ಸದ್ದಿಲ್ಲದೇ 1.30 ಕೋಟಿಯ ಹೊಸ ಬಿಎಂಡಬ್ಲ್ಯೂ ಕಾರನ್ನು ಮನೆಗೆ ತಂದ 'ಗಜ' ಸಿನಿಮಾ ನಟಿ!
ಮಲಯಾಳಂ ನಟಿ ನವ್ಯಾ ನಾಯರ್ (Navya Nair) ಕನ್ನಡ ಹಾಗೂ ತಮಿಳು ಸಿನಿಮಾಗಳಲ್ಲಿ ಅಭಿನಯಿಸುವ ಮೂಲಕ ದೊಡ್ಡಮಟ್ಟದ ಅಭಿಮಾನಿ ಬಳಗವನ್ನು ಹೊಂದಿದ್ದಾರೆ. 2001ರಲ್ಲಿ ತೆರೆಕಂಡ ಮಲಯಾಳಂನ ಇಷ್ಟಂ ಚಿತ್ರದ ಮೂಲಕ ಅವರು ಆಕ್ಟಿಂಗ್ ಕೆರಿಯರ್ ಶುರು ಮಾಡಿದ್ದರು. ನಟಿ ನವ್ಯಾ ನಾಯರ್, ದರ್ಶನ್ ನಟನೆಯ ಗಜ ಸಿನಿಮಾ ಮೂಲಕ ಸ್ಯಾಂಡಲ್‌ವುಡ್‌ನ್ನು ಪ್ರವೇಶಿಸಿದ್ದರು. ಸಾಹಸಸಿಂಹ ಡಾ.ವಿಷ್ಣುವರ್ಧನ್ ಅಭಿನಯದ ನಮ್ಮ ಯಜಮಾನರು, ಶಿವರಾಜ್ ಕುಮಾರ್ ನಟನೆಯ ಭಾಗ್ಯದ ಬಳೆಗಾರ, ರವಿಚಂದ್ರನ್ ನಟನೆಯ ದೃಶ್ಯ-1 ಹಾಗೂ ದೃಶ್ಯ-2 ಸಿನಿಮಾಗಳಲ್ಲಿಯೂ ಬಣ್ಣಹಚ್ಚಿದ್ದಾರೆ.
ಸದ್ಯ, ನಟಿ ನವ್ಯಾ ನಾಯರ್ ದುಬಾರಿ ಬೆಲೆಯ ಐಷಾರಾಮಿ ಬಿಎಂಡಬ್ಲ್ಯೂ ಎಕ್ಸ್7 (BMW X7) ಎಸ್‌ಯುವಿಯನ್ನು ಖರೀದಿಸಿದ್ದಾರೆ. ಆ ಫೋಟೋಗಳನ್ನು ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿಯೂ ಹಂಚಿಕೊಂಡಿದ್ದಾರೆ. ಅವರು ಮನೆಗೆ ತಂದಿರುವ ನೂತನ ಕಾರು, ದೇಶೀಯ ಮಾರುಕಟ್ಟೆಯಲ್ಲಿ ರೂ.1.30 ಕೋಟಿಯಿಂದ ರೂ.1.34 ಕೋಟಿ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ.

ಬಿಎಂಡಬ್ಲ್ಯೂ ಎಕ್ಸ್7 ಎಸ್‌ಯುವಿ ಎಕ್ಸ್‌ಡ್ರೈವ್40ಐ ಎಂ ಸ್ಪೋರ್ಟ್ (xDrive40i M Sport) ಹಾಗೂ ಎಕ್ಸ್‌ಡ್ರೈವ್40ಡಿ ಎಂ ಸ್ಪೋರ್ಟ್ (xDrive40d M Sport) ಎಂಬ ರೂಪಾಂತರ (ವೇರಿಯೆಂಟ್)ಗಳ ಆಯ್ಕೆಯಲ್ಲಿ ಸಿಗಲಿದ್ದು, ಆಕರ್ಷಕವಾದ ವಿನ್ಯಾಸವನ್ನು ಹೊಂದಿದೆ. ಪೇಂಟ್‌ವರ್ಕ್ ದ್ರಾವಿಟ್ ಗ್ರೇ ಕಾರ್ಬನ್ ಬ್ಲ್ಯಾಕ್ ಸೇರಿದಂತೆ 7 ಬಣ್ಣಗಳೊಂದಿಗೂ ಲಭ್ಯವಿದೆ.
ಈ ಕಾರು 3-ಲೀಟರ್ 6-ಸಿಲಿಂಡರ್ ಟರ್ಬೊ ಪೆಟ್ರೋಲ್ ಹಾಗೂ ಡೀಸೆಲ್ ಎಂಜಿನ್ ಆಯ್ಕೆಯನ್ನು ಹೊಂದಿದೆ. ಪೆಟ್ರೋಲ್ ಮಾದರಿಯು 381 ಪಿಎಸ್ ಗರಿಷ್ಠ ಶಕ್ತಿ (ಪವರ್) ಮತ್ತು 520 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುತ್ತದೆ. ಡೀಸೆಲ್ ರೂಪಾಂತರವು 340 ಪಿಎಸ್ ಶಕ್ತಿ ಹಾಗೂ 700 ಎನ್ಎಂ ಪೀಕ್ ಟಾರ್ಕ್ ಹೊರಹಾಕುತ್ತದೆ. 8-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ.

