ಮಾರ್ಕ್ ಸಿನಿಮಾ ನಿರ್ದೇಶಕನಿಗೆ ಜನಪ್ರಿಯ Skoda SUV ಗಿಫ್ಟ್ ಕೊಟ್ಟ ಸುದೀಪ್: ಈ ಕಾರಿನ ಬೆಲೆ ಎಷ್ಟು, ವಿಶೇಷತೆಗಳೇನು?

ಕಿಚ್ಚ ಸುದೀಪ್ (Kichcha Sudeep) ನಟನೆಯ 'ಮ್ಯಾಕ್ಸ್' ಚಿತ್ರ ದೊಡ್ಡ ಮಟ್ಟದಲ್ಲಿ ಯಶಸ್ಸು ಕಂಡಿತ್ತು. ಈ ಸಿನಿಮಾಕ್ಕೆ ವಿಜಯ್ ಕಾರ್ತಿಕೇಯ (Vijay Kartikeyaa) ಆಕ್ಷನ್ ಕಟ್ ಹೇಳಿದ್ದರು. ಇವರಿಬ್ಬರ ಕಾಂಬಿನೇಷನ್‌ನಲ್ಲಿ 'ಮಾರ್ಕ್' ಚಿತ್ರವು ಸಿದ್ಧಗೊಳ್ಳುತ್ತಿದ್ದು, ಶೂಟಿಂಗ್ ಕೂಡ ಮುಕ್ತಗೊಳ್ಳುವ ಹಂತಕ್ಕೆ ಬಂದಿದೆ. ಸದ್ಯ, ಸುದೀಪ್ ಅವರು ನಿರ್ದೇಶಕ ವಿಜಯ್ ಕಾರ್ತಿಕೇಯ ಅವರಿಗೆ ಹೊಚ್ಚ ಹೊಸ ಸ್ಕೋಡಾ ಕೈಲಾಕ್ (Skoda Kylaq) ಎಸ್‌ಯುವಿಯನ್ನು ಉಡೊಗೊರೆಯಾಗಿ ನೀಡಿದ್ದಾರೆ.

ಈ ಕುರಿತಂತೆ ಸ್ವತಃ ನಿರ್ದೇಶಕ ವಿಜಯ್ ಕಾರ್ತಿಕೇಯ ಅವರು, ತಮ್ಮ ಸಾಮಾಜಿಕ ಜಾಲತಾಣದಲ್ಲಿ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಅದಕ್ಕೆ 'ಕಿಚ್ಚ ಸುದೀಪ್ ಸರ್ ಹಾಗೂ ಅವರ ಕುಟುಂಬದಿಂದ ಬಂದ ಈ ಅದ್ಭುತ ಗಿಫ್ಟ್ ನನ್ನ ಹೃದಯದಲ್ಲಿ ಯಾವಾಗಲೂ ವಿಶೇಷ ಸ್ಥಾನವನ್ನು ಹೊಂದಿರುತ್ತದೆ' ಎಂಬ ಶೀರ್ಷಿಕೆಯನ್ನು ಬರೆದಿದ್ದಾರೆ.

Sudeep Gifted New Skoda Kylaq Suv for MARK Film Director Vijay Kartikeyaa Details

ಸ್ಕೋಡಾ ಕೈಲಾಕ್ ವಿಶೇಷತೆಗಳೇನು:

ಇದೊಂದು ಜನಪ್ರಿಯ ಎಸ್‌ಯುವಿಯಾಗಿದೆ. ಕನಿಷ್ಠ ರೂ.7.55 ಲಕ್ಷ ಹಾಗೂ ಗರಿಷ್ಠ ರೂ.12.80 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಎಲ್ಲ ವರ್ಗದ ಗ್ರಾಹಕರಿಗೂ ಸುಲಭವಾಗಿ ಕೈಗೆಟುಕುತ್ತದೆ. ಕ್ಲಾಸಿಕ್, ಸಿಗ್ನೇಚರ್, ಸಿಗ್ನೇಚರ್ ಪ್ಲಸ್ ಮತ್ತು ಪ್ರೆಸ್ಟೀಜ್ ಒಳಗೊಂಡಂತೆ ಹಲವು ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿಯೂ ಸಿಗುತ್ತದೆ.

ಈ ಕಾರು ತುಂಬಾ ಅಚ್ಚುಕಟ್ಟಾದ ವಿನ್ಯಾಸವನ್ನು ಹೊಂದಿದೆ. ಸ್ಪ್ಲಿಟ್ ಎಲ್ಇಡಿ ಹೆಡ್‌ಲೈಟ್‌ಗಳು, ಸ್ಲಿಮ್ಡ್ ಡೌನ್ ಗ್ರಿಲ್, ಬ್ಲ್ಯಾಕ್ ಕ್ಲಾಡಿಂಗ್, ಸಿಲ್ವರ್ ಫಾಕ್ಸ್ ಬ್ಯಾಷ್ ಪ್ಲೇಟ್‌ ಮತ್ತು 17 ಇಂಚಿನ ಅಲಾಯ್ ವೀಲ್‌ಗಳನ್ನು ಪಡೆದಿದೆ. ಬ್ರಿಲಿಯಂಟ್ ಸಿಲ್ವರ್, ಲಾವಾ ಬ್ಲೂ, ಆಲಿವ್ ಗೋಲ್ಡ್, ಕಾರ್ಬನ್ ಸ್ಟೀಲ್ ಹಾಗೂ ಟೊರ್ನಾಡೊ ರೆಡ್ ಸೇರಿದಂತೆ ವಿವಿಧ ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ.

