ತ್ಯಾಜ್ಯ ವಸ್ತುಗಳಿಂದ ಎಲೆಕ್ಟ್ರಿಕ್ ಕಾರ್ ತಯಾರಿಸಿದ ವಿದ್ಯಾರ್ಥಿಗಳು

ಎಲೆಕ್ಟ್ರಿಕ್ ಕಾರುಗಳು ವಿಶ್ವದಾದ್ಯಂತ ವೇಗವಾಗಿ ಜನಪ್ರಿಯತೆಯನ್ನು ಗಳಿಸುತ್ತಿವೆ. ಎಲೆಕ್ಟ್ರಿಕ್ ಕಾರುಗಳು ಪರಿಸರಕ್ಕೆ ಹಾನಿ ಮಾಡುವುದಿಲ್ಲ. ಜೊತೆಗೆ ಪೆಟ್ರೋಲ್ ಹಾಗೂ ಡೀಸೆಲ್ ಕಾರುಗಳಿಗೆ ಹೋಲಿಸಿದರೆ ಕಡಿಮೆ ಖರ್ಚಿನಲ್ಲಿ ಕಾರ್ಯನಿರ್ವಹಿಸುತ್ತವೆ.

ತ್ಯಾಜ್ಯ ವಸ್ತುಗಳಿಂದ ಎಲೆಕ್ಟ್ರಿಕ್ ಕಾರ್ ತಯಾರಿಸಿದ ವಿದ್ಯಾರ್ಥಿಗಳು

ಈ ಎಲ್ಲಾ ಕಾರಣಗಳಿಂದಾಗಿ ಜನರು ಎಲೆಕ್ಟ್ರಿಕ್ ಕಾರುಗಳಿಗೆ ಆದ್ಯತೆ ನೀಡುತ್ತಿದ್ದಾರೆ. ಕಚ್ಚಾ ತೈಲ ಆಮದು ಪ್ರಮಾಣವು ಕಡಿಮೆಯಾಗುತ್ತದೆ ಹಾಗೂ ಪರಿಸರಕ್ಕೆ ಹಾನಿಯಾಗುವುದಿಲ್ಲವೆಂಬ ಕಾರಣಕ್ಕೆ ವಿಶ್ವದಾದ್ಯಂತ ಸರ್ಕಾರಗಳು ಸಹ ಎಲೆಕ್ಟ್ರಿಕ್ ಕಾರುಗಳ ಬಳಕೆಗೆ ಉತ್ತೇಜನ ನೀಡುತ್ತಿವೆ.

ತ್ಯಾಜ್ಯ ವಸ್ತುಗಳಿಂದ ಎಲೆಕ್ಟ್ರಿಕ್ ಕಾರ್ ತಯಾರಿಸಿದ ವಿದ್ಯಾರ್ಥಿಗಳು

ಸರ್ಕಾರಗಳು ನೀಡುತ್ತಿರುವ ಉತ್ತೇಜನ ಹಾಗೂ ಜನರು ತೋರಿಸಿದ ಆಸಕ್ತಿಯಿಂದಾಗಿ ಪ್ರಮುಖ ಕಾರು ತಯಾರಕ ಕಂಪನಿಗಳು ವಿವಿಧ ಎಲೆಕ್ಟ್ರಿಕ್ ಕಾರುಗಳನ್ನು ಬಿಡುಗಡೆಗೊಳಿಸುತ್ತಿವೆ. ಈಗ ಪ್ರಮುಖ ಕಾರು ತಯಾರಕ ಕಂಪನಿಗಳಿಗೆ ಸವಾಲು ಹಾಕುವ ರೀತಿಯಲ್ಲಿ ಎಲೆಕ್ಟ್ರಿಕ್ ಕಾರೊಂದನ್ನು ಅಭಿವೃದ್ಧಿಪಡಿಸಲಾಗಿದೆ.

