ಕರ್ತವ್ಯ ನಿರತ ಪೊಲೀಸ್ ಅಧಿಕಾರಿಗೆ ಗುದ್ದಿ ಪರಾರಿಯಾದ ಕಾರು ಚಾಲಕ

ಮಧ್ಯಪ್ರದೇಶದ ಭೋಪಾಲ್‌ನಲ್ಲಿ ವೇಗವಾಗಿ ಚಲಿಸುತ್ತಿದ್ದ ಕಾರು ಪೊಲೀಸ್ ಅಧಿಕಾರಿಯೊಬ್ಬರಿಗೆ ಡಿಕ್ಕಿ ಹೊಡೆದಿದೆ. ಈ ಘಟನೆ ಸ್ಥಳದಲ್ಲಿ ಅಳವಡಿಸಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಕರ್ತವ್ಯ ನಿರತ ಪೊಲೀಸ್ ಅಧಿಕಾರಿಗೆ ಗುದ್ದಿ ಪರಾರಿಯಾದ ಕಾರು ಚಾಲಕ

ಈ ಘಟನೆಯ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಈ ಘಟನೆ ಮೇ 30ರ ಬೆಳಿಗ್ಗೆ ನಡೆದಿದೆ. ಪ್ರಮುಖ ಜಂಕ್ಷನ್‌ನಲ್ಲಿ ಪೊಲೀಸ್ ಅಧಿಕಾರಿ ಸಂಚಾರ ನಿರ್ವಹಿಸುವ ಕಾರ್ಯದಲ್ಲಿ ನಿರತರಾಗಿದ್ದರು. ಆರಂಭದಲ್ಲಿ ಎಲ್ಲವೂ ಸರಿಯಾಗಿ ನಡೆಯುತ್ತಿತ್ತು.

ಕರ್ತವ್ಯ ನಿರತ ಪೊಲೀಸ್ ಅಧಿಕಾರಿಗೆ ಗುದ್ದಿ ಪರಾರಿಯಾದ ಕಾರು ಚಾಲಕ

ಸಂಚಾರವನ್ನು ನಿಯಂತ್ರಿಸುವ ಕಾರ್ಯದಲ್ಲಿ ಆ ಪೊಲೀಸ್ ಅಧಿಕಾರಿ ಸಕ್ರಿಯವಾಗಿ ತೊಡಗಿದ್ದರು. ಈ ವೇಳೆ ಕಾರೊಂದು ವೇಗವಾಗಿ ಬಂದಿದೆ. ಕರ್ತವ್ಯದಲ್ಲಿದ್ದ ಪೊಲೀಸ್ ಅಧಿಕಾರಿ ಆ ಕಾರ್ ಅನ್ನು ತಡೆಯಲು ಮುಂದಾಗಿದ್ದಾರೆ.

MOST READ: ವಾಹನ ಖರೀದಿಸುವವರಿಗೆ, ಮಾರಾಟ ಮಾಡುವವರಿಗೆ ನೆರವಾಗುವ ಆರ್‌ಟಿಒ ಫಾರಂಗಳಿವು!

ಕರ್ತವ್ಯ ನಿರತ ಪೊಲೀಸ್ ಅಧಿಕಾರಿಗೆ ಗುದ್ದಿ ಪರಾರಿಯಾದ ಕಾರು ಚಾಲಕ

ಆದರೆ ಕಾರು ಚಾಲಕ ಕಾರನ್ನು ನಿಲ್ಲಿಸದೇ, ಪೊಲೀಸ್ ಅಧಿಕಾರಿಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದಾನೆ. ಅದೃಷ್ಟವಶಾತ್ ಪೊಲೀಸ್ ಅಧಿಕಾರಿಗೆ ಯಾವುದೇ ಗಾಯಗಳಾಗಿಲ್ಲ. ಅವರು ರಸ್ತೆ ಮೇಲೆ ಬಿದ್ದು ಮೇಲೆಕ್ಕೆ ಎದ್ದಿದ್ದಾರೆ.

ಕರ್ತವ್ಯ ನಿರತ ಪೊಲೀಸ್ ಅಧಿಕಾರಿಗೆ ಗುದ್ದಿ ಪರಾರಿಯಾದ ಕಾರು ಚಾಲಕ

ಈ ವೇಳೆ ಅಲ್ಲಿಗೆ ಬಂದ ಜೀಪನ್ನು ನಿಲ್ಲಿಸಿದ ಪೊಲೀಸ್ ಅಧಿಕಾರಿ ಆ ಜೀಪಿನೊಳಗೆ ಹತ್ತಿ ತಮಗೆ ಡಿಕ್ಕಿ ಹೊಡೆದ ಕಾರ್ ಅನ್ನು ಬೆನ್ನಟ್ಟಿದ್ದಾರೆ. ಅದರ ನಂತರ ಏನಾಯಿತು ಎಂಬ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ.

