Just In
- 7 hrs ago
ಕ್ರ್ಯಾಶ್ ಟೆಸ್ಟ್ನಲ್ಲಿ ಗರಿಷ್ಠ ರೇಟಿಂಗ್ ಪಡೆದುಕೊಂಡ ಹೊಸ ಕಿಯಾ ಇವಿ6 ಎಲೆಕ್ಟ್ರಿಕ್ ಕಾರು
- 7 hrs ago
ಕೇವಲ 40 ಸಾವಿರ ರೂ. ಬೆಲೆಗೆ ಬಿಡುಗಡೆಯಾಗಿದೆ 100 ಕಿ.ಮೀ ಮೈಲೇಜ್ ನೀಡುವ ಇವಿ ಸ್ಕೂಟರ್
- 9 hrs ago
ಎರ್ಟಿಗಾದಲ್ಲಿ ಹೊಸ ಸಿಎನ್ಜಿ ರೂಪಾಂತರಗಳನ್ನು ಪರಿಚಯಿಸಲು ಸಜ್ಜಾದ ಮಾರುತಿ ಸುಜುಕಿ
- 9 hrs ago
ಏಪ್ರಿಲ್ ತಿಂಗಳ ಮಾರಾಟದಲ್ಲಿ ಭರ್ಜರಿ ಬೇಡಿಕೆ ಪಡೆದುಕೊಂಡ ಯಮಹಾ ಎಂಟಿ-15 ಬೈಕ್
Don't Miss!
- Sports
IPL 2022: ಕೆಎಲ್ ರಾಹುಲ್ ಹೋರಾಟ ವ್ಯರ್ಥ, ಲಕ್ನೋಗೆ ಮಣ್ಣು ಮುಕ್ಕಿಸಿದ ಆರ್ಸಿಬಿ ಟ್ರೋಫಿ ಕನಸು ಜೀವಂತ
- News
ವಿಮಾನ ಇಂಧನ ತೆರಿಗೆ ಕಡಿತ ಮಾಡುತ್ತಾ ಕೇಂದ್ರ ಸರ್ಕಾರ?
- Movies
ಹಿಜಾಬ್ ಧರಿಸಿ ಮುಸ್ಲಿಂ ಮಹಿಳೆಯರ ಪಾತ್ರ ಮಾಡುತ್ತಿರುವ ಸ್ಟಾರ್ ನಟಿಯರಿವರು
- Lifestyle
12 ಲಕ್ಷ ಖರ್ಚು ಮಾಡಿದ ನಾಯಿಯಾದ ಜಪಾನಿನ ವ್ಯಕ್ತಿ!
- Finance
ಮೇ 25ರಂದು ವಾಣಿಜ್ಯ ಬೆಳೆ ಅಡಿಕೆ, ಕಾಫಿ, ಮೆಣಸು, ಏಲಕ್ಕಿ ಪೇಟೆ ಧಾರಣೆ
- Technology
ಅಪ್ಲಿಕೇಶನ್ ಡೆವಲಪರ್ಗಳಿಗೆ ಮತ್ತೊಮ್ಮೆ ಸಂದೇಶ ಕಳುಹಿಸಿದ ಆಪಲ್ ಕಂಪೆನಿ!
- Education
ESIC MTS 2022 : ಫೇಸ್ I ಫಲಿತಾಂಶ ಮತ್ತು ಫೇಸ್ II ಪ್ರವೇಶ ಪತ್ರ ಪ್ರಕಟ
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಖ್ಯಾತ ನಟಿಗೆ ಐಷಾರಾಮಿ ಬಿಎಂಡಬ್ಲ್ಯು ಬೈಕ್ ಉಡುಗೊರೆ ನೀಡಿದ ಪತಿ
ವ್ಯಾಲೆಂಟೈನ್ಸ್ ಡೇ ಪ್ರೇಮಿಗಳಿಗೆ ಉತ್ಸವದ ದಿನ. ನಮಗೆಲ್ಲಾ ಗೊತ್ತಿರುವ ಹಾಗೆ, ಪ್ರೇಮಿಗಳಿಗಾಗಿ ವರ್ಷಕ್ಕೊಂದು ಬಾರಿ ಬರುವ ಈ ಹಬ್ಬವನ್ನು, ಅತ್ಯಂತ ಸಂತೋಷ ಸಡಗರದಿಂದ ಆಚರಿಸಲು ಪ್ರತಿಯೊಬ್ಬ ಪ್ರೇಮಿಯೂ ವಿಶೇಷ ಬಗೆಯ ಪ್ಲಾನ್ ಗಳನ್ನು ಮಾಡಿಕೊಂಡು ತಯಾರಾಗಿರುತ್ತಾರೆ.

