ಅಪ್ಪನ ಹುಟ್ಟುಹಬ್ಬಕ್ಕೆ ಅಡ್ವೆಂಚರ್ ಬೈಕ್ ಗಿಫ್ಟ್: ಮೊಮ್ಮಕ್ಕಳ ಜೊತೆ ವಿತರಣೆ ಪಡೆದುಕೊಂಡ ಅಜ್ಜ

ಈ ರಾಯಲ್‌ ಎನ್‌ಫೀಲ್ಡ್‌ (Royal Enfield) ಬೈಕ್‌ಗಳ ಮೇಲೆ ಜನರಿಗಿರುವ ಕ್ರೇಜ್‌ ಇಂದು ನೆನ್ನೆಯದಲ್ಲ, ಅದು ಹಲವಾರು ದಶಕಗಳಿಂದ ಇರುವ ಕ್ರೇಜ್ ಆಗಿದೆ. ಇಂದಿಗೂ ಕೂಡ ರಾಯಲ್ ಎನ್‍ಫೀಲ್ಡ್ ಬೈಕ್ ಯುವಕರ ಕನಸಿನ ಬೈಕ್ ಮಾತ್ರವಲ್ಲ ಯುವತಿಯರ ಕನಸಿನ ಬೈಕ್ ಕೂಡ ಆಗಿದೆ.

ರಾಯಲ್ ಎನ್‍ಫೀಲ್ಡ್ ತನ್ನ ಕ್ಲಾಸಿಕ್ ವಿಶಿಷ್ಟವಾದ ಲುಕ್, ಶಬ್ಧ ಮತ್ತು ಆಕರ್ಷಕ ವಿನ್ಯಾಸದಿಂದ ಎಲ್ಲರ ಗಮನಸೆಳೆದ ಬೈಕ್. ರಾಯಲ್ ಎನ್‍ಫೀಲ್ಡ್ ಬೈಕನ್ನು ಇಷ್ಟಪಡುವರಿಗೆ ಯಾವುದೇ ವಯಸ್ಸಿನ ಮಿತಿಯಿಲ್ಲ. ಎಲ್ಲಾ ವಯಸ್ಸಿನ ಜನರನ್ನು ರಾಯಲ್ ಎನ್‍ಫೀಲ್ಡ್ ಬೈಕುಗಳು ಸೆಳೆಯುತ್ತದೆ. ಆದರೆ ಕೆಲವರು ಯುವಕರನ್ನು ಮಾತ್ರ ರಾಯಲ್ ಎನ್‍ಫೀಲ್ಡ್ ಬೈಕುಗಳು ಸೆಳೆಯುತ್ತದೆ ಎಂದು ಬಹಳಷ್ಟು ಜನರು ಭಾವಿಸುತ್ತಾರೆ.

Royal Enfield Himalayan 450

ಇತ್ತೀಚೆಗೆ 64 ವರ್ಷದ ಹಿರಿಯ ವ್ಯಕ್ತಿ ಹೊಸ ರಾಯಲ್ ಎನ್‍ಫೀಲ್ಡ್ ಬೈಕ್ ವಿತರಣೆ ಪಡೆದುಕೊಳ್ಳುತ್ತಿರುವ ವಿಡಿಯೋ ವೈರಲ್ ಆಗಿದೆ. ಈ ಬೈಕ್ ಅನ್ನು ಮಗ ತನ್ನ 64 ವರ್ಷದ ತಂದೆಗೆ ಹೊಚ್ಚಹೊಸ ರಾಯಲ್ ಎನ್‌ಫೀಲ್ಡ್ ಹಿಮಾಲಯನ್ 450 ಅನ್ನು ಉಡುಗೊರೆಯಾಗಿ ನೀಡಿದ್ದಾನೆ. ಅಜ್ಜ ತನ್ನ ಇಬ್ಬರು ಮೊಮ್ಮಕ್ಕಳೊಂದಿಗೆ ಡೆಲಿವರಿ ತೆಗೆದುಕೊಳ್ಳುತ್ತಿರುವ ವೀಡಿಯೊವನ್ನು ಯೂಟ್ಯೂಬ್‌ನಲ್ಲಿ ಡಿನೋಸ್ ವಾಲ್ಟ್ ತಮ್ಮ ಚಾನೆಲ್‌ನಲ್ಲಿ ಹಂಚಿಕೊಂಡಿದ್ದಾರೆ.

