ನಡು ರಸ್ತೆಯಲ್ಲಿ ಡ್ಯಾನ್ಸ್ ಮಾಡಿದ ಕಾರಣಕ್ಕೆ ನೋಟಿಸ್ ಪಡೆದ ಸೋಷಿಯಲ್ ಮೀಡಿಯಾ ಸ್ಟಾರ್

ಕೆಲವರು ಸಾಮಾಜಿಕ ಜಾಲತಾಣಗಳಲ್ಲಿ ಜನರ ಗಮನ ಸೆಳೆಯಲು ಹಾಗೂ ಹೆಚ್ಚಿನ ಸಂಖ್ಯೆಯಲ್ಲಿ ಅನುಯಾಯಿಗಳನ್ನು ಪಡೆಯಲು ಬಗೆ ಬಗೆಯ ಕಸರತ್ತುಗಳನ್ನು ಮಾಡುತ್ತಾರೆ. ಈ ಹಿಂದೆಯೂ ಹಲವು ಸೋಷಿಯಲ್ ಮೀಡಿಯಾ ಸೆಲೆಬ್ರಿಟಿಗಳು ಜನರ ಗಮನ ಸೆಳೆಯಲು ವಿವಿಧ ಮಾರ್ಗಗಳನ್ನು ಆಯ್ಕೆ ಮಾಡಿಕೊಂಡಿದ್ದರು.

ನಡು ರಸ್ತೆಯಲ್ಲಿ ಡ್ಯಾನ್ಸ್ ಮಾಡಿದ ಕಾರಣಕ್ಕೆ ನೋಟಿಸ್ ಪಡೆದ ಸೋಷಿಯಲ್ ಮೀಡಿಯಾ ಸ್ಟಾರ್

ಹೀಗೆ ಅವರು ಆಯ್ಕೆ ಮಾಡಿಕೊಳ್ಳುವ ಮಾರ್ಗಗಳು ಪೊಲೀಸರ ಗಮನವನ್ನೂ ಸೆಳೆಯುತ್ತವೆ. ಮಧ್ಯಪ್ರದೇಶದ ಇಂದೋರ್‌ನ ಸೋಷಿಯಲ್ ಮೀಡಿಯಾ ಸೆಲೆಬ್ರಿಟಿ ಶ್ರೇಯಾ ಕಲ್ರಾ ಅವರು ರಸ್ತೆ ಮಧ್ಯದಲ್ಲಿ ಡ್ಯಾನ್ಸ್ ಮಾಡಿದ್ದಾರೆ. ನಡು ರಸ್ತೆಯಲ್ಲಿ ಡ್ಯಾನ್ಸ್ ಮಾಡಿದ ಶ್ರೇಯಾ ಕಲ್ರಾರವರಿಗೆ ಪೊಲೀಸರು ನೋಟಿಸ್ ನೀಡಿದ್ದಾರೆ. ಈ ಘಟನೆ ಇಂದೋರ್‌ನ ರಸೋಮಾ ಜಂಕ್ಷನ್ ನಲ್ಲಿ ನಡೆದಿದೆ.

ನಡು ರಸ್ತೆಯಲ್ಲಿ ಡ್ಯಾನ್ಸ್ ಮಾಡಿದ ಕಾರಣಕ್ಕೆ ನೋಟಿಸ್ ಪಡೆದ ಸೋಷಿಯಲ್ ಮೀಡಿಯಾ ಸ್ಟಾರ್

ಶ್ರೇಯಾರವರು ಟ್ರಾಫಿಕ್ ಸಿಗ್ನಲ್ ಕೆಂಪು ಬಣ್ಣಕ್ಕೆ ತಿರುಗುತ್ತಿದ್ದಂತೆ ಜೀಬ್ರಾ ಕ್ರಾಸಿಂಗ್‌ ಮೇಲೆ ನಿಂತು ಡ್ಯಾನ್ಸ್ ಮಾಡಿದ್ದಾರೆ. ಸಿಗ್ನಲ್ ನಲ್ಲಿ ನಿಂತಿದ್ದ ವಾಹನ ಸವಾರರು ಸಂಚಾರಿ ನಿಯಮಗಳ ಬಗ್ಗೆ ಅರಿವು ಮೂಡಿಸಲು ಸಾರ್ವಜನಿಕರ ಗಮನವನ್ನು ಸೆಳೆಯಲು ಸಂಚಾರ ಪೊಲೀಸರೇ ಈ ರೀತಿ ಪ್ರಚಾರ ಮಾಡುತ್ತಿದ್ದಾರೆ ಎಂದು ಭಾವಿಸಿದ್ದರು.