ಬಿಎಂಡಬ್ಲ್ಯೂ ಎಕ್ಸ್7 ಎಸ್‌ಯುವಿ AWD (ಆಲ್ ವೀಲ್ ಡ್ರೈವ್) ತಂತ್ರಜ್ಞಾನವನ್ನು ಹೊಂದಿದ್ದು, ಕೇವಲ 5.9 ಸೆಕೆಂಡುಗಳಲ್ಲಿ 0 ರಿಂದ 100 ಕೆಎಂಪಿಹೆಚ್ ಗರಿಷ್ಠ ವೇಗವನ್ನು ಪಡೆಯಲಿದೆ. ಕಂಫರ್ಟ್, ಎಫಿಶಿಯೆಂಟ್, ಸ್ಪೋರ್ಟ್ & ಸ್ಪೋರ್ಟ್ ಪ್ಲಸ್ ಎಂಬ ಡ್ರೈವ್ ಮೋಡ್‌ಗಳನ್ನು ಪಡೆದಿದೆ. 11.29 ರಿಂದ 14.31 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ.
ನೂತನ ಕಾರು ಹತ್ತಾರು ಆಕರ್ಷಕ ವೈಶಿಷ್ಟ್ಯಗಳನ್ನು ಒಳಗೊಂಡಿದೆ. 12.3-ಇಂಚಿನ ಡಿಜಿಟಲ್ ಡ್ರೈವರ್ ಡಿಸ್ಪ್ಲೇ, 14.9-ಇಂಚಿನ ಇನ್ಫೋಟೈನ್ಮೆಂಟ್ ಸಿಸ್ಯಮ್, ಕನೆಕ್ಟ್ದ್ ಕಾರ್ ಟೆಕ್, ಡಿಜಿಟಲ್ ಕೀ, ಪನೋರಮಿಕ್ ಸನ್‌ರೂಫ್, 16-ಸ್ಪೀಕರ್ ಹರ್ಮನ್ ಕಾರ್ಡನ್ ಮ್ಯೂಸಿಕ್ ಸಿಸ್ಟಮ್ ಹಾಗೂ ಆಂಬಿಯೆಂಟ್ ಲೈಟಿಂಗ್ ಅನ್ನು ಹೊಂದಿದೆ. ಈ ಕಾರಿನಲ್ಲಿ 6 ಮಂದಿ ಆರಾಮದಾಯಕವಾಗಿ ಪ್ರಯಾಣಿಸಬಹುದು.

ಈ ಎಕ್ಸ್7 ಎಸ್‌ಯುವಿ ಸುರಕ್ಷತೆಗೂ ಹೆಸರುವಾಸಿಯಾಗಿದೆ. 7 ಏರ್‌ಬ್ಯಾಗ್, CBC (ಕಾರ್ನರಿಂಗ್ ಬ್ರೇಕ್ ಕಂಟ್ರೋಲ್), DSC (ಡೈನಾಮಿಕ್ ಸ್ಟೆಬಿಲಿಟಿ ಕಂಟ್ರೋಲ್), ಅಡಾಪ್ಟಿವ್ ಕ್ರೂಸ್ ಕಂಟ್ರೋಲ್ ಮತ್ತು ಡ್ರೈವರ್ ಡ್ರೆಸಿನೆಸ್ ಡಿಟೆಕ್ಷನ್, ADAS (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) ಮತ್ತು 360-ಡಿಗ್ರಿ ಕ್ಯಾಮೆರಾದಂತಹ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications