Just In
Don't Miss!
- News
ರೈತರು 2024ರವರೆಗೂ ಪ್ರತಿಭಟನೆ ನಡೆಸಲು ಸಿದ್ಧರಿದ್ದಾರೆ:ಭಾರತೀಯ ಕಿಸಾನ್ ಯೂನಿಯನ್
- Finance
Gold, Silver Rate: ಪ್ರಮುಖ ನಗರಗಳಲ್ಲಿ ಜ. 17ರ ಚಿನ್ನ, ಬೆಳ್ಳಿ ದರ
- Sports
ಐಎಸ್ಎಲ್: ಜೆಮ್ಷೆಡ್ಪುರಕ್ಕೆ ಆಘಾತ ನೀಡಿದ ನಾರ್ಥ್ಈಸ್ಟ್
- Movies
ಹರ ಜಾತ್ರೆಯಲ್ಲಿ ಪುನೀತ್ ರಾಜ್ ಕುಮಾರ್; ಅಪ್ಪು ಹಾಡು ಕೇಳಿ ಸಂಭ್ರಮಿಸಿದ ಅಭಿಮಾನಿಗಳು
- Lifestyle
ಸಂಜೆ ಸ್ನ್ಯಾಕ್ಸ್ ಗೆ ಹೇಳಿಮಾಡಿಸಿದ್ದು ಈ ತಡ್ಕಾ ಮಸಾಲೆ ಮ್ಯಾಗಿ
- Education
BEL Recruitment 2021: 205 ಟೆಕ್ನೀಶಿಯನ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
700 ಕಿ.ಮೀ ಸಂಚರಿಸಿದರೂ ಪರೀಕ್ಷೆ ಬರೆಯಲು ವಿಫಲನಾದ ವಿದ್ಯಾರ್ಥಿ
ಭಾರತದಲ್ಲಿ ಕರೋನಾ ವೈರಸ್ ಹರಡುವುದನ್ನು ತಡೆಯಲು ಮಾರ್ಚ್ 24ರಿಂದ ದೇಶಾದ್ಯಂತ ಲಾಕ್ ಡೌನ್ ಜಾರಿಗೊಳಿಸಲಾಯಿತು. ಲಾಕ್ ಡೌನ್ ಅವಧಿಯಲ್ಲಿ ಬಸ್, ಆಟೋ, ಟ್ಯಾಕ್ಸಿ, ರೈಲು ಸೇರಿದಂತೆ ಎಲ್ಲಾ ರೀತಿಯ ಸಾರ್ವಜನಿಕ ಸಾರಿಗೆಗಳ ಮೇಲೆ ನಿರ್ಬಂಧ ವಿಧಿಸಲಾಗಿತ್ತು.

ಅನಗತ್ಯವಾಗಿ ಸಂಚಾರ ನಡೆಸಿದ ಖಾಸಗಿ ವಾಹನಗಳನ್ನು ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದರು. ಈಗ ಲಾಕ್ ಡೌನ್ ನಿಂದ ವಿನಾಯಿತಿ ನೀಡಲಾಗಿದೆ. ಆದರೂ ಲಾಕ್ ಡೌನ್ ಗೆ ಮುನ್ನ ಇದ್ದ ಪರಿಸ್ಥಿತಿ ಸಂಪೂರ್ಣವಾಗಿ ನಿರ್ಮಾಣವಾಗಿಲ್ಲ. ಬಸ್ ಹಾಗೂ ರೈಲುಗಳು ಸಂಚಾರವನ್ನು ಆರಂಭಿಸಿದ್ದರೂ ಸಹ ಪ್ರಯಾಣಿಕರ ಓಡಾಟ ಮೊದಲಿನಂತಿಲ್ಲ.

ಸಾರ್ವಜನಿಕ ಸಾರಿಗೆ ಬಸ್ಸುಗಳು ಎಲ್ಲಾ ಪ್ರದೇಶಗಳಲ್ಲೂ ಕಾರ್ಯನಿರ್ವಹಿಸುತ್ತಿಲ್ಲ. ಕಾರ್ಯನಿರ್ವಹಿಸುತ್ತಿದ್ದರೂ ಪ್ರಯಾಣಿಕರ ಕೊರತೆ ಎದುರಾಗಿರುವ ಹಿನ್ನೆಲೆಯಲ್ಲಿ ಕಡಿಮೆ ಸಂಖ್ಯೆಯ ಬಸ್ಸುಗಳು ಮಾತ್ರ ಸಂಚರಿಸುತ್ತಿವೆ. ಈ ಕಾರಣಕ್ಕೆ ದೂರದ ಊರುಗಳಿಗೆ ತಲುಪ ಬೇಕಿರುವ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ.
MOST READ:ಒಂದು ವರ್ಷದಿಂದ ಚಲಿಸಿದರೂ ಇನ್ನೂ ಗುರಿ ಮುಟ್ಟದ ಟ್ರಕ್

ಕರೋನಾ ವೈರಸ್ ಆರ್ಭಟದ ನಡುವೆಯೂ ಕಳೆದ ಭಾನುವಾರ ದೇಶಾದ್ಯಂತ ನೀಟ್ ಪರೀಕ್ಷೆ ನಡೆದಿತ್ತು. ಸಂಚಾರ ವ್ಯವಸ್ಥೆಯ ಕೊರತೆಯ ನಡುವೆಯೂ ಲಕ್ಷಾಂತರ ವಿದ್ಯಾರ್ಥಿಗಳು ಈ ಪರೀಕ್ಷೆಗೆ ಹಾಜರಾಗಿದ್ದರು.

ಈ ಪರೀಕ್ಷೆಗೆ ಹಾಜರಾಗಲು ವಿದ್ಯಾರ್ಥಿಯೊಬ್ಬ 24 ಗಂಟೆಗಳಿಗೂ ಹೆಚ್ಚು ಕಾಲ ಸುಮಾರು 700 ಕಿ.ಮೀ ಪ್ರಯಾಣಿಸಿ ಪರೀಕ್ಷಾ ಕೇಂದ್ರವನ್ನು ತಲುಪಿದ್ದಾನೆ. ಆದರೆ ಕೇವಲ 10 ನಿಮಿಷ ತಡವಾದ ಹಿನ್ನೆಲೆಯಲ್ಲಿ ಆ ವಿದ್ಯಾರ್ಥಿಗೆ ಪರೀಕ್ಷೆ ಬರೆಯಲು ಅವಕಾಶ ನೀಡದೇ ವಾಪಸ್ ಕಳುಹಿಸಲಾಗಿದೆ.
MOSTREAD: ಇನ್ನು ಮುಂದೆ ಈ ಬಣ್ಣದ ಕಾರುಗಳ ನೋಂದಣಿ ಕಾನೂನುಬದ್ದ

19 ವರ್ಷದ ಬಿಹಾರದ ದರ್ಭಂಗಾ ಜಿಲ್ಲೆಯ ಸಂತೋಷ್ ಕುಮಾರ್ ಯಾದವ್ ನೀಟ್ ಪರೀಕ್ಷೆಗಾಗಿ ಸಕಲ ತಯಾರಿಯನ್ನು ನಡೆಸಿದ್ದ. ಆತ ಕೋಲ್ಕತ್ತಾದ ಸಾಲ್ಟ್ ಲೇಕ್ ಪ್ರದೇಶದಲ್ಲಿದ್ದ ಪರೀಕ್ಷಾ ಕೇಂದ್ರದಲ್ಲಿ ನೀಟ್ ಪರೀಕ್ಷೆಯನ್ನು ಬರೆಯಬೇಕಾಗಿತ್ತು. ಆದರೆ 10 ನಿಮಿಷ ತಡವಾದ ಕಾರಣ ಪರೀಕ್ಷೆ ಬರೆಯಲು ಸಾಧ್ಯವಾಗಿಲ್ಲ.

ಈ ಬಗ್ಗೆ ಮಾತನಾಡಿರುವ ಸಂತೋಷ್ ಕುಮಾರ್ ಯಾದವ್, ನಾನು ಶನಿವಾರ ಬೆಳಿಗ್ಗೆ 8 ಗಂಟೆಗೆ ಬಿಹಾರದಿಂದ ಬಸ್ ಮೂಲಕ ಹೊರಟೆ. ಆದರೆ ಮುಜಾಫರ್ ಪುರ ಹಾಗೂ ಪಾಟ್ನಾ ನಡುವೆ ಭಾರೀ ಸಂಚಾರ ದಟ್ಟಣೆ ಉಂಟಾಗಿತ್ತು. ಇದರಿಂದ ಸುಮಾರು 6 ಗಂಟೆಗಳು ವ್ಯರ್ಥವಾದವು.
MOSTREAD: ಟೊಯೊಟಾ ಇನೋವಾ ಕ್ರಿಸ್ಟಾ ಕಾರಿನ ರೂಫ್ ಸೀಳಿದ ಬಂಡೆ

ನಂತರ ರಾತ್ರಿ 9 ಗಂಟೆಗೆ ಪಾಟ್ನಾದಿಂದ ಹೊರಟು ಮರುದಿನ ಮಧ್ಯಾಹ್ನ 1 ಗಂಟೆಗೆ ಕೋಲ್ಕತಾ ತಲುಪಿದೆ. ನಂತರ ಕ್ಯಾಬ್ ಮೂಲಕ ಮಧ್ಯಾಹ್ನ 1.40ಕ್ಕೆ ಪರೀಕ್ಷಾ ಕೇಂದ್ರವನ್ನು ತಲುಪಿದೆ. ಕ್ಯಾಬ್ ತಡವಾಗಿ ಚಲಿಸಿದ ಕಾರಣ 10 ನಿಮಿಷ ತಡವಾಯಿತು. ವಿಳಂಬವಾದ ಕಾರಣ ಅಧಿಕಾರಿಗಳು ಪರೀಕ್ಷೆ ಬರೆಯಲು ಅನುಮತಿ ನೀಡಲಿಲ್ಲ ಎಂದು ಹೇಳಿದ್ದಾನೆ.

ಪರೀಕ್ಷೆಯು ಮಧ್ಯಾಹ್ನ 2 ಗಂಟೆಗೆ ಆರಂಭವಾಗಬೇಕಿತ್ತು. ಅರ್ಧ ಘಂಟೆ ಮೊದಲೇ ಅಂದರೆ 1.30ಕ್ಕೆ ಪರೀಕ್ಷಾ ಕೇಂದ್ರಕ್ಕೆ ಬರಬೇಕು ಎಂದು ತಿಳಿಸಲಾಗಿತ್ತು. ಆದರೆ ಸಂತೋಷ್ ಕುಮಾರ್ ಯಾದವ್ ಮಧ್ಯಾಹ್ನ 1.40ಕ್ಕೆ ಪರೀಕ್ಷಾ ಕೇಂದ್ರವನ್ನು ತಲುಪಿದ್ದಾನೆ.
MOSTREAD: ನ್ಯಾನೋ ಕಾರಿಗೆ ಗುದ್ದಿ ಅಪ್ಪಚ್ಚಿಯಾದ ಹೋಂಡಾ ಸಿಟಿ ಕಾರು

ಈ ಹಿನ್ನೆಲೆಯಲ್ಲಿ ಆತನಿಗೆ ಪರೀಕ್ಷೆ ಬರೆಯಲು ನಿರಾಕರಿಸಲಾಗಿದೆ. ಈ ಕುರಿತು ಮಾತನಾಡಿರುವ ಸಂತೋಷ್ ಕುಮಾರ್ ಯಾದವ್, ನಾನು ಪರೀಕ್ಷಾ ಕೇಂದ್ರದ ಸೆಕ್ಯೂರಿಟಿ ಗಾರ್ಡ್ ಗಳ ಬಳಿ ಮನವಿ ಮಾಡಿದೆ. ಪ್ರಾಂಶುಪಾಲರ ಬಳಿಯೂ ಮನವಿ ಮಾಡಿದೆ. ಆದರೆ ಯಾರೂ ಪರೀಕ್ಷೆ ಬರೆಯಲು ಅನುಮತಿ ನೀಡಲಿಲ್ಲ ಎಂದು ಹೇಳಿದ್ದಾನೆ.

ಪರೀಕ್ಷೆ ಬರೆಯಲು ಸಾಧ್ಯವಾಗದೇ ಸಂತೋಷ್ ಕುಮಾರ್ ಯಾದವ್ ಪರೀಕ್ಷಾ ಕೇಂದ್ರದ ಹೊರಗೆ ನಿಂತಿರುವ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಸಮಯಕ್ಕೆ ಸರಿಯಾಗಿ ಪರೀಕ್ಷಾ ಕೇಂದ್ರವನ್ನು ತಲುಪದಿರಲು ಮುಖ್ಯ ಕಾರಣ ಸಂಚಾರ ದಟ್ಟಣೆ.
MOSTREAD: ಬೀದಿ ನಾಯಿಯೇ ಈ ಶೋರೂಂನ ರಿಸೆಪ್ಶನಿಸ್ಟ್

10 ನಿಮಿಷಗಳ ವಿಳಂಬಕ್ಕೆ ಅಧಿಕಾರಿಗಳು ಅನುಮತಿ ನಿರಾಕರಿಸಿರುವುದಕ್ಕೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಇದರಿಂದಾಗಿ ಸಂತೋಷ್ ಕುಮಾರ್ ಯಾದವ್ ಒಂದು ವರ್ಷ ಕಳೆದುಕೊಂಡಿದ್ದಾನೆ.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಸಂತೋಷ್ ಕುಮಾರ್ ಯಾದವ್, ನಾನು ಒಂದು ವರ್ಷವನ್ನು ಕಳೆದುಕೊಂಡಿದ್ದೇನೆ. ಮತ್ತೆ ಸಿದ್ದತೆ ನಡೆಸಿ ಮುಂದಿನ ವರ್ಷ ಪರೀಕ್ಷೆ ಬರೆಯುತ್ತೇನೆ ಎಂದು ಹೇಳಿದ್ದಾನೆ. ಸಂತೋಷ್ ಕುಮಾರ್ ಯಾದವ್ ಪರೀಕ್ಷೆ ಬರೆಯಲು ಸಾದ್ಯವಾಗದೇ ನಿರಾಶೆಯಿಂದ ಮನೆಗೆ ಮರಳಿದ್ದಾನೆ. ಈ ಬಗ್ಗೆ ಇಂಡಿಯಾ ಟುಡೆ ವರದಿ ಮಾಡಿದೆ.