ನಡು ರಸ್ತೆಯಲ್ಲಿ ಡ್ಯಾನ್ಸ್ ಮಾಡಿದ ಕಾರಣಕ್ಕೆ ನೋಟಿಸ್ ಪಡೆದ ಸೋಷಿಯಲ್ ಮೀಡಿಯಾ ಸ್ಟಾರ್

ಆದರೆ ಆಕೆ ಬೇರೆ ಏನನ್ನೂ ಮಾಡದೆ ಡ್ಯಾನ್ಸ್ ಮಾಡುತ್ತಲೇ ಇದ್ದರು. ಶ್ರೇಯಾ ರಸ್ತೆ ಮಧ್ಯದಲ್ಲಿ ಡ್ಯಾನ್ಸ್ ಮಾಡುತ್ತಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಜೊತೆಗೆ ಮಾಧ್ಯಮಗಳು ಕೂಡ ಅದನ್ನು ಪ್ರಸಾರ ಮಾಡಿವೆ. ಈ ವೀಡಿಯೊ ವೈರಲ್ ಆಗುತ್ತಲೇ ಪೊಲೀಸರು ಈಕೆಯ ಬಗ್ಗೆ ಮಾಹಿತಿ ಸಂಗ್ರಹಿಸಿದ್ದಾರೆ. ಜೊತೆಗೆ ವೀಡಿಯೊ ರೆಕಾರ್ಡ್ ಮಾಡಿದವನ ಬಗ್ಗೆಯೂ ಮಾಹಿತಿ ಸಂಗ್ರಹಿಸಿದ್ದಾರೆ.

ನಡು ರಸ್ತೆಯಲ್ಲಿ ಡ್ಯಾನ್ಸ್ ಮಾಡಿದ ಕಾರಣಕ್ಕೆ ನೋಟಿಸ್ ಪಡೆದ ಸೋಷಿಯಲ್ ಮೀಡಿಯಾ ಸ್ಟಾರ್

ಈ ಘಟನೆಯ ಬಗ್ಗೆ ತನಿಖೆ ನಡೆಸುತ್ತಿರುವುದಾಗಿ ಇಂದೋರ್'ನ ಸಂಚಾರಿ ಪೊಲೀಸ್ ಎಎಸ್‌ಪಿ ಅನಿಲ್ ಪಾಟಿದಾರ್ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ. ಸಂಚಾರಿ ನಿಯಮಗಳನ್ನು ಉಲ್ಲಂಘಿಸಿದ ಕಾರಣಕ್ಕೆ ಪೊಲೀಸರು ಶ್ರೇಯಾ ಹಾಗೂ ಘಟನೆಯ ವೀಡಿಯೊ ರೆಕಾರ್ಡ್ ಮಾಡಿದ ಆಕೆಯ ಜೊತೆಗಾರನಿಗೆ ಬಾಲಕಿಗೆ ನೋಟಿಸ್ ಜಾರಿಗೊಳಿಸಿದ್ದಾರೆ.

ನಡು ರಸ್ತೆಯಲ್ಲಿ ಡ್ಯಾನ್ಸ್ ಮಾಡಿದ ಕಾರಣಕ್ಕೆ ನೋಟಿಸ್ ಪಡೆದ ಸೋಷಿಯಲ್ ಮೀಡಿಯಾ ಸ್ಟಾರ್

ಕೆಲವೇ ದಿನಗಳ ಹಿಂದೆ ಯುವತಿಯೊಬ್ಬಳು ಟ್ರಾಫಿಕ್ ಜಾಮ್ ಮಧ್ಯೆ ಸಿಲುಕಿದ್ದ ಕಾರುಗಳ ಮೇಲ್ಭಾಗದಲ್ಲಿ ಡ್ಯಾನ್ಸ್ ಮಾಡುತ್ತಿರುವ ವೀಡಿಯೊವೊಂದನ್ನು ಶೇರ್ ಮಾಡಿದ್ದಳು. ಈ ವೀಡಿಯೊ ವೈರಲ್ ಆಗಿ ಪೊಲೀಸರ ಗಮನಕ್ಕೂ ಬಂದಿತ್ತು. ತಕ್ಷಣವೇ ಪೊಲೀಸರು ಆಕೆಗೂ ನೋಟಿಸ್ ನೀಡಿದ್ದರು. ಡಿಜಿಟಲ್ ಚಲನ್ ಆಗಮನದಿಂದ ಪೊಲೀಸರು ಇತ್ತೀಚಿನ ದಿನಗಳಲ್ಲಿ ಹೆಚ್ಚು ಜಾಗರೂಕರಾಗಿದ್ದಾರೆ.