ಅದರಂತೆ ತಮ್ಮ ಪ್ರೀತಿಯ ಪ್ರೇಯಸಿಗೆ ವಿಶೇಷ ಉಡುಗೊರೆಯನ್ನು ನೀಡುತ್ತಾರೆ. ಇನ್ನು ದೊಡ್ಡ ಸೆಲಬ್ರಿಟಿಗಳು ತಮ್ಮ ಪ್ರೇಯಸಿಗೆ ಈ ದಿನ ಐಷಾರಾಮಿ ಉಡುಗೊರೆಯನ್ನು ನೀಡುತ್ತಾರೆ, ಇದೇ ರೀತಿ ಮೊನ್ನೆ ಪ್ರೇಮಿಗಳ ದಿನದಂದು ಮಲಯಾಳಂ ನಟಿ ಪರ್ಲಿ ಮಾಣಿ ಅವರಿಗೆ ಪತಿ ಶ್ರೀನಿಶ್ ಅವರು ದುಬಾರಿ ಉಡುಗೊರೆಯನ್ನು ನೀಡಿದ್ದಾರೆ. ಸರ್ಪ್ರೈಸ್ ಉಡುಗೊರೆಯ ಬಗ್ಗೆ ವಿಶೇಷ ವಿಡಿಯೋವನ್ನು ನಟಿ ಹಂಚಿಕೊಂಡಿದೆ, ವಿಡಿಯೋದಲ್ಲಿ ಮೊದಲಿಗೆ ಶ್ರೀನಿಶ್ ಅವರು ಪತ್ನಿ ಪರ್ಲಿ ಮತ್ತು ಮಗಳನ್ನು ಐಷಾರಾಮಿ ಹೋಟೆಲ್‌ಗೆ ಕರೆದುಕೊಂಡು ಹೋಗುತ್ತಿರುವುದನ್ನು ತೋರಿಸಿದ್ದಾರೆ.

ಅವರು ತಮ್ಮ ಪತಿ ಭರ್ಜರಿ ಭೋಜನಕ್ಕೆ ಕರೆದೊಯ್ಯುತ್ತಿದ್ದಾರೆ ಎಂದು ನಂಬಿದ್ದರು. ಆದರೆ ಅಲ್ಲಿ ಅವರಿಗೆ ವಿಶೇಷ ಅಲಂಕಾರವನ್ನು ನೋಡಿ ತಕ್ಷಣ ಆಶ್ಚರ್ಯ ಮತ್ತು ಉತ್ಸುಕರಾಗಿದ್ದರು. ಬಳಿಕ ನಟಿ ಪರ್ಲಿ ವೀಶೇಷ ಅಲಂಕಾರದ ನಡುವೆ ಇದ್ದ ಐಷಾರಾಮಿ ಬಿಎಂಡಬ್ಲ್ಯು ಬೈಕ್ ನೋಡಿ ಆಶ್ಚರ್ಯ ಪಡುತ್ತಾರೆ.

ಸ್ವಲ್ಪ ಹೊತ್ತು ಆಶ್ಚರ್ಯದಿಂದ ಮೌನ ವಹಿಸಿದ ಬಳಿಕ ಪತಿ ಶ್ರೀನಿಶ್ ಅವರಿಗೆ ಧನ್ಯವಾದ ಹೇಳಿದರು. ಈ ವ್ಯಾಲೆಂಟೈನ್ಸ್ ಡೇ ಖಂಡಿತವಾಗಿಯೂ ಅತ್ಯಂತ ವಿಶೇಷವಾದದ್ದು ಮತ್ತು ಇದು ತುಂಬಾ ಭಾವನಾತ್ಮಕವಾದ ಕ್ಷಣವಾಗಿತ್ತು ಎಂದು ನಟಿ ಪರ್ಲಿ ಸೋಷಿಯಲ್ ಮೀಡಿಯಾಗಳಲ್ಲಿ ಬರೆದುಕೊಂಡಿದ್ದಾರೆ.

ಪರ್ಲಿ ಅವರು ಸೂಪರ್‌ಬೈಕ್‌ಗಳ ಪ್ರೀತಿಗೆ ಹೆಸರುವಾಸಿಯಾಗಿದ್ದಾರೆ ಮತ್ತು ಬೈಕಿಂಗ್‌ನ ಮೇಲಿನ ಪ್ರೀತಿಯನ್ನು ಆಗಾಗ್ಗೆ ವ್ಯಕ್ತಪಡಿಸುತಿದ್ದರು. .ಕಿರುತೆರೆ ದಂಪತಿಗಳಾದ ಪರ್ಲಿ ಮಾಣಿ ಮತ್ತು ಶ್ರೀನಿಶ್ ಅರವಿಂದ್ ಎರಡು ವರ್ಷಗಳ ಹಿಂದೆ ಬಿಗ್ ಬಾಸ್ ಮಲಯಾಳಂ ಶೋನಲ್ಲಿ ಇದ್ದರು. ನಂತರ ಈ ಜೋಡಿ ವಿವಾಹವಾಗಿದ್ದಾರೆ.

ಪ್ರೇಮಿಗಳ ದಿನದಂದು ನಟಿ ಉಡುಗೊರೆಯನ್ನು ಪಡೆದಿರುವುದು ಬಿಎಂಡಬ್ಲ್ಯು ಜಿ 310 ಆರ್ ಮಾದರಿಯಾಗಿದೆ, ಈ ಬಿಎಂಡಬ್ಲ್ಯು ಜಿ 310 ಆರ್ ಬೈಕಿನ ಬಗ್ಗೆ ಹೇಳುವುದಾದರೆ, ಹೊಸ ಮಾದರಿಯಲ್ಲಿ ಕೆಲವು ನವೀಕರಣಗಳನ್ನು ಮಾಡಲಾಗಿದೆ.

ಈ ಬಿಎಂಡಬ್ಲ್ಯು ಜಿ 310 ಆರ್ ಬೈಕ್ ಹೆಡ್‌ಲ್ಯಾಂಪ್, ಟರ್ನ್ ಸಿಗ್ನಲ್‌ಗಳು ಮತ್ತು ಟೈಲ್ ಲ್ಯಾಂಪ್‌ಗಾಗಿ ಎಲ್ಇಡಿ ಲೈಟಿಂಗ್ ಅನ್ನು ನವೀಕರಿಸಲಾಗಿದೆ. ನವೀಕರಣದ ಭಾಗವಾಗಿ, ಜಿ 310 ಆರ್ ಪ್ಯಾಲೆಟ್‌ಗೆ ಬಿಎಂಡಬ್ಲ್ಯು ಹೊಸ ಬಣ್ಣಗಳನ್ನು ಕೂಡ ಸೇರಿಸಲಾಗಿದೆ

ಈ ಬಿಎಂಡಬ್ಲ್ಯು ಜಿ 310 ಆರ್ ಬೈಕಿನಲ್ಲಿ 313 ಸಿಸಿ ಸಿಂಗಲ್-ಸಿಲಿಂಡರ್ ಲಿಕ್ವಿಡ್-ಕೂಲ್ಡ್ ಎಂಜಿನ್ ಅನ್ನು ಹೊಂದಿರಲಿದೆ. ಈ ಎಂಜಿನ್ 9,700 ಆರ್‌ಪಿಎಂನಲ್ಲಿ 34 ಬಿಹೆಚ್ಪಿ ಮತ್ತು 7,700 ಆರ್‌ಪಿಎಂನಲ್ಲಿ 28 ಎನ್ಎಂ ಪೀಕ್ ಟಾರ್ಕ್ ಅನ್ನು ಉತ್ಪಾದಿಸುತ್ತದೆ.

ಈ ಎಂಜಿನ್ ನೊಂದಿಗೆ 6-ಸ್ಪೀಡ್ ಗೇರ್ ಬಾಕ್ಸ್ ಅನ್ನು ಜೋಡಿಸಲಾಗುತ್ತದೆ. ತನ್ನ ಪ್ರತಿಸ್ಪರ್ಧಿಗ ಬೈಕುಗಳಗಿಂತ ಹೆಚ್ಚಿನ ಪವರ್ ಮತ್ತು ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎರಡು ಬೈಕ್‌ಗಳು ಹೆಚ್ಚು ಅಗ್ರೇಸಿವ್ ಲುಕ್ ಅನ್ನು ಹೊಂದಿರುವುದರಿಂದ ಹೆಚ್ಚಿನ ಯುವಗ್ರಾಹಕರನ್ನು ಸೆಳೆಯಬಹುದು.

ಈ ಹೊಸ ಜಿ 310 ಆರ್ ಮತ್ತು ಜಿ 310 ಜಿಎಸ್ ಬೈಕ್‌ಗ 143 ಕಿ.ಮೀ ಟಾಪ್ ಸ್ಪೀಡ್ ಅನ್ನು ಹೊಂದಿದೆ. ಈ ಎರಡು ಹೊಸ ಬೈಕುಗಳು ಕೇವಲ 7.17 ಸೆಕೆಂಡುಗಳಲ್ಲಿ 0 ದಿಂದ 100 ಕಿ.ಮೀ ವೇಗವನ್ನು ಕ್ರಮಿಸುವ ಸಾಮರ್ಥ್ಯವನ್ನು ಹೊಂದಿದೆ. ದೊಡ್ಡ ಬಿಎಂಡಬ್ಲ್ಯು ಆರ್ 1250 ಜಿಎಸ್ ಮಾದರಿಗಳಿಂದ ಹಲವಾರು ಫೀಚರ್ ಗಳನ್ನು ಎರವಲು ಪಡೆಯಲಾಗಿದೆ. ಇದರಲ್ಲಿ ಅಗ್ರೇಸಿವ್ ಲುಕ್ ಅನ್ನು ಹೊಂದಿದೆ.