ಯೂಟ್ಯೂಬರ್ 64 ವರ್ಷದ ಅಜ್ಜ ಶ್ರೀ ರವಿ ಅವರನ್ನು ಪರಿಚಯಿಸುವುದರೊಂದಿಗೆ ಇದು ಪ್ರಾರಂಭವಾಗುತ್ತದೆ. ರವಿ ಅವರು ಅತ್ಯಂತ ಭಾವೋದ್ರಿಕ್ತ ಬೈಕ್ ಸವಾರರಾಗಿದ್ದಾರೆ ಮತ್ತು ಗೂಲ್ಡನ್ ಅಕ್ಸೆಟ್ ಳೊಂದಿಗೆ ಹ್ಯಾನ್ಲೆ ಬ್ಲ್ಯಾಕ್ ಬಣ್ಣದ ಹೊಸ ರಾಯಲ್ ಎನ್‌ಫೀಲ್ಡ್ ಹಿಮಾಲಯನ್ 450 ಅನ್ನು ಉಡುಗೊರೆಯಾಗಿ ನೀಡಲಾಗುತ್ತಿದೆ ಎಂದು ಅವರು ಹೇಳುತ್ತಾರೆ. ಪರಿಚಯದ ನಂತರ, ಯೂಟ್ಯೂಬರ್ ತಮ್ಮ ಭಾವೋದ್ರೇಕದಿಂದಾಗಿ ರವಿ ಅವರ ಬಗ್ಗೆ ಅತ್ಯಂತ ಗೌರವ ಮತ್ತು ಅಭಿಮಾನವನ್ನು ಹೊಂದಿದ್ದಾರೆಂದು ಎಂದು ಹೇಳಿದರು.

Royal Enfield Himalayan 450

ಅವರ ಬೈಕ್ ಡೆಲಿವರಿ ಪಡೆಯಲು ಅವರು ತಮ್ಮ ಇಬ್ಬರು ಮೊಮ್ಮಕ್ಕಳೊಂದಿಗೆ ಬಂದಿದ್ದಾರೆ ಎಂದು ಅವರು ನಂತರ ಹೇಳಿಕೊಂಡರು. ಇದರ ನಂತರ, ರವಿ ಅವರು 64 ನೇ ವರ್ಷಕ್ಕೆ ಕಾಲಿಟ್ಟಿದ್ದಾರೆ ಮತ್ತು ಉಡುಗೊರೆಯಾಗಿ ಈ ಹೊಸ ರಾಯಲ್ ಎನ್‌ಫೀಲ್ಡ್ ಹಿಮಾಲಯನ್ 450 ಅನ್ನು ನೀಡಲಾಗುತ್ತಿದೆ ಎಂದು ತಿಳಿಸಿದ್ದಾರೆ. ರವಿ ಅವರು ತಮ್ಮ 64 ನೇ ಹುಟ್ಟುಹಬ್ಬದಂದು ಹಾಕಿಸಿಕೊಂಡ ತಮ್ಮ ಹೊಸ ಟ್ಯಾಟೂವನ್ನು ತೋರಿಸುತ್ತಾರೆ ಮತ್ತು ಅದು ಬೈಕ್ ರೈಡಿಂಗ್ ಸಂಬಂಧಿಸಿದೆ.

ಈ ರಾಯಲ್ ಎನ್‌ಫೀಲ್ಡ್ ಹಿಮಾಲಯನ್ 450 (Royal Enfield Himalayan 450) ಬೈಕ್ ಬಗ್ಗೆ ಹೇಳುವುದಾದರೆ, ಇದು ಮೂರು ರೂಪಾಂತರಗಳಲ್ಲಿ ಲಭ್ಯವಿದೆ. ಮೂರರ ನಡುವಿನ ವ್ಯತ್ಯಾಸವೆಂದರೆ ಬಣ್ಣದ ಆಯ್ಕೆಗಳಾಗಿವ. ಭಾರತದ ಅಡ್ವೆಂಚರ್ ಮೋಟಾರ್‌ಸೈಕಲ್ ವಿಭಾಗದಲ್ಲಿ ಕೈಗೆಟುಕುವ ಬೆಲೆ ಹಾಗೂ ಉತ್ತಮ ಪರ್ಫಾಮೆನ್ಸ್ ಬೈಕ್ ಆಗಿ ರಾಯಲ್ ಎನ್‌ಫೀಲ್ಡ್ ಹಿಮಾಲಯನ್ ಸಾಕಷ್ಟು ಜನಪ್ರಿಯತೆ ಪಡೆದಿದೆ.