ನಡು ರಸ್ತೆಯಲ್ಲಿ ಡ್ಯಾನ್ಸ್ ಮಾಡಿದ ಕಾರಣಕ್ಕೆ ನೋಟಿಸ್ ಪಡೆದ ಸೋಷಿಯಲ್ ಮೀಡಿಯಾ ಸ್ಟಾರ್

ಪೋಲಿಸರು ಘಟನೆಗಳ ಫೋಟೋ ಹಾಗೂ ವೀಡಿಯೊಗಳಂತಹ ಡಿಜಿಟಲ್ ಸಾಕ್ಷಿಗಳ ಆಧಾರದ ಮೇಲೆ ನೋಟಿಸ್ ನೀಡುತ್ತಿದ್ದಾರೆ. ಈ ಮೇಲ್ಕಂಡ ಘಟನೆಯಲ್ಲಿ ಯುವತಿಯು ವಾಹನವನ್ನು ಬಳಸದೇ ಇದ್ದರೂ ಸಹ, ಆಕೆ ಮಧ್ಯ ರಸ್ತೆಯಲ್ಲಿ ಡ್ಯಾನ್ಸ್ ಮಾಡಿ ಸಂಚಾರಕ್ಕೆ ಅಡ್ಡಿಪಡಿಸಿದ್ದಾಳೆ. ಇದು ಸಹ ಕಾನೂನು ಬಾಹಿರವಾಗಿದೆ. ಈ ಹಿನ್ನೆಲೆಯಲ್ಲಿ ಆಕೆಗೆ ನೋಟಿಸ್ ನೀಡಲಾಗಿದೆ.

ನಡು ರಸ್ತೆಯಲ್ಲಿ ಡ್ಯಾನ್ಸ್ ಮಾಡಿದ ಕಾರಣಕ್ಕೆ ನೋಟಿಸ್ ಪಡೆದ ಸೋಷಿಯಲ್ ಮೀಡಿಯಾ ಸ್ಟಾರ್

ಬಹುತೇಕ ಮಹಾನಗರಗಳಲ್ಲಿ ಈಗ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿರುತ್ತದೆ. ಪೊಲೀಸರು ಅವುಗಳನ್ನು ಮೇಲ್ವಿಚಾರಣೆ ಮಾಡುವುದರ ಜೊತೆಗೆ ಅಪರಾಧ ಪ್ರಕರಣಗಳನ್ನು ಭೇದಿಸಲು ಬಳಸುತ್ತಿದ್ದಾರೆ. ಸಿಸಿಟಿವಿಗಳ ನೆರವಿನಿಂದ ವಾಹನಗಳ ನೋಂದಣಿ ಸಂಖ್ಯೆಯನ್ನು ಟ್ರ್ಯಾಕ್ ಮಾಡಿ ನಿಯಮಗಳನ್ನು ಉಲ್ಲಂಘಿಸುವವರಿಗೆ ಚಲನ್ ನೀಡುತ್ತಿದ್ದಾರೆ.

ನಡು ರಸ್ತೆಯಲ್ಲಿ ಡ್ಯಾನ್ಸ್ ಮಾಡಿದ ಕಾರಣಕ್ಕೆ ನೋಟಿಸ್ ಪಡೆದ ಸೋಷಿಯಲ್ ಮೀಡಿಯಾ ಸ್ಟಾರ್

ಭಾರತವು ವಿಶ್ವದಲ್ಲೇ ಅತಿ ಹೆಚ್ಚು ರಸ್ತೆ ಅಪಘಾತಗಳು ಸಂಭವಿಸುವ ದೇಶಗಳಲ್ಲಿ ಒಂದಾಗಿದೆ. ಭಾರತದಲ್ಲಿ ಪ್ರತಿ ವರ್ಷ ಸುಮಾರು 1.50 ಲಕ್ಷ ಜನರು ರಸ್ತೆ ಅಪಘಾತಗಳಿಂದ ಸಾವನ್ನಪ್ಪುತ್ತಿದ್ದಾರೆ ಎಂಬುದು ಅಂಕಿ ಅಂಶಗಳಿಂದ ದೃಢ ಪಟ್ಟಿದೆ. ವಾಹನ ಸವಾರರು ಸಂಚಾರಿ ನಿಯಮಗಳನ್ನು ಉಲ್ಲಂಘಿಸುವುದೇ ರಸ್ತೆ ಅಪಘಾತಗಳಿಗೆ ಪ್ರಮುಖ ಕಾರಣವೆಂದು ಹೇಳಲಾಗಿದೆ.

