ಕಳ್ಳಸಾಗಣೆ ಮಾಡುತ್ತಿದ್ದು, ಅದನ್ನು ಅತ್ಯಂತ ಕಡಿಮೆ ಬೆಲೆಗೆ ಮಾರಾಟ ಮಾಡುತ್ತಿದ್ದಾರೆ ಎಂಬ ವರದಿಗಳಾಗಿವೆ.ಹೀಗಾಗಿ ಕಳ್ಳಸಾಗಾಣಿಕೆಯಾಗುತ್ತಿರುವ ಪೆಟ್ರೋಲ್ ರೂ.22 ಗಳಷ್ಟು ಕಡಿಮೆ ಬೆಲೆಗೆ ಮಾರಾಟ ಮಾಡಲಾಗುತ್ತಿದೆ.

ಹೆಚ್ಚುತ್ತಿರುವ ಇಂಧನ ಬೆಲೆಗಳಿಂದ ಜನರು ತತ್ತರಿಸಿದ್ದಾರೆ. ಈ ಪರಿಸ್ಥಿತಿಯಲ್ಲಿಯೇ ಜನರು ಅಡ್ಡದಾರಿ ಹಿಡಿಯುತ್ತಿದ್ದಾರೆ. ಪೆಟ್ರೋಲ್, ಡೀಸೆಲ್ ಹೊರತುಪಡಿಸಿ, ಗ್ಯಾಸ್ ಸಿಲಿಂಡರ್ ಬೆಲೆಯನ್ನು ಸಹ ರೂ.50ಗಳಷ್ಟು ಏರಿಕೆ ಮಾಡಲಾಗಿದೆ.
MOSTREAD: ಇನ್ನು ಮುಂದೆ ಈ ನಗರಗಳಲ್ಲಿ ಡೀಸೆಲ್ ವಾಹನಗಳನ್ನು ಮಾರಾಟ ಮಾಡುವಂತಿಲ್ಲ

ಇದರಿಂದಾಗಿ ಗೃಹಿಣಿಯರು ಆತಂಕಕ್ಕೀಡಾಗಿದ್ದಾರೆ. ನೇಪಾಳದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಅನ್ನು ರೂ.70.62ಗಳಿಗೆ ಮಾರಾಟ ಮಾಡಲಾಗುತ್ತಿದೆ.

ಭದ್ರತಾ ಪಡೆಗಳು ಗಸ್ತು ತಿರುಗದ ಜಾಗಗಳನ್ನು ಬಳಸಿಕೊಂಡು ಬಿಹಾರದ ಜಿಲ್ಲೆಗಳ ಜನರು ದೊಡ್ಡ ಪ್ರಮಾಣದಲ್ಲಿ ಪೆಟ್ರೋಲ್, ಡೀಸೆಲ್ ಕಳ್ಳ ಸಾಗಾಣಿಕೆ ಮಾಡುತ್ತಿದ್ದಾರೆ. ಇದರಿಂದಾಗಿ ಸ್ಥಳೀಯ ಪೆಟ್ರೋಲ್ ಬಂಕ್'ಗಳಲ್ಲಿನ ಇಂಧನ ಮಾರಾಟವು ಸ್ವಲ್ಪ ಮಟ್ಟಿಗೆ ಕುಸಿತ ಕಾಣುತ್ತಿದೆ.