Royal Enfield Himalayan 450

ಈ ಬೈಕಿನ ಪರ್ಫಾಮೆನ್ಸ್‌ಗೆ ಸಂಬಂಧಿಸಿದಂತೆ, ಇದರಲ್ಲಿ ಹೊಸ 452 ಸಿಸಿ ಲಿಕ್ವಿಡ್ ಕೂಲ್ಡ್ DOHC ಸಿಂಗಲ್ ಸಿಲಿಂಡರ್ ಎಂಜಿನ್‌ನೊಂದಿಗೆ ಬಂದಿದೆ. ಈ ಎಂಜಿನ್ 40 bhp ಪವರ್ ಮತ್ತು 40 Nm ಟಾರ್ಕ್ ಉತ್ಪಾದಿಸಲು ಎಂಜಿನ್ ಅನ್ನು ಟ್ಯೂನ್ ಮಾಡಲಾಗಿದೆ. ಈ ಎಂಜಿನ್ ಅನ್ನು 6 ಸ್ಪೀಡ್ ಗೇರ್ ಬಾಕ್ಸ್ ನೊಂದಿಗೆ ಜೋಡಿಸಲಾಗಿದೆ.

ರಾಯಲ್ ಎನ್‌ಫೀಲ್ಡ್ ಹಿಮಾಲಯನ್ 450 ಬೈಕ್ ಇಕೋ ಮತ್ತು ಪರ್ಫಾಮೆನ್ಸ್ ಎಂಬ ಎರಡು ವಿಭಿನ್ನ ರೈಡಿಂಗ್ ಮೋಡ್‌ಗಳನ್ನು ಪರಿಚಯಿಸುತ್ತದೆ. ರಾಯಲ್ ಎನ್‌ಫೀಲ್ಡ್ ಹಿಮಾಲಯನ್ 450 ಬೈಕ್‌ಗೆ ವಿವಿಧ ಸುಧಾರಿತ ವೈಶಿಷ್ಟ್ಯಗಳನ್ನು ಒದಗಿಸಲಾಗಿದೆ. ಇದರವಿನ್ಯಾಸದ ಉದ್ದಕ್ಕೂ ಎಲ್ಇಡಿ ಲೈಟಿಂಗ್ ಜೊತೆಗೆ ಆಕರ್ಷಕ ಲುಕ್ ಅನ್ನು ಹೊಂದಿದೆ. ಹಿಮಾಲಯನ್ 450 ವಿಶೇಷತೆಗಳನ್ನು ನೋಡುವುದಾದರೆ, ಸ್ಲಿಪ್ಪರ್ ಕ್ಲಚ್ ಮತ್ತು ಅಸಿಸ್ಟ್ ಕ್ಲಚ್ ಸಹ ಸ್ಟ್ಯಾಂಡರ್ಡ್ ಆಗಿ ಬರಲಿದೆ.

ಈ ಬೈಕಿನ ತೂಕವು 196 ಕೆ.ಜಿ ಇರಲಿದೆ. ಬ್ರೇಕಿಂಗ್ ವಿಚಾರಕ್ಕೆ ಬಂದರೆ ಈ ಬಾರಿ ಹಿಮಾಲಯನ್ 450 ಸುಧಾರಣೆಯನ್ನು ಕಂಡಿದೆ, ಬೈಕ್ ಮುಂಭಾಗದಲ್ಲಿ 320 ಎಂಎಂ ಡಿಸ್ಕ್ ಬ್ರೇಕ್ ಮತ್ತು ಹಿಂಭಾಗದಲ್ಲಿ 270 ಎಂಎಂ ಡಿಸ್ಕ್ ಬ್ರೇಕ್ ಹೊಂದಿದೆ. ಬೈಕ್‌ನ ಮುಂಭಾಗದಲ್ಲಿ 21 ಇಂಚಿನ ವೀಲ್‌ಗಳು ಮತ್ತು ಹಿಂಭಾಗದಲ್ಲಿ 17 ಇಂಚಿನ ವೀಲ್‌ಗಳನ್ನು ಅಳವಡಿಸಲಾಗಿದೆ.

Article Published On: Monday, March 11, 2024, 13:43 [IST]
English summary
Son gifted dad new royal enfield himalayan 450 on his 64th birthday details
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+