ನಡು ರಸ್ತೆಯಲ್ಲಿ ಡ್ಯಾನ್ಸ್ ಮಾಡಿದ ಕಾರಣಕ್ಕೆ ನೋಟಿಸ್ ಪಡೆದ ಸೋಷಿಯಲ್ ಮೀಡಿಯಾ ಸ್ಟಾರ್

ಸಂಚಾರಿ ನಿಯಮಗಳ ಉಲ್ಲಂಘನೆಯನ್ನು ಕಡಿಮೆ ಮಾಡಿ ರಸ್ತೆ ಅಪಘಾತಗಳ ಪ್ರಮಾಣವನ್ನು ಕಡಿಮೆ ಮಾಡಲು ಕೇಂದ್ರ ಸರ್ಕಾರವು ಹಲವು ಕ್ರಮಗಳನ್ನು ಕೈಗೊಳ್ಳುತ್ತಿದೆ. 2019 ರಲ್ಲಿ ಜಾರಿಗೆ ಬಂದ ಹೊಸ ಮೋಟಾರು ವಾಹನ ಕಾಯ್ದೆಯನ್ವಯ ಸಂಚಾರ ನಿಯಮಗಳನ್ನು ಉಲ್ಲಂಘಿಸುವ ವಾಹನ ಸವಾರರಿಗೆ ಭಾರೀ ಪ್ರಮಾಣದಲ್ಲಿ ದಂಡ ವಿಧಿಸಲಾಗುತ್ತದೆ.

ಭಾರತದಲ್ಲಿ ಹೆಚ್ಚಾಗಿ ಹೆದ್ದಾರಿಗಳಲ್ಲಿ ಅಪಘಾತಗಳು ಸಂಭವಿಸುತ್ತವೆ. ಈ ಹಿನ್ನೆಲೆಯಲ್ಲಿ ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಇಲಾಖೆಯು ರಸ್ತೆ ಅಗಲಿಕರಣದಂತಹ ಕ್ರಮಗಳನ್ನು ಕೈಗೊಳ್ಳುತ್ತಿದೆ. ಈಗ ಇರುವ ರಸ್ತೆಗಳನ್ನು ವಿಸ್ತರಿಸಿ ಅವುಗಳನ್ನು ಮೇಲ್ದರ್ಜೆಗೆ ಏರಿಸಲಾಗುತ್ತಿದೆ. ಜೊತೆಗೆ ಕೇಂದ್ರ ಸರ್ಕಾರವು ವಾಹನ ತಯಾರಕ ಕಂಪನಿಗಳಿಗೂ ಸಹ ವಾಹನಗಳಲ್ಲಿ ಸುರಕ್ಷತಾ ಫೀಚರ್ ಗಳನ್ನು ನೀಡುವಂತೆ ಸೂಚನೆ ನೀಡಿದೆ.

ನಡು ರಸ್ತೆಯಲ್ಲಿ ಡ್ಯಾನ್ಸ್ ಮಾಡಿದ ಕಾರಣಕ್ಕೆ ನೋಟಿಸ್ ಪಡೆದ ಸೋಷಿಯಲ್ ಮೀಡಿಯಾ ಸ್ಟಾರ್

ದ್ವಿಚಕ್ರ ವಾಹನಗಳಲ್ಲಿ ಯಾವಾಗಲೂ ಹೆಡ್ ಲೈಟ್ ಗಳು ಆನ್ ಆಗಿರುವಂತೆ ಸೂಚಿಸಲಾಗಿದೆ. ಈ ಹಿನ್ನೆಲೆಯಲ್ಲಿ ಈಗ ಬಿಡುಗಡೆಯಾಗುತ್ತಿರುವ ಎಲ್ಲಾ ದ್ವಿಚಕ್ರ ವಾಹನಗಳಲ್ಲಿ ಹೆಡ್ ಲೈಟ್ ಗಳು ಯಾವಾಗಲೂ ಆನ್ ಆಗಿರುತ್ತವೆ. ಕೇಂದ್ರ ಸರ್ಕಾರವು ಇನ್ನು ಮುಂದೆ ಬಿಡುಗಡೆಯಾಗುವ ಕಾರುಗಳಲ್ಲಿ ಕಡ್ಡಾಯವಾಗಿ ಫ್ರಂಟ್ ಏರ್ ಬ್ಯಾಗ್ ಗಳನ್ನು ಅಳವಡಿಸುವಂತೆ ಕಾರು ತಯಾರಕ ಕಂಪನಿಗಳಿಗೆ ಸೂಚನೆ ನೀಡಿದೆ.

Most Read Articles

Kannada
English summary
Social media star dances on mid road and gets notice from police details
Story first published: Thursday, September 16, 2021, 10:21 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X