ಐಷಾರಾಮಿ ದ್ವಿಚಕ್ರ ತಯಾರಕ ಕಂಪನಿಯಾದ ಬಿಎಂಡಬ್ಲ್ಯು ಮೋಟೊರಾಡ್ ಕಂಪನಿಯು ತನ್ನ 2022ರ ಜಿ 310 ಆರ್ ಮತ್ತು ಜಿ 310 ಜಿಎಸ್ ಬೈಕ್‌ಗಳ ಬಣ್ಣಗಳನ್ನು ಅಂತರರಾಷ್ಟ್ರೀಯ ಮಾರುಕಟ್ತೆಯಲ್ಲಿ ನವೀಕರಿಸಿದೆ. 2022ರ ಬಿಎಂಡಬ್ಲ್ಯು ಜಿ 310 ಆರ್ ಮತ್ತು ಜಿ 310 ಜಿಎಸ್ ಬೈಕುಗಳು ಹೊಸ ಬಣ್ಣಗಳ ಆಯ್ಜೆಯನ್ನು ಪಡೆದುಕೊಂಡಿವೆ. ಬಿಎಂಡಬ್ಲ್ಯು ಜಿ 310 ಆರ್ ಬೈಕ್ ರೆಡ್ ರಿಮ್ಸ್ ಮತ್ತು ಕಾಸ್ಮಿಕ್ ಬ್ಲ್ಯಾಕ್ ಟು ಹೊಂದಿರುವ ಕಯನೈಟ್ ಬ್ಲೂ ಮೆಟಾಲಿಕ್ ಬಣ್ಣಗಳನ್ನು ಪಡೆದುಕೊಂಡಿದೆ.

ಈ ಬೈಕಿನ ಪೋಲಾರ್ ವೈಟ್ ಬಣ್ಣವನ್ನು ಸ್ಥಗಿತಗೊಳಿಸಲಾಗಿದೆ. ಇನ್ನು ಬಿಎಂಡಬ್ಲ್ಯು ಜಿ 310 ಜಿಎಸ್ ಬೈಕ್ ಟ್ರಿಪಲ್ ಬ್ಲ್ಯಾಕ್ ಎಂಬ ಹೊಸ ಬಣ್ಣವನ್ನು ಪಡೆಯುತ್ತದೆ. ಈ ಬೈಕಿನ 40 ವರ್ಷಗಳ ಜಿಎಸ್ ಬಣ್ಣವನ್ನು ಸ್ಥಗಿತಗೊಳಿಸಲಾಗಿದೆ. ಹೊಸ ಬಣ್ಣಗಳ ಆಯ್ಕೆಯನ್ನು ಹೊರತುಪಡಿಸಿ ಬಿಎಂಡಬ್ಲ್ಯು ಜಿ 310 ಆರ್ ಮತ್ತು ಜಿ 310 ಜಿಎಸ್ ಬೈಕುಗಳಲ್ಲಿ ಯಾವುದೇ ಬದಲಾವಣೆಗಳನ್ನು ಹೊಂದಿಲ್ಲ.

ಬಿಎಂಡಬ್ಲ್ಯು ಜಿ 310 ಆರ್ ಭಾರತೀಯ ಮಾರುಕಟ್ಟೆಯಲ್ಲಿ ಕೆಟಿಎಂ ಡ್ಯೂಕ್ 390, ಬಜಾಜ್ ಡೊಮಿನಾರ್ 400 ಮತ್ತು ಟಿವಿಎಸ್ ಅಪಾಚೆ ಆರ್‌ಆರ್310 ಬೈಕುಗಳಿಗೆ ಪೈಪೋಟಿ ನೀಡುತ್ತಿದೆ. ಬಿಎಂಡಬ್ಲ್ಯು ಜಿ 310 ಆರ್ ಭಾರತೀಯ ಮಾರುಕಟ್ಟೆಯಲ್ಲಿ ಜನಪ್ರಿಯ ಬೈಕ್ ಗಳಲ್ಲಿ ಒಂದಾಗಿದೆ.