MOST READ: ಎಲೆಕ್ಟ್ರಿಕ್ ದ್ವಿಚಕ್ರ ವಾಹನ ಖರೀದಿಗೂ ಮುನ್ನ ಪರಿಶೀಲಿಸಬೇಕಾದ ಸಂಗತಿಗಳಿವು

ಕರ್ತವ್ಯ ನಿರತ ಪೊಲೀಸ್ ಅಧಿಕಾರಿಗೆ ಗುದ್ದಿ ಪರಾರಿಯಾದ ಕಾರು ಚಾಲಕ

ಈ ಘಟನೆ ಬಗ್ಗೆ ಮಧ್ಯಪ್ರದೇಶ ಪೊಲೀಸರು ಇನ್ನೂ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಆದರೆ ಅಪರಿಚಿತ ಕಾರು ಚಾಲಕನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಪೊಲೀಸರು ಕರ್ತವ್ಯ ನಿರತ ಪೊಲೀಸ್ ಅಧಿಕಾರಿಗೆ ಡಿಕ್ಕಿ ಹೊಡೆದ ಕಾರನ್ನು ಪತ್ತೆ ಹಚ್ಚುವ ಕಾರ್ಯದಲ್ಲಿ ತೊಡಗಿದ್ದಾರೆ.

ಕರ್ತವ್ಯ ನಿರತ ಪೊಲೀಸ್ ಅಧಿಕಾರಿಗೆ ಗುದ್ದಿ ಪರಾರಿಯಾದ ಕಾರು ಚಾಲಕ

ಸಿಸಿಟಿವಿ ಕ್ಯಾಮೆರಾದಲ್ಲಿ ಘಟನೆಯ ದೃಶ್ಯಗಳು ಸೆರೆಯಾಗಿದ್ದರೂ ಕಾರನ್ನು ಇನ್ನೂ ಪತ್ತೆ ಮಾಡಲು ಸಾಧ್ಯವಾಗಿಲ್ಲ. ಈ ಬಗ್ಗೆ ಐಬಿಸಿ 24 ವರದಿ ಮಾಡಿದೆ. ಈ ರೀತಿಯ ಘಟನೆಗಳು ಭಾರತದಲ್ಲಿ ನಡೆಯುತ್ತಲೇ ಇರುತ್ತವೆ.

MOST READ: 10 ಲಕ್ಷ ಬೆಲೆಯ ಕಾರಿಗೆ 20 ಲಕ್ಷದ ಬಿಲ್ ನೀಡಿದ ಸರ್ವೀಸ್ ಸೆಂಟರ್

ಕರ್ತವ್ಯ ನಿರತ ಪೊಲೀಸ್ ಅಧಿಕಾರಿಗೆ ಗುದ್ದಿ ಪರಾರಿಯಾದ ಕಾರು ಚಾಲಕ

ಈ ಹಿಂದೆಯೂ ಕಾರು ಚಾಲಕರು ಪೊಲೀಸರಿಗೆ ತಮ್ಮ ಕಾರುಗಳನ್ನು ಡಿಕ್ಕಿ ಹೊಡೆಸಿದ್ದರು. ಕೆಲವು ಘಟನೆಗಳಲ್ಲಿ ಪೊಲೀಸ್ ಅಧಿಕಾರಿಗಳು ಕಾರಿನ ಬಾನೆಟ್ ಮೇಲೆ ಬಿದ್ದು ಹಲವು ಕಿ.ಮೀಗಳಷ್ಟು ದೂರ ಸಾಗಿದ್ದರು.

ಪೊಲೀಸ್ ಅಧಿಕಾರಿಗಳ ಸುರಕ್ಷತೆಗಾಗಿ ಇ ಚಲನ್ ಪರಿಚಯಿಸಲಾಗಿದೆ. ಇದರನ್ವಯ ಸಂಚಾರ ನಿಯಮಗಳನ್ನು ಉಲ್ಲಂಘಿಸುವ ವಾಹನಗಳ ಫೋಟೋ ತೆಗೆದು ಅವುಗಳ ನೋಂದಣಿ ಸಂಖ್ಯೆಯ ಆಧಾರದ ಮೇಲೆ ಸಂಬಂಧಪಟ್ಟ ವಾಹನದ ಮಾಲೀಕರಿಗೆ ದಂಡ ವಿಧಿಸಿರುವ ರಸೀದಿಯನ್ನು ಕಳುಹಿಸಲಾಗುತ್ತದೆ.

MOST READ: ವರ್ಷಗಳ ಕಾಲ ಉಪ್ಪು ನೀರಿನಲ್ಲಿದ್ದರೂ ಹಡಗುಗಳ ಆಂಕರ್‌ಗಳಿಗೆ ತುಕ್ಕು ಹಿಡಿಯದಿರಲು ಕಾರಣಗಳಿವು

ಕರ್ತವ್ಯ ನಿರತ ಪೊಲೀಸ್ ಅಧಿಕಾರಿಗೆ ಗುದ್ದಿ ಪರಾರಿಯಾದ ಕಾರು ಚಾಲಕ

ಇನ್ನು ಕೆಲವು ರಾಜ್ಯಗಳ ಪೊಲೀಸ್ ಅಧಿಕಾರಿಗಳು ಬಾಡಿ ಕ್ಯಾಮೆರಾಗಳನ್ನು ಬಳಸುತ್ತಿದ್ದಾರೆ. ಇದರಿಂದ ಈ ರೀತಿಯ ಘಟನೆಗಳು ಸಂಭವಿಸಿದರೆ ಸೂಕ್ತ ಕ್ರಮ ಕೈಗೊಳ್ಳಲು ಸಾಧ್ಯವಾಗುತ್ತದೆ.

Most Read Articles

Kannada
English summary
Speeding car hits traffic cop and escapes video goes viral. Read in Kannada.
Story first published: Tuesday, June 1, 2021, 10:03 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X