MOST READ:ರಿಕ್ಷಾ ಕಳೆದುಕೊಂಡವನಿಗೆ ಹೊಸ ರಿಕ್ಷಾ ಕೊಡಿಸಿದ ಆಪದ್ಭಾಂಧವ

ತ್ಯಾಜ್ಯ ವಸ್ತುಗಳಿಂದ ಎಲೆಕ್ಟ್ರಿಕ್ ಕಾರ್ ತಯಾರಿಸಿದ ವಿದ್ಯಾರ್ಥಿಗಳು

ಈ ಎಲೆಕ್ಟ್ರಿಕ್ ಕಾರನ್ನು ಸಂಪೂರ್ಣವಾಗಿ ವಿದ್ಯಾರ್ಥಿಗಳೇ ತಯಾರಿಸಿದ್ದಾರೆ ಎಂಬುದೇ ವಿಶೇಷ. ಈ ಕಾರನ್ನು ಸಂಪೂರ್ಣವಾಗಿ ಬಳಸದ ತ್ಯಾಜ್ಯ ವಸ್ತುಗಳಿಂದ ತಯಾರಿಸಲಾಗಿದೆ ಎಂಬುದು ಮತ್ತೊಂದು ವಿಶೇಷ. ನೆದರ್ಲೆಂಡ್ಸ್‌ನ 22 ವಿದ್ಯಾರ್ಥಿಗಳ ತಂಡ ಈ ಕಾರನ್ನು ಅಭಿವೃದ್ಧಿಪಡಿಸಿದೆ.

ತ್ಯಾಜ್ಯ ವಸ್ತುಗಳಿಂದ ಎಲೆಕ್ಟ್ರಿಕ್ ಕಾರ್ ತಯಾರಿಸಿದ ವಿದ್ಯಾರ್ಥಿಗಳು

ಈ ಎಲೆಕ್ಟ್ರಿಕ್ ಕಾರನ್ನು 18 ತಿಂಗಳುಗಳಲ್ಲಿ ವಿನ್ಯಾಸಗೊಳಿಸಿ, ತಯಾರಿಸಲಾಗಿದೆ. ಈ ಎಲೆಕ್ಟ್ರಿಕ್ ಕಾರಿನ ಬಾಡಿಯನ್ನು ಟಿವಿ, ಆಟಿಕೆ ಹಾಗೂ ಗೃಹೋಪಯೋಗಿ ಉಪಕರಣಗಳಲ್ಲಿ ಕಂಡುಬರುವ ಗಟ್ಟಿಯಾದ ಪ್ಲಾಸ್ಟಿಕ್ ಬಳಸಿ ನಿರ್ಮಿಸಲಾಗಿದೆ.

MOST READ:ಶೋಚನೀಯ ಸ್ಥಿತಿಯಲ್ಲಿವೆ ದುಬಾರಿ ಬೆಲೆಯ ಐಷಾರಾಮಿ ರೋಲ್ಸ್ ರಾಯ್ಸ್ ಕಾರುಗಳು

ತ್ಯಾಜ್ಯ ವಸ್ತುಗಳಿಂದ ಎಲೆಕ್ಟ್ರಿಕ್ ಕಾರ್ ತಯಾರಿಸಿದ ವಿದ್ಯಾರ್ಥಿಗಳು

ಈ ಎಲೆಕ್ಟ್ರಿಕ್ ಕಾರಿನಲ್ಲಿರುವ ಎರಡು ಸೀಟುಗಳನ್ನು ಕೊಕೊನಟ್ ಫೈಬರ್ ಹಾಗೂ ಕುದುರೆ ಕೂದಲುಗಳಿಂದ ತಯಾರಿಸಲಾಗಿದೆ. ವಿದ್ಯಾರ್ಥಿಗಳು ಈ ಎಲೆಕ್ಟ್ರಿಕ್ ಕಾರಿಗೆ ಪ್ರಕಾಶಮಾನವಾದ ಹಳದಿ ಬಣ್ಣವನ್ನು ನೀಡಿದ್ದಾರೆ. ಈ ಎಲೆಕ್ಟ್ರಿಕ್ ಕಾರಿಗೆ ಲುಕಾ ಎಂದು ಹೆಸರಿಡಲಾಗಿದೆ.

ತ್ಯಾಜ್ಯ ವಸ್ತುಗಳಿಂದ ಎಲೆಕ್ಟ್ರಿಕ್ ಕಾರ್ ತಯಾರಿಸಿದ ವಿದ್ಯಾರ್ಥಿಗಳು

ಈ ಕಾರು 90 ಕಿ.ಮೀ (56 ಮೈಲಿ) ವೇಗದಲ್ಲಿ ಚಲಿಸುವ ಸಾಮರ್ಥ್ಯವನ್ನು ಹೊಂದಿದೆ. ಈ ಕಾರಿನಲ್ಲಿರುವ ಬ್ಯಾಟರಿಯು ಪೂರ್ತಿಯಾಗಿ ಚಾರ್ಜ್ ಆದ ಈ ಕಾರು 220 ಕಿ.ಮೀಗಳವರೆಗೆ ಚಲಿಸುತ್ತದೆ. ಐಂಡ್‌ಹೋವನ್ ಯೂನಿವರ್ಸಿಟಿ ಆಫ್ ಟೆಕ್ನಾಲಜಿ ಈ ಕಾರಿನ ಬಗೆಗಿನ ಮಾಹಿತಿಯನ್ನು ವರದಿ ಮಾಡುತ್ತಿದೆ.

MOSTREAD: ಇನ್ನು ಮುಂದೆ ಈ ನಗರಗಳಲ್ಲಿ ಡೀಸೆಲ್ ವಾಹನಗಳನ್ನು ಮಾರಾಟ ಮಾಡುವಂತಿಲ್ಲ

ವಿದ್ಯಾರ್ಥಿಗಳು ಬಳಸದ ತ್ಯಾಜ್ಯ ಉತ್ಪನ್ನಗಳ ಮಹತ್ವವನ್ನು ತಿಳಿಸಲು ಈ ಎಲೆಕ್ಟ್ರಿಕ್ ಕಾರನ್ನು ಅಭಿವೃದ್ಧಿಪಡಿಸಿರುವ ಕಾರಣ ಕಾರು ತಯಾರಕ ಕಂಪನಿಗಳು ಸಹ ಕಾರು ಉತ್ಪಾದನೆಗೆ ತ್ಯಾಜ್ಯ ಉತ್ಪನ್ನಗಳನ್ನು ಬಳಸಬಹುದೆಂದು ಈ ಎಲೆಕ್ಟ್ರಿಕ್ ಕಾರ್ ಉತ್ಪಾದನಾ ತಂಡದ ಸದಸ್ಯರೊಬ್ಬರು ಹೇಳಿದ್ದಾರೆ.

ತ್ಯಾಜ್ಯ ವಸ್ತುಗಳಿಂದ ಎಲೆಕ್ಟ್ರಿಕ್ ಕಾರ್ ತಯಾರಿಸಿದ ವಿದ್ಯಾರ್ಥಿಗಳು

ಈ ಎಲೆಕ್ಟ್ರಿಕ್ ಕಾರು ಪೂರ್ತಿಯಾಗಿ ಚಾರ್ಜ್ ಆದ ನಂತರ 220 ಕಿ.ಮೀಗಳವರೆಗೆ ಚಲಿಸುವುದು ನಿಜಕ್ಕೂ ಅತ್ಯುತ್ತಮವೆನ್ನಬಹುದು. ಈ ಎಲೆಕ್ಟ್ರಿಕ್ ಕಾರು ನಗರ ಪ್ರದೇಶದೊಳಗಿನ ದಿನ ನಿತ್ಯದ ಬಳಕೆಗೆ ಸೂಕ್ತವಾಗಿದೆ.

Most Read Articles

Kannada
English summary
Students build electric car from waste materials. Read in Kannada.
Story first published: Saturday, November 14, 2020, 10:01 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X