ನೂತನ ಕೈಲಾಕ್ 3995 ಉದ್ದ, 1783 ಅಗಲ ಹಾಗೂ 1619 ಎತ್ತರವಿದೆ. ಜೊತೆಗಿದು 189 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಮತ್ತು 2566 ಎಂಎಂ ವೀಲ್‌ಬೇಸ್‌ನ್ನು ಪಡೆದಿದೆ. ಸರಿ ಸುಮಾರು 1660 ಕೆಜಿ ತೂಕವಿದೆ.

ಇದು ಹೆಚ್ಚು ಶಕ್ತಿಯುತವಾದ ಪವರ್‌ಟ್ರೇನ್‌ನ್ನು ಪಡೆದಿದೆ. 1.0-ಲೀಟರ್ ಟಿಎಸ್‌ಟಿ ಪೆಟ್ರೋಲ್ ಎಂಜಿನ್‌ನ್ನು ಹೊಂದಿದೆ. ರೂಪಾಂತರಗಳಿಗೆ ಅನುಗುಣವಾಗಿ 6-ಸ್ಪೀಡ್ ಮ್ಯಾನುವಲ್ ಮತ್ತು 6-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. ಬರೋಬ್ಬರಿ 18 ಕಿ.ಮೀ ವರೆಗೆ ಮೈಲೇಜ್ ಕೊಡುತ್ತದೆ. 45 ಲೀಟರ್ ಸಾಮರ್ಥ್ಯದ ಫ್ಯುಯೆಲ್ ಟ್ಯಾಂಕ್‍ನ್ನು ಹೊಂದಿದೆ.

ಈ ಕಾರು 5 ಆಸನಗಳನ್ನು ಪಡೆದಿದೆ. ಪ್ರಯಾಣಿಕರು ಸುಲಭವಾಗಿ ಓಡಾಟ ನಡೆಸಬಹುದು. ವಾರಾಂತ್ಯ ಮತ್ತು ರಜಾ ದಿನಗಳಲ್ಲಿ ದೂರದ ಊರುಗಳಿಗೆ ಪ್ರವಾಸಕ್ಕೆ ಹೋಗುವ ಸಂದರ್ಭದಲ್ಲಿ ಹೆಚ್ಚಿನ ಲಗೇಜ್ ಸಾಗಿಸಲು ಸಾಧ್ಯವಾಗುವಂತೆ ದೊಡ್ಡ ಗಾತ್ರದ 446 ಲೀಟರ್‌ನಷ್ಟು ಬೂಟ್ ಸ್ಪೇಸ್‌ನ್ನು ಒಳಗೊಂಡಿದೆ.

ಹೊಸ ಕೈಲಾಕ್ 188 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಹೊಂದಿದೆ. ಕೇವಲ 10.5 ಸೆಕೆಂಡುಗಳಲ್ಲಿ 0 ರಿಂದ 100 ಕೆಎಂಪಿಹೆಚ್ ವೇಗವನ್ನು ಪಡೆಯಲಿದೆ. 10 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಮ್, 8 ಇಂಚಿನ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್‌, ಎಂಜಿನ್ ಸ್ಟಾರ್ಟ್/ ಸ್ಟಾಪ್ ಬಟನ್, ಯುಎಸ್‌‍ಬಿ ಚಾರ್ಜಿಂಗ್ ಪೋರ್ಟ್‌ಗಳು, 2 ಸ್ಪೋಕ್ ಸ್ಟೀರಿಂಗ್ ವೀಲ್, ಸನ್‌ರೂಫ್, ವೈರ್‌ಲೆಸ್ ಫೋನ್ ಚಾರ್ಜರ್ ಹಾಗೂ ಕೀಲೆಸ್ ಎಂಟ್ರಿ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ.

ಇದು ಪ್ರಯಾಣಿಕರಿಗೆ ಗರಿಷ್ಠ ಮಟ್ಟದಲ್ಲಿ ರಕ್ಷಣೆ ಒದಗಿಸುತ್ತದೆ. ಸುರಕ್ಷತೆಗಾಗಿ 6 ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿ - ಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) ಮತ್ತು 360 ಡಿಗ್ರಿ ಕ್ಯಾಮೆರಾವನ್ನು ತನ್ನದಾಗಿಸಿಕೊಂಡಿದೆ.

More from DriveSpark

Article Published On: Thursday, September 25, 2025, 15:11 [IST]
English summary
Sudeep gifted new skoda kylaq suv for mark film director vijay kartikeyaa details
Read more on